< בְּמִדְבַּר 18 >
וַיֹּ֤אמֶר יְהוָה֙ אֶֽל־אַהֲרֹ֔ן אַתָּ֗ה וּבָנֶ֤יךָ וּבֵית־אָבִ֙יךָ֙ אִתָּ֔ךְ תִּשְׂא֖וּ אֶת־עֲוֹ֣ן הַמִּקְדָּ֑שׁ וְאַתָּה֙ וּבָנֶ֣יךָ אִתָּ֔ךְ תִּשְׂא֖וּ אֶת־עֲוֹ֥ן כְּהֻנַּתְכֶֽם׃ | 1 |
೧ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.
וְגַ֣ם אֶת־אַחֶיךָ֩ מַטֵּ֨ה לֵוִ֜י שֵׁ֤בֶט אָבִ֙יךָ֙ הַקְרֵ֣ב אִתָּ֔ךְ וְיִלָּו֥וּ עָלֶ֖יךָ וִֽישָׁרְת֑וּךָ וְאַתָּה֙ וּבָנֶ֣יךָ אִתָּ֔ךְ לִפְנֵ֖י אֹ֥הֶל הָעֵדֻֽת׃ | 2 |
೨ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
וְשָֽׁמְרוּ֙ מִֽשְׁמַרְתְּךָ֔ וּמִשְׁמֶ֖רֶת כָּל־הָאֹ֑הֶל אַךְ֩ אֶל־כְּלֵ֨י הַקֹּ֤דֶשׁ וְאֶל־הַמִּזְבֵּ֙חַ֙ לֹ֣א יִקְרָ֔בוּ וְלֹֽא־יָמֻ֥תוּ גַם־הֵ֖ם גַּם־אַתֶּֽם׃ | 3 |
೩ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
וְנִלְו֣וּ עָלֶ֔יךָ וְשָֽׁמְר֗וּ אֶת־מִשְׁמֶ֙רֶת֙ אֹ֣הֶל מֹועֵ֔ד לְכֹ֖ל עֲבֹדַ֣ת הָאֹ֑הֶל וְזָ֖ר לֹא־יִקְרַ֥ב אֲלֵיכֶֽם׃ | 4 |
೪ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.
וּשְׁמַרְתֶּ֗ם אֵ֚ת מִשְׁמֶ֣רֶת הַקֹּ֔דֶשׁ וְאֵ֖ת מִשְׁמֶ֣רֶת הַמִּזְבֵּ֑חַ וְלֹֽא־יִהְיֶ֥ה עֹ֛וד קֶ֖צֶף עַל־בְּנֵ֥י יִשְׂרָאֵֽל׃ | 5 |
೫ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
וַאֲנִ֗י הִנֵּ֤ה לָקַ֙חְתִּי֙ אֶת־אֲחֵיכֶ֣ם הַלְוִיִּ֔ם מִתֹּ֖וךְ בְּנֵ֣י יִשְׂרָאֵ֑ל לָכֶ֞ם מַתָּנָ֤ה נְתֻנִים֙ לַֽיהוָ֔ה לַעֲבֹ֕ד אֶת־עֲבֹדַ֖ת אֹ֥הֶל מֹועֵֽד׃ | 6 |
೬ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
וְאַתָּ֣ה וּבָנֶ֣יךָ אִ֠תְּךָ תִּשְׁמְר֨וּ אֶת־כְּהֻנַּתְכֶ֜ם לְכָל־דְּבַ֧ר הַמִּזְבֵּ֛חַ וּלְמִבֵּ֥ית לַפָּרֹ֖כֶת וַעֲבַדְתֶּ֑ם עֲבֹדַ֣ת מַתָּנָ֗ה אֶתֵּן֙ אֶת־כְּהֻנַּתְכֶ֔ם וְהַזָּ֥ר הַקָּרֵ֖ב יוּמָֽת׃ ס | 7 |
೭ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.
וַיְדַבֵּ֣ר יְהוָה֮ אֶֽל־אַהֲרֹן֒ וַאֲנִי֙ הִנֵּ֣ה נָתַ֣תִּֽי לְךָ֔ אֶת־מִשְׁמֶ֖רֶת תְּרוּמֹתָ֑י לְכָל־קָדְשֵׁ֣י בְנֵֽי־יִ֠שְׂרָאֵל לְךָ֙ נְתַתִּ֧ים לְמָשְׁחָ֛ה וּלְבָנֶ֖יךָ לְחָק־עֹולָֽם׃ | 8 |
೮ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.
זֶֽה־יִהְיֶ֥ה לְךָ֛ מִקֹּ֥דֶשׁ הַקֳּדָשִׁ֖ים מִן־הָאֵ֑שׁ כָּל־קָ֠רְבָּנָם לְֽכָל־מִנְחָתָ֞ם וּלְכָל־חַטָּאתָ֗ם וּלְכָל־אֲשָׁמָם֙ אֲשֶׁ֣ר יָשִׁ֣יבוּ לִ֔י קֹ֣דֶשׁ קָֽדָשִׁ֥ים לְךָ֛ ה֖וּא וּלְבָנֶֽיךָ׃ | 9 |
೯ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
בְּקֹ֥דֶשׁ הַקֳּדָשִׁ֖ים תֹּאכֲלֶ֑נּוּ כָּל־זָכָר֙ יֹאכַ֣ל אֹתֹ֔ו קֹ֖דֶשׁ יִֽהְיֶה־לָּֽךְ׃ | 10 |
೧೦ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.
וְזֶה־לְּךָ֞ תְּרוּמַ֣ת מַתָּנָ֗ם לְכָל־תְּנוּפֹת֮ בְּנֵ֣י יִשְׂרָאֵל֒ לְךָ֣ נְתַתִּ֗ים וּלְבָנֶ֧יךָ וְלִבְנֹתֶ֛יךָ אִתְּךָ֖ לְחָק־עֹולָ֑ם כָּל־טָהֹ֥ור בְּבֵיתְךָ֖ יֹאכַ֥ל אֹתֹֽו׃ | 11 |
೧೧“ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.
כֹּ֚ל חֵ֣לֶב יִצְהָ֔ר וְכָל־חֵ֖לֶב תִּירֹ֣ושׁ וְדָגָ֑ן רֵאשִׁיתָ֛ם אֲשֶׁר־יִתְּנ֥וּ לַֽיהוָ֖ה לְךָ֥ נְתַתִּֽים׃ | 12 |
೧೨ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.
בִּכּוּרֵ֞י כָּל־אֲשֶׁ֧ר בְּאַרְצָ֛ם אֲשֶׁר־יָבִ֥יאוּ לַיהוָ֖ה לְךָ֣ יִהְיֶ֑ה כָּל־טָהֹ֥ור בְּבֵיתְךָ֖ יֹאכֲלֶֽנּוּ׃ | 13 |
೧೩ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
כָּל־חֵ֥רֶם בְּיִשְׂרָאֵ֖ל לְךָ֥ יִהְיֶֽה׃ | 14 |
೧೪ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.
כָּל־פֶּ֣טֶר רֶ֠חֶם לְֽכָל־בָּשָׂ֞ר אֲשֶׁר־יַקְרִ֧יבוּ לַֽיהוָ֛ה בָּאָדָ֥ם וּבַבְּהֵמָ֖ה יִֽהְיֶה־לָּ֑ךְ אַ֣ךְ ׀ פָּדֹ֣ה תִפְדֶּ֗ה אֵ֚ת בְּכֹ֣ור הָֽאָדָ֔ם וְאֵ֛ת בְּכֹֽור־הַבְּהֵמָ֥ה הַטְּמֵאָ֖ה תִּפְדֶּֽה׃ | 15 |
೧೫ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
וּפְדוּיָו֙ מִבֶּן־חֹ֣דֶשׁ תִּפְדֶּ֔ה בְּעֶ֨רְכְּךָ֔ כֶּ֛סֶף חֲמֵ֥שֶׁת שְׁקָלִ֖ים בְּשֶׁ֣קֶל הַקֹּ֑דֶשׁ עֶשְׂרִ֥ים גֵּרָ֖ה הֽוּא׃ | 16 |
೧೬ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
אַ֣ךְ בְּֽכֹור־שֹׁ֡ור אֹֽו־בְכֹ֨ור כֶּ֜שֶׂב אֹֽו־בְכֹ֥ור עֵ֛ז לֹ֥א תִפְדֶּ֖ה קֹ֣דֶשׁ הֵ֑ם אֶת־דָּמָ֞ם תִּזְרֹ֤ק עַל־הַמִּזְבֵּ֙חַ֙ וְאֶת־חֶלְבָּ֣ם תַּקְטִ֔יר אִשֶּׁ֛ה לְרֵ֥יחַ נִיחֹ֖חַ לַֽיהוָֽה׃ | 17 |
೧೭“ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
וּבְשָׂרָ֖ם יִהְיֶה־לָּ֑ךְ כַּחֲזֵ֧ה הַתְּנוּפָ֛ה וּכְשֹׁ֥וק הַיָּמִ֖ין לְךָ֥ יִהְיֶֽה׃ | 18 |
೧೮ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.
כֹּ֣ל ׀ תְּרוּמֹ֣ת הַקֳּדָשִׁ֗ים אֲשֶׁ֨ר יָרִ֥ימוּ בְנֵֽי־יִשְׂרָאֵל֮ לַֽיהוָה֒ נָתַ֣תִּֽי לְךָ֗ וּלְבָנֶ֧יךָ וְלִבְנֹתֶ֛יךָ אִתְּךָ֖ לְחָק־עֹולָ֑ם בְּרִית֩ מֶ֨לַח עֹולָ֥ם הִוא֙ לִפְנֵ֣י יְהוָ֔ה לְךָ֖ וּלְזַרְעֲךָ֥ אִתָּֽךְ׃ | 19 |
೧೯ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.
וַיֹּ֨אמֶר יְהוָ֜ה אֶֽל־אַהֲרֹ֗ן בְּאַרְצָם֙ לֹ֣א תִנְחָ֔ל וְחֵ֕לֶק לֹא־יִהְיֶ֥ה לְךָ֖ בְּתֹוכָ֑ם אֲנִ֤י חֶלְקְךָ֙ וְנַחֲלָ֣תְךָ֔ בְּתֹ֖וךְ בְּנֵ֥י יִשְׂרָאֵֽל׃ ס | 20 |
೨೦ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.
וְלִבְנֵ֣י לֵוִ֔י הִנֵּ֥ה נָתַ֛תִּי כָּל־מֽ͏ַעֲשֵׂ֥ר בְּיִשְׂרָאֵ֖ל לְנַחֲלָ֑ה חֵ֤לֶף עֲבֹֽדָתָם֙ אֲשֶׁר־הֵ֣ם עֹֽבְדִ֔ים אֶת־עֲבֹדַ֖ת אֹ֥הֶל מֹועֵֽד׃ | 21 |
೨೧“ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
וְלֹא־יִקְרְב֥וּ עֹ֛וד בְּנֵ֥י יִשְׂרָאֵ֖ל אֶל־אֹ֣הֶל מֹועֵ֑ד לָשֵׂ֥את חֵ֖טְא לָמֽוּת׃ | 22 |
೨೨ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.
וְעָבַ֨ד הַלֵּוִ֜י ה֗וּא אֶת־עֲבֹדַת֙ אֹ֣הֶל מֹועֵ֔ד וְהֵ֖ם יִשְׂא֣וּ עֲוֹנָ֑ם חֻקַּ֤ת עֹולָם֙ לְדֹרֹ֣תֵיכֶ֔ם וּבְתֹוךְ֙ בְּנֵ֣י יִשְׂרָאֵ֔ל לֹ֥א יִנְחֲל֖וּ נַחֲלָֽה׃ | 23 |
೨೩ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.
כִּ֞י אֶת־מַעְשַׂ֣ר בְּנֵֽי־יִשְׂרָאֵ֗ל אֲשֶׁ֨ר יָרִ֤ימוּ לֽ͏ַיהוָה֙ תְּרוּמָ֔ה נָתַ֥תִּי לַלְוִיִּ֖ם לְנַחֲלָ֑ה עַל־כֵּן֙ אָמַ֣רְתִּי לָהֶ֔ם בְּתֹוךְ֙ בְּנֵ֣י יִשְׂרָאֵ֔ל לֹ֥א יִנְחֲל֖וּ נַחֲלָֽה׃ פ | 24 |
೨೪ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ.
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃ | 25 |
೨೫ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
וְאֶל־הַלְוִיִּ֣ם תְּדַבֵּר֮ וְאָמַרְתָּ֣ אֲלֵהֶם֒ כִּֽי־תִ֠קְחוּ מֵאֵ֨ת בְּנֵֽי־יִשְׂרָאֵ֜ל אֶת־הַֽמַּעֲשֵׂ֗ר אֲשֶׁ֨ר נָתַ֧תִּי לָכֶ֛ם מֵאִתָּ֖ם בְּנַחֲלַתְכֶ֑ם וַהֲרֵמֹתֶ֤ם מִמֶּ֙נּוּ֙ תְּרוּמַ֣ת יְהוָ֔ה מַעֲשֵׂ֖ר מִן־הַֽמַּעֲשֵֽׂר׃ | 26 |
೨೬“ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.
וְנֶחְשַׁ֥ב לָכֶ֖ם תְּרוּמַתְכֶ֑ם כַּדָּגָן֙ מִן־הַגֹּ֔רֶן וְכַֽמְלֵאָ֖ה מִן־הַיָּֽקֶב׃ | 27 |
೨೭ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.
כֵּ֣ן תָּרִ֤ימוּ גַם־אַתֶּם֙ תְּרוּמַ֣ת יְהוָ֔ה מִכֹּל֙ מַעְשְׂרֹ֣תֵיכֶ֔ם אֲשֶׁ֣ר תִּקְח֔וּ מֵאֵ֖ת בְּנֵ֣י יִשְׂרָאֵ֑ל וּנְתַתֶּ֤ם מִמֶּ֙נּוּ֙ אֶת־תְּרוּמַ֣ת יְהוָ֔ה לְאַהֲרֹ֖ן הַכֹּהֵֽן׃ | 28 |
೨೮ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
מִכֹּל֙ מַתְּנֹ֣תֵיכֶ֔ם תָּרִ֕ימוּ אֵ֖ת כָּל־תְּרוּמַ֣ת יְהוָ֑ה מִכָּל־חֶלְבֹּ֔ו אֶֽת־מִקְדְּשֹׁ֖ו מִמֶּֽנּוּ׃ | 29 |
೨೯ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
וְאָמַרְתָּ֖ אֲלֵהֶ֑ם בַּהֲרִֽימְכֶ֤ם אֶת־חֶלְבֹּו֙ מִמֶּ֔נּוּ וְנֶחְשַׁב֙ לַלְוִיִּ֔ם כִּתְבוּאַ֥ת גֹּ֖רֶן וְכִתְבוּאַ֥ת יָֽקֶב׃ | 30 |
೩೦ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.
וַאֲכַלְתֶּ֤ם אֹתֹו֙ בְּכָל־מָקֹ֔ום אַתֶּ֖ם וּבֵֽיתְכֶ֑ם כִּֽי־שָׂכָ֥ר הוּא֙ לָכֶ֔ם חֵ֥לֶף עֲבֹֽדַתְכֶ֖ם בְּאֹ֥הֶל מֹועֵֽד׃ | 31 |
೩೧ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.
וְלֹֽא־תִשְׂא֤וּ עָלָיו֙ חֵ֔טְא בַּהֲרִֽימְכֶ֥ם אֶת־חֶלְבֹּ֖ו מִמֶּ֑נּוּ וְאֶת־קָדְשֵׁ֧י בְנֵי־יִשְׂרָאֵ֛ל לֹ֥א תְחַלְּל֖וּ וְלֹ֥א תָמֽוּתוּ׃ פ | 32 |
೩೨ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.