< תְהִלִּים 35 >
לְדָוִ֨ד ׀ רִיבָ֣ה יְ֭הוָה אֶת־יְרִיבַ֑י לְ֝חַ֗ם אֶת־לֹֽחֲמָֽי׃ | 1 |
ದಾವೀದನ ಕೀರ್ತನೆ. ಯೆಹೋವ ದೇವರೇ, ನನ್ನ ಸಂಗಡ ವ್ಯಾಜ್ಯ ಮಾಡುವವರ ಸಂಗಡ ವ್ಯಾಜ್ಯ ಮಾಡಿರಿ; ನನಗೆ ವಿರೋಧವಾಗಿ ಯುದ್ಧ ಮಾಡುವವರ ಸಂಗಡ ಯುದ್ಧಮಾಡಿರಿ.
הַחֲזֵ֣ק מָגֵ֣ן וְצִנָּ֑ה וְ֝ק֗וּמָה בְּעֶזְרָתִֽי׃ | 2 |
ಗುರಾಣಿಯನ್ನೂ ಖಡ್ಗವನ್ನೂ ಹಿಡಿದುಕೊಂಡು ನನ್ನ ಸಹಾಯಕ್ಕೆ ಎದ್ದು ಬನ್ನಿರಿ.
וְהָ֘רֵ֤ק חֲנִ֣ית וּ֭סְגֹר לִקְרַ֣את רֹדְפָ֑י אֱמֹ֥ר לְ֝נַפְשִׁ֗י יְֽשֻׁעָתֵ֥ךְ אָֽנִי׃ | 3 |
ಬರ್ಜಿಯನ್ನೂ ಭಲ್ಲೆಯನ್ನೂ ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿರಿ. “ನಾನೇ ನಿಮ್ಮ ರಕ್ಷಣೆ” ಎಂದು ನನಗೆ ಹೇಳಿರಿ.
יֵבֹ֣שׁוּ וְיִכָּלְמוּ֮ מְבַקְשֵׁ֪י נַ֫פְשִׁ֥י יִסֹּ֣גוּ אָחֹ֣ור וְיַחְפְּר֑וּ חֹ֝שְׁבֵ֗י רָעָתִֽי׃ | 4 |
ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
יִֽהְי֗וּ כְּמֹ֥ץ לִפְנֵי־ר֑וּחַ וּמַלְאַ֖ךְ יְהוָ֣ה דֹּוחֶֽה׃ | 5 |
ಅವರು ಗಾಳಿಗೆ ಹಾರುವ ಹೊಟ್ಟಿನ ಹಾಗೆ ಆಗಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.
יְֽהִי־דַרְכָּ֗ם חֹ֥שֶׁךְ וַחֲלַקְלַקֹּ֑ות וּמַלְאַ֥ךְ יְ֝הוָ֗ה רֹדְפָֽם׃ | 6 |
ಅಂಥವರ ಮಾರ್ಗವು ಕತ್ತಲೆಯೂ ಜಾರುವಿಕೆಯೂ ಆಗಿರಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.
כִּֽי־חִנָּ֣ם טָֽמְנוּ־לִ֭י שַׁ֣חַת רִשְׁתָּ֑ם חִ֝נָּ֗ם חָפְר֥וּ לְנַפְשִֽׁי׃ | 7 |
ಏಕೆಂದರೆ ಕಾರಣವಿಲ್ಲದೆ ತಮ್ಮ ಬಲೆಯನ್ನು ನನಗೆ ಒಡ್ಡಿದ್ದಾರೆ; ಕಾರಣವಿಲ್ಲದೆ ನನಗೆ ಗುಂಡಿಯನ್ನು ಅಗೆದಿದ್ದಾರೆ.
תְּבֹואֵ֣הוּ שֹׁואָה֮ לֹֽא־יֵ֫דָ֥ע וְרִשְׁתֹּ֣ו אֲשֶׁר־טָמַ֣ן תִּלְכְּדֹ֑ו בְּ֝שֹׁואָ֗ה יִפָּל־בָּֽהּ׃ | 8 |
ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.
וְ֭נַפְשִׁי תָּגִ֣יל בַּיהוָ֑ה תָּ֝שִׂישׂ בִּישׁוּעָתֹֽו׃ | 9 |
ಆಗ ನನ್ನ ಪ್ರಾಣವು ಯೆಹೋವ ದೇವರಲ್ಲಿ ಉಲ್ಲಾಸಗೊಂಡು, ದೇವರ ರಕ್ಷಣೆಯಲ್ಲಿ ಸಂತೋಷಿಸುವುದು.
כָּ֥ל עַצְמֹותַ֨י ׀ תֹּאמַרְנָה֮ יְהוָ֗ה מִ֥י כָ֫מֹ֥וךָ מַצִּ֣יל עָ֭נִי מֵחָזָ֣ק מִמֶּ֑נּוּ וְעָנִ֥י וְ֝אֶבְיֹ֗ון מִגֹּזְלֹֽו׃ | 10 |
ಯೆಹೋವ ದೇವರೇ, “ನಿಮ್ಮ ಹಾಗೆ ಯಾರು ಇದ್ದಾರೆ? ಬಡವನನ್ನು ಅವನಿಗಿಂತ ಬಲಿಷ್ಠನಿಂದ ಕಾಪಾಡುತ್ತೀರಿ ದರಿದ್ರನನ್ನೂ, ಕೊರತೆಯುಳ್ಳವನನ್ನೂ ಸುಲಿದುಕೊಳ್ಳುವವನಿಂದ ಬಿಡಿಸುತ್ತೀರಿ,” ಎಂದು ನನ್ನ ಪೂರ್ಣ ಪ್ರಾಣವೇ ಹೇಳುವುದು.
יְ֭קוּמוּן עֵדֵ֣י חָמָ֑ס אֲשֶׁ֥ר לֹא־יָ֝דַ֗עְתִּי יִשְׁאָלֽוּנִי׃ | 11 |
ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ.
יְשַׁלְּמ֣וּנִי רָ֭עָה תַּ֥חַת טֹובָ֗ה שְׁכֹ֣ול לְנַפְשִֽׁי׃ | 12 |
ನನ್ನ ಉಪಕಾರಕ್ಕೆ ಬದಲಾಗಿ ನನಗೆ ಕೇಡನ್ನು ಮಾಡಿ ನನ್ನನ್ನು ದುಃಖದಲ್ಲಿರುವವರಂತೆ ಬಿಟ್ಟುಬಿಟ್ಟಿದ್ದರೆ
וַאֲנִ֤י ׀ בַּחֲלֹותָ֡ם לְב֬וּשִׁי שָׂ֗ק עִנֵּ֣יתִי בַצֹּ֣ום נַפְשִׁ֑י וּ֝תְפִלָּתִ֗י עַל־חֵיקִ֥י תָשֽׁוּב׃ | 13 |
ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.
כְּרֵֽעַ־כְּאָ֣ח לִ֭י הִתְהַלָּ֑כְתִּי כַּאֲבֶל־אֵ֝֗ם קֹדֵ֥ר שַׁחֹֽותִי׃ | 14 |
ಆದುದರಿಂದ ಸ್ವಸ್ಥರಾದವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಎಂದು ಭಾವಿಸಿಕೊಂಡು, ನನ್ನ ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವನಾಗಿ ತಲೆಬಾಗಿ ಅಳುತ್ತಿದ್ದೆನು.
וּבְצַלְעִי֮ שָׂמְח֪וּ וְֽנֶאֱ֫סָ֥פוּ נֶאֶסְפ֬וּ עָלַ֣י נֵ֭כִים וְלֹ֣א יָדַ֑עְתִּי קָֽרְע֥וּ וְלֹא־דָֽמּוּ׃ | 15 |
ಆದರೆ ನಾನು ಎಡವಿದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಹೌದು, ದೂಷಕರು ನನಗೆ ತಿಳಿಯದೆ ನನ್ನ ವಿರೋಧವಾಗಿ ಕೂಡಿಕೊಂಡರು. ಅವರು ನನ್ನನ್ನು ದೂಷಿಸುವುದನ್ನು ನಿಲ್ಲಿಸಲೇ ಇಲ್ಲ.
בְּ֭חַנְפֵי לַעֲגֵ֣י מָעֹ֑וג חָרֹ֖ק עָלַ֣י שִׁנֵּֽימֹו׃ | 16 |
ಔತಣಗಳಲ್ಲಿ ಗೇಲಿಮಾಡುವ ಕಪಟಿಗಳಂತೆ ಅವರು ನನ್ನ ಮೇಲೆ ಹಲ್ಲುಗಳನ್ನು ಕಡಿಯುತ್ತಾರೆ.
אֲדֹנָי֮ כַּמָּ֪ה תִּ֫רְאֶ֥ה הָשִׁ֣יבָה נַ֭פְשִׁי מִשֹּׁאֵיהֶ֑ם מִ֝כְּפִירִ֗ים יְחִידָתִֽי׃ | 17 |
ಯೆಹೋವ ದೇವರೇ, ಎಷ್ಟರವರೆಗೆ ನೀವು ಸುಮ್ಮನೆ ನೋಡುತ್ತಾ ಇರುವಿರಿ? ಅವರ ಅಪಾಯಗಳಿಂದ ನನ್ನ ಪ್ರಾಣವನ್ನು ಬಿಡಿಸಿರಿ. ಆ ಸಿಂಹಗಳಿಂದ ನನ್ನ ಅಮೂಲ್ಯ ಪ್ರಾಣವನ್ನೂ ತಪ್ಪಿಸಿರಿ.
אֹ֭ודְךָ בְּקָהָ֣ל רָ֑ב בְּעַ֖ם עָצ֣וּם אֲהַֽלְלֶֽךָּ׃ | 18 |
ಆಗ ನಾನು ದೊಡ್ಡ ಸಭೆಗಳಲ್ಲಿ ನಿಮ್ಮನ್ನು ಕೊಂಡಾಡುವೆನು; ಬಹುಜನರಲ್ಲಿ ನಿಮ್ಮನ್ನು ಸ್ತುತಿಸುವೆನು.
אַֽל־יִשְׂמְחוּ־לִ֣י אֹיְבַ֣י שֶׁ֑קֶר שֹׂנְאַ֥י חִ֝נָּ֗ם יִקְרְצוּ־עָֽיִן׃ | 19 |
ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.
כִּ֤י לֹ֥א שָׁלֹ֗ום יְדַ֫בֵּ֥רוּ וְעַ֥ל רִגְעֵי־אֶ֑רֶץ דִּבְרֵ֥י מִ֝רְמֹות יַחֲשֹׁבֽוּן׃ | 20 |
ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರಾಗಿ ಬಾಳುವವರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
וַיַּרְחִ֥יבוּ עָלַ֗י פִּ֫יהֶ֥ם אָ֭מְרוּ הֶאָ֣ח ׀ הֶאָ֑ח רָאֲתָ֥ה עֵינֵֽינוּ׃ | 21 |
ಹೌದು, ಅವರು ತಮ್ಮ ಬಾಯನ್ನು ತೆರೆದು ನನಗೆ ವಿರೋಧವಾಗಿ, “ಆಹಾ, ಆಹಾ, ನಾವು ಕಣ್ಣಾರೆ ಕಂಡೆವು,” ಎನ್ನುತ್ತಾರೆ.
רָאִ֣יתָה יְ֭הוָה אַֽל־תֶּחֱרַ֑שׁ אֲ֝דֹנָ֗י אֲל־תִּרְחַ֥ק מִמֶּֽנִּי׃ | 22 |
ಯೆಹೋವ ದೇವರೇ, ನೀವು ಇದನ್ನು ನೋಡಿದ್ದೀರಿ; ಯೆಹೋವ ದೇವರೇ, ಮೌನವಾಗಿರಬೇಡಿರಿ; ನನಗೆ ದೂರವಾಗಿರಲೂ ಬೇಡಿರಿ.
הָעִ֣ירָה וְ֭הָקִיצָה לְמִשְׁפָּטִ֑י אֱלֹהַ֖י וַֽאדֹנָ֣י לְרִיבִֽי׃ | 23 |
ನನ್ನ ದೇವರೇ, ನನ್ನ ಯೆಹೋವ ದೇವರೇ, ನನ್ನ ನ್ಯಾಯವನ್ನು ನಿರ್ಣಯಿಸಿರಿ, ನನ್ನ ವ್ಯಾಜ್ಯದ ಪರವಾಗಿ ಎದ್ದೇಳಿರಿ.
שָׁפְטֵ֣נִי כְ֭צִדְקְךָ יְהוָ֥ה אֱלֹהָ֗י וְאַל־יִשְׂמְחוּ־לִֽי׃ | 24 |
ಯೆಹೋವ ದೇವರೇ, ನನ್ನ ದೇವರೇ, ನಿಮ್ಮ ನೀತಿಯ ಪ್ರಕಾರ ನನಗೆ ನ್ಯಾಯತೀರಿಸಿರಿ; ಅವರು ನನ್ನ ವಿರುದ್ಧ ಸಂತೋಷಪಡದೆ ಇರಲಿ.
אַל־יֹאמְר֣וּ בְ֭לִבָּם הֶאָ֣ח נַפְשֵׁ֑נוּ אַל־יֹ֝אמְר֗וּ בִּֽלַּעֲנֽוּהוּ׃ | 25 |
ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.
יֵ֘בֹ֤שׁוּ וְיַחְפְּר֨וּ ׀ יַחְדָּו֮ שְׂמֵחֵ֪י רָעָ֫תִ֥י יִֽלְבְּשׁוּ־בֹ֥שֶׁת וּכְלִמָּ֑ה הַֽמַּגְדִּילִ֥ים עָלָֽי׃ | 26 |
ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.
יָרֹ֣נּוּ וְיִשְׂמְחוּ֮ חֲפֵצֵ֪י צִ֫דְקִ֥י וְיֹאמְר֣וּ תָ֭מִיד יִגְדַּ֣ל יְהוָ֑ה הֶ֝חָפֵ֗ץ שְׁלֹ֣ום עַבְדֹּֽו׃ | 27 |
ನನ್ನ ನೀತಿಯಲ್ಲಿ ಸಂತೋಷಪಡುವವರು ಉತ್ಸಾಹಧ್ವನಿ ಮಾಡಿ, ಆನಂದಪಡಲಿ; “ಹೌದು, ತಮ್ಮ ಸೇವಕನ ಅಭಿವೃದ್ಧಿಯಲ್ಲಿ ಸಂತೋಷಪಡುವ ಯೆಹೋವ ದೇವರು ಮಹಿಮೆಪಡಲಿ,” ಎಂದು ಅವರು ಯಾವಾಗಲೂ ಹೇಳಲಿ.
וּ֭לְשֹׁונִי תֶּהְגֶּ֣ה צִדְקֶ֑ךָ כָּל־הַ֝יֹּום תְּהִלָּתֶֽךָ׃ | 28 |
ಆಗ ನನ್ನ ನಾಲಿಗೆಯು ನಿಮ್ಮ ನೀತಿಯನ್ನೂ ದಿನವೆಲ್ಲಾ ನಿಮ್ಮ ಸ್ತೋತ್ರವನ್ನೂ ವರ್ಣಿಸುವುದು.