< אִיּוֹב 38 >
וַיַּֽעַן־יְהוָ֣ה אֶת־אִ֭יֹּוב מִנ הַסְּעָרָה (מִ֥ן ׀ הַסְּעָרָ֗ה) וַיֹּאמַֽר׃ | 1 |
ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಹೀಗೆಂದು ಉತ್ತರಕೊಟ್ಟರು:
מִ֤י זֶ֨ה ׀ מַחְשִׁ֖יךְ עֵצָ֥ה בְמִלִּ֗ין בְּֽלִי־דָֽעַת׃ | 2 |
“ಅಜ್ಞಾನದ ಮಾತುಗಳಿಂದ ನನ್ನ ಯೋಜನೆಗಳನ್ನು ಮಂಕುಮಾಡುವ ನೀನು ಯಾರು?
אֱזָר־נָ֣א כְגֶ֣בֶר חֲלָצֶ֑יךָ וְ֝אֶשְׁאָלְךָ֗ וְהֹודִיעֵֽנִי׃ | 3 |
ಶೂರನ ಹಾಗೆ ನಡುವನ್ನು ಕಟ್ಟಿಕೋ, ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು.
אֵיפֹ֣ה הָ֭יִיתָ בְּיָסְדִי־אָ֑רֶץ הַ֝גֵּ֗ד אִם־יָדַ֥עְתָּ בִינָֽה׃ | 4 |
“ನಾನು ಭೂಮಿಗೆ ಅಸ್ತಿವಾರ ಹಾಕಿದಾಗ, ನೀನು ಎಲ್ಲಿ ಇದ್ದೀ? ನಿನಗೆ ತಿಳುವಳಿಕೆ ಇದ್ದರೆ ನನಗೆ ಹೇಳು.
מִי־שָׂ֣ם מְ֭מַדֶּיהָ כִּ֣י תֵדָ֑ע אֹ֤ו מִֽי־נָטָ֖ה עָלֶ֣יהָ קָּֽו׃ | 5 |
ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ? ಭೂಮಿಯ ಮೇಲೆ ನೂಲು ಹಿಡಿದವರು ಯಾರು?
עַל־מָ֭ה אֲדָנֶ֣יהָ הָטְבָּ֑עוּ אֹ֥ו מִֽי־יָ֝רָ֗ה אֶ֣בֶן פִּנָּתָֽהּ׃ | 6 |
ಯಾವುದರ ಮೇಲೆ ಭೂಮಿಯ ಅಸ್ತಿವಾರ ಸ್ಥಿರಪಡಿಸಲಾಗಿದೆ? ಅದಕ್ಕೆ ಮೂಲೆಗಲ್ಲನ್ನು ಇಟ್ಟವರು ಯಾರು?
בְּרָן־יַ֭חַד כֹּ֣וכְבֵי בֹ֑קֶר וַ֝יָּרִ֗יעוּ כָּל־בְּנֵ֥י אֱלֹהִֽים׃ | 7 |
ಉದಯದ ನಕ್ಷತ್ರಗಳು ಕೂಡಿ ಹಾಡುತ್ತಿರುವಾಗ, ದೇವದೂತರೆಲ್ಲರೂ ಹರ್ಷಧ್ವನಿಮಾಡುತ್ತಿರುವಾಗ, ಭೂಮಿಗೆ ಮೂಲೆಗಲ್ಲು ಹಾಕಿದವರಾರು?
וַיָּ֣סֶךְ בִּדְלָתַ֣יִם יָ֑ם בְּ֝גִיחֹ֗ו מֵרֶ֥חֶם יֵצֵֽא׃ | 8 |
“ಭೂಗರ್ಭವನ್ನು ನುಗ್ಗಿಕೊಂಡು ಬಂದ, ಸಮುದ್ರವನ್ನು ದ್ವಾರಗಳಿಂದ ಮುಚ್ಚಿದವರು ಯಾರು?
בְּשׂוּמִ֣י עָנָ֣ן לְבֻשֹׁ֑ו וַ֝עֲרָפֶ֗ל חֲתֻלָּתֹֽו׃ | 9 |
ನಾನು ಸಮುದ್ರಕ್ಕೆ ಮೇಘವನ್ನು ವಸ್ತ್ರವನ್ನಾಗಿ ತೊಡಿಸಿ, ಅದಕ್ಕೆ ಕಾರ್ಗತ್ತಲನ್ನು ಉಡಿಸಿದೆನು.
וָאֶשְׁבֹּ֣ר עָלָ֣יו חֻקִּ֑י וָֽ֝אָשִׂ֗ים בְּרִ֣יחַ וּדְלָתָֽיִם׃ | 10 |
ನಾನು ಸಮುದ್ರಕ್ಕೆ ಮಿತಿಗಳನ್ನು ನಿಗದಿಪಡಿಸಿ, ಅಗುಳಿಗಳನ್ನೂ, ಬಾಗಿಲುಗಳನ್ನೂ ಇಟ್ಟೆನು.
וָאֹמַ֗ר עַד־פֹּ֣ה תָ֭בֹוא וְלֹ֣א תֹסִ֑יף וּפֹ֥א־יָ֝שִׁ֗ית בִּגְאֹ֥ון גַּלֶּֽיךָ׃ | 11 |
‘ಇಲ್ಲಿಯ ತನಕ ಬರಬಹುದು, ಇದನ್ನು ಮೀರಿ ಬರಕೂಡದು; ಇಲ್ಲಿಗೇ ನಿನ್ನ ತೆರೆಗಳ ಹೆಮ್ಮೆ ನಿಲ್ಲಲಿ,’ ಎಂದು ಆಜ್ಞಾಪಿಸಿದೆನು.
הְֽ֭מִיָּמֶיךָ צִוִּ֣יתָ בֹּ֑קֶר יִדַּעְתָּה שַׁחַר (יִדַּ֖עְתָּ הַשַּׁ֣חַר) מְקֹמֹֽו׃ | 12 |
“ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ, ‘ಅರುಣೋದಯವಾಗಲಿ,’ ಎಂದು ಆಜ್ಞಾಪಿಸಿರುವೆಯಾ? ಮುಂಜಾನೆಯ ಬೆಳಗಿಗೆ ಅದರ ಸ್ಥಳವನ್ನು ತಿಳಿಯಪಡಿಸಿರುವೆಯಾ?
לֶ֭אֱחֹז בְּכַנְפֹ֣ות הָאָ֑רֶץ וְיִנָּעֲר֖וּ רְשָׁעִ֣ים מִמֶּֽנָּה׃ | 13 |
‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ?
תִּ֭תְהַפֵּךְ כְּחֹ֣מֶר חֹותָ֑ם וְ֝יִֽתְיַצְּב֗וּ כְּמֹ֣ו לְבֽוּשׁ׃ | 14 |
ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪ ತಾಳುತ್ತದೆ; ನೆರಿಗೆ ಕಟ್ಟಿದ ಉಡಿಗೆಯಂತೆ ಭೂಮಿಯ ವಿಶೇಷತೆಗಳು ಕಾಣಿಸುತ್ತವೆ.
וְיִמָּנַ֣ע מֵרְשָׁעִ֣ים אֹורָ֑ם וּזְרֹ֥ועַ רָ֝מָ֗ה תִּשָּׁבֵֽר׃ | 15 |
ಅದರಂತೆ ದುಷ್ಟರಿಗೆ ಬೆಳಕು ನಿರಾಕರಿಸಲಾಗುವುದು; ಅವರ ಹಿಂಸಾಚಾರವೂ ಮುರಿದು ಹೋಗುವುದು.
הֲ֭בָאתָ עַד־נִבְכֵי־יָ֑ם וּבְחֵ֥קֶר תְּ֝הֹ֗ום הִתְהַלָּֽכְתָּ׃ | 16 |
“ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?
הֲנִגְל֣וּ לְ֭ךָ שַׁעֲרֵי־מָ֑וֶת וְשַׁעֲרֵ֖י צַלְמָ֣וֶת תִּרְאֶֽה׃ | 17 |
ನಿನಗೆ ಮರಣದ ಬಾಗಿಲುಗಳು ತೋರಿಸಲಾಗಿದೆಯೋ? ಘೋರಾಂಧಕಾರದ ಬಾಗಿಲುಗಳನ್ನು ನೀನು ಕಂಡಿರುವೆಯೋ?
הִ֭תְבֹּנַנְתָּ עַד־רַחֲבֵי־אָ֑רֶץ הַ֝גֵּ֗ד אִם־יָדַ֥עְתָּ כֻלָּֽהּ׃ | 18 |
ಭೂವಿಸ್ತಾರಗಳನ್ನು ನೀನು ಗ್ರಹಿಸಿರುವೆಯೋ? ಇದನ್ನೆಲ್ಲಾ ನೀನು ತಿಳಿದಿದ್ದರೆ ನನಗೆ ಹೇಳು ನೋಡೋಣ.
אֵי־זֶ֣ה הַ֭דֶּרֶךְ יִשְׁכָּן־אֹ֑ור וְ֝חֹ֗שֶׁךְ אֵי־זֶ֥ה מְקֹמֹֽו׃ | 19 |
“ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ?
כִּ֣י תִ֭קָּחֶנּוּ אֶל־גְּבוּלֹ֑ו וְכִֽי־תָ֝בִ֗ין נְתִיבֹ֥ות בֵּיתֹֽו׃ | 20 |
ನೀನು ಬೆಳಕನ್ನೂ ಕತ್ತಲನ್ನೂ ಅವುಗಳ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅವು ತಮ್ಮ ಮನೆಗಳಿಗೆ ಹೋಗುವ ಹಾದಿಗಳನ್ನು ನೀನು ಬಲ್ಲೆಯಾ?
יָ֭דַעְתָּ כִּי־אָ֣ז תִּוָּלֵ֑ד וּמִסְפַּ֖ר יָמֶ֣יךָ רַבִּֽים׃ | 21 |
ನಿಜವಾಗಿಯೂ ನೀನು ಆಗ ಹುಟ್ಟಿದ್ದರೆ, ಇವೆಲ್ಲಾ ನಿನಗೆ ಗೊತ್ತಾಗುತಿತ್ತು. ಮತ್ತು ಈಗ ನೀನು ಬಹಳ ವರ್ಷಗಳ ವೃದ್ಧನಾಗಿರುತ್ತಿದ್ದೆ.
הֲ֭בָאתָ אֶל־אֹצְרֹ֣ות שָׁ֑לֶג וְאֹצְרֹ֖ות בָּרָ֣ד תִּרְאֶֽה׃ | 22 |
“ಯೋಬನೇ, ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿರುವೆಯಾ? ಕಲ್ಮಳೆಯ ಉಗ್ರಾಣಗಳನ್ನು ನೋಡಿರುವೆಯಾ?
אֲשֶׁר־חָשַׂ֥כְתִּי לְעֶת־צָ֑ר לְיֹ֥ום קְ֝רָ֗ב וּמִלְחָמָֽה׃ | 23 |
ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು.
אֵי־זֶ֣ה הַ֭דֶּרֶךְ יֵחָ֣לֶק אֹ֑ור יָפֵ֖ץ קָדִ֣ים עֲלֵי־אָֽרֶץ׃ | 24 |
ಬೆಳಕಿನ ಮೂಲ ಮಾರ್ಗ ಎಲ್ಲಿದೆ? ಪೂರ್ವ ಗಾಳಿಯ ಮಾರ್ಗವು ಯಾವುದು?
מִֽי־פִלַּ֣ג לַשֶּׁ֣טֶף תְּעָלָ֑ה וְ֝דֶ֗רֶךְ לַחֲזִ֥יז קֹלֹֽות׃ | 25 |
ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು?
לְ֭הַמְטִיר עַל־אֶ֣רֶץ לֹא־אִ֑ישׁ מִ֝דְבָּ֗ר לֹא־אָדָ֥ם בֹּֽו׃ | 26 |
ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ ನಿರ್ಜನ ಪ್ರದೇಶದಲ್ಲಿಯೂ, ಸುರಿಯುವುದು.
לְהַשְׂבִּ֣יעַ שֹׁ֖אָה וּמְשֹׁאָ֑ה וּ֝לְהַצְמִ֗יחַ מֹ֣צָא דֶֽשֶׁא׃ | 27 |
ಹಾಳು ಬೈಲುಗಳಿಗೆ ತೃಪ್ತಿಯನ್ನು ಉಂಟುಮಾಡುವುದು; ಹಸಿರಾದ ಹುಲ್ಲನ್ನು ಮೊಳಿಸುವುದು.
הֲיֵשׁ־לַמָּטָ֥ר אָ֑ב אֹ֥ו מִי־הֹ֝ולִ֗יד אֶגְלֵי־טָֽל׃ | 28 |
ಮಳೆಗೆ ತಂದೆ ಇದ್ದಾನೆಯೇ? ಮಂಜಿನ ಹನಿಗಳನ್ನು ಹೆತ್ತವಳಿದ್ದಾಳೆಯೆ?
מִבֶּ֣טֶן מִ֭י יָצָ֣א הַקָּ֑רַח וּכְפֹ֥ר שָׁ֝מַיִם מִ֣י יְלָדֹֽו׃ | 29 |
ಯಾರ ಗರ್ಭದಿಂದ ಹಿಮಗಡ್ಡೆ ಹೊರಡುತ್ತದೆ? ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು?
כָּ֭אֶבֶן מַ֣יִם יִתְחַבָּ֑אוּ וּפְנֵ֥י תְ֝הֹ֗ום יִתְלַכָּֽדוּ׃ | 30 |
ಕಲ್ಲಿನ ಹಾಗೆ ನೀರು ಗಟ್ಟಿಯಾಗುವುದು ಯಾವಾಗ? ಸಮುದ್ರದ ಮೇಲ್ಭಾಗವು ಹೆಪ್ಪುಗಟ್ಟುವುದು ಯಾವಾಗ?
הַֽ֭תְקַשֵּׁר מַעֲדַנֹּ֣ות כִּימָ֑ה אֹֽו־מֹשְׁכֹ֖ות כְּסִ֣יל תְּפַתֵּֽחַ׃ | 31 |
“ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ? ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ?
הֲתֹצִ֣יא מַזָּרֹ֣ות בְּעִתֹּ֑ו וְ֝עַ֗יִשׁ עַל־בָּנֶ֥יהָ תַנְחֵֽם׃ | 32 |
ನೀನು ನಕ್ಷತ್ರರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ಬರಮಾಡುವೆಯಾ? ಸಪ್ತರ್ಷಿ ತಾರೆಗಳನ್ನು ಅವುಗಳ ಪರಿವಾರ ಸಹಿತವಾಗಿ ನೀನು ನಡೆಸುವೆಯಾ?
הֲ֭יָדַעְתָּ חֻקֹּ֣ות שָׁמָ֑יִם אִם־תָּשִׂ֖ים מִשְׁטָרֹ֣ו בָאָֽרֶץ׃ | 33 |
ಖಗೋಳದ ನಿಯಮಗಳನ್ನು ನೀನು ತಿಳಿದಿರುವೆಯಾ? ದೇವರ ಆಳಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿರುವೆಯಾ?
הֲתָרִ֣ים לָעָ֣ב קֹולֶ֑ךָ וְֽשִׁפְעַת־מַ֥יִם תְּכַסֶּֽךָּ׃ | 34 |
“ನೀರು ಪ್ರವಾಹವಾಗಿ ನಿನ್ನನ್ನು ತಲುಪುವಂತೆ, ನಿನ್ನ ಧ್ವನಿಯೆತ್ತಿ ಮೋಡಗಳಿಗೆ ಅಪ್ಪಣೆಕೊಡುವೆಯಾ?
הֽ͏ַתְשַׁלַּ֣ח בְּרָקִ֣ים וְיֵלֵ֑כוּ וְיֹאמְר֖וּ לְךָ֣ הִנֵּֽנוּ׃ | 35 |
ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು, ‘ಇಗೋ, ನಾವು ಇಲ್ಲಿದ್ದೇವೆ,’ ಎಂದು ನಿನಗೆ ಹೇಳುತ್ತವೆಯೋ?
מִי־שָׁ֭ת בַּטֻּחֹ֣ות חָכְמָ֑ה אֹ֤ו מִֽי־נָתַ֖ן לַשֶּׂ֣כְוִי בִינָֽה׃ | 36 |
ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು?
מִֽי־יְסַפֵּ֣ר שְׁחָקִ֣ים בְּחָכְמָ֑ה וְנִבְלֵ֥י שָׁ֝מַ֗יִם מִ֣י יַשְׁכִּֽיב׃ | 37 |
ಮೋಡಗಳನ್ನು ಎಣಿಸುವ ಜ್ಞಾನ ಯಾರಿಗೆ ಇದೆ? ಆಕಾಶದಲ್ಲಿನ ಬುದ್ದಲಿಗಳನ್ನು ಸಾಗಿಸುವವರು ಯಾರು?
בְּצֶ֣קֶת עָ֭פָר לַמּוּצָ֑ק וּרְגָבִ֥ים יְדֻבָּֽקוּ׃ | 38 |
ಧೂಳುಮಣ್ಣನ್ನು ಒತ್ತಟ್ಟಿಗೆ ಸೇರುವಂತೆ ಮಾಡುವವರು ಯಾರು? ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆ ಯಾರು ಮಾಡುವರು?
הֲתָצ֣וּד לְלָבִ֣יא טָ֑רֶף וְחַיַּ֖ת כְּפִירִ֣ים תְּמַלֵּֽא׃ | 39 |
“ಗುಹೆಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ನೀನು ಬೇಟೆಯಾಡುವೆಯಾ? ಪ್ರಾಯದ ಸಿಂಹಗಳ ಹಸಿವೆಯನ್ನು ನೀನು ನೀಗಿಸುವೆಯಾ?
כִּי־יָשֹׁ֥חוּ בַמְּעֹונֹ֑ות יֵשְׁב֖וּ בַסֻּכָּ֣ה לְמֹו־אָֽרֶב׃ | 40 |
ಪೊದೆಯಲ್ಲಿ ಹೊಂಚು ಹಾಕಿರುವ, ಪ್ರಾಯದ ಸಿಂಹಗಳ ಹಸಿವೆಯನ್ನು ತೀರಿಸುವೆಯಾ?
מִ֤י יָכִ֥ין לָעֹרֵ֗ב צֵ֫ידֹ֥ו כִּֽי־יְלָדֹו (יְ֭לָדָיו) אֶל־אֵ֣ל יְשַׁוֵּ֑עוּ יִ֝תְע֗וּ לִבְלִי־אֹֽכֶל׃ | 41 |
ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು, ದೇವರಿಗೆ ಮೊರೆ ಇಡುವಾಗ, ತಾಯಿ ಕಾಗೆಗೆ ಆಹಾರವನ್ನು ಒದಗಿಸುವವರು ಯಾರು?