< בְּמִדְבַּר 11 >
וַיְהִ֤י הָעָם֙ כְּמִתְאֹ֣נְנִ֔ים רַ֖ע בְּאָזְנֵ֣י יְהוָ֑ה וַיִּשְׁמַ֤ע יְהוָה֙ וַיִּ֣חַר אַפֹּ֔ו וַתִּבְעַר־בָּם֙ אֵ֣שׁ יְהוָ֔ה וַתֹּ֖אכַל בִּקְצֵ֥ה הַֽמַּחֲנֶֽה׃ | 1 |
೧ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
וַיִּצְעַ֥ק הָעָ֖ם אֶל־מֹשֶׁ֑ה וַיִּתְפַּלֵּ֤ל מֹשֶׁה֙ אֶל־יְהוָ֔ה וַתִּשְׁקַ֖ע הָאֵֽשׁ׃ | 2 |
೨ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
וַיִּקְרָ֛א שֵֽׁם־הַמָּקֹ֥ום הַה֖וּא תַּבְעֵרָ֑ה כִּֽי־בָעֲרָ֥ה בָ֖ם אֵ֥שׁ יְהוָֽה׃ | 3 |
೩ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.
וְהָֽאסַפְסֻף֙ אֲשֶׁ֣ר בְּקִרְבֹּ֔ו הִתְאַוּ֖וּ תַּאֲוָ֑ה וַיָּשֻׁ֣בוּ וַיִּבְכּ֗וּ גַּ֚ם בְּנֵ֣י יִשְׂרָאֵ֔ל וַיֹּ֣אמְר֔וּ מִ֥י יַאֲכִלֵ֖נוּ בָּשָֽׂר׃ | 4 |
೪ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
זָכַ֙רְנוּ֙ אֶת־הַדָּגָ֔ה אֲשֶׁר־נֹאכַ֥ל בְּמִצְרַ֖יִם חִנָּ֑ם אֵ֣ת הַקִּשֻּׁאִ֗ים וְאֵת֙ הָֽאֲבַטִּחִ֔ים וְאֶת־הֶחָצִ֥יר וְאֶת־הַבְּצָלִ֖ים וְאֶת־הַשּׁוּמִֽים׃ | 5 |
೫ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
וְעַתָּ֛ה נַפְשֵׁ֥נוּ יְבֵשָׁ֖ה אֵ֣ין כֹּ֑ל בִּלְתִּ֖י אֶל־הַמָּ֥ן עֵינֵֽינוּ׃ | 6 |
೬ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
וְהַמָּ֕ן כִּזְרַע־גַּ֖ד ה֑וּא וְעֵינֹ֖ו כְּעֵ֥ין הַבְּדֹֽלַח׃ | 7 |
೭ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
שָׁטוּ֩ הָעָ֨ם וְלָֽקְט֜וּ וְטָחֲנ֣וּ בָרֵחַ֗יִם אֹ֤ו דָכוּ֙ בַּמְּדֹכָ֔ה וּבִשְּׁלוּ֙ בַּפָּר֔וּר וְעָשׂ֥וּ אֹתֹ֖ו עֻגֹ֑ות וְהָיָ֣ה טַעְמֹ֔ו כְּטַ֖עַם לְשַׁ֥ד הַשָּֽׁמֶן׃ | 8 |
೮ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
וּבְרֶ֧דֶת הַטַּ֛ל עַל־הַֽמַּחֲנֶ֖ה לָ֑יְלָה יֵרֵ֥ד הַמָּ֖ן עָלָֽיו׃ | 9 |
೯ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
וַיִּשְׁמַ֨ע מֹשֶׁ֜ה אֶת־הָעָ֗ם בֹּכֶה֙ לְמִשְׁפְּחֹתָ֔יו אִ֖ישׁ לְפֶ֣תַח אָהֳלֹ֑ו וַיִּֽחַר־אַ֤ף יְהוָה֙ מְאֹ֔ד וּבְעֵינֵ֥י מֹשֶׁ֖ה רָֽע׃ | 10 |
೧೦ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
וַיֹּ֨אמֶר מֹשֶׁ֜ה אֶל־יְהוָ֗ה לָמָ֤ה הֲרֵעֹ֙תָ֙ לְעַבְדֶּ֔ךָ וְלָ֛מָּה לֹא־מָצָ֥תִי חֵ֖ן בְּעֵינֶ֑יךָ לָשׂ֗וּם אֶת־מַשָּׂ֛א כָּל־הָעָ֥ם הַזֶּ֖ה עָלָֽי׃ | 11 |
೧೧ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
הֶאָנֹכִ֣י הָרִ֗יתִי אֵ֚ת כָּל־הָעָ֣ם הַזֶּ֔ה אִם־אָנֹכִ֖י יְלִדְתִּ֑יהוּ כִּֽי־תֹאמַ֨ר אֵלַ֜י שָׂאֵ֣הוּ בְחֵיקֶ֗ךָ כַּאֲשֶׁ֨ר יִשָּׂ֤א הָאֹמֵן֙ אֶת־הַיֹּנֵ֔ק עַ֚ל הָֽאֲדָמָ֔ה אֲשֶׁ֥ר נִשְׁבַּ֖עְתָּ לַאֲבֹתָֽיו׃ | 12 |
೧೨ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
מֵאַ֤יִן לִי֙ בָּשָׂ֔ר לָתֵ֖ת לְכָל־הָעָ֣ם הַזֶּ֑ה כִּֽי־יִבְכּ֤וּ עָלַי֙ לֵאמֹ֔ר תְּנָה־לָּ֥נוּ בָשָׂ֖ר וְנֹאכֵֽלָה׃ | 13 |
೧೩ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
לֹֽא־אוּכַ֤ל אָנֹכִי֙ לְבַדִּ֔י לָשֵׂ֖את אֶת־כָּל־הָעָ֣ם הַזֶּ֑ה כִּ֥י כָבֵ֖ד מִמֶּֽנִּי׃ | 14 |
೧೪ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
וְאִם־כָּ֣כָה ׀ אַתְּ־עֹ֣שֶׂה לִּ֗י הָרְגֵ֤נִי נָא֙ הָרֹ֔ג אִם־מָצָ֥אתִי חֵ֖ן בְּעֵינֶ֑יךָ וְאַל־אֶרְאֶ֖ה בְּרָעָתִֽי׃ פ | 15 |
೧೫ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
וַיֹּ֨אמֶר יְהוָ֜ה אֶל־מֹשֶׁ֗ה אֶסְפָה־לִּ֞י שִׁבְעִ֣ים אִישׁ֮ מִזִּקְנֵ֣י יִשְׂרָאֵל֒ אֲשֶׁ֣ר יָדַ֔עְתָּ כִּי־הֵ֛ם זִקְנֵ֥י הָעָ֖ם וְשֹׁטְרָ֑יו וְלָקַחְתָּ֤ אֹתָם֙ אֶל־אֹ֣הֶל מֹועֵ֔ד וְהִֽתְיַצְּב֥וּ שָׁ֖ם עִמָּֽךְ׃ | 16 |
೧೬ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
וְיָרַדְתִּ֗י וְדִבַּרְתִּ֣י עִמְּךָ֮ שָׁם֒ וְאָצַלְתִּ֗י מִן־הָר֛וּחַ אֲשֶׁ֥ר עָלֶ֖יךָ וְשַׂמְתִּ֣י עֲלֵיהֶ֑ם וְנָשְׂא֤וּ אִתְּךָ֙ בְּמַשָּׂ֣א הָעָ֔ם וְלֹא־תִשָּׂ֥א אַתָּ֖ה לְבַדֶּֽךָ׃ | 17 |
೧೭ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
וְאֶל־הָעָ֨ם תֹּאמַ֜ר הִתְקַדְּשׁ֣וּ לְמָחָר֮ וַאֲכַלְתֶּ֣ם בָּשָׂר֒ כִּ֡י בְּכִיתֶם֩ בְּאָזְנֵ֨י יְהוָ֜ה לֵאמֹ֗ר מִ֤י יַאֲכִלֵ֙נוּ֙ בָּשָׂ֔ר כִּי־טֹ֥וב לָ֖נוּ בְּמִצְרָ֑יִם וְנָתַ֨ן יְהוָ֥ה לָכֶ֛ם בָּשָׂ֖ר וַאֲכַלְתֶּֽם׃ | 18 |
೧೮ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
לֹ֣א יֹ֥ום אֶחָ֛ד תֹּאכְל֖וּן וְלֹ֣א יֹומָ֑יִם וְלֹ֣א ׀ חֲמִשָּׁ֣ה יָמִ֗ים וְלֹא֙ עֲשָׂרָ֣ה יָמִ֔ים וְלֹ֖א עֶשְׂרִ֥ים יֹֽום׃ | 19 |
೧೯ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
עַ֣ד ׀ חֹ֣דֶשׁ יָמִ֗ים עַ֤ד אֲשֶׁר־יֵצֵא֙ מֵֽאַפְּכֶ֔ם וְהָיָ֥ה לָכֶ֖ם לְזָרָ֑א יַ֗עַן כִּֽי־מְאַסְתֶּ֤ם אֶת־יְהוָה֙ אֲשֶׁ֣ר בְּקִרְבְּכֶ֔ם וַתִּבְכּ֤וּ לְפָנָיו֙ לֵאמֹ֔ר לָ֥מָּה זֶּ֖ה יָצָ֥אנוּ מִמִּצְרָֽיִם׃ | 20 |
೨೦ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
וַיֹּאמֶר֮ מֹשֶׁה֒ שֵׁשׁ־מֵאֹ֥ות אֶ֙לֶף֙ רַגְלִ֔י הָעָ֕ם אֲשֶׁ֥ר אָנֹכִ֖י בְּקִרְבֹּ֑ו וְאַתָּ֣ה אָמַ֗רְתָּ בָּשָׂר֙ אֶתֵּ֣ן לָהֶ֔ם וְאָכְל֖וּ חֹ֥דֶשׁ יָמִֽים׃ | 21 |
೨೧ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
הֲצֹ֧אן וּבָקָ֛ר יִשָּׁחֵ֥ט לָהֶ֖ם וּמָצָ֣א לָהֶ֑ם אִ֣ם אֶֽת־כָּל־דְּגֵ֥י הַיָּ֛ם יֵאָסֵ֥ף לָהֶ֖ם וּמָצָ֥א לָהֶֽם׃ פ | 22 |
೨೨ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.
וַיֹּ֤אמֶר יְהוָה֙ אֶל־מֹשֶׁ֔ה הֲיַ֥ד יְהוָ֖ה תִּקְצָ֑ר עַתָּ֥ה תִרְאֶ֛ה הֲיִקְרְךָ֥ דְבָרִ֖י אִם־לֹֽא׃ | 23 |
೨೩ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.
וַיֵּצֵ֣א מֹשֶׁ֗ה וַיְדַבֵּר֙ אֶל־הָעָ֔ם אֵ֖ת דִּבְרֵ֣י יְהוָ֑ה וַיֶּאֱסֹ֞ף שִׁבְעִ֥ים אִישׁ֙ מִזִּקְנֵ֣י הָעָ֔ם וַֽיַּעֲמֵ֥ד אֹתָ֖ם סְבִיבֹ֥ת הָאֹֽהֶל׃ | 24 |
೨೪ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
וַיֵּ֨רֶד יְהוָ֥ה ׀ בֶּעָנָן֮ וַיְדַבֵּ֣ר אֵלָיו֒ וַיָּ֗אצֶל מִן־הָר֙וּחַ֙ אֲשֶׁ֣ר עָלָ֔יו וַיִּתֵּ֕ן עַל־שִׁבְעִ֥ים אִ֖ישׁ הַזְּקֵנִ֑ים וַיְהִ֗י כְּנֹ֤וחַ עֲלֵיהֶם֙ הָר֔וּחַ וַיִּֽתְנַבְּא֖וּ וְלֹ֥א יָסָֽפוּ׃ | 25 |
೨೫ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
וַיִּשָּׁאֲר֣וּ שְׁנֵֽי־אֲנָשִׁ֣ים ׀ בַּֽמַּחֲנֶ֡ה שֵׁ֣ם הָאֶחָ֣ד ׀ אֶלְדָּ֡ד וְשֵׁם֩ הַשֵּׁנִ֨י מֵידָ֜ד וַתָּ֧נַח עֲלֵיהֶ֣ם הָר֗וּחַ וְהֵ֙מָּה֙ בַּכְּתֻבִ֔ים וְלֹ֥א יָצְא֖וּ הָאֹ֑הֱלָה וַיִּֽתְנַבְּא֖וּ בּֽ͏ַמַּחֲנֶֽה׃ | 26 |
೨೬ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
וַיָּ֣רָץ הַנַּ֔עַר וַיַּגֵּ֥ד לְמֹשֶׁ֖ה וַיֹּאמַ֑ר אֶלְדָּ֣ד וּמֵידָ֔ד מִֽתְנַבְּאִ֖ים בַּֽמַּחֲנֶֽה׃ | 27 |
೨೭ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
וַיַּ֜עַן יְהֹושֻׁ֣עַ בִּן־נ֗וּן מְשָׁרֵ֥ת מֹשֶׁ֛ה מִבְּחֻרָ֖יו וַיֹּאמַ֑ר אֲדֹנִ֥י מֹשֶׁ֖ה כְּלָאֵֽם׃ | 28 |
೨೮ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
וַיֹּ֤אמֶר לֹו֙ מֹשֶׁ֔ה הַֽמְקַנֵּ֥א אַתָּ֖ה לִ֑י וּמִ֨י יִתֵּ֜ן כָּל־עַ֤ם יְהוָה֙ נְבִיאִ֔ים כִּי־יִתֵּ֧ן יְהוָ֛ה אֶת־רוּחֹ֖ו עֲלֵיהֶֽם׃ | 29 |
೨೯ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
וַיֵּאָסֵ֥ף מֹשֶׁ֖ה אֶל־הַֽמַּחֲנֶ֑ה ה֖וּא וְזִקְנֵ֥י יִשְׂרָאֵֽל׃ | 30 |
೩೦ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
וְר֜וּחַ נָסַ֣ע ׀ מֵאֵ֣ת יְהוָ֗ה וַיָּ֣גָז שַׂלְוִים֮ מִן־הַיָּם֒ וַיִּטֹּ֨שׁ עַל־הַֽמַּחֲנֶ֜ה כְּדֶ֧רֶךְ יֹ֣ום כֹּ֗ה וּכְדֶ֤רֶךְ יֹום֙ כֹּ֔ה סְבִיבֹ֖ות הַֽמַּחֲנֶ֑ה וּכְאַמָּתַ֖יִם עַל־פְּנֵ֥י הָאָֽרֶץ׃ | 31 |
೩೧ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
וַיָּ֣קָם הָעָ֡ם כָּל־הַיֹּום֩ הַה֨וּא וְכָל־הַלַּ֜יְלָה וְכֹ֣ל ׀ יֹ֣ום הַֽמָּחֳרָ֗ת וַיַּֽאַסְפוּ֙ אֶת־הַשְּׂלָ֔ו הַמַּמְעִ֕יט אָסַ֖ף עֲשָׂרָ֣ה חֳמָרִ֑ים וַיִּשְׁטְח֤וּ לָהֶם֙ שָׁטֹ֔וחַ סְבִיבֹ֖ות הַֽמַּחֲנֶֽה׃ | 32 |
೩೨ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
הַבָּשָׂ֗ר עֹודֶ֙נּוּ֙ בֵּ֣ין שִׁנֵּיהֶ֔ם טֶ֖רֶם יִכָּרֵ֑ת וְאַ֤ף יְהוָה֙ חָרָ֣ה בָעָ֔ם וַיַּ֤ךְ יְהוָה֙ בָּעָ֔ם מַכָּ֖ה רַבָּ֥ה מְאֹֽד׃ | 33 |
೩೩ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
וַיִּקְרָ֛א אֶת־שֵֽׁם־הַמָּקֹ֥ום הַה֖וּא קִבְרֹ֣ות הַֽתַּאֲוָ֑ה כִּי־שָׁם֙ קָֽבְר֔וּ אֶת־הָעָ֖ם הַמִּתְאַוִּֽים׃ | 34 |
೩೪ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.
מִקִּבְרֹ֧ות הַֽתַּאֲוָ֛ה נָסְע֥וּ הָעָ֖ם חֲצֵרֹ֑ות וַיִּהְי֖וּ בַּחֲצֵרֹֽות׃ פ | 35 |
೩೫ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.