< אִיּוֹב 22 >

וַ֭יַּעַן אֱלִיפַ֥ז הַֽתֵּמָנִ֗י וַיֹּאמַֽר׃ 1
ಆಮೇಲೆ ತೇಮಾನ್ಯನಾದ ಎಲೀಫಜನು ಹೀಗೆಂದನು:
הַלְאֵ֥ל יִסְכָּן־גָּ֑בֶר כִּֽי־יִסְכֹּ֖ן עָלֵ֣ימֹו מַשְׂכִּֽיל׃ 2
“ಮನುಷ್ಯನಿಂದ ದೇವರಿಗೆ ಪ್ರಯೋಜನವೇನು? ಒಬ್ಬನು ಜ್ಞಾನಿಯಾಗಿದ್ದರೂ ದೇವರಿಗೆ ಪ್ರಯೋಜನವಾಗಿರುವನೇ?
הַחֵ֣פֶץ לְ֭שַׁדַּי כִּ֣י תִצְדָּ֑ק וְאִם־בֶּ֝֗צַע כִּֽי־תַתֵּ֥ם דְּרָכֶֽיךָ׃ 3
ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು?
הֲ֭‌ֽמִיִּרְאָ֣תְךָ יֹכִיחֶ֑ךָ יָבֹ֥וא עִ֝מְּךָ֗ בַּמִּשְׁפָּֽט׃ 4
“ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ?
הֲלֹ֣א רָעָֽתְךָ֣ רַבָּ֑ה וְאֵֽין־קֵ֝֗ץ לַעֲוֹנֹתֶֽיךָ׃ 5
ನಿನ್ನ ದುಷ್ಟತನವು ಬಹಳವಲ್ಲವೋ? ನಿನ್ನ ಪಾಪಗಳಿಗೆ ಅಂತ್ಯವೇ ಇಲ್ಲಾ.
כִּֽי־תַחְבֹּ֣ל אַחֶ֣יךָ חִנָּ֑ם וּבִגְדֵ֖י עֲרוּמִּ֣ים תַּפְשִֽׁיט׃ 6
ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ; ಅವರ ವಸ್ತ್ರಗಳನ್ನು ಸಹ ನೀನು ಕಿತ್ತುಕೊಂಡಿರುವೆ.
לֹא־מַ֭יִם עָיֵ֣ף תַּשְׁקֶ֑ה וּ֝מֵרָעֵ֗ב תִּֽמְנַֽע־לָֽחֶם׃ 7
ನೀನು ದಣಿದವರಿಗೆ ನೀರು ಕೊಡಲಿಲ್ಲ; ಹಸಿದವರಿಗೆ ಆಹಾರವನ್ನು ಬಡಿಸಲಿಲ್ಲ.
וְאִ֣ישׁ זְ֭רֹועַ לֹ֣ו הָאָ֑רֶץ וּנְשׂ֥וּא פָ֝נִ֗ים יֵ֣שֶׁב בָּֽהּ׃ 8
ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ,
אַ֭לְמָנֹות שִׁלַּ֣חְתָּ רֵיקָ֑ם וּזְרֹעֹ֖ות יְתֹמִ֣ים יְדֻכָּֽא׃ 9
ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.
עַל־כֵּ֭ן סְבִיבֹותֶ֣יךָ פַחִ֑ים וִֽ֝יבַהֶלְךָ פַּ֣חַד פִּתְאֹֽם׃ 10
ಆದ್ದರಿಂದ ನಿನ್ನ ಸುತ್ತಲೂ ಉರುಲುಗಳು ಕಾದಿವೆ; ಹಠಾತ್ತಾಗಿ ಬರುವ ವಿಪತ್ತು ನಿನ್ನನ್ನು ತಲ್ಲಣಗೊಳಿಸುತ್ತದೆ.
אֹו־חֹ֥שֶׁךְ לֹֽא־תִרְאֶ֑ה וְֽשִׁפְעַת־מַ֥יִם תְּכַסֶּֽךָּ׃ 11
ಇದಲ್ಲದೆ ನೀನು ಕಾಣದಷ್ಟು ಕತ್ತಲು ನಿನಗಿರುವುದು; ಜಲಪ್ರವಾಹವೂ ನಿನ್ನನ್ನು ಮುಳುಗಿಸುವುದು.
הֲ‍ֽלֹא־אֱ֭לֹוהַּ גֹּ֣בַהּ שָׁמָ֑יִם וּרְאֵ֤ה רֹ֖אשׁ כֹּוכָבִ֣ים כִּי־רָֽמּוּ׃ 12
“ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ? ನಕ್ಷತ್ರಮಂಡಲವನ್ನು ನೋಡು, ಅವು ಎಷ್ಟು ಉನ್ನತ!
וְֽ֭אָמַרְתָּ מַה־יָּ֣דַֽע אֵ֑ל הַבְעַ֖ד עֲרָפֶ֣ל יִשְׁפֹּֽוט׃ 13
ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ?
עָבִ֣ים סֵֽתֶר־לֹ֖ו וְלֹ֣א יִרְאֶ֑ה וְח֥וּג שָׁ֝מַ֗יִם יִתְהַלָּֽךְ׃ 14
ದಟ್ಟವಾದ ಮೋಡಗಳು ದೇವರಿಗೆ ಪರದೆಯ ಹಾಗಿರುವುದರಿಂದ ದೇವರು ನಮ್ಮನ್ನು ನೋಡಲು ಸಾಧ್ಯವಿಲ್ಲ. ದೇವರು ಆಕಾಶಮಂಡಲದ ಮೇಲ್ಗಡೆಯಲ್ಲಿ ನಡೆದಾಡುತ್ತಾರೆ,’ ಎಂದು ಹೇಳಿಕೊಂಡಿರುವೆ ಅಲ್ಲವೇ?
הַאֹ֣רַח עֹולָ֣ם תִּשְׁמֹ֑ר אֲשֶׁ֖ר דָּרְכ֣וּ מְתֵי־אָֽוֶן׃ 15
ದುಷ್ಟರು ಮೊದಲಿನಿಂದಲೂ ನಡೆದ ದಾರಿಯಲ್ಲಿ ನೀನು ನಡೆಯುವಿಯಾ?
אֲשֶֽׁר־קֻמְּט֥וּ וְלֹא־עֵ֑ת נָ֝הָ֗ר יוּצַ֥ק יְסֹודָֽם׃ 16
ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.
הָאֹמְרִ֣ים לָ֭אֵל ס֣וּר מִמֶּ֑נּוּ וּמַה־יִּפְעַ֖ל שַׁדַּ֣י לָֽמֹו׃ 17
ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು! ಸರ್ವಶಕ್ತ ನಮಗೇನು ಮಾಡಲು ಸಾಧ್ಯ?’ ಎಂದು ಹೇಳಿಕೊಳ್ಳುತ್ತಿದ್ದರು.
וְה֤וּא מִלֵּ֣א בָתֵּיהֶ֣ם טֹ֑וב וַעֲצַ֥ת רְ֝שָׁעִ֗ים רָ֣חֲקָה מֶֽנִּי׃ 18
ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
יִרְא֣וּ צַדִּיקִ֣ים וְיִשְׂמָ֑חוּ וְ֝נָקִ֗י יִלְעַג־לָֽמֹו׃ 19
ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು. ನಿರ್ದೋಷಿಗಳು ಹೀಗೆಂದು ದುಷ್ಟರನ್ನು ಅಣಕಿಸುವರು:
אִם־לֹ֣א נִכְחַ֣ד קִימָ֑נוּ וְ֝יִתְרָ֗ם אָ֣כְלָה אֵֽשׁ׃ 20
‘ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿ ಹೋದರು. ಅವರ ಸೊತ್ತನ್ನು ಬೆಂಕಿಯು ನಾಶಮಾಡಿತು!’
הַסְכֶּן־נָ֣א עִמֹּ֑ו וּשְׁלם בָּ֝הֶ֗ם תְּֽבֹואַתְךָ֥ טֹובָֽה׃ 21
“ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; ಇದರಿಂದ ನಿನಗೆ ಸಮೃದ್ಧಿ ಬರುವುದು.
קַח־נָ֣א מִפִּ֣יו תֹּורָ֑ה וְשִׂ֥ים אֲ֝מָרָ֗יו בִּלְבָבֶֽךָ׃ 22
ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು; ದೇವರ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
אִם־תָּשׁ֣וּב עַד־שַׁ֭דַּי תִּבָּנֶ֑ה תַּרְחִ֥יק עַ֝וְלָ֗ה מֵאָהֳלֶֽךָ׃ 23
ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.
וְשִׁית־עַל־עָפָ֥ר בָּ֑צֶר וּבְצ֖וּר נְחָלִ֣ים אֹופִֽיר׃ 24
ನೀನು ಬಂಗಾರವನ್ನು ಧೂಳಿನಂತೆಯೂ, ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು.
וְהָיָ֣ה שַׁדַּ֣י בְּצָרֶ֑יךָ וְכֶ֖סֶף תֹּועָפֹ֣ות לָֽךְ׃ 25
ಆಗ ಸರ್ವಶಕ್ತರು ನಿನಗೆ ಬಂಗಾರವಾಗಿರುವರು. ದೇವರು ನಿನಗೆ ಸಮೃದ್ಧಿಯಾದ ಬೆಳ್ಳಿಯೂ ಆಗಿರುವರು.
כִּי־אָ֭ז עַל־שַׁדַּ֣י תִּתְעַנָּ֑ג וְתִשָּׂ֖א אֶל־אֱלֹ֣והַּ פָּנֶֽיךָ׃ 26
ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ.
תַּעְתִּ֣יר אֵ֭לָיו וְיִשְׁמָעֶ֑ךָּ וּנְדָרֶ֥יךָ תְשַׁלֵּֽם׃ 27
ನೀನು ದೇವರಿಗೆ ಪ್ರಾರ್ಥನೆಮಾಡುವೆ, ನಿನ್ನ ಪ್ರಾರ್ಥನೆಯನ್ನು ದೇವರು ಕೇಳುವರು; ನೀನು ಮಾಡಿದ ಹರಕೆಗಳನ್ನು ಸಲ್ಲಿಸುವೆ.
וְֽתִגְזַר־אֹ֖ומֶר וְיָ֣קָם לָ֑ךְ וְעַל־דְּ֝רָכֶ֗יךָ נָ֣גַֽהּ אֹֽור׃ 28
ನೀನು ಏನಾದರೂ ನಿರ್ಣಯಿಸಿದ್ದರೆ, ಅದು ನಿನಗೆ ನೆರವೇರುವುದು ಮತ್ತು ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.
כִּֽי־הִ֭שְׁפִּילוּ וַתֹּ֣אמֶר גֵּוָ֑ה וְשַׁ֖ח עֵינַ֣יִם יֹושִֽׁעַ׃ 29
ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ‘ಮೇಲಕ್ಕೆ ಎತ್ತು!’ ಎಂದು ನೀನು ದೇವರಿಗೆ ಮೊರೆಯಿಡಲು, ದೇವರು ಬಿದ್ದವರನ್ನು ರಕ್ಷಿಸುವರು.
יֽ͏ְמַלֵּ֥ט אִֽי־נָקִ֑י וְ֝נִמְלַ֗ט בְּבֹ֣ר כַּפֶּֽיךָ׃ פ 30
ನಿರ್ದೋಷಿಯಾಗಿ ಇಲ್ಲದವರನ್ನು ಸಹ ದೇವರು ವಿಮೋಚಿಸುತ್ತಾರೆ; ನಿನ್ನ ಕೈಗಳ ಶುದ್ಧತ್ವದಿಂದ ಅಂಥವರು ಬಿಡುಗಡೆಯಾಗುವರು.”

< אִיּוֹב 22 >