< נחמיה 8 >

וַיֵּאָסְפ֤וּ כָל־הָעָם֙ כְּאִ֣ישׁ אֶחָ֔ד אֶל־הָ֣רְחֹ֔וב אֲשֶׁ֖ר לִפְנֵ֣י שַֽׁעַר־הַמָּ֑יִם וַיֹּֽאמְרוּ֙ לְעֶזְרָ֣א הַסֹּפֵ֔ר לְהָבִ֗יא אֶת־סֵ֙פֶר֙ תֹּורַ֣ת מֹשֶׁ֔ה אֲשֶׁר־צִוָּ֥ה יְהוָ֖ה אֶת־יִשְׂרָאֵֽל׃ 1
ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
וַיָּבִ֣יא עֶזְרָ֣א הַ֠כֹּהֵן אֶֽת־הַתֹּורָ֞ה לִפְנֵ֤י הַקָּהָל֙ מֵאִ֣ישׁ וְעַד־אִשָּׁ֔ה וְכֹ֖ל מֵבִ֣ין לִשְׁמֹ֑עַ בְּיֹ֥ום אֶחָ֖ד לַחֹ֥דֶשׁ הַשְּׁבִיעִֽי׃ 2
ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.
וַיִּקְרָא־בֹו֩ לִפְנֵ֨י הָרְחֹ֜וב אֲשֶׁ֣ר ׀ לִפְנֵ֣י שַֽׁעַר־הַמַּ֗יִם מִן־הָאֹור֙ עַד־מַחֲצִ֣ית הַיֹּ֔ום נֶ֛גֶד הָאֲנָשִׁ֥ים וְהַנָּשִׁ֖ים וְהַמְּבִינִ֑ים וְאָזְנֵ֥י כָל־הָעָ֖ם אֶל־סֵ֥פֶר הַתֹּורָֽה׃ 3
ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು.
וֽ͏ַיַּעֲמֹ֞ד עֶזְרָ֣א הַסֹּפֵ֗ר עַֽל־מִגְדַּל־עֵץ֮ אֲשֶׁ֣ר עָשׂ֣וּ לַדָּבָר֒ וַיַּֽעֲמֹ֣ד אֶצְלֹ֡ו מַתִּתְיָ֡ה וְשֶׁ֡מַע וַ֠עֲנָיָה וְאוּרִיָּ֧ה וְחִלְקִיָּ֛ה וּמַעֲשֵׂיָ֖ה עַל־יְמִינֹ֑ו וּמִשְּׂמֹאלֹ֗ו פְּ֠דָיָה וּמִֽישָׁאֵ֧ל וּמַלְכִּיָּ֛ה וְחָשֻׁ֥ם וְחַשְׁבַּדָּ֖נָה זְכַרְיָ֥ה מְשֻׁלָּֽם׃ פ 4
ಆಗ ನಿಯಮಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡಲಾಗಿದ್ದ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನ ಬಲಗಡೆಯಲ್ಲಿ ಮತ್ತಿತ್ಯ. ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ, ಅವನಿಗೆ ಎಡಗಡೆಯಲ್ಲಿ ಪೆದಾಯ್, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ನಿಂತಿದ್ದರು.
וַיִּפְתַּ֨ח עֶזְרָ֤א הַסֵּ֙פֶר֙ לְעֵינֵ֣י כָל־הָעָ֔ם כִּֽי־מֵעַ֥ל כָּל־הָעָ֖ם הָיָ֑ה וּכְפִתְחֹ֖ו עָֽמְד֥וּ כָל־הָעָֽם׃ 5
ಎಜ್ರನು ಸಕಲ ಜನರ ಕಣ್ಣು ಮುಂದೆ ದೇವರ ಗ್ರಂಥವನ್ನು ತೆರೆದನು. ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ನಿಂತಿದ್ದನು. ಅವನು ಅದನ್ನು ತೆರೆದಾಗ, ಜನರೆಲ್ಲರು ಎದ್ದು ನಿಂತರು.
וַיְבָ֣רֶךְ עֶזְרָ֔א אֶת־יְהוָ֥ה הָאֱלֹהִ֖ים הַגָּדֹ֑ול וַיַּֽעֲנ֨וּ כָל־הָעָ֜ם אָמֵ֤ן ׀ אָמֵן֙ בְּמֹ֣עַל יְדֵיהֶ֔ם וַיִּקְּד֧וּ וַיִּשְׁתַּחֲוֻּ֛ לַיהוָ֖ה אַפַּ֥יִם אָֽרְצָה׃ 6
ಆಗ ಎಜ್ರನು ಮಹಾ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಉತ್ತರವಾಗಿ, “ಆಮೆನ್, ಆಮೆನ್,” ಎಂದು ಹೇಳಿ ನೆಲದವರೆಗೂ ತಮ್ಮ ತಲೆಗಳನ್ನು ಬಗ್ಗಿಸಿ ಯೆಹೋವ ದೇವರನ್ನು ಆರಾಧಿಸಿದರು.
וְיֵשׁ֡וּעַ וּבָנִ֡י וְשֵׁרֵ֥בְיָ֣ה ׀ יָמִ֡ין עַקּ֡וּב שַׁבְּתַ֣י ׀ הֹֽודִיָּ֡ה מַעֲשֵׂיָ֡ה קְלִיטָ֣א עֲזַרְיָה֩ יֹוזָבָ֨ד חָנָ֤ן פְּלָאיָה֙ וְהַלְוִיִּ֔ם מְבִינִ֥ים אֶת־הָעָ֖ם לַתֹּורָ֑ה וְהָעָ֖ם עַל־עָמְדָֽם׃ 7
ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
וַֽיִּקְרְא֥וּ בַסֵּ֛פֶר בְּתֹורַ֥ת הָאֱלֹהִ֖ים מְפֹרָ֑שׁ וְשֹׂ֣ום שֶׂ֔כֶל וַיָּבִ֖ינוּ בַּמִּקְרָֽא׃ ס 8
ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.
וַיֹּ֣אמֶר נְחֶמְיָ֣ה ה֣וּא הַתִּרְשָׁ֡תָא וְעֶזְרָ֣א הַכֹּהֵ֣ן ׀ הַסֹּפֵ֡ר וְהַלְוִיִּם֩ הַמְּבִינִ֨ים אֶת־הָעָ֜ם לְכָל־הָעָ֗ם הַיֹּ֤ום קָדֹֽשׁ־הוּא֙ לַיהוָ֣ה אֱלֹהֵיכֶ֔ם אַל־תִּֽתְאַבְּל֖וּ וְאַל־תִּבְכּ֑וּ כִּ֤י בֹוכִים֙ כָּל־הָעָ֔ם כְּשָׁמְעָ֖ם אֶת־דִּבְרֵ֥י הַתֹּורָֽה׃ 9
ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.
וַיֹּ֣אמֶר לָהֶ֡ם לְכוּ֩ אִכְל֨וּ מַשְׁמַנִּ֜ים וּשְׁת֣וּ מַֽמְתַקִּ֗ים וְשִׁלְח֤וּ מָנֹות֙ לְאֵ֣ין נָכֹ֣ון לֹ֔ו כִּֽי־קָדֹ֥ושׁ הַיֹּ֖ום לַאֲדֹנֵ֑ינוּ וְאַל־תֵּ֣עָצֵ֔בוּ כִּֽי־חֶדְוַ֥ת יְהוָ֖ה הִ֥יא מָֽעֻזְּכֶֽם׃ 10
ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.
וְהַלְוִיִּ֞ם מַחְשִׁ֤ים לְכָל־הָעָם֙ לֵאמֹ֣ר הַ֔סּוּ כִּ֥י הַיֹּ֖ום קָדֹ֑שׁ וְאַל־תֵּעָצֵֽבוּ׃ 11
ಲೇವಿಯರು ಕೂಡ, “ಈ ದಿನವು ಪರಿಶುದ್ಧವಾದುದರಿಂದ ನೀವು ಶಾಂತವಾಗಿದ್ದು, ವ್ಯಥೆಪಡಬೇಡಿರಿ,” ಎಂದು ಹೇಳಿ ಜನರನ್ನು ಸುಮ್ಮನಿರಿಸಿದರು.
וַיֵּלְכ֨וּ כָל־הָעָ֜ם לֶאֱכֹ֤ל וְלִשְׁתֹּות֙ וּלְשַׁלַּ֣ח מָנֹ֔ות וְלַעֲשֹׂ֖ות שִׂמְחָ֣ה גְדֹולָ֑ה כִּ֤י הֵבִ֙ינוּ֙ בַּדְּבָרִ֔ים אֲשֶׁ֥ר הֹודִ֖יעוּ לָהֶֽם׃ ס 12
ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.
וּבַיֹּ֣ום הַשֵּׁנִ֡י נֶאֶסְפוּ֩ רָאשֵׁ֨י הָאָבֹ֜ות לְכָל־הָעָ֗ם הַכֹּֽהֲנִים֙ וְהַלְוִיִּ֔ם אֶל־עֶזְרָ֖א הַסֹּפֵ֑ר וּלְהַשְׂכִּ֖יל אֶל־דִּבְרֵ֥י הַתֹּורָֽה׃ 13
ಎರಡನೆಯ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿರುವ ಮುಖ್ಯವಾದವರೂ ಯಾಜಕರೂ ಲೇವಿಯರೂ ದೇವರ ನಿಯಮದ ಮಾತುಗಳನ್ನು ತಿಳಿದುಕೊಳ್ಳುವ ಹಾಗೆ, ನಿಯಮಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.
וַֽיִּמְצְא֖וּ כָּת֣וּב בַּתֹּורָ֑ה אֲשֶׁ֨ר צִוָּ֤ה יְהוָה֙ בְּיַד־מֹשֶׁ֔ה אֲשֶׁר֩ יֵשְׁב֨וּ בְנֵֽי־יִשְׂרָאֵ֧ל בַּסֻּכֹּ֛ות בֶּחָ֖ג בַּחֹ֥דֶשׁ הַשְּׁבִיעִֽי׃ 14
ಆಗ ಅವರು ಏಳನೆಯ ತಿಂಗಳ ಹಬ್ಬದಲ್ಲಿ, ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ವಿಷಯ ನಿಯಮದಲ್ಲಿ ಬರೆದದ್ದನ್ನು ಕಂಡರು.
וַאֲשֶׁ֣ר יַשְׁמִ֗יעוּ וְיַעֲבִ֨ירוּ קֹ֥ול בְּכָל־עָרֵיהֶם֮ וּבִירוּשָׁלַ֣͏ִם לֵאמֹר֒ צְא֣וּ הָהָ֗ר וְהָבִ֙יאוּ֙ עֲלֵי־זַ֙יִת֙ וַעֲלֵי־עֵ֣ץ שֶׁ֔מֶן וַעֲלֵ֤י הֲדַס֙ וַעֲלֵ֣י תְמָרִ֔ים וַעֲלֵ֖י עֵ֣ץ עָבֹ֑ת לַעֲשֹׂ֥ת סֻכֹּ֖ת כַּכָּתֽוּב׃ פ 15
ಅದರಲ್ಲಿ, “ಪರ್ಣಶಾಲೆಗಳಿಗಾಗಿ ಬೆಟ್ಟಕ್ಕೆ ಹೋಗಿ ಓಲಿವ್, ಕಾಡು ಓಲಿವ್, ಸುಗಂಧ, ಖರ್ಜೂರ ಮುಂತಾದ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತೆಗೆದುಕೊಂಡು ಬನ್ನಿರಿ ಎಂದೂ, ತಮ್ಮ ಸಕಲ ಪಟ್ಟಣಗಳಲ್ಲಿಯೂ, ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು,” ಎಂದೂ ಬರೆದಿತ್ತು.
וַיֵּצְא֣וּ הָעָם֮ וַיָּבִיאוּ֒ וַיַּעֲשׂוּ֩ לָהֶ֨ם סֻכֹּ֜ות אִ֤ישׁ עַל־גַּגֹּו֙ וּבְחַצְרֹ֣תֵיהֶ֔ם וּבְחַצְרֹ֖ות בֵּ֣ית הָאֱלֹהִ֑ים וּבִרְחֹוב֙ שַׁ֣עַר הַמַּ֔יִם וּבִרְחֹ֖וב שַׁ֥עַר אֶפְרָֽיִם׃ 16
ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು.
וַיַּֽעֲשׂ֣וּ כָֽל־הַ֠קָּהָל הַשָּׁבִ֨ים מִן־הַשְּׁבִ֥י ׀ סֻכֹּות֮ וַיֵּשְׁב֣וּ בַסֻּכֹּות֒ כִּ֣י לֹֽא־עָשׂ֡וּ מִימֵי֩ יֵשׁ֨וּעַ בִּן־נ֥וּן כֵּן֙ בְּנֵ֣י יִשְׂרָאֵ֔ל עַ֖ד הַיֹּ֣ום הַה֑וּא וַתְּהִ֥י שִׂמְחָ֖ה גְּדֹולָ֥ה מְאֹֽד׃ 17
ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು.
וַ֠יִּקְרָא בְּסֵ֨פֶר תֹּורַ֤ת הָאֱלֹהִים֙ יֹ֣ום ׀ בְּיֹ֔ום מִן־הַיֹּום֙ הָֽרִאשֹׁ֔ון עַ֖ד הַיֹּ֣ום הָאַחֲרֹ֑ון וַיַּֽעֲשׂוּ־חָג֙ שִׁבְעַ֣ת יָמִ֔ים וּבַיֹּ֧ום הַשְּׁמִינִ֛י עֲצֶ֖רֶת כַּמִּשְׁפָּֽט׃ פ 18
ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.

< נחמיה 8 >