< תְהִלִּים 144 >
לְדָוִ֨ד ׀ בָּ֘ר֤וּךְ יְהוָ֨ה ׀ צוּרִ֗י הַֽמְלַמֵּ֣ד יָדַ֣י לַקְרָ֑ב אֶ֝צְבְּעֹותַ֗י לַמִּלְחָמָֽה׃ | 1 |
ದಾವೀದನ ಕೀರ್ತನೆ. ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.
חַסְדִּ֥י וּמְצוּדָתִי֮ מִשְׂגַּבִּ֪י וּֽמְפַלְטִ֫י לִ֥י מָ֭גִנִּי וּבֹ֣ו חָסִ֑יתִי הָרֹודֵ֖ד עַמִּ֣י תַחְתָּֽי׃ | 2 |
ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ.
יְֽהוָ֗ה מָה־אָ֭דָם וַתֵּדָעֵ֑הוּ בֶּן־אֱ֝נֹ֗ושׁ וַֽתְּחַשְּׁבֵֽהוּ׃ | 3 |
ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು?
אָ֭דָם לַהֶ֣בֶל דָּמָ֑ה יָ֝מָ֗יו כְּצֵ֣ל עֹובֵֽר׃ | 4 |
ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.
יְ֭הוָה הַט־שָׁמֶ֣יךָ וְתֵרֵ֑ד גַּ֖ע בֶּהָרִ֣ים וֽ͏ְיֶעֱשָֽׁנוּ׃ | 5 |
ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು.
בְּרֹ֣וק בָּ֭רָק וּתְפִיצֵ֑ם שְׁלַ֥ח חִ֝צֶּ֗יךָ וּתְהֻמֵּֽם׃ | 6 |
ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ.
שְׁלַ֥ח יָדֶ֗יךָ מִמָּ֫רֹ֥ום פְּצֵ֣נִי וְ֭הַצִּילֵנִי מִמַּ֣יִם רַבִּ֑ים מִ֝יַּ֗ד בְּנֵ֣י נֵכָֽר׃ | 7 |
ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ.
אֲשֶׁ֣ר פִּ֭יהֶם דִּבֶּר־שָׁ֑וְא וִֽ֝ימִינָ֗ם יְמִ֣ין שָֽׁקֶר׃ | 8 |
ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ.
אֱֽלֹהִ֗ים שִׁ֣יר חָ֭דָשׁ אָשִׁ֣ירָה לָּ֑ךְ בְּנֵ֥בֶל עָ֝שֹׂ֗ור אֲזַמְּרָה־לָּֽךְ׃ | 9 |
ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು.
הַנֹּותֵ֥ן תְּשׁוּעָ֗ה לַמְּלָ֫כִ֥ים הַ֭פֹּוצֶה אֶת־דָּוִ֥ד עַבְדֹּ֗ו מֵחֶ֥רֶב רָעָֽה׃ | 10 |
ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.
פְּצֵ֥נִי וְהַצִּילֵנִי֮ מִיַּ֪ד בְּֽנֵי־נֵ֫כָ֥ר אֲשֶׁ֣ר פִּ֭יהֶם דִּבֶּר־שָׁ֑וְא וִֽ֝ימִינָ֗ם יְמִ֣ין שָֽׁקֶר׃ | 11 |
ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ.
אֲשֶׁ֤ר בָּנֵ֨ינוּ ׀ כִּנְטִעִים֮ מְגֻדָּלִ֪ים בִּֽנְעוּרֵ֫יהֶ֥ם בְּנֹותֵ֥ינוּ כְזָוִיֹּ֑ת מְ֝חֻטָּבֹ֗ות תַּבְנִ֥ית הֵיכָֽל׃ | 12 |
ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.
מְזָוֵ֣ינוּ מְלֵאִים֮ מְפִיקִ֥ים מִזַּ֗ן אֶ֫ל־זַ֥ן צֹאונֵ֣נוּ מַ֭אֲלִיפֹות מְרֻבָּבֹ֗ות בְּחוּצֹותֵֽינוּ׃ | 13 |
ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ.
אַלּוּפֵ֗ינוּ מְֽסֻבָּ֫לִ֥ים אֵֽין־פֶּ֭רֶץ וְאֵ֣ין יֹוצֵ֑את וְאֵ֥ין צְ֝וָחָ֗ה בִּרְחֹבֹתֵֽינוּ׃ | 14 |
ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ.
אַשְׁרֵ֣י הָ֭עָם שֶׁכָּ֣כָה לֹּ֑ו אַֽשְׁרֵ֥י הָ֝עָ֗ם שֶׁיֲהוָ֥ה אֱלֹהָֽיו׃ | 15 |
ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.