< אִיּוֹב 18 >
וַ֭יַּעַן בִּלְדַּ֥ד הַשֻּׁחִ֗י וַיֹּאמַֽר׃ | 1 |
೧ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು,
עַד־אָ֤נָה ׀ תְּשִׂימ֣וּן קִנְצֵ֣י לְמִלִּ֑ין תָּ֝בִ֗ינוּ וְאַחַ֥ר נְדַבֵּֽר׃ | 2 |
೨“ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ.
מַ֭דּוּעַ נֶחְשַׁ֣בְנוּ כַבְּהֵמָ֑ה נִ֝טְמִ֗ינוּ בְּעֵינֵיכֶֽם׃ | 3 |
೩ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?
טֹֽרֵ֥ף נַפְשֹׁ֗ו בְּאַ֫פֹּ֥ו הַ֭לְמַעַנְךָ תֵּעָ֣זַב אָ֑רֶץ וְיֶעְתַּק־צ֝֗וּר מִמְּקֹמֹֽו׃ | 4 |
೪ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ?
גַּ֤ם אֹ֣ור רְשָׁעִ֣ים יִדְעָ֑ךְ וְלֹֽא־יִ֝גַּ֗הּ שְׁבִ֣יב אִשֹּֽׁו׃ | 5 |
೫ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ.
אֹ֖ור חָשַׁ֣ךְ בְּאָהֳלֹ֑ו וְ֝נֵרֹ֗ו עָלָ֥יו יִדְעָֽךְ׃ | 6 |
೬ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು.
יֵֽ֭צְרוּ צַעֲדֵ֣י אֹונֹ֑ו וְֽתַשְׁלִיכֵ֥הוּ עֲצָתֹֽו׃ | 7 |
೭ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.
כִּֽי־שֻׁלַּ֣ח בְּרֶ֣שֶׁת בְּרַגְלָ֑יו וְעַל־שְׂ֝בָכָ֗ה יִתְהַלָּֽךְ׃ | 8 |
೮ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.
יֹאחֵ֣ז בְּעָקֵ֣ב פָּ֑ח יַחֲזֵ֖ק עָלָ֣יו צַמִּֽים׃ | 9 |
೯ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು.
טָמ֣וּן בָּאָ֣רֶץ חַבְלֹ֑ו וּ֝מַלְכֻּדְתֹּ֗ו עֲלֵ֣י נָתִֽיב׃ | 10 |
೧೦ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು.
סָ֭בִיב בִּֽעֲתֻ֣הוּ בַלָּהֹ֑ות וֶהֱפִיצֻ֥הוּ לְרַגְלָֽיו׃ | 11 |
೧೧ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.
יְהִי־רָעֵ֥ב אֹנֹ֑ו וְ֝אֵ֗יד נָכֹ֥ון לְצַלְעֹֽו׃ | 12 |
೧೨ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು.
יֹ֭אכַל בַּדֵּ֣י עֹורֹ֑ו יֹאכַ֥ל בַּ֝דָּ֗יו בְּכֹ֣ור מָֽוֶת׃ | 13 |
೧೩ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು.
יִנָּתֵ֣ק מֵ֭אָהֳלֹו מִבְטַחֹ֑ו וְ֝תַצְעִדֵ֗הוּ לְמֶ֣לֶךְ בַּלָּהֹֽות׃ | 14 |
೧೪ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.
תִּשְׁכֹּ֣ון בְּ֭אָהֳלֹו מִבְּלִי־לֹ֑ו יְזֹרֶ֖ה עַל־נָוֵ֣הוּ גָפְרִֽית׃ | 15 |
೧೫ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು.
מִ֭תַּחַת שָֽׁרָשָׁ֣יו יִבָ֑שׁוּ וּ֝מִמַּ֗עַל יִמַּ֥ל קְצִירֹֽו׃ | 16 |
೧೬ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.
זִֽכְרֹו־אָ֭בַד מִנִּי־אָ֑רֶץ וְלֹא־שֵׁ֥ם לֹ֝֗ו עַל־פְּנֵי־חֽוּץ׃ | 17 |
೧೭ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.
יֶ֭הְדְּפֻהוּ מֵאֹ֣ור אֶל־חֹ֑שֶׁךְ וּֽמִתֵּבֵ֥ל יְנִדֻּֽהוּ׃ | 18 |
೧೮ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.
לֹ֘א נִ֤ין לֹ֣ו וְלֹא־נֶ֣כֶד בְּעַמֹּ֑ו וְאֵ֥ין שָׂ֝רִ֗יד בִּמְגוּרָֽיו׃ | 19 |
೧೯ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.
עַל־יֹ֖ומֹו נָשַׁ֣מּוּ אַחֲרֹנִ֑ים וְ֝קַדְמֹנִ֗ים אָ֣חֲזוּ שָֽׂעַר׃ | 20 |
೨೦ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು.
אַךְ־אֵ֭לֶּה מִשְׁכְּנֹ֣ות עַוָּ֑ל וְ֝זֶ֗ה מְקֹ֣ום לֹא־יָדַֽע־אֵֽל׃ ס | 21 |
೨೧ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”