< אִיּוֹב 25 >

וַ֭יַּעַן בִּלְדַּ֥ד הַשֻּׁחִ֗י וַיֹּאמַֽר׃ 1
ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,
הַמְשֵׁ֣ל וָפַ֣חַד עִמֹּ֑ו עֹשֶׂ֥ה שָׁ֝לֹ֗ום בִּמְרֹומָֽיו׃ 2
“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
הֲיֵ֣שׁ מִ֭סְפָּר לִגְדוּדָ֑יו וְעַל־מִ֝֗י לֹא־יָק֥וּם אֹורֵֽהוּ׃ 3
ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?
וּמַה־יִּצְדַּ֣ק אֱנֹ֣ושׁ עִם־אֵ֑ל וּמַה־יִּ֝זְכֶּ֗ה יְל֣וּד אִשָּֽׁה׃ 4
ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
הֵ֣ן עַד־יָ֭רֵחַ וְלֹ֣א יַאֲהִ֑יל וְ֝כֹוכָבִ֗ים לֹא־זַכּ֥וּ בְעֵינָֽיו׃ 5
ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.
אַ֭ף כִּֽי־אֱנֹ֣ושׁ רִמָּ֑ה וּבֶן־אָ֝דָ֗ם תֹּולֵעָֽה׃ פ 6
ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”

< אִיּוֹב 25 >