< תְהִלִּים 5 >
לַמְנַצֵּ֥חַ אֶֽל־הַנְּחִילֹ֗ות מִזְמֹ֥ור לְדָוִֽד׃ אֲמָרַ֖י הַאֲזִ֥ינָה ׀ יְהוָ֗ה בִּ֣ינָה הֲגִֽיגִי׃ | 1 |
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೊಳಲು ವಾದ್ಯದೊಡನೆ ಹಾಡತಕ್ಕದ್ದು, ದಾವೀದನ ಕೀರ್ತನೆ. ಯೆಹೋವ ದೇವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ, ನನ್ನ ಪ್ರಲಾಪವನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
הַקְשִׁ֤יבָה ׀ לְקֹ֬ול שַׁוְעִ֗י מַלְכִּ֥י וֵאלֹהָ֑י כִּֽי־אֵ֝לֶ֗יךָ אֶתְפַּלָּֽל׃ | 2 |
ನನ್ನ ಅರಸರೇ, ನನ್ನ ದೇವರೇ, ಸಹಾಯಕ್ಕಾಗಿರುವ ನನ್ನ ಮೊರೆಯನ್ನು ಕೇಳಿರಿ, ನಿಮಗೇ ನಾನು ಪ್ರಾರ್ಥಿಸುತ್ತೇನೆ.
יְֽהוָ֗ה בֹּ֖קֶר תִּשְׁמַ֣ע קֹולִ֑י בֹּ֥קֶר אֶֽעֱרָךְ־לְ֝ךָ֗ וַאֲצַפֶּֽה׃ | 3 |
ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ; ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ, ಎದುರುನೋಡುತ್ತಾ ಕಾದುಕೊಂಡಿರುವೆನು.
כִּ֤י ׀ לֹ֤א אֵֽל־חָפֵ֘ץ רֶ֥שַׁע ׀ אָ֑תָּה לֹ֖א יְגֻרְךָ֣ רָֽע׃ | 4 |
ನೀವು ದುಷ್ಟತನವನ್ನು ಮೆಚ್ಚುವ ದೇವರಲ್ಲ; ಕೆಡುಕರು ನಿಮ್ಮ ಬಳಿಯಲ್ಲಿ ವಾಸಿಸುವುದಿಲ್ಲ.
לֹֽא־יִתְיַצְּב֣וּ הֹֽ֭ולְלִים לְנֶ֣גֶד עֵינֶ֑יךָ שָׂ֝נֵ֗אתָ כָּל־פֹּ֥עֲלֵי אָֽוֶן׃ | 5 |
ನಿಮ್ಮ ಸನ್ನಿಧಿಯಲ್ಲಿ ಗರ್ವಿಗಳು ನಿಂತುಕೊಳ್ಳಲಾರರು. ಅಧರ್ಮ ಮಾಡುವವರೆಲ್ಲರನ್ನು ನೀವು ದ್ವೇಷಿಸುತ್ತೀರಿ.
תְּאַבֵּד֮ דֹּבְרֵ֪י כָ֫זָ֥ב אִישׁ־דָּמִ֥ים וּמִרְמָ֗ה יְתָ֘עֵ֥ב ׀ יְהוָֽה׃ | 6 |
ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.
וַאֲנִ֗י בְּרֹ֣ב חַ֭סְדְּךָ אָבֹ֣וא בֵיתֶ֑ךָ אֶשְׁתַּחֲוֶ֥ה אֶל־הֽ͏ֵיכַל־קָ֝דְשְׁךָ֗ בְּיִרְאָתֶֽךָ׃ | 7 |
ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.
יְהוָ֤ה ׀ נְחֵ֬נִי בְצִדְקָתֶ֗ךָ לְמַ֥עַן שֹׁורְרָ֑י הֹושַׁר (הַיְשַׁ֖ר) לְפָנַ֣י דַּרְכֶּֽךָ׃ | 8 |
ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ.
כִּ֤י אֵ֪ין בְּפִ֡יהוּ נְכֹונָה֮ קִרְבָּ֪ם הַ֫וֹּ֥ות קֶֽבֶר־פָּת֥וּחַ גְּרֹונָ֑ם לְ֝שֹׁונָ֗ם יַחֲלִֽיקוּן׃ | 9 |
ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.
הַֽאֲשִׁימֵ֨ם ׀ אֱֽלֹהִ֗ים יִפְּלוּ֮ מִֽמֹּעֲצֹ֪ותֵ֫יהֶ֥ם בְּרֹ֣ב פִּ֭שְׁעֵיהֶם הַדִּיחֵ֑מֹו כִּי־מָ֥רוּ בָֽךְ׃ | 10 |
ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
וְיִשְׂמְח֨וּ כָל־חֹ֪וסֵי בָ֡ךְ לְעֹולָ֣ם יְ֭רַנֵּנוּ וְתָסֵ֣ךְ עָלֵ֑ימֹו וְֽיַעְלְצ֥וּ בְ֝ךָ֗ אֹהֲבֵ֥י שְׁמֶֽךָ׃ | 11 |
ಆದರೆ ನಿಮ್ಮನ್ನು ಆಶ್ರಯಿಸುವವರೆಲ್ಲರು ಆನಂದಿಸಲಿ; ಅವರು ಸದಾ ನಿಮ್ಮ ಆನಂದ ಗಾನವನ್ನು ಹಾಡಲಿ. ನಿಮ್ಮ ಹೆಸರನ್ನು ಪ್ರೀತಿಸುವವರು ನಿಮ್ಮಲ್ಲಿ ಆನಂದಿಸುವಂತೆ ಅವರನ್ನು ನಿಮ್ಮ ಸಂರಕ್ಷಣೆಯಿಂದ ಆವರಿಸಿಕೊಳ್ಳಿರಿ.
כִּֽי־אַתָּה֮ תְּבָרֵ֪ךְ צַ֫דִּ֥יק יְהוָ֑ה כַּ֝צִּנָּ֗ה רָצֹ֥ון תַּעְטְרֶֽנּוּ׃ | 12 |
ಯೆಹೋವ ದೇವರೇ, ನೀವು ನೀತಿವಂತರನ್ನು ನಿಶ್ಚಯವಾಗಿ ಆಶೀರ್ವದಿಸಿದ್ದೀರಿ; ನೀವು ಅವರನ್ನು ನಿಮ್ಮ ಮೆಚ್ಚುಗೆಯಿಂದ ಗುರಾಣಿಯಂತೆಯೇ ಆವರಿಸಿಕೊಳ್ಳಿರಿ.