< 1 דִּבְרֵי הַיָּמִים 22 >

וַיֹּ֣אמֶר דָּוִ֔יד זֶ֣ה ה֔וּא בֵּ֖ית יְהוָ֣ה הָאֱלֹהִ֑ים וְזֶה־מִּזְבֵּ֥חַ לְעֹלָ֖ה לְיִשְׂרָאֵֽל׃ ס 1
ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.
וַיֹּ֣אמֶר דָּוִ֔יד לִכְנוֹס֙ אֶת־הַגֵּרִ֔ים אֲשֶׁ֖ר בְּאֶ֣רֶץ יִשְׂרָאֵ֑ל וַיַּעֲמֵ֣ד חֹֽצְבִ֗ים לַחְצוֹב֙ אַבְנֵ֣י גָזִ֔ית לִבְנ֖וֹת בֵּ֥ית הָאֱלֹהִֽים׃ 2
ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.
וּבַרְזֶ֣ל ׀ לָ֠רֹב לַֽמִּסְמְרִ֞ים לְדַלְת֧וֹת הַשְּׁעָרִ֛ים וְלַֽמְחַבְּר֖וֹת הֵכִ֣ין דָּוִ֑יד וּנְחֹ֥שֶׁת לָרֹ֖ב אֵ֥ין מִשְׁקָֽל׃ 3
ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,
וַעֲצֵ֥י אֲרָזִ֖ים לְאֵ֣ין מִסְפָּ֑ר כִּֽי הֵ֠בִיאוּ הַצִּֽידֹנִ֨ים וְהַצֹּרִ֜ים עֲצֵ֧י אֲרָזִ֛ים לָרֹ֖ב לְדָוִֽיד׃ פ 4
ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.
וַיֹּ֣אמֶר דָּוִ֗יד שְׁלֹמֹ֣ה בְנִי֮ נַ֣עַר וָרָךְ֒ וְהַבַּ֜יִת לִבְנ֣וֹת לַיהוָ֗ה לְהַגְדִּ֨יל ׀ לְמַ֜עְלָה לְשֵׁ֤ם וּלְתִפְאֶ֙רֶת֙ לְכָל־הָ֣אֲרָצ֔וֹת אָכִ֥ינָה נָּ֖א ל֑וֹ וַיָּ֧כֶן דָּוִ֛יד לָרֹ֖ב לִפְנֵ֥י מוֹתֽוֹ׃ 5
ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.
וַיִּקְרָ֖א לִשְׁלֹמֹ֣ה בְנ֑וֹ וַיְצַוֵּ֙הוּ֙ לִבְנ֣וֹת בַּ֔יִת לַיהוָ֖ה אֱלֹהֵ֥י יִשְׂרָאֵֽל׃ ס 6
ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.
וַיֹּ֥אמֶר דָּוִ֖יד לִשְׁלֹמֹ֑ה בְּנִ֕י אֲנִי֙ הָיָ֣ה עִם־לְבָבִ֔י לִבְנ֣וֹת בַּ֔יִת לְשֵׁ֖ם יְהוָ֥ה אֱלֹהָֽי׃ 7
ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.
וַיְהִ֨י עָלַ֤י דְּבַר־יְהוָה֙ לֵאמֹ֔ר דָּ֤ם לָרֹב֙ שָׁפַ֔כְתָּ וּמִלְחָמ֥וֹת גְּדֹל֖וֹת עָשִׂ֑יתָ לֹֽא־תִבְנֶ֥ה בַ֙יִת֙ לִשְׁמִ֔י כִּ֚י דָּמִ֣ים רַבִּ֔ים שָׁפַ֥כְתָּ אַ֖רְצָה לְפָנָֽי׃ 8
ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.
הִנֵּה־בֵ֞ן נוֹלָ֣ד לָ֗ךְ ה֤וּא יִהְיֶה֙ אִ֣ישׁ מְנוּחָ֔ה וַהֲנִח֥וֹתִי ל֛וֹ מִכָּל־אוֹיְבָ֖יו מִסָּבִ֑יב כִּ֤י שְׁלֹמֹה֙ יִהְיֶ֣ה שְׁמ֔וֹ וְשָׁל֥וֹם וָשֶׁ֛קֶט אֶתֵּ֥ן עַל־יִשְׂרָאֵ֖ל בְּיָמָֽיו׃ 9
ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.
הֽוּא־יִבְנֶ֥ה בַ֙יִת֙ לִשְׁמִ֔י וְהוּא֙ יִהְיֶה־לִּ֣י לְבֵ֔ן וַאֲנִי־ל֖וֹ לְאָ֑ב וַהֲכִ֨ינוֹתִ֜י כִּסֵּ֧א מַלְכוּת֛וֹ עַל־יִשְׂרָאֵ֖ל עַד־עוֹלָֽם׃ 10
೧೦ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.
עַתָּ֣ה בְנִ֔י יְהִ֥י יְהוָ֖ה עִמָּ֑ךְ וְהִצְלַחְתָּ֗ וּבָנִ֙יתָ֙ בֵּ֚ית יְהוָ֣ה אֱלֹהֶ֔יךָ כַּאֲשֶׁ֖ר דִּבֶּ֥ר עָלֶֽיךָ׃ 11
೧೧ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
אַ֣ךְ יִֽתֶּן־לְּךָ֤ יְהוָה֙ שֵׂ֣כֶל וּבִינָ֔ה וִֽיצַוְּךָ֖ עַל־יִשְׂרָאֵ֑ל וְלִשְׁמ֕וֹר אֶת־תּוֹרַ֖ת יְהוָ֥ה אֱלֹהֶֽיךָ׃ 12
೧೨ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.
אָ֣ז תַּצְלִ֔יחַ אִם־תִּשְׁמ֗וֹר לַעֲשׂוֹת֙ אֶת־הַֽחֻקִּ֣ים וְאֶת־הַמִּשְׁפָּטִ֔ים אֲשֶׁ֨ר צִוָּ֧ה יְהוָ֛ה אֶת־מֹשֶׁ֖ה עַל־יִשְׂרָאֵ֑ל חֲזַ֣ק וֶאֱמָ֔ץ אַל־תִּירָ֖א וְאַל־תֵּחָֽת׃ 13
೧೩ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.
וְהִנֵּ֨ה בְעָנְיִ֜י הֲכִינ֣וֹתִי לְבֵית־יְהוָ֗ה זָהָ֞ב כִּכָּרִ֤ים מֵֽאָה־אֶ֙לֶף֙ וְכֶ֗סֶף אֶ֤לֶף אֲלָפִים֙ כִּכָּרִ֔ים וְלַנְּחֹ֤שֶׁת וְלַבַּרְזֶל֙ אֵ֣ין מִשְׁקָ֔ל כִּ֥י לָרֹ֖ב הָיָ֑ה וְעֵצִ֤ים וַאֲבָנִים֙ הֲכִינ֔וֹתִי וַעֲלֵיהֶ֖ם תּוֹסִֽיף׃ 14
೧೪ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.
וְעִמְּךָ֤ לָרֹב֙ עֹשֵׂ֣י מְלָאכָ֔ה חֹצְבִ֕ים וְחָרָשֵׁ֥י אֶ֖בֶן וָעֵ֑ץ וְכָל־חָכָ֖ם בְּכָל־מְלָאכָֽה׃ 15
೧೫ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,
לַזָּהָ֥ב לַכֶּ֛סֶף וְלַנְּחֹ֥שֶׁת וְלַבַּרְזֶ֖ל אֵ֣ין מִסְפָּ֑ר ק֣וּם וַעֲשֵׂ֔ה וִיהִ֥י יְהוָ֖ה עִמָּֽךְ׃ 16
೧೬ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
וַיְצַ֤ו דָּוִיד֙ לְכָל־שָׂרֵ֣י יִשְׂרָאֵ֔ל לַעְזֹ֖ר לִשְׁלֹמֹ֥ה בְנֽוֹ׃ 17
೧೭ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
הֲלֹ֨א יְהוָ֤ה אֱלֹֽהֵיכֶם֙ עִמָּכֶ֔ם וְהֵנִ֥יחַ לָכֶ֖ם מִסָּבִ֑יב כִּ֣י ׀ נָתַ֣ן בְּיָדִ֗י אֵ֚ת יֹשְׁבֵ֣י הָאָ֔רֶץ וְנִכְבְּשָׁ֥ה הָאָ֛רֶץ לִפְנֵ֥י יְהוָ֖ה וְלִפְנֵ֥י עַמּֽוֹ׃ 18
೧೮ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.
עַתָּ֗ה תְּנ֤וּ לְבַבְכֶם֙ וְנַפְשְׁכֶ֔ם לִדְר֖וֹשׁ לַיהוָ֣ה אֱלֹהֵיכֶ֑ם וְק֗וּמוּ וּבְנוּ֙ אֶת־מִקְדַּשׁ֙ יְהוָ֣ה הָֽאֱלֹהִ֔ים לְהָבִ֞יא אֶת־אֲר֣וֹן בְּרִית־יְהוָ֗ה וּכְלֵי֙ קֹ֣דֶשׁ הָֽאֱלֹהִ֔ים לַבַּ֖יִת הַנִּבְנֶ֥ה לְשֵׁם־יְהוָֽה׃ פ 19
೧೯ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.

< 1 דִּבְרֵי הַיָּמִים 22 >