< תְהִלִּים 78 >
מַשְׂכִּ֗יל לְאָ֫סָ֥ף הַאֲזִ֣ינָה עַ֭מִּי תֹּורָתִ֑י הַטּ֥וּ אָ֝זְנְכֶ֗ם לְאִמְרֵי־פִֽי׃ | 1 |
ಆಸಾಫನ ಮಸ್ಕೀಲ್ ಕೀರ್ತನೆ. ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.
אֶפְתְּחָ֣ה בְמָשָׁ֣ל פִּ֑י אַבִּ֥יעָה חִ֝ידֹ֗ות מִנִּי־קֶֽדֶם׃ | 2 |
ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
אֲשֶׁ֣ר שָׁ֭מַעְנוּ וַנֵּדָעֵ֑ם וַ֝אֲבֹותֵ֗ינוּ סִפְּרוּ־לָֽנוּ׃ | 3 |
ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ. ನಮ್ಮ ಪಿತೃಗಳು ನಮಗೆ ವಿವರಿಸಿದರು.
לֹ֤א נְכַחֵ֨ד ׀ מִבְּנֵיהֶ֗ם לְדֹ֥ור אַחֲרֹ֗ון מְֽ֭סַפְּרִים תְּהִלֹּ֣ות יְהוָ֑ה וֶעֱזוּזֹ֥ו וְ֝נִפְלְאֹותָ֗יו אֲשֶׁ֣ר עָשָֽׂה׃ | 4 |
ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.
וַיָּ֤קֶם עֵד֨וּת ׀ בְּֽיַעֲקֹ֗ב וְתֹורָה֮ שָׂ֤ם בְּיִשְׂרָ֫אֵ֥ל אֲשֶׁ֣ר צִ֭וָּה אֶת־אֲבֹותֵ֑ינוּ לְ֝הֹודִיעָ֗ם לִבְנֵיהֶֽם׃ | 5 |
ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,
לְמַ֤עַן יֵדְע֨וּ ׀ דֹּ֣ור אַ֭חֲרֹון בָּנִ֣ים יִוָּלֵ֑דוּ יָ֝קֻ֗מוּ וִֽיסַפְּר֥וּ לִבְנֵיהֶֽם׃ | 6 |
ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
וְיָשִׂ֥ימוּ בֵֽאלֹהִ֗ים כִּ֫סְלָ֥ם וְלֹ֣א יִ֭שְׁכְּחוּ מַֽעַלְלֵי־אֵ֑ל וּמִצְוֹתָ֥יו יִנְצֹֽרוּ׃ | 7 |
ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.
וְלֹ֤א יִהְי֨וּ ׀ כַּאֲבֹותָ֗ם דֹּור֮ סֹורֵ֪ר וּמֹ֫רֶ֥ה דֹּ֭ור לֹא־הֵכִ֣ין לִבֹּ֑ו וְלֹא־נֶאֶמְנָ֖ה אֶת־אֵ֣ל רוּחֹֽו׃ | 8 |
ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.
בְּֽנֵי־אֶפְרַ֗יִם נֹושְׁקֵ֥י רֹומֵי־קָ֑שֶׁת הָ֝פְכ֗וּ בְּיֹ֣ום קְרָֽב׃ | 9 |
ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
לֹ֣א שָׁ֭מְרוּ בְּרִ֣ית אֱלֹהִ֑ים וּ֝בְתֹורָתֹ֗ו מֵאֲנ֥וּ לָלֶֽכֶת׃ | 10 |
ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.
וַיִּשְׁכְּח֥וּ עֲלִילֹותָ֑יו וְ֝נִפְלְאֹותָ֗יו אֲשֶׁ֣ר הֶרְאָֽם׃ | 11 |
ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು.
נֶ֣גֶד אֲ֭בֹותָם עָ֣שָׂה פֶ֑לֶא בְּאֶ֖רֶץ מִצְרַ֣יִם שְׂדֵה־צֹֽעַן׃ | 12 |
ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.
בָּ֣קַע יָ֭ם וַיַּֽעֲבִירֵ֑ם וַֽיַּצֶּב־מַ֥יִם כְּמֹו־נֵֽד׃ | 13 |
ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.
וַיַּנְחֵ֣ם בֶּעָנָ֣ן יֹומָ֑ם וְכָל־הַ֝לַּ֗יְלָה בְּאֹ֣ור אֵֽשׁ׃ | 14 |
ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು.
יְבַקַּ֣ע צֻ֭רִים בַּמִּדְבָּ֑ר וַ֝יַּ֗שְׁקְ כִּתְהֹמֹ֥ות רַבָּֽה׃ | 15 |
ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು.
וַיֹּוצִ֣א נֹוזְלִ֣ים מִסָּ֑לַע וַיֹּ֖ורֶד כַּנְּהָרֹ֣ות מָֽיִם׃ | 16 |
ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, ನದಿಗಳನ್ನು ನೀರನ್ನು ಹರಿಯಮಾಡಿದರು.
וַיֹּוסִ֣יפוּ עֹ֖וד לַחֲטֹא־לֹ֑ו לַֽמְרֹ֥ות עֶ֝לְיֹ֗ון בַּצִּיָּֽה׃ | 17 |
ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.
וַיְנַסּוּ־אֵ֥ל בִּלְבָבָ֑ם לִֽשְׁאָל־אֹ֥כֶל לְנַפְשָֽׁם׃ | 18 |
ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು.
וַֽיְדַבְּר֗וּ בֵּֽאלֹ֫הִ֥ים אָ֭מְרוּ הֲי֣וּכַל אֵ֑ל לַעֲרֹ֥ךְ שֻׁ֝לְחָ֗ן בַּמִּדְבָּֽר׃ | 19 |
ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ?
הֵ֤ן הִכָּה־צ֨וּר ׀ וַיָּז֣וּבוּ מַיִם֮ וּנְחָלִ֪ים יִ֫שְׁטֹ֥פוּ הֲגַם־לֶ֭חֶם י֣וּכַל תֵּ֑ת אִם־יָכִ֖ין שְׁאֵ֣ר לְעַמֹּֽו׃ | 20 |
ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.
לָכֵ֤ן ׀ שָׁמַ֥ע יְהוָ֗ה וַֽיִּתְעַבָּ֥ר וְ֭אֵשׁ נִשְּׂקָ֣ה בְיַעֲקֹ֑ב וְגַם־אַ֝֗ף עָלָ֥ה בְיִשְׂרָאֵֽל׃ | 21 |
ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.
כִּ֤י לֹ֣א הֶ֭אֱמִינוּ בֵּאלֹהִ֑ים וְלֹ֥א בָ֝טְח֗וּ בִּֽישׁוּעָתֹֽו׃ | 22 |
ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.
וַיְצַ֣ו שְׁחָקִ֣ים מִמָּ֑עַל וְדַלְתֵ֖י שָׁמַ֣יִם פָּתָֽח׃ | 23 |
ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು.
וַיַּמְטֵ֬ר עֲלֵיהֶ֣ם מָ֣ן לֶאֱכֹ֑ל וּדְגַן־שָׁ֝מַ֗יִם נָ֣תַן לָֽמֹו׃ | 24 |
ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ, ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟರು.
לֶ֣חֶם אַ֭בִּירִים אָ֣כַל אִ֑ישׁ צֵידָ֬ה שָׁלַ֖ח לָהֶ֣ם לָשֹֽׂבַע׃ | 25 |
ದೇವದೂತರ ಆಹಾರವನ್ನು ಮಾನವರು ತಿಂದರು. ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು.
יַסַּ֣ע קָ֭דִים בַּשָּׁמָ֑יִם וַיְנַהֵ֖ג בְּעֻזֹּ֣ו תֵימָֽן׃ | 26 |
ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು.
וַיַּמְטֵ֬ר עֲלֵיהֶ֣ם כֶּעָפָ֣ר שְׁאֵ֑ר וּֽכְחֹ֥ול יַ֝מִּ֗ים עֹ֣וף כָּנָֽף׃ | 27 |
ಧೂಳಿನಂತೆ ಮಾಂಸವನ್ನು ಸುರಿಸಿದರು. ಸಮುದ್ರದ ಮರಳಿನಂತೆ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿದರು.
וַ֭יַּפֵּל בְּקֶ֣רֶב מַחֲנֵ֑הוּ סָ֝בִ֗יב לְמִשְׁכְּנֹתָֽיו׃ | 28 |
ಅವರ ಮಧ್ಯದಲ್ಲಿಯೂ ಅವರ ಗುಡಾರಗಳ ಸುತ್ತಲೂ ಸುರಿಸಿದರು.
וַיֹּאכְל֣וּ וַיִּשְׂבְּע֣וּ מְאֹ֑ד וְ֝תַֽאֲוָתָ֗ם יָבִ֥א לָהֶֽם׃ | 29 |
ಆಗ ಅವರು ತಿಂದು ಬಹಳ ತೃಪ್ತಿಗೊಂಡರು. ಅವರು ಆಶಿಸಿದ್ದನ್ನು ದೇವರು ಕೊಟ್ಟರು.
לֹא־זָר֥וּ מִתַּאֲוָתָ֑ם עֹ֝֗וד אָכְלָ֥ם בְּפִיהֶֽם׃ | 30 |
ಅವರು ತಮ್ಮ ಆಶೆಯನ್ನು ಬಿಡದೆ, ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ,
וְאַ֤ף אֱלֹהִ֨ים ׀ עָ֘לָ֤ה בָהֶ֗ם וַֽ֭יַּהֲרֹג בְּמִשְׁמַנֵּיהֶ֑ם וּבַחוּרֵ֖י יִשְׂרָאֵ֣ל הִכְרִֽיעַ׃ | 31 |
ದೇವರ ಶಿಕ್ಷೆ ಅವರ ಮೇಲೆ ಬಿತ್ತು. ಅವರಲ್ಲಿ ಕೊಬ್ಬಿದವರು ಸತ್ತರು. ಇಸ್ರಾಯೇಲರ ಪ್ರಾಯಸ್ಥರು ಸಹ ಸತ್ತುಹೋದರು.
בְּכָל־זֹ֭את חָֽטְאוּ־עֹ֑וד וְלֹֽא־הֶ֝אֱמִ֗ינוּ בְּנִפְלְאֹותָֽיו׃ | 32 |
ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು. ದೇವರ ಅದ್ಭುತಗಳನ್ನು ಕಂಡರೂ ನಂಬಲಿಲ್ಲ.
וַיְכַל־בַּהֶ֥בֶל יְמֵיהֶ֑ם וּ֝שְׁנֹותָ֗ם בַּבֶּהָלָֽה׃ | 33 |
ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು.
אִם־הֲרָגָ֥ם וּדְרָשׁ֑וּהוּ וְ֝שָׁ֗בוּ וְשִֽׁחֲרוּ־אֵֽל׃ | 34 |
ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.
וַֽ֭יִּזְכְּרוּ כִּֽי־אֱלֹהִ֣ים צוּרָ֑ם וְאֵ֥ל עֶ֝לְיֹון גֹּאֲלָֽם׃ | 35 |
ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.
וַיְפַתּ֥וּהוּ בְּפִיהֶ֑ם וּ֝בִלְשֹׁונָ֗ם יְכַזְּבוּ־לֹֽו׃ | 36 |
ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ, ತಮ್ಮ ನಾಲಿಗೆಯಿಂದ ದೇವರನ್ನು ಸುಳ್ಳಾಗಿ ಹೋಗಳುತ್ತಿದ್ದರು.
וְ֭לִבָּם לֹא־נָכֹ֣ון עִמֹּ֑ו וְלֹ֥א נֶ֝אֶמְנ֗וּ בִּבְרִיתֹֽו׃ | 37 |
ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ.
וְה֤וּא רַח֨וּם ׀ יְכַפֵּ֥ר עָוֹן֮ וְֽלֹא־יַ֫שְׁחִ֥ית וְ֭הִרְבָּה לְהָשִׁ֣יב אַפֹּ֑ו וְלֹֽא־יָ֝עִיר כָּל־חֲמָתֹֽו׃ | 38 |
ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.
וַ֭יִּזְכֹּר כִּי־בָשָׂ֣ר הֵ֑מָּה ר֥וּחַ הֹ֝ולֵ֗ךְ וְלֹ֣א יָשֽׁוּב׃ | 39 |
ಜನರು ಬರೀ ಮಾಂಸ ಮಾತ್ರದವರೂ ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು.
כַּ֭מָּה יַמְר֣וּהוּ בַמִּדְבָּ֑ר יַ֝עֲצִיב֗וּהוּ בִּֽישִׁימֹֽון׃ | 40 |
ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.
וַיָּשׁ֣וּבוּ וַיְנַסּ֣וּ אֵ֑ל וּקְדֹ֖ושׁ יִשְׂרָאֵ֣ל הִתְווּ׃ | 41 |
ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು.
לֹא־זָכְר֥וּ אֶת־יָדֹ֑ו יֹ֝֗ום אֲֽשֶׁר־פָּדָ֥ם מִנִּי־צָֽר׃ | 42 |
ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ.
אֲשֶׁר־שָׂ֣ם בְּ֭מִצְרַיִם אֹֽתֹותָ֑יו וּ֝מֹופְתָ֗יו בִּשְׂדֵה־צֹֽעַן׃ | 43 |
ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ.
וַיַּהֲפֹ֣ךְ לְ֭דָם יְאֹרֵיהֶ֑ם וְ֝נֹזְלֵיהֶ֗ם בַּל־יִשְׁתָּיֽוּן׃ | 44 |
ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು.
יְשַׁלַּ֬ח בָּהֶ֣ם עָ֭רֹב וַיֹּאכְלֵ֑ם וּ֝צְפַרְדֵּ֗עַ וַתַּשְׁחִיתֵֽם׃ | 45 |
ಅವರಲ್ಲಿ ವಿವಿಧ ಹುಳುಗಳು ಬಂದವು. ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. ಅವು ಸಹ ಅವರನ್ನು ಹಾನಿಮಾಡಿದವು.
וַיִּתֵּ֣ן לֶחָסִ֣יל יְבוּלָ֑ם וִֽ֝יגִיעָ֗ם לָאַרְבֶּֽה׃ | 46 |
ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.
יַהֲרֹ֣ג בַּבָּרָ֣ד גַּפְנָ֑ם וְ֝שִׁקְמֹותָ֗ם בַּֽחֲנָמַֽל׃ | 47 |
ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.
וַיַּסְגֵּ֣ר לַבָּרָ֣ד בְּעִירָ֑ם וּ֝מִקְנֵיהֶ֗ם לָרְשָׁפִֽים׃ | 48 |
ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು.
יְשַׁלַּח־בָּ֨ם ׀ חֲרֹ֬ון אַפֹּ֗ו עֶבְרָ֣ה וָזַ֣עַם וְצָרָ֑ה מִ֝שְׁלַ֗חַת מַלְאֲכֵ֥י רָעִֽים׃ | 49 |
ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ ತಮ್ಮ ಬೇಸರದಿಂದಲೂ ದುಃಖದಿಂದಲೂ ಇಕ್ಕಟ್ಟುಗಳನ್ನೂ ಅವರ ಮೇಲೆ ಸುರಿಯಮಾಡಿದರು.
יְפַלֵּ֥ס נָתִ֗יב לְאַ֫פֹּ֥ו לֹא־חָשַׂ֣ךְ מִמָּ֣וֶת נַפְשָׁ֑ם וְ֝חַיָּתָ֗ם לַדֶּ֥בֶר הִסְגִּֽיר׃ | 50 |
ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,
וַיַּ֣ךְ כָּל־בְּכֹ֣ור בְּמִצְרָ֑יִם רֵאשִׁ֥ית אֹ֝ונִ֗ים בְּאָהֳלֵי־חָֽם׃ | 51 |
ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು.
וַיַּסַּ֣ע כַּצֹּ֣אן עַמֹּ֑ו וַֽיְנַהֲגֵ֥ם כַּ֝עֵ֗דֶר בַּמִּדְבָּֽר׃ | 52 |
ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು.
וַיַּנְחֵ֣ם לָ֭בֶטַח וְלֹ֣א פָחָ֑דוּ וְאֶת־אֹ֝ויְבֵיהֶ֗ם כִּסָּ֥ה הַיָּֽם׃ | 53 |
ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
וַ֭יְבִיאֵם אֶל־גְּב֣וּל קָדְשֹׁ֑ו הַר־זֶ֝֗ה קָנְתָ֥ה יְמִינֹֽו׃ | 54 |
ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ, ಈ ಪರ್ವತ ನಾಡಿಗೂ ಅವರನ್ನು ಬರಮಾಡಿದರು.
וַיְגָ֤רֶשׁ מִפְּנֵיהֶ֨ם ׀ גֹּויִ֗ם וַֽ֭יַּפִּילֵם בְּחֶ֣בֶל נַחֲלָ֑ה וַיַּשְׁכֵּ֥ן בְּ֝אָהֳלֵיהֶ֗ם שִׁבְטֵ֥י יִשְׂרָאֵֽל׃ | 55 |
ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.
וַיְנַסּ֣וּ וַ֭יַּמְרוּ אֶת־אֱלֹהִ֣ים עֶלְיֹ֑ון וְ֝עֵדֹותָ֗יו לֹ֣א שָׁמָֽרוּ׃ | 56 |
ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.
וַיִּסֹּ֣גוּ וַֽ֭יִּבְגְּדוּ כַּאֲבֹותָ֑ם נֶ֝הְפְּכ֗וּ כְּקֶ֣שֶׁת רְמִיָּֽה׃ | 57 |
ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ, ಅಪನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ಓರೆಯಾದರು.
וַיַּכְעִיס֥וּהוּ בְּבָמֹותָ֑ם וּ֝בִפְסִילֵיהֶ֗ם יַקְנִיאֽוּהוּ׃ | 58 |
ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.
שָׁמַ֣ע אֱ֭לֹהִים וַֽיִּתְעַבָּ֑ר וַיִּמְאַ֥ס מְ֝אֹ֗ד בְּיִשְׂרָאֵֽל׃ | 59 |
ದೇವರು ಇದನ್ನು ಕಂಡಾಗ, ಬೇಸರಗೊಂಡು ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು.
וַ֭יִּטֹּשׁ מִשְׁכַּ֣ן שִׁלֹ֑ו אֹ֝֗הֶל שִׁכֵּ֥ן בָּאָדָֽם׃ | 60 |
ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.
וַיִּתֵּ֣ן לַשְּׁבִ֣י עֻזֹּ֑ו וְֽתִפְאַרְתֹּ֥ו בְיַד־צָֽר׃ | 61 |
ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು.
וַיַּסְגֵּ֣ר לַחֶ֣רֶב עַמֹּ֑ו וּ֝בְנַחֲלָתֹ֗ו הִתְעַבָּֽר׃ | 62 |
ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು. ತಮ್ಮ ಸ್ವಾಸ್ಥತೆಗೆ ವಿರೋಧವಾಗಿದ್ದರು.
בַּחוּרָ֥יו אָֽכְלָה־אֵ֑שׁ וּ֝בְתוּלֹתָ֗יו לֹ֣א הוּלָּֽלוּ׃ | 63 |
ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ.
כֹּ֭הֲנָיו בַּחֶ֣רֶב נָפָ֑לוּ וְ֝אַלְמְנֹתָ֗יו לֹ֣א תִבְכֶּֽינָה׃ | 64 |
ಅವರ ಯಾಜಕರು ಖಡ್ಗದಿಂದ ಸಂಹಾರವಾದರು. ಅವರ ವಿಧವೆಯರು ಗೋಳಾಡಲಿಲ್ಲ.
וַיִּקַ֖ץ כְּיָשֵׁ֥ן ׀ אֲדֹנָ֑י כְּ֝גִבֹּ֗ור מִתְרֹונֵ֥ן מִיָּֽיִן׃ | 65 |
ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.
וַיַּךְ־צָרָ֥יו אָחֹ֑ור חֶרְפַּ֥ת עֹ֝ולָ֗ם נָ֣תַן לָֽמֹו׃ | 66 |
ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು.
וַ֭יִּמְאַס בְּאֹ֣הֶל יֹוסֵ֑ף וּֽבְשֵׁ֥בֶט אֶ֝פְרַ֗יִם לֹ֣א בָחָֽר׃ | 67 |
ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ,
וַ֭יִּבְחַר אֶת־שֵׁ֣בֶט יְהוּדָ֑ה אֶֽת־הַ֥ר צִ֝יֹּ֗ון אֲשֶׁ֣ר אָהֵֽב׃ | 68 |
ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.
וַיִּ֣בֶן כְּמֹו־רָ֭מִים מִקְדָּשֹׁ֑ו כְּ֝אֶ֗רֶץ יְסָדָ֥הּ לְעֹולָֽם׃ | 69 |
ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ ಭೂಮಿಯಂತೆಯೂ ತಮ್ಮ ಪರಿಶುದ್ಧ ಸ್ಥಳವನ್ನು ಕಟ್ಟಿದರು.
וַ֭יִּבְחַר בְּדָוִ֣ד עַבְדֹּ֑ו וַ֝יִּקָּחֵ֗הוּ מִֽמִּכְלְאֹ֥ת צֹֽאן׃ | 70 |
ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು.
מֵאַחַ֥ר עָלֹ֗ות הֱ֫בִיאֹ֥ו לִ֭רְעֹות בְּיַעֲקֹ֣ב עַמֹּ֑ו וּ֝בְיִשְׂרָאֵ֗ל נַחֲלָתֹֽו׃ | 71 |
ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು.
וַ֭יִּרְעֵם כְּתֹ֣ם לְבָבֹ֑ו וּבִתְבוּנֹ֖ות כַּפָּ֣יו יַנְחֵֽם׃ | 72 |
ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು.