< שֹׁפְטִים 5 >
וַתָּ֣שַׁר דְּבֹורָ֔ה וּבָרָ֖ק בֶּן־אֲבִינֹ֑עַם בַּיֹּ֥ום הַה֖וּא לֵאמֹֽר׃ | 1 |
೧ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:
בִּפְרֹ֤עַ פְּרָעֹות֙ בְּיִשְׂרָאֵ֔ל בְּהִתְנַדֵּ֖ב עָ֑ם בָּרֲכ֖וּ יְהוָֽה׃ | 2 |
೨“ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
שִׁמְע֣וּ מְלָכִ֔ים הַאֲזִ֖ינוּ רֹֽזְנִ֑ים אֽ͏ָנֹכִ֗י לַֽיהוָה֙ אָנֹכִ֣י אָשִׁ֔ירָה אֲזַמֵּ֕ר לַֽיהוָ֖ה אֱלֹהֵ֥י יִשְׂרָאֵֽל׃ | 3 |
೩“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
יְהוָ֗ה בְּצֵאתְךָ֤ מִשֵּׂעִיר֙ בְּצַעְדְּךָ֙ מִשְּׂדֵ֣ה אֱדֹ֔ום אֶ֣רֶץ רָעָ֔שָׁה גַּם־שָׁמַ֖יִם נָטָ֑פוּ גַּם־עָבִ֖ים נָ֥טְפוּ מָֽיִם׃ | 4 |
೪“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.
הָרִ֥ים נָזְל֖וּ מִפְּנֵ֣י יְהוָ֑ה זֶ֣ה סִינַ֔י מִפְּנֵ֕י יְהוָ֖ה אֱלֹהֵ֥י יִשְׂרָאֵֽל׃ | 5 |
೫ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.
בִּימֵ֞י שַׁמְגַּ֤ר בֶּן־עֲנָת֙ בִּימֵ֣י יָעֵ֔ל חָדְל֖וּ אֳרָחֹ֑ות וְהֹלְכֵ֣י נְתִיבֹ֔ות יֵלְכ֕וּ אֳרָחֹ֖ות עֲקַלְקַלֹּֽות׃ | 6 |
೬“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
חָדְל֧וּ פְרָזֹ֛ון בְּיִשְׂרָאֵ֖ל חָדֵ֑לּוּ עַ֤ד שַׁקַּ֙מְתִּי֙ דְּבֹורָ֔ה שַׁקַּ֥מְתִּי אֵ֖ם בְּיִשְׂרָאֵֽל׃ | 7 |
೭ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
יִבְחַר֙ אֱלֹהִ֣ים חֲדָשִׁ֔ים אָ֖ז לָחֶ֣ם שְׁעָרִ֑ים מָגֵ֤ן אִם־יֵֽרָאֶה֙ וָרֹ֔מַח בְּאַרְבָּעִ֥ים אֶ֖לֶף בְּיִשְׂרָאֵֽל׃ | 8 |
೮ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
לִבִּי֙ לְחֹוקְקֵ֣י יִשְׂרָאֵ֔ל הַמִּֽתְנַדְּבִ֖ים בָּעָ֑ם בָּרֲכ֖וּ יְהוָֽה׃ | 9 |
೯ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.
רֹכְבֵי֩ אֲתֹנֹ֨ות צְחֹרֹ֜ות יֹשְׁבֵ֧י עַל־מִדִּ֛ין וְהֹלְכֵ֥י עַל־דֶּ֖רֶךְ שִֽׂיחוּ׃ | 10 |
೧೦“ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.
מִקֹּ֣ול מְחַֽצְצִ֗ים בֵּ֚ין מַשְׁאַבִּ֔ים שָׁ֤ם יְתַנּוּ֙ צִדְקֹ֣ות יְהוָ֔ה צִדְקֹ֥ת פִּרְזֹנֹ֖ו בְּיִשְׂרָאֵ֑ל אָ֛ז יָרְד֥וּ לַשְּׁעָרִ֖ים עַם־יְהוָֽה׃ | 11 |
೧೧ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.
עוּרִ֤י עוּרִי֙ דְּבֹורָ֔ה ע֥וּרִי ע֖וּרִי דַּבְּרִי־שִׁ֑יר ק֥וּם בָּרָ֛ק וּֽשֲׁבֵ֥ה שֶׁבְיְךָ֖ בֶּן־אֲבִינֹֽעַם׃ | 12 |
೧೨‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’
אָ֚ז יְרַ֣ד שָׂרִ֔יד לְאַדִּירִ֖ים עָ֑ם יְהוָ֕ה יְרַד־לִ֖י בַּגִּבֹּורִֽים׃ | 13 |
೧೩“ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
מִנִּ֣י אֶפְרַ֗יִם שָׁרְשָׁם֙ בַּעֲמָלֵ֔ק אַחֲרֶ֥יךָ בִנְיָמִ֖ין בּֽ͏ַעֲמָמֶ֑יךָ מִנִּ֣י מָכִ֗יר יָֽרְדוּ֙ מְחֹ֣קְקִ֔ים וּמִ֨זְּבוּלֻ֔ן מֹשְׁכִ֖ים בְּשֵׁ֥בֶט סֹפֵֽר׃ | 14 |
೧೪ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ
וְשָׂרַ֤י בְּיִשָּׂשכָר֙ עִם־דְּבֹרָ֔ה וְיִשָּׂשכָר֙ כֵּ֣ן בָּרָ֔ק בָּעֵ֖מֶק שֻׁלַּ֣ח בְּרַגְלָ֑יו בִּפְלַגֹּ֣ות רְאוּבֵ֔ן גְּדֹלִ֖ים חִקְקֵי־לֵֽב׃ | 15 |
೧೫ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ
לָ֣מָּה יָשַׁ֗בְתָּ בֵּ֚ין הַֽמִּשְׁפְּתַ֔יִם לִשְׁמֹ֖עַ שְׁרִקֹ֣ות עֲדָרִ֑ים לִפְלַגֹּ֣ות רְאוּבֵ֔ן גְּדֹולִ֖ים חִקְרֵי־לֵֽב׃ | 16 |
೧೬ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.
גִּלְעָ֗ד בְּעֵ֤בֶר הַיַּרְדֵּן֙ שָׁכֵ֔ן וְדָ֕ן לָ֥מָּה יָג֖וּר אֳנִיֹּ֑ות אָשֵׁ֗ר יָשַׁב֙ לְחֹ֣וף יַמִּ֔ים וְעַ֥ל מִפְרָצָ֖יו יִשְׁכֹּֽון׃ | 17 |
೧೭ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.
זְבֻל֗וּן עַ֣ם חֵרֵ֥ף נַפְשֹׁ֛ו לָמ֖וּת וְנַפְתָּלִ֑י עַ֖ל מְרֹומֵ֥י שָׂדֶֽה׃ | 18 |
೧೮ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.
בָּ֤אוּ מְלָכִים֙ נִלְחָ֔מוּ אָ֤ז נִלְחֲמוּ֙ מַלְכֵ֣י כְנַ֔עַן בְּתַעְנַ֖ךְ עַל־מֵ֣י מְגִדֹּ֑ו בֶּ֥צַע כֶּ֖סֶף לֹ֥א לָקָֽחוּ׃ | 19 |
೧೯“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
מִן־שָׁמַ֖יִם נִלְחָ֑מוּ הַכֹּֽוכָבִים֙ מִמְּסִלֹּותָ֔ם נִלְחֲמ֖וּ עִם־סִיסְרָֽא׃ | 20 |
೨೦ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.
נַ֤חַל קִישֹׁון֙ גְּרָפָ֔ם נַ֥חַל קְדוּמִ֖ים נַ֣חַל קִישֹׁ֑ון תִּדְרְכִ֥י נַפְשִׁ֖י עֹֽז׃ | 21 |
೨೧ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.
אָ֥ז הָלְמ֖וּ עִקְּבֵי־ס֑וּס מִֽדַּהֲרֹ֖ות דַּהֲרֹ֥ות אַבִּירָֽיו׃ | 22 |
೨೨ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.
אֹ֣ורוּ מֵרֹ֗וז אָמַר֙ מַלְאַ֣ךְ יְהוָ֔ה אֹ֥רוּ אָרֹ֖ור יֹשְׁבֶ֑יהָ כִּ֤י לֹֽא־בָ֙אוּ֙ לְעֶזְרַ֣ת יְהוָ֔ה לְעֶזְרַ֥ת יְהוָ֖ה בַּגִּבֹּורִֽים׃ | 23 |
೨೩ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’
תְּבֹרַךְ֙ מִנָּשִׁ֔ים יָעֵ֕ל אֵ֖שֶׁת חֶ֣בֶר הַקֵּינִ֑י מִנָּשִׁ֥ים בָּאֹ֖הֶל תְּבֹרָֽךְ׃ | 24 |
೨೪“ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.
מַ֥יִם שָׁאַ֖ל חָלָ֣ב נָתָ֑נָה בְּסֵ֥פֶל אַדִּירִ֖ים הִקְרִ֥יבָה חֶמְאָֽה׃ | 25 |
೨೫ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು.
יָדָהּ֙ לַיָּתֵ֣ד תִּשְׁלַ֔חְנָה וִֽימִינָ֖הּ לְהַלְמ֣וּת עֲמֵלִ֑ים וְהָלְמָ֤ה סִֽיסְרָא֙ מָחֲקָ֣ה רֹאשֹׁ֔ו וּמָחֲצָ֥ה וְחָלְפָ֖ה רַקָּתֹֽו׃ | 26 |
೨೬ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು.
בֵּ֣ין רַגְלֶ֔יהָ כָּרַ֥ע נָפַ֖ל שָׁכָ֑ב בֵּ֤ין רַגְלֶ֙יהָ֙ כָּרַ֣ע נָפָ֔ל בַּאֲשֶׁ֣ר כָּרַ֔ע שָׁ֖ם נָפַ֥ל שָׁדֽוּד׃ | 27 |
೨೭ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.
בְּעַד֩ הַחַלֹּ֨ון נִשְׁקְפָ֧ה וַתְּיַבֵּ֛ב אֵ֥ם סִֽיסְרָ֖א בְּעַ֣ד הֽ͏ָאֶשְׁנָ֑ב מַדּ֗וּעַ בֹּשֵׁ֤שׁ רִכְבֹּו֙ לָבֹ֔וא מַדּ֣וּעַ אֶֽחֱר֔וּ פַּעֲמֵ֖י מַרְכְּבֹותָֽיו׃ | 28 |
೨೮“ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.
חַכְמֹ֥ות שָׂרֹותֶ֖יהָ תַּעֲנֶ֑ינָּה אַף־הִ֕יא תָּשִׁ֥יב אֲמָרֶ֖יהָ לָֽהּ׃ | 29 |
೨೯ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,
הֲלֹ֨א יִמְצְא֜וּ יְחַלְּק֣וּ שָׁלָ֗ל רַ֤חַם רַחֲמָתַ֙יִם֙ לְרֹ֣אשׁ גֶּ֔בֶר שְׁלַ֤ל צְבָעִים֙ לְסִ֣יסְרָ֔א שְׁלַ֥ל צְבָעִ֖ים רִקְמָ֑ה צֶ֥בַע רִקְמָתַ֖יִם לְצַוְּארֵ֥י שָׁלָֽל׃ | 30 |
೩೦‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ? ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’
כֵּ֠ן יֹאבְד֤וּ כָל־אֹויְבֶ֙יךָ֙ יְהוָ֔ה וְאֹ֣הֲבָ֔יו כְּצֵ֥את הַשֶּׁ֖מֶשׁ בִּגְבֻרָתֹ֑ו וַתִּשְׁקֹ֥ט הָאָ֖רֶץ אַרְבָּעִ֥ים שָׁנָֽה׃ פ | 31 |
೩೧ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.