< שֹׁפְטִים 11 >
וְיִפְתָּ֣ח הַגִּלְעָדִ֗י הָיָה֙ גִּבֹּ֣ור חַ֔יִל וְה֖וּא בֶּן־אִשָּׁ֣ה זֹונָ֑ה וַיֹּ֥ולֶד גִּלְעָ֖ד אֶת־יִפְתָּֽח׃ | 1 |
೧ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.
וַתֵּ֧לֶד אֵֽשֶׁת־גִּלְעָ֛ד לֹ֖ו בָּנִ֑ים וַיִּגְדְּל֨וּ בְֽנֵי־הָאִשָּׁ֜ה וַיְגָרְשׁ֣וּ אֶת־יִפְתָּ֗ח וַיֹּ֤אמְרוּ לֹו֙ לֹֽא־תִנְחַ֣ל בְּבֵית־אָבִ֔ינוּ כִּ֛י בֶּן־אִשָּׁ֥ה אַחֶ֖רֶת אָֽתָּה׃ | 2 |
೨ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
וַיִּבְרַ֤ח יִפְתָּח֙ מִפְּנֵ֣י אֶחָ֔יו וַיֵּ֖שֶׁב בְּאֶ֣רֶץ טֹ֑וב וַיִּֽתְלַקְּט֤וּ אֶל־יִפְתָּח֙ אֲנָשִׁ֣ים רֵיקִ֔ים וַיֵּצְא֖וּ עִמֹּֽו׃ פ | 3 |
೩ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.
וַיְהִ֖י מִיָּמִ֑ים וַיִּלָּחֲמ֥וּ בְנֵֽי־עַמֹּ֖ון עִם־יִשְׂרָאֵֽל׃ | 4 |
೪ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.
וַיְהִ֕י כַּאֲשֶׁר־נִלְחֲמ֥וּ בְנֵֽי־עַמֹּ֖ון עִם־יִשְׂרָאֵ֑ל וַיֵּֽלְכוּ֙ זִקְנֵ֣י גִלְעָ֔ד לָקַ֥חַת אֶת־יִפְתָּ֖ח מֵאֶ֥רֶץ טֹֽוב׃ | 5 |
೫ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.
וַיֹּאמְר֣וּ לְיִפְתָּ֔ח לְכָ֕ה וְהָיִ֥יתָה לָּ֖נוּ לְקָצִ֑ין וְנִֽלָּחֲמָ֖ה בִּבְנֵ֥י עַמֹּֽון׃ | 6 |
೬ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.
וַיֹּ֤אמֶר יִפְתָּח֙ לְזִקְנֵ֣י גִלְעָ֔ד הֲלֹ֤א אַתֶּם֙ שְׂנֵאתֶ֣ם אֹותִ֔י וַתְּגָרְשׁ֖וּנִי מִבֵּ֣ית אָבִ֑י וּמַדּ֜וּעַ בָּאתֶ֤ם אֵלַי֙ עַ֔תָּה כַּאֲשֶׁ֖ר צַ֥ר לָכֶֽם׃ | 7 |
೭ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನಲು
וַיֹּאמְרוּ֩ זִקְנֵ֨י גִלְעָ֜ד אֶל־יִפְתָּ֗ח לָכֵן֙ עַתָּה֙ שַׁ֣בְנוּ אֵלֶ֔יךָ וְהָלַכְתָּ֣ עִמָּ֔נוּ וְנִלְחַמְתָּ֖ בִּבְנֵ֣י עַמֹּ֑ון וְהָיִ֤יתָ לָּ֙נוּ֙ לְרֹ֔אשׁ לְכֹ֖ל יֹשְׁבֵ֥י גִלְעָֽד׃ | 8 |
೮ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು.
וַיֹּ֨אמֶר יִפְתָּ֜ח אֶל־זִקְנֵ֣י גִלְעָ֗ד אִם־מְשִׁיבִ֨ים אַתֶּ֤ם אֹותִי֙ לְהִלָּחֵם֙ בִּבְנֵ֣י עַמֹּ֔ון וְנָתַ֧ן יְהוָ֛ה אֹותָ֖ם לְפָנָ֑י אָנֹכִ֕י אֶהְיֶ֥ה לָכֶ֖ם לְרֹֽאשׁ׃ | 9 |
೯ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು
וַיֹּאמְר֥וּ זִקְנֵֽי־גִלְעָ֖ד אֶל־יִפְתָּ֑ח יְהוָ֗ה יִהְיֶ֤ה שֹׁמֵ֙עַ֙ בֵּֽינֹותֵ֔ינוּ אִם־לֹ֥א כִדְבָרְךָ֖ כֵּ֥ן נַעֲשֶֽׂה׃ | 10 |
೧೦ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
וַיֵּ֤לֶךְ יִפְתָּח֙ עִם־זִקְנֵ֣י גִלְעָ֔ד וַיָּשִׂ֨ימוּ הָעָ֥ם אֹותֹ֛ו עֲלֵיהֶ֖ם לְרֹ֣אשׁ וּלְקָצִ֑ין וַיְדַבֵּ֨ר יִפְתָּ֧ח אֶת־כָּל־דְּבָרָ֛יו לִפְנֵ֥י יְהוָ֖ה בַּמִּצְפָּֽה׃ פ | 11 |
೧೧ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.
וַיִּשְׁלַ֤ח יִפְתָּח֙ מַלְאָכִ֔ים אֶל־מֶ֥לֶךְ בְּנֵֽי־עַמֹּ֖ון לֵאמֹ֑ר מַה־לִּ֣י וָלָ֔ךְ כִּֽי־בָ֥אתָ אֵלַ֖י לְהִלָּחֵ֥ם בְּאַרְצִֽי׃ | 12 |
೧೨ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.
וַיֹּאמֶר֩ מֶ֨לֶךְ בְּנֵי־עַמֹּ֜ון אֶל־מַלְאֲכֵ֣י יִפְתָּ֗ח כִּֽי־לָקַ֨ח יִשְׂרָאֵ֤ל אֶת־אַרְצִי֙ בַּעֲלֹותֹ֣ו מִמִּצְרַ֔יִם מֵאַרְנֹ֥ון וְעַד־הַיַּבֹּ֖ק וְעַד־הַיַּרְדֵּ֑ן וְעַתָּ֕ה הָשִׁ֥יבָה אֶתְהֶ֖ן בְּשָׁלֹֽום׃ | 13 |
೧೩ಆ ಅರಸನು ದೂತರಿಗೆ, “ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು.
וַיֹּ֥וסֶף עֹ֖וד יִפְתָּ֑ח וַיִּשְׁלַח֙ מַלְאָכִ֔ים אֶל־מֶ֖לֶךְ בְּנֵ֥י עַמֹּֽון׃ | 14 |
೧೪ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
וַיֹּ֣אמֶר לֹ֔ו כֹּ֖ה אָמַ֣ר יִפְתָּ֑ח לֹֽא־לָקַ֤ח יִשְׂרָאֵל֙ אֶת־אֶ֣רֶץ מֹואָ֔ב וְאֶת־אֶ֖רֶץ בְּנֵ֥י עַמֹּֽון׃ | 15 |
೧೫“ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
כִּ֖י בַּעֲלֹותָ֣ם מִמִּצְרָ֑יִם וַיֵּ֨לֶךְ יִשְׂרָאֵ֤ל בַּמִּדְבָּר֙ עַד־יַם־ס֔וּף וַיָּבֹ֖א קָדֵֽשָׁה׃ | 16 |
೧೬ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
וַיִּשְׁלַ֣ח יִשְׂרָאֵ֣ל מַלְאָכִ֣ים ׀ אֶל־מֶלֶךְ֩ אֱדֹ֨ום ׀ לֵאמֹ֜ר אֶעְבְּרָה־נָּ֣א בְאַרְצֶ֗ךָ וְלֹ֤א שָׁמַע֙ מֶ֣לֶךְ אֱדֹ֔ום וְגַ֨ם אֶל־מֶ֧לֶךְ מֹואָ֛ב שָׁלַ֖ח וְלֹ֣א אָבָ֑ה וַיֵּ֥שֶׁב יִשְׂרָאֵ֖ל בְּקָדֵֽשׁ׃ | 17 |
೧೭ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.
וַיֵּ֣לֶךְ בַּמִּדְבָּ֗ר וַיָּ֜סָב אֶת־אֶ֤רֶץ אֱדֹום֙ וְאֶת־אֶ֣רֶץ מֹואָ֔ב וַיָּבֹ֤א מִמִּזְרַח־שֶׁ֙מֶשׁ֙ לְאֶ֣רֶץ מֹואָ֔ב וַֽיַּחֲנ֖וּן בְּעֵ֣בֶר אַרְנֹ֑ון וְלֹא־בָ֙אוּ֙ בִּגְב֣וּל מֹואָ֔ב כִּ֥י אַרְנֹ֖ון גְּב֥וּל מֹואָֽב׃ | 18 |
೧೮ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
וַיִּשְׁלַ֤ח יִשְׂרָאֵל֙ מַלְאָכִ֔ים אֶל־סִיחֹ֥ון מֶֽלֶךְ־הָאֱמֹרִ֖י מֶ֣לֶךְ חֶשְׁבֹּ֑ון וַיֹּ֤אמֶר לֹו֙ יִשְׂרָאֵ֔ל נַעְבְּרָה־נָּ֥א בְאַרְצְךָ֖ עַד־מְקֹומִֽי׃ | 19 |
೧೯ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.
וְלֹא־הֶאֱמִ֨ין סִיחֹ֤ון אֶת־יִשְׂרָאֵל֙ עֲבֹ֣ר בִּגְבֻלֹ֔ו וַיֶּאֱסֹ֤ף סִיחֹון֙ אֶת־כָּל־עַמֹּ֔ו וַֽיַּחֲנ֖וּ בְּיָ֑הְצָה וַיִּלָּ֖חֶם עִם־יִשְׂרָאֵֽל׃ | 20 |
೨೦ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
וַ֠יִּתֵּן יְהוָ֨ה אֱלֹהֵֽי־יִשְׂרָאֵ֜ל אֶת־סִיחֹ֧ון וְאֶת־כָּל־עַמֹּ֛ו בְּיַ֥ד יִשְׂרָאֵ֖ל וַיַּכּ֑וּם וַיִּירַשׁ֙ יִשְׂרָאֵ֔ל אֵ֚ת כָּל־אֶ֣רֶץ הָאֱמֹרִ֔י יֹושֵׁ֖ב הָאָ֥רֶץ הַהִֽיא׃ | 21 |
೨೧ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
וַיִּ֣ירְשׁ֔וּ אֵ֖ת כָּל־גְּב֣וּל הָאֱמֹרִ֑י מֵֽאַרְנֹון֙ וְעַד־הַיַּבֹּ֔ק וּמִן־הַמִּדְבָּ֖ר וְעַד־הַיַּרְדֵּֽן׃ | 22 |
೨೨ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
וְעַתָּ֞ה יְהוָ֣ה ׀ אֱלֹהֵ֣י יִשְׂרָאֵ֗ל הֹורִישׁ֙ אֶת־הָ֣אֱמֹרִ֔י מִפְּנֵ֖י עַמֹּ֣ו יִשְׂרָאֵ֑ל וְאַתָּ֖ה תִּירָשֶֽׁנּוּ׃ | 23 |
೨೩ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?
הֲלֹ֞א אֵ֣ת אֲשֶׁ֧ר יֹורִֽישְׁךָ֛ כְּמֹ֥ושׁ אֱלֹהֶ֖יךָ אֹותֹ֥ו תִירָ֑שׁ וְאֵת֩ כָּל־אֲשֶׁ֨ר הֹורִ֜ישׁ יְהוָ֧ה אֱלֹהֵ֛ינוּ מִפָּנֵ֖ינוּ אֹותֹ֥ו נִירָֽשׁ׃ | 24 |
೨೪ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.
וְעַתָּ֗ה הֲטֹ֥וב טֹוב֙ אַתָּ֔ה מִבָּלָ֥ק בֶּן־צִפֹּ֖ור מֶ֣לֶךְ מֹואָ֑ב הֲרֹ֥וב רָב֙ עִם־יִשְׂרָאֵ֔ל אִם־נִלְחֹ֥ם נִלְחַ֖ם בָּֽם׃ | 25 |
೨೫ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
בְּשֶׁ֣בֶת יִ֠שְׂרָאֵל בְּחֶשְׁבֹּ֨ון וּבִבְנֹותֶ֜יהָ וּבְעַרְעֹ֣ור וּבִבְנֹותֶ֗יהָ וּבְכָל־הֶֽעָרִים֙ אֲשֶׁר֙ עַל־יְדֵ֣י אַרְנֹ֔ון שְׁלֹ֥שׁ מֵאֹ֖ות שָׁנָ֑ה וּמַדּ֥וּעַ לֹֽא־הִצַּלְתֶּ֖ם בָּעֵ֥ת הַהִֽיא׃ | 26 |
೨೬ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?
וְאָֽנֹכִי֙ לֹֽא־חָטָ֣אתִי לָ֔ךְ וְאַתָּ֞ה עֹשֶׂ֥ה אִתִּ֛י רָעָ֖ה לְהִלָּ֣חֶם בִּ֑י יִשְׁפֹּ֨ט יְהוָ֤ה הַשֹּׁפֵט֙ הַיֹּ֔ום בֵּ֚ין בְּנֵ֣י יִשְׂרָאֵ֔ל וּבֵ֖ין בְּנֵ֥י עַמֹּֽון׃ | 27 |
೨೭ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು.
וְלֹ֣א שָׁמַ֔ע מֶ֖לֶךְ בְּנֵ֣י עַמֹּ֑ון אֶל־דִּבְרֵ֣י יִפְתָּ֔ח אֲשֶׁ֥ר שָׁלַ֖ח אֵלָֽיו׃ פ | 28 |
೨೮ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.
וַתְּהִ֤י עַל־יִפְתָּח֙ ר֣וּחַ יְהוָ֔ה וַיַּעֲבֹ֥ר אֶת־הַגִּלְעָ֖ד וְאֶת־מְנַשֶּׁ֑ה וַֽיַּעֲבֹר֙ אֶת־מִצְפֵּ֣ה גִלְעָ֔ד וּמִמִּצְפֵּ֣ה גִלְעָ֔ד עָבַ֖ר בְּנֵ֥י עַמֹּֽון׃ | 29 |
೨೯ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
וַיִּדַּ֨ר יִפְתָּ֥ח נֶ֛דֶר לַיהוָ֖ה וַיֹּאמַ֑ר אִם־נָתֹ֥ון תִּתֵּ֛ן אֶת־בְּנֵ֥י עַמֹּ֖ון בְּיָדִֽי׃ | 30 |
೩೦ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
וְהָיָ֣ה הַיֹּוצֵ֗א אֲשֶׁ֨ר יֵצֵ֜א מִדַּלְתֵ֤י בֵיתִי֙ לִקְרָאתִ֔י בְּשׁוּבִ֥י בְשָׁלֹ֖ום מִבְּנֵ֣י עַמֹּ֑ון וְהָיָה֙ לַֽיהוָ֔ה וְהַעֲלִיתִ֖הוּ עֹולָֽה׃ פ | 31 |
೩೧ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.
וַיַּעֲבֹ֥ר יִפְתָּ֛ח אֶל־בְּנֵ֥י עַמֹּ֖ון לְהִלָּ֣חֶם בָּ֑ם וַיִּתְּנֵ֥ם יְהוָ֖ה בְּיָדֹֽו׃ | 32 |
೩೨ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.
וַיַּכֵּ֡ם מֵעֲרֹועֵר֩ וְעַד־בֹּואֲךָ֙ מִנִּ֜ית עֶשְׂרִ֣ים עִ֗יר וְעַד֙ אָבֵ֣ל כְּרָמִ֔ים מַכָּ֖ה גְּדֹולָ֣ה מְאֹ֑ד וַיִּכָּֽנְעוּ֙ בְּנֵ֣י עַמֹּ֔ון מִפְּנֵ֖י בְּנֵ֥י יִשְׂרָאֵֽל׃ פ | 33 |
೩೩ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು.
וַיָּבֹ֨א יִפְתָּ֣ח הַמִּצְפָּה֮ אֶל־בֵּיתֹו֒ וְהִנֵּ֤ה בִתֹּו֙ יֹצֵ֣את לִקְרָאתֹ֔ו בְתֻפִּ֖ים וּבִמְחֹלֹ֑ות וְרַק֙ הִ֣יא יְחִידָ֔ה אֵֽין־לֹ֥ו מִמֶּ֛נּוּ בֵּ֖ן אֹו־בַֽת׃ | 34 |
೩೪ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.
וַיְהִי֩ כִרְאֹותֹ֨ו אֹותָ֜הּ וַיִּקְרַ֣ע אֶת־בְּגָדָ֗יו וַיֹּ֙אמֶר֙ אֲהָ֤הּ בִּתִּי֙ הַכְרֵ֣עַ הִכְרַעְתִּ֔נִי וְאַ֖תְּ הָיִ֣יתְ בְּעֹֽכְרָ֑י וְאָנֹכִ֗י פָּצִ֤יתִי־פִי֙ אֶל־יְהוָ֔ה וְלֹ֥א אוּכַ֖ל לָשֽׁוּב׃ | 35 |
೩೫ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
וַתֹּ֣אמֶר אֵלָ֗יו אָבִי֙ פָּצִ֤יתָה אֶת־פִּ֙יךָ֙ אֶל־יְהוָ֔ה עֲשֵׂ֣ה לִ֔י כַּאֲשֶׁ֖ר יָצָ֣א מִפִּ֑יךָ אַחֲרֵ֡י אֲשֶׁ֣ר עָשָׂה֩ לְךָ֙ יְהוָ֧ה נְקָמֹ֛ות מֵאֹיְבֶ֖יךָ מִבְּנֵ֥י עַמֹּֽון׃ | 36 |
೩೬ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.
וַתֹּ֙אמֶר֙ אֶל־אָבִ֔יהָ יֵעָ֥שֶׂה לִּ֖י הַדָּבָ֣ר הַזֶּ֑ה הַרְפֵּ֨ה מִמֶּ֜נִּי שְׁנַ֣יִם חֳדָשִׁ֗ים וְאֵֽלְכָה֙ וְיָרַדְתִּ֣י עַל־הֶֽהָרִ֔ים וְאֶבְכֶּה֙ עַל־בְּתוּלַ֔י אָנֹכִ֖י וְרַעִיתִי (וְרֵעֹותָֽי)׃ | 37 |
೩೭ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು.
וַיֹּ֣אמֶר לֵ֔כִי וַיִּשְׁלַ֥ח אֹותָ֖הּ שְׁנֵ֣י חֳדָשִׁ֑ים וַתֵּ֤לֶךְ הִיא֙ וְרֵ֣עֹותֶ֔יהָ וַתֵּ֥בְךְּ עַל־בְּתוּלֶ֖יהָ עַל־הֶהָרִֽים׃ | 38 |
೩೮ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.
וַיְהִ֞י מִקֵּ֣ץ ׀ שְׁנַ֣יִם חֳדָשִׁ֗ים וַתָּ֙שָׁב֙ אֶל־אָבִ֔יהָ וַיַּ֣עַשׂ לָ֔הּ אֶת־נִדְרֹ֖ו אֲשֶׁ֣ר נָדָ֑ר וְהִיא֙ לֹא־יָדְעָ֣ה אִ֔ישׁ וַתְּהִי־חֹ֖ק בְּיִשְׂרָאֵֽל׃ | 39 |
೩೯ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
מִיָּמִ֣ים ׀ יָמִ֗ימָה תֵּלַ֙כְנָה֙ בְּנֹ֣ות יִשְׂרָאֵ֔ל לְתַנֹּ֕ות לְבַת־יִפְתָּ֖ח הַגִּלְעָדִ֑י אַרְבַּ֥עַת יָמִ֖ים בַּשָּׁנָֽה׃ ס | 40 |
೪೦ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.