< תְהִלִּים 142 >
מַשְׂכִּ֥יל לְדָוִ֑ד בִּהְיֹותֹ֖ו בַמְּעָרָ֣ה תְפִלָּֽה׃ קֹ֭ולִי אֶל־יְהוָ֣ה אֶזְעָ֑ק קֹ֝ולִ֗י אֶל־יְהוָ֥ה אֶתְחַנָּֽן׃ | 1 |
೧ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.
אֶשְׁפֹּ֣ךְ לְפָנָ֣יו שִׂיחִ֑י צָ֝רָתִ֗י לְפָנָ֥יו אַגִּֽיד׃ | 2 |
೨ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.
בְּהִתְעַטֵּ֬ף עָלַ֨י ׀ רוּחִ֗י וְאַתָּה֮ יָדַ֪עְתָּ נְֽתִיבָ֫תִ֥י בְּאֹֽרַח־ז֥וּ אֲהַלֵּ֑ךְ טָמְנ֖וּ פַ֣ח לִֽי׃ | 3 |
೩ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.
הַבֵּ֤יט יָמִ֨ין ׀ וּרְאֵה֮ וְאֵֽין־לִ֪י מַ֫כִּ֥יר אָבַ֣ד מָנֹ֣וס מִמֶּ֑נִּי אֵ֖ין דֹּורֵ֣שׁ לְנַפְשִֽׁי׃ | 4 |
೪ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
זָעַ֥קְתִּי אֵלֶ֗יךָ יְה֫וָ֥ה אָ֭מַרְתִּי אַתָּ֣ה מַחְסִ֑י חֶ֝לְקִ֗י בְּאֶ֣רֶץ הַֽחַיִּים׃ | 5 |
೫ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.
הַקְשִׁ֤יבָה ׀ אֶֽל־רִנָּתִי֮ כִּֽי־דַלֹּ֪ותִ֫י מְאֹ֥ד הַצִּילֵ֥נִי מֵרֹדְפַ֑י כִּ֖י אָמְצ֣וּ מִמֶּֽנִּי׃ | 6 |
೬ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.
הֹ֘וצִ֤יאָה מִמַּסְגֵּ֨ר ׀ נַפְשִׁי֮ לְהֹודֹ֪ות אֶת־שְׁ֫מֶ֥ךָ בִּ֭י יַכְתִּ֣רוּ צַדִּיקִ֑ים כִּ֖י תִגְמֹ֣ל עָלֽ͏ָי׃ | 7 |
೭ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.