< תְהִלִּים 131 >
שִׁ֥יר הַֽמַּֽעֲלֹ֗ות לְדָ֫וִ֥ד יְהוָ֤ה ׀ לֹא־גָבַ֣הּ לִ֭בִּי וְלֹא־רָמ֣וּ עֵינַ֑י וְלֹֽא־הִלַּ֓כְתִּי ׀ בִּגְדֹלֹ֖ות וּבְנִפְלָאֹ֣ות מִמֶּֽנִּי׃ | 1 |
೧ಯಾತ್ರಾಗೀತೆ; ದಾವೀದನದು. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
אִם־לֹ֤א שִׁוִּ֨יתִי ׀ וְדֹומַ֗מְתִּי נַ֫פְשִׁ֥י כְּ֭גָמֻל עֲלֵ֣י אִמֹּ֑ו כַּגָּמֻ֖ל עָלַ֣י נַפְשִֽׁי׃ | 2 |
೨ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
יַחֵ֣ל יִ֝שְׂרָאֵל אֶל־יְהוָ֑ה מֵֽ֝עַתָּ֗ה וְעַד־עֹולָֽם׃ | 3 |
೩ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.