< 1 מְלָכִים 13 >

וְהִנֵּ֣ה ׀ אִ֣ישׁ אֱלֹהִ֗ים בָּ֧א מִיהוּדָ֛ה בִּדְבַ֥ר יְהוָ֖ה אֶל־בֵּֽית־אֵ֑ל וְיָרָבְעָ֛ם עֹמֵ֥ד עַל־הַמִּזְבֵּ֖חַ לְהַקְטִֽיר׃ 1
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.
וַיִּקְרָ֤א עַל־הַמִּזְבֵּ֙חַ֙ בִּדְבַ֣ר יְהוָ֔ה וַיֹּ֙אמֶר֙ מִזְבֵּ֣חַ מִזְבֵּ֔חַ כֹּ֖ה אָמַ֣ר יְהוָ֑ה הִנֵּֽה־בֵ֞ן נוֹלָ֤ד לְבֵית־דָּוִד֙ יֹאשִׁיָּ֣הוּ שְׁמ֔וֹ וְזָבַ֣ח עָלֶ֗יךָ אֶת־כֹּהֲנֵ֤י הַבָּמוֹת֙ הַמַּקְטִרִ֣ים עָלֶ֔יךָ וְעַצְמ֥וֹת אָדָ֖ם יִשְׂרְפ֥וּ עָלֶֽיךָ׃ 2
ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.
וְנָתַן֩ בַּיּ֨וֹם הַה֤וּא מוֹפֵת֙ לֵאמֹ֔ר זֶ֣ה הַמּוֹפֵ֔ת אֲשֶׁ֖ר דִּבֶּ֣ר יְהוָ֑ה הִנֵּ֤ה הַמִּזְבֵּ֙חַ֙ נִקְרָ֔ע וְנִשְׁפַּ֖ךְ הַדֶּ֥שֶׁן אֲשֶׁר־עָלָֽיו׃ 3
ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು.
וַיְהִי֩ כִשְׁמֹ֨עַ הַמֶּ֜לֶךְ אֶת־דְּבַ֣ר אִישׁ־הָאֱלֹהִ֗ים אֲשֶׁ֨ר קָרָ֤א עַל־הַמִּזְבֵּ֙חַ֙ בְּבֵֽית־אֵ֔ל וַיִּשְׁלַ֨ח יָרָבְעָ֧ם אֶת־יָד֛וֹ מֵעַ֥ל הַמִּזְבֵּ֖חַ לֵאמֹ֣ר ׀ תִּפְשֻׂ֑הוּ וַתִּיבַ֤שׁ יָדוֹ֙ אֲשֶׁ֣ר שָׁלַ֣ח עָלָ֔יו וְלֹ֥א יָכֹ֖ל לַהֲשִׁיבָ֥הּ אֵלָֽיו׃ 4
ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು.
וְהַמִּזְבֵּ֣חַ נִקְרָ֔ע וַיִּשָּׁפֵ֥ךְ הַדֶּ֖שֶׁן מִן־הַמִּזְבֵּ֑חַ כַּמּוֹפֵ֗ת אֲשֶׁ֥ר נָתַ֛ן אִ֥ישׁ הָאֱלֹהִ֖ים בִּדְבַ֥ר יְהוָֽה׃ 5
ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.
וַיַּ֨עַן הַמֶּ֜לֶךְ וַיֹּ֣אמֶר ׀ אֶל־אִ֣ישׁ הָאֱלֹהִ֗ים חַל־נָ֞א אֶת־פְּנֵ֨י יְהוָ֤ה אֱלֹהֶ֙יךָ֙ וְהִתְפַּלֵּ֣ל בַּעֲדִ֔י וְתָשֹׁ֥ב יָדִ֖י אֵלָ֑י וַיְחַ֤ל אִישׁ־הָֽאֱלֹהִים֙ אֶת־פְּנֵ֣י יְהוָ֔ה וַתָּ֤שָׁב יַד־הַמֶּ֙לֶךְ֙ אֵלָ֔יו וַתְּהִ֖י כְּבָרִֽאשֹׁנָֽה׃ 6
ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.
וַיְדַבֵּ֤ר הַמֶּ֙לֶךְ֙ אֶל־אִ֣ישׁ הָאֱלֹהִ֔ים בֹּאָה־אִתִּ֥י הַבַּ֖יְתָה וּֽסְעָ֑דָה וְאֶתְּנָ֥ה לְךָ֖ מַתָּֽת׃ 7
ಅರಸನು ದೇವರ ಮನುಷ್ಯನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡಿ ವಿಶ್ರಮಿಸಿಕೋ, ನಾನು ನಿನಗೆ ಬಹುಮಾನ ಕೊಡುವೆನು,” ಎಂದನು.
וַיֹּ֤אמֶר אִישׁ־הָֽאֱלֹהִים֙ אֶל־הַמֶּ֔לֶךְ אִם־תִּתֶּן־לִי֙ אֶת־חֲצִ֣י בֵיתֶ֔ךָ לֹ֥א אָבֹ֖א עִמָּ֑ךְ וְלֹֽא־אֹ֤כַל לֶ֙חֶם֙ וְלֹ֣א אֶשְׁתֶּה־מַּ֔יִם בַּמָּק֖וֹם הַזֶּֽה׃ 8
ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ.
כִּֽי־כֵ֣ן ׀ צִוָּ֣ה אֹתִ֗י בִּדְבַ֤ר יְהוָה֙ לֵאמֹ֔ר לֹא־תֹ֥אכַל לֶ֖חֶם וְלֹ֣א תִשְׁתֶּה־מָּ֑יִם וְלֹ֣א תָשׁ֔וּב בַּדֶּ֖רֶךְ אֲשֶׁ֥ר הָלָֽכְתָּ׃ 9
ಏಕೆಂದರೆ, ‘ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ, ನೀನು ಬಂದ ಮಾರ್ಗದಿಂದ ಹಿಂದಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ವಾಕ್ಯದಿಂದ ನನಗೆ ಆಜ್ಞೆಯಾಗಿದೆ,” ಎಂದನು.
וַיֵּ֖לֶךְ בְּדֶ֣רֶךְ אַחֵ֑ר וְלֹֽא־שָׁ֣ב בַּדֶּ֔רֶךְ אֲשֶׁ֛ר בָּ֥א בָ֖הּ אֶל־בֵּֽית־אֵֽל׃ פ 10
ಆದ್ದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂದಿರುಗಿ ಹೋಗದೆ, ಮತ್ತೊಂದು ಮಾರ್ಗವಾಗಿ ಹೋದನು.
וְנָבִ֤יא אֶחָד֙ זָקֵ֔ן יֹשֵׁ֖ב בְּבֵֽית־אֵ֑ל וַיָּב֣וֹא בְנ֡וֹ וַיְסַפֶּר־ל֣וֹ אֶת־כָּל־הַמַּעֲשֶׂ֣ה אֲשֶׁר־עָשָׂה֩ אִישׁ־הָאֱלֹהִ֨ים ׀ הַיּ֜וֹם בְּבֵֽית־אֵ֗ל אֶת־הַדְּבָרִים֙ אֲשֶׁ֣ר דִּבֶּ֣ר אֶל־הַמֶּ֔לֶךְ וַֽיְסַפְּר֖וּם לַאֲבִיהֶֽם׃ 11
ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಮತ್ತು ಅರಸನಿಗೆ ಹೇಳಿದ ಮಾತುಗಳನ್ನು ತಮ್ಮ ತಂದೆಗೆ ತಿಳಿಸಿದರು.
וַיְדַבֵּ֤ר אֲלֵהֶם֙ אֲבִיהֶ֔ם אֵֽי־זֶ֥ה הַדֶּ֖רֶךְ הָלָ֑ךְ וַיִּרְא֣וּ בָנָ֗יו אֶת־הַדֶּ֙רֶךְ֙ אֲשֶׁ֤ר הָלַךְ֙ אִ֣ישׁ הָאֱלֹהִ֔ים אֲשֶׁר־בָּ֖א מִיהוּדָֽה׃ 12
ಆಗ ಅವರ ತಂದೆ ಅವರಿಗೆ, “ಅವನು ಯಾವ ಮಾರ್ಗವಾಗಿ ಹೋದನು,” ಎಂದನು. ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳಿಗೆ ತೋರಿಸಿದರು.
וַיֹּ֙אמֶר֙ אֶל־בָּנָ֔יו חִבְשׁוּ־לִ֖י הַחֲמ֑וֹר וַיַּחְבְּשׁוּ־ל֣וֹ הַחֲמ֔וֹר וַיִּרְכַּ֖ב עָלָֽיו׃ 13
ಆದ್ದರಿಂದ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ಕತ್ತೆಗೆ ತಡಿ ಹಾಕಿದರು. ಅವನು ಅದರ ಮೇಲೆ ಏರಿ,
וַיֵּ֗לֶךְ אַֽחֲרֵי֙ אִ֣ישׁ הָאֱלֹהִ֔ים וַיִּ֨מְצָאֵ֔הוּ יֹשֵׁ֖ב תַּ֣חַת הָאֵלָ֑ה וַיֹּ֣אמֶר אֵלָ֗יו הַאַתָּ֧ה אִישׁ־הָאֱלֹהִ֛ים אֲשֶׁר־בָּ֥אתָ מִֽיהוּדָ֖ה וַיֹּ֥אמֶר אָֽנִי׃ 14
ದೇವರ ಮನುಷ್ಯನ ಹಿಂದೆ ಹೋಗಿ, ಅವನು ಏಲಾ ಮರದ ಕೆಳಗೆ ಕುಳಿತುಕೊಂಡಿರುವುದನ್ನು ಕಂಡನು. ಆಗ ಅವನು, “ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ?” ಎಂದನು. ಅದಕ್ಕವನು, “ನಾನೇ,” ಎಂದನು.
וַיֹּ֣אמֶר אֵלָ֔יו לֵ֥ךְ אִתִּ֖י הַבָּ֑יְתָה וֶאֱכֹ֖ל לָֽחֶם׃ 15
ಆಗ ವೃದ್ಧ ಪ್ರವಾದಿಯು ಅವನಿಗೆ, “ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು,” ಎಂದನು.
וַיֹּ֗אמֶר לֹ֥א אוּכַ֛ל לָשׁ֥וּב אִתָּ֖ךְ וְלָב֣וֹא אִתָּ֑ךְ וְלֹֽא־אֹ֣כַל לֶ֗חֶם וְלֹֽא־אֶשְׁתֶּ֤ה אִתְּךָ֙ מַ֔יִם בַּמָּק֖וֹם הַזֶּֽה׃ 16
ಅದಕ್ಕವನು, “ನಾನು ನಿನ್ನ ಸಂಗಡ ಹಿಂದಿರುಗಲೂ ಕೂಡದು, ಹೋಗಲೂ ಕೂಡದು. ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವುದಿಲ್ಲ, ನೀರು ಕುಡಿಯುವುದಿಲ್ಲ.
כִּֽי־דָבָ֤ר אֵלַי֙ בִּדְבַ֣ר יְהוָ֔ה לֹֽא־תֹאכַ֣ל לֶ֔חֶם וְלֹֽא־תִשְׁתֶּ֥ה שָׁ֖ם מָ֑יִם לֹא־תָשׁ֣וּב לָלֶ֔כֶת בַּדֶּ֖רֶךְ אֲשֶׁר־הָלַ֥כְתָּ בָּֽהּ׃ 17
ಏಕೆಂದರೆ, ‘ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ, ಬಂದ ಮಾರ್ಗದಿಂದ ತಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ಮಾತಿನಿಂದ ನನಗೆ ಅಪ್ಪಣೆಯಾಗಿದೆ,” ಎಂದನು.
וַיֹּ֣אמֶר ל֗וֹ גַּם־אֲנִ֣י נָבִיא֮ כָּמוֹךָ֒ וּמַלְאָ֡ךְ דִּבֶּ֣ר אֵלַי֩ בִּדְבַ֨ר יְהוָ֜ה לֵאמֹ֗ר הֲשִׁבֵ֤הוּ אִתְּךָ֙ אֶל־בֵּיתֶ֔ךָ וְיֹ֥אכַל לֶ֖חֶם וְיֵ֣שְׁתְּ מָ֑יִם כִּחֵ֖שׁ לֽוֹ׃ 18
ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.
וַיָּ֣שָׁב אִתּ֗וֹ וַיֹּ֥אכַל לֶ֛חֶם בְּבֵית֖וֹ וַיֵּ֥שְׁתְּ מָֽיִם׃ 19
ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು.
וַיְהִ֕י הֵ֥ם יֹשְׁבִ֖ים אֶל־הַשֻּׁלְחָ֑ן פ וַֽיְהִי֙ דְּבַר־יְהוָ֔ה אֶל־הַנָּבִ֖יא אֲשֶׁ֥ר הֱשִׁיבֽוֹ׃ 20
ಅವರು ಊಟಕ್ಕೆ ಕುಳಿತಿರುವಾಗ, ಅವನನ್ನು ಹಿಂದಕ್ಕೆ ಕರೆತಂದ ವೃದ್ಧ ಪ್ರವಾದಿಗೆ ಯೆಹೋವ ದೇವರ ವಾಕ್ಯವು ಉಂಟಾಗಿ,
וַיִּקְרָ֞א אֶל־אִ֣ישׁ הָאֱלֹהִ֗ים אֲשֶׁר־בָּ֤א מִֽיהוּדָה֙ לֵאמֹ֔ר כֹּ֖ה אָמַ֣ר יְהוָ֑ה יַ֗עַן כִּ֤י מָרִ֙יתָ֙ פִּ֣י יְהוָ֔ה וְלֹ֤א שָׁמַ֙רְתָּ֙ אֶת־הַמִּצְוָ֔ה אֲשֶׁ֥ר צִוְּךָ֖ יְהוָ֥ה אֱלֹהֶֽיךָ׃ 21
ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನೀನು ಯೆಹೋವ ದೇವರ ಮಾತಿಗೆ ತಿರುಗಿಬಿದ್ದು, ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳದೆ, ಹಿಂದಕ್ಕೆ ಬಂದು, ‘ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ,’ ಎಂದು ಯೆಹೋವ ದೇವರು ನಿನಗೆ ಹೇಳಿದ ಸ್ಥಳದಲ್ಲಿ
וַתָּ֗שָׁב וַתֹּ֤אכַל לֶ֙חֶם֙ וַתֵּ֣שְׁתְּ מַ֔יִם בַּמָּקוֹם֙ אֲשֶׁ֣ר דִּבֶּ֣ר אֵלֶ֔יךָ אַל־תֹּ֥אכַל לֶ֖חֶם וְאַל־תֵּ֣שְׁתְּ מָ֑יִם לֹֽא־תָב֥וֹא נִבְלָתְךָ֖ אֶל־קֶ֥בֶר אֲבֹתֶֽיךָ׃ 22
ನೀನು ಹಿಂದಿರುಗಿ ಬಂದು, ನೀನು ರೊಟ್ಟಿ ತಿಂದು, ನೀರು ಕುಡಿದಿದ್ದರಿಂದ, ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಸೇರುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.
וַיְהִ֗י אַחֲרֵ֛י אָכְל֥וֹ לֶ֖חֶם וְאַחֲרֵ֣י שְׁתוֹת֑וֹ וַיַּחֲבָשׁ־ל֣וֹ הַחֲמ֔וֹר לַנָּבִ֖יא אֲשֶׁ֥ר הֱשִׁיבֽוֹ׃ 23
ದೇವರ ಮನುಷ್ಯನು ರೊಟ್ಟಿ ತಿಂದು, ನೀರು ಕುಡಿದ ತುರುವಾಯ, ಅವನು ತಾನು ಕರೆದುತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿ ಹಾಕಿದನು.
וַיֵּ֕לֶךְ וַיִּמְצָאֵ֧הוּ אַרְיֵ֛ה בַּדֶּ֖רֶךְ וַיְמִיתֵ֑הוּ וַתְּהִ֤י נִבְלָתוֹ֙ מֻשְׁלֶ֣כֶת בַּדֶּ֔רֶךְ וְהַחֲמוֹר֙ עֹמֵ֣ד אֶצְלָ֔הּ וְהָ֣אַרְיֵ֔ה עֹמֵ֖ד אֵ֥צֶל הַנְּבֵלָֽה׃ 24
ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು.
וְהִנֵּ֧ה אֲנָשִׁ֣ים עֹבְרִ֗ים וַיִּרְא֤וּ אֶת־הַנְּבֵלָה֙ מֻשְׁלֶ֣כֶת בַּדֶּ֔רֶךְ וְאֶת־הָ֣אַרְיֵ֔ה עֹמֵ֖ד אֵ֣צֶל הַנְּבֵלָ֑ה וַיָּבֹ֙אוּ֙ וַיְדַבְּר֣וּ בָעִ֔יר אֲשֶׁ֛ר הַנָּבִ֥יא הַזָּקֵ֖ן יֹשֵׁ֥ב בָּֽהּ׃ 25
ಆಗ ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ, ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ಕಂಡು, ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು.
וַיִּשְׁמַ֣ע הַנָּבִיא֮ אֲשֶׁ֣ר הֱשִׁיב֣וֹ מִן־הַדֶּרֶךְ֒ וַיֹּ֙אמֶר֙ אִ֣ישׁ הָאֱלֹהִ֣ים ה֔וּא אֲשֶׁ֥ר מָרָ֖ה אֶת־פִּ֣י יְהוָ֑ה וַיִּתְּנֵ֨הוּ יְהוָ֜ה לָאַרְיֵ֗ה וַֽיִּשְׁבְּרֵ֙הוּ֙ וַיְמִתֵ֔הוּ כִּדְבַ֥ר יְהוָ֖ה אֲשֶׁ֥ר דִּבֶּר־לֽוֹ׃ 26
ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು.
וַיְדַבֵּ֤ר אֶל־בָּנָיו֙ לֵאמֹ֔ר חִבְשׁוּ־לִ֖י אֶֽת־הַחֲמ֑וֹר וַֽיַּחֲבֹֽשׁוּ׃ 27
ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ತಡಿ ಹಾಕಿದರು.
וַיֵּ֗לֶךְ וַיִּמְצָ֤א אֶת־נִבְלָתוֹ֙ מֻשְׁלֶ֣כֶת בַּדֶּ֔רֶךְ וַֽחֲמוֹר֙ וְהָ֣אַרְיֵ֔ה עֹמְדִ֖ים אֵ֣צֶל הַנְּבֵלָ֑ה לֹֽא־אָכַ֤ל הָֽאַרְיֵה֙ אֶת־הַנְּבֵלָ֔ה וְלֹ֥א שָׁבַ֖ר אֶֽת־הַחֲמֽוֹר׃ 28
ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಬಿದ್ದಿರುವುದನ್ನೂ, ಕತ್ತೆಯೂ, ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವುದನ್ನೂ ಕಂಡನು.
וַיִּשָּׂ֨א הַנָּבִ֜יא אֶת־נִבְלַ֧ת אִישׁ־הָאֱלֹהִ֛ים וַיַּנִּחֵ֥הוּ אֶֽל־הַחֲמ֖וֹר וַיְשִׁיבֵ֑הוּ וַיָּבֹ֗א אֶל־עִיר֙ הַנָּבִ֣יא הַזָּקֵ֔ן לִסְפֹּ֖ד וּלְקָבְרֽוֹ׃ 29
ಸಿಂಹವು ಹೆಣವನ್ನು ತಿನ್ನದೆ, ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ, ಕತ್ತೆಯ ಮೇಲೆ ಹಾಕಿಕೊಂಡು ಗೋಳಾಡುವುದಕ್ಕೂ, ಅವನನ್ನು ಹೂಳುವುದಕ್ಕೂ ಪಟ್ಟಣಕ್ಕೆ ತಂದನು.
וַיַּנַּ֥ח אֶת־נִבְלָת֖וֹ בְּקִבְר֑וֹ וַיִּסְפְּד֥וּ עָלָ֖יו ה֥וֹי אָחִֽי׃ 30
ಅವನ ಹೆಣವನ್ನು ತನ್ನ ಸಮಾಧಿಯಲ್ಲಿ ಹೂಳಿಟ್ಟನು. ಆಗ ಅವರು, “ಅಯ್ಯೋ, ನಮ್ಮ ಸಹೋದರನೇ!” ಎಂದು ಅವನಿಗೋಸ್ಕರ ಗೋಳಾಡಿದರು.
וַיְהִי֮ אַחֲרֵ֣י קָבְר֣וֹ אֹתוֹ֒ וַיֹּ֤אמֶר אֶל־בָּנָיו֙ לֵאמֹ֔ר בְּמוֹתִי֙ וּקְבַרְתֶּ֣ם אֹתִ֔י בַּקֶּ֕בֶר אֲשֶׁ֛ר אִ֥ישׁ הָאֱלֹהִ֖ים קָב֣וּר בּ֑וֹ אֵ֚צֶל עַצְמֹתָ֔יו הַנִּ֖יחוּ אֶת־עַצְמֹתָֽי׃ 31
ವೃದ್ಧ ಪ್ರವಾದಿಯು ಅವನನ್ನು ಹೂಳಿಟ್ಟ ತರುವಾಯ, ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ದೇವರ ಮನುಷ್ಯನನ್ನು ಹೂಳಿಟ್ಟ ಸಮಾಧಿಯಲ್ಲಿ ನನ್ನನ್ನು ಹೂಳಿಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.
כִּי֩ הָיֹ֨ה יִהְיֶ֜ה הַדָּבָ֗ר אֲשֶׁ֤ר קָרָא֙ בִּדְבַ֣ר יְהוָ֔ה עַל־הַמִּזְבֵּ֖חַ אֲשֶׁ֣ר בְּבֵֽית־אֵ֑ל וְעַל֙ כָּל־בָּתֵּ֣י הַבָּמ֔וֹת אֲשֶׁ֖ר בְּעָרֵ֥י שֹׁמְרֽוֹן׃ פ 32
ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.
אַחַר֙ הַדָּבָ֣ר הַזֶּ֔ה לֹֽא־שָׁ֥ב יָרָבְעָ֖ם מִדַּרְכּ֣וֹ הָרָעָ֑ה וַ֠יָּשָׁב וַיַּ֜עַשׂ מִקְצ֤וֹת הָעָם֙ כֹּהֲנֵ֣י בָמ֔וֹת הֶֽחָפֵץ֙ יְמַלֵּ֣א אֶת־יָד֔וֹ וִיהִ֖י כֹּהֲנֵ֥י בָמֽוֹת׃ 33
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು.
וַיְהִי֙ בַּדָּבָ֣ר הַזֶּ֔ה לְחַטַּ֖את בֵּ֣ית יָרָבְעָ֑ם וּלְהַכְחִיד֙ וּלְהַשְׁמִ֔יד מֵעַ֖ל פְּנֵ֥י הָאֲדָמָֽה׃ פ 34
ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.

< 1 מְלָכִים 13 >