< תְהִלִּים 141 >
מִזְמֹ֗ור לְדָ֫וִ֥ד יְהוָ֣ה קְ֭רָאתִיךָ ח֣וּשָׁה לִּ֑י הַאֲזִ֥ינָה קֹ֝ולִ֗י בְּקָרְאִי־לָֽךְ׃ | 1 |
೧ದಾವೀದನ ಕೀರ್ತನೆ. ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.
תִּכֹּ֤ון תְּפִלָּתִ֣י קְטֹ֣רֶת לְפָנֶ֑יךָ מַֽשְׂאַ֥ת כַּ֝פַּ֗י מִנְחַת־עָֽרֶב׃ | 2 |
೨ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
שִׁיתָ֣ה יְ֭הוָה שָׁמְרָ֣ה לְפִ֑י נִ֝צְּרָ֗ה עַל־דַּ֥ל שְׂפָתָֽי׃ | 3 |
೩ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
אַל־תַּט־לִבִּ֨י לְדָבָ֪ר ׀ רָ֡ע לְהִתְעֹ֘ולֵ֤ל עֲלִלֹ֨ות ׀ בְּרֶ֗שַׁע אֶת־אִישִׁ֥ים פֹּֽעֲלֵי־אָ֑וֶן וּבַל־אֶ֝לְחַ֗ם בְּמַנְעַמֵּיהֶֽם׃ | 4 |
೪ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
יֶֽהֶלְמֵֽנִי־צַדִּ֨יק ׀ חֶ֡סֶד וְֽיֹוכִיחֵ֗נִי שֶׁ֣מֶן רֹ֭אשׁ אַל־יָנִ֣י רֹאשִׁ֑י כִּי־עֹ֥וד וּ֝תְפִלָּתִ֗י בְּרָעֹותֵיהֶֽם׃ | 5 |
೫ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
נִשְׁמְט֣וּ בִֽידֵי־סֶ֭לַע שֹׁפְטֵיהֶ֑ם וְשָׁמְע֥וּ אֲ֝מָרַ֗י כִּ֣י נָעֵֽמוּ׃ | 6 |
೬ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.
כְּמֹ֤ו פֹלֵ֣חַ וּבֹקֵ֣עַ בָּאָ֑רֶץ נִפְזְר֥וּ עֲ֝צָמֵ֗ינוּ לְפִ֣י שְׁאֹֽול׃ (Sheol ) | 7 |
೭ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. (Sheol )
כִּ֤י אֵלֶ֨יךָ ׀ יְהוִ֣ה אֲדֹנָ֣י עֵינָ֑י בְּכָ֥ה חָ֝סִ֗יתִי אַל־תְּעַ֥ר נַפְשִֽׁי׃ | 8 |
೮ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
שָׁמְרֵ֗נִי מִ֣ידֵי פַ֭ח יָ֣קְשׁוּ לִ֑י וּ֝מֹקְשֹׁ֗ות פֹּ֣עֲלֵי אָֽוֶן׃ | 9 |
೯ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.
יִפְּל֣וּ בְמַכְמֹרָ֣יו רְשָׁעִ֑ים יַ֥חַד אָ֝נֹכִ֗י עַֽד־אֶעֱבֹֽור׃ | 10 |
೧೦ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.