< 2 דִּבְרֵי הַיָּמִים 24 >
בֶּן־שֶׁ֤בַע שָׁנִים֙ יֹאָ֣שׁ בְּמָלְכ֔וֹ וְאַרְבָּעִ֣ים שָׁנָ֔ה מָלַ֖ךְ בִּֽירוּשָׁלִָ֑ם וְשֵׁ֣ם אִמּ֔וֹ צִבְיָ֖ה מִבְּאֵ֥ר שָֽׁבַע׃ | 1 |
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
וַיַּ֧עַשׂ יוֹאָ֛שׁ הַיָּשָׁ֖ר בְּעֵינֵ֣י יְהוָ֑ה כָּל־יְמֵ֖י יְהוֹיָדָ֥ע הַכֹּהֵֽן׃ | 2 |
ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
וַיִּשָּׂא־ל֥וֹ יְהוֹיָדָ֖ע נָשִׁ֣ים שְׁתָּ֑יִם וַיּ֖וֹלֶד בָּנִ֥ים וּבָנֽוֹת׃ | 3 |
ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.
וַיְהִ֖י אַחֲרֵיכֵ֑ן הָיָה֙ עִם־לֵ֣ב יוֹאָ֔שׁ לְחַדֵּ֖שׁ אֶת־בֵּ֥ית יְהוָֽה׃ | 4 |
ಕ್ರಮೇಣ ಯೋವಾಷನು ಯೆಹೋವ ದೇವರ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾದನು.
וַיִּקְבֹּץ֮ אֶת־הַכֹּהֲנִ֣ים וְהַלְוִיִּם֒ וַיֹּ֣אמֶר לָהֶ֡ם צְא֣וּ לְעָרֵ֪י יְהוּדָ֟ה וְקִבְצוּ֩ מִכָּל־יִשְׂרָאֵ֨ל כֶּ֜סֶף לְחַזֵּ֣ק ׀ אֶת־בֵּ֣ית אֱלֹֽהֵיכֶ֗ם מִדֵּ֤י שָׁנָה֙ בְּשָׁנָ֔ה וְאַתֶּ֖ם תְּמַהֲר֣וּ לַדָּבָ֑ר וְלֹ֥א מִֽהֲר֖וּ הַֽלְוִיִּֽם׃ | 5 |
ಆದ್ದರಿಂದ ಅವನು ಯಾಜಕರನ್ನೂ, ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆ, “ನೀವು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ ವರ್ಷ ವರ್ಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವುದಕ್ಕೆ ಸಮಸ್ತ ಇಸ್ರಾಯೇಲರಿಂದ ಹಣವನ್ನು ಕೂಡಿಸಿರಿ ಮತ್ತು ಕೆಲಸವನ್ನು ಶೀಘ್ರವಾಗಿ ನಡೆಸಿರಿ,” ಎಂದನು. ಆದರೂ ಲೇವಿಯರು ಅವಸರ ಮಾಡದೆ ಇದ್ದರು.
וַיִּקְרָ֣א הַמֶּלֶךְ֮ לִֽיהוֹיָדָ֣ע הָרֹאשׁ֒ וַיֹּ֣אמֶר ל֗וֹ מַדּ֙וּעַ֙ לֹֽא־דָרַ֣שְׁתָּ עַל־הַלְוִיִּ֔ם לְהָבִ֞יא מִֽיהוּדָ֣ה וּמִֽירוּשָׁלִַ֗ם אֶת־מַשְׂאַת֙ מֹשֶׁ֣ה עֶֽבֶד־יְהוָ֔ה וְהַקָּהָ֖ל לְיִשְׂרָאֵ֑ל לְאֹ֖הֶל הָעֵדֽוּת׃ | 6 |
ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.
כִּ֤י עֲתַלְיָ֙הוּ֙ הַמִּרְשַׁ֔עַת בָּנֶ֥יהָ פָרְצ֖וּ אֶת־בֵּ֣ית הָאֱלֹהִ֑ים וְגַם֙ כָּל־קָדְשֵׁ֣י בֵית־יְהוָ֔ה עָשׂ֖וּ לַבְּעָלִֽים׃ | 7 |
ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.
וַיֹּ֣אמֶר הַמֶּ֔לֶךְ וַֽיַּעֲשׂ֖וּ אֲר֣וֹן אֶחָ֑ד וַֽיִּתְּנֻ֛הוּ בְּשַׁ֥עַר בֵּית־יְהוָ֖ה חֽוּצָה׃ | 8 |
ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು.
וַיִּתְּנוּ־ק֞וֹל בִּֽיהוּדָ֣ה וּבִֽירוּשָׁלִַ֗ם לְהָבִ֤יא לַֽיהוָה֙ מַשְׂאַ֞ת מֹשֶׁ֧ה עֶֽבֶד־הָאֱלֹהִ֛ים עַל־יִשְׂרָאֵ֖ל בַּמִּדְבָּֽר׃ | 9 |
ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.
וַיִּשְׂמְח֥וּ כָל־הַשָּׂרִ֖ים וְכָל־הָעָ֑ם וַיָּבִ֛יאוּ וַיַּשְׁלִ֥יכוּ לָאָר֖וֹן עַד־לְכַלֵּֽה׃ | 10 |
ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.
וַיְהִ֡י בְּעֵת֩ יָבִ֨יא אֶת־הָֽאָר֜וֹן אֶל־פְּקֻדַּ֣ת הַמֶּלֶךְ֮ בְּיַ֣ד הַלְוִיִּם֒ וְכִרְאוֹתָ֞ם כִּי־רַ֣ב הַכֶּ֗סֶף וּבָ֨א סוֹפֵ֤ר הַמֶּ֙לֶךְ֙ וּפְקִיד֙ כֹּהֵ֣ן הָרֹ֔אשׁ וִיעָ֙רוּ֙ אֶת־הָ֣אָר֔וֹן וְיִשָּׂאֻ֖הוּ וִֽישִׁיבֻ֣הוּ אֶל־מְקֹמ֑וֹ כֹּ֤ה עָשׂוּ֙ לְי֣וֹם ׀ בְּי֔וֹם וַיַּֽאַסְפוּ־כֶ֖סֶף לָרֹֽב׃ | 11 |
ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಕಛೇರಿಗೆ ತಂದಾಗಲೆಲ್ಲಾ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ, ಅರಸನ ಕಾರ್ಯದರ್ಶಿಯೂ, ಮುಖ್ಯಯಾಜಕನ ಪರಿಚಾರಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ, ತೆಗೆದುಕೊಂಡು ತಿರುಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
וַיִּתְּנֵ֨הוּ הַמֶּ֜לֶךְ וִֽיהוֹיָדָ֗ע אֶל־עוֹשֵׂה֙ מְלֶ֙אכֶת֙ עֲבוֹדַ֣ת בֵּית־יְהוָ֔ה וַיִּֽהְי֤וּ שֹׂכְרִים֙ חֹצְבִ֣ים וְחָרָשִׁ֔ים לְחַדֵּ֖שׁ בֵּ֣ית יְהוָ֑ה וְ֠גַם לְחָרָשֵׁ֤י בַרְזֶל֙ וּנְחֹ֔שֶׁת לְחַזֵּ֖ק אֶת־בֵּ֥ית יְהוָֽה׃ | 12 |
ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು.
וַֽיַּעֲשׂוּ֙ עֹשֵׂ֣י הַמְּלָאכָ֔ה וַתַּ֧עַל אֲרוּכָ֛ה לַמְּלָאכָ֖ה בְּיָדָ֑ם וַֽיַּעֲמִ֜ידוּ אֶת־בֵּ֧ית הָֽאֱלֹהִ֛ים עַל־מַתְכֻּנְתּ֖וֹ וַֽיְאַמְּצֻֽהוּ׃ | 13 |
ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.
וּֽכְכַלּוֹתָ֡ם הֵבִ֣יאוּ לִפְנֵי֩ הַמֶּ֨לֶךְ וִֽיהוֹיָדָ֜ע אֶת־שְׁאָ֣ר הַכֶּ֗סֶף וַיַּעֲשֵׂ֨הוּ כֵלִ֤ים לְבֵית־יְהוָה֙ כְּלֵ֣י שָׁרֵ֔ת וְהַעֲל֣וֹת וְכַפּ֔וֹת וּכְלֵ֥י זָהָ֖ב וָכָ֑סֶף וַ֠יִּֽהְיוּ מַעֲלִ֨ים עֹל֤וֹת בְּבֵית־יְהוָה֙ תָּמִ֔יד כֹּ֖ל יְמֵ֥י יְהוֹיָדָֽע׃ פ | 14 |
ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.
וַיִּזְקַ֧ן יְהוֹיָדָ֛ע וַיִּשְׂבַּ֥ע יָמִ֖ים וַיָּמֹ֑ת בֶּן־מֵאָ֧ה וּשְׁלֹשִׁ֛ים שָׁנָ֖ה בְּמוֹתֽוֹ׃ | 15 |
ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು.
וַיִּקְבְּרֻ֥הוּ בְעִיר־דָּוִ֖יד עִם־הַמְּלָכִ֑ים כִּֽי־עָשָׂ֤ה טוֹבָה֙ בְּיִשְׂרָאֵ֔ל וְעִ֥ם הָאֱלֹהִ֖ים וּבֵיתֽוֹ׃ ס | 16 |
ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.
וְאַֽחֲרֵ֥י מוֹת֙ יְה֣וֹיָדָ֔ע בָּ֚אוּ שָׂרֵ֣י יְהוּדָ֔ה וַיִּֽשְׁתַּחֲו֖וּ לַמֶּ֑לֶךְ אָ֛ז שָׁמַ֥ע הַמֶּ֖לֶךְ אֲלֵיהֶֽם׃ | 17 |
ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
וַיַּֽעַזְב֗וּ אֶת־בֵּ֤ית יְהוָה֙ אֱלֹהֵ֣י אֲבוֹתֵיהֶ֔ם וַיַּֽעַבְד֥וּ אֶת־הָאֲשֵׁרִ֖ים וְאֶת־הָֽעֲצַבִּ֑ים וַֽיְהִי־קֶ֗צֶף עַל־יְהוּדָה֙ וִיר֣וּשָׁלִַ֔ם בְּאַשְׁמָתָ֖ם זֹֽאת׃ | 18 |
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.
וַיִּשְׁלַ֤ח בָּהֶם֙ נְבִאִ֔ים לַהֲשִׁיבָ֖ם אֶל־יְהוָ֑ה וַיָּעִ֥ידוּ בָ֖ם וְלֹ֥א הֶאֱזִֽינוּ׃ ס | 19 |
ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.
וְר֣וּחַ אֱלֹהִ֗ים לָֽבְשָׁה֙ אֶת־זְכַרְיָה֙ בֶּן־יְהוֹיָדָ֣ע הַכֹּהֵ֔ן וַֽיַּעֲמֹ֖ד מֵעַ֣ל לָעָ֑ם וַיֹּ֨אמֶר לָהֶ֜ם כֹּ֣ה ׀ אָמַ֣ר הָאֱלֹהִ֗ים לָמָה֩ אַתֶּ֨ם עֹבְרִ֜ים אֶת־מִצְוֹ֤ת יְהוָה֙ וְלֹ֣א תַצְלִ֔יחוּ כִּֽי־עֲזַבְתֶּ֥ם אֶת־יְהוָ֖ה וַיַּֽעֲזֹ֥ב אֶתְכֶֽם׃ | 20 |
ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
וַיִּקְשְׁר֣וּ עָלָ֔יו וַיִּרְגְּמֻ֥הוּ אֶ֖בֶן בְּמִצְוַ֣ת הַמֶּ֑לֶךְ בַּחֲצַ֖ר בֵּ֥ית יְהוָֽה׃ | 21 |
ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
וְלֹא־זָכַ֞ר יוֹאָ֣שׁ הַמֶּ֗לֶךְ הַחֶ֙סֶד֙ אֲשֶׁ֨ר עָשָׂ֜ה יְהוֹיָדָ֤ע אָבִיו֙ עִמּ֔וֹ וַֽיַּהֲרֹ֖ג אֶת־בְּנ֑וֹ וּכְמוֹת֣וֹ אָמַ֔ר יֵ֥רֶא יְהוָ֖ה וְיִדְרֹֽשׁ׃ פ | 22 |
ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.
וַיְהִ֣י ׀ לִתְקוּפַ֣ת הַשָּׁנָ֗ה עָלָ֣ה עָלָיו֮ חֵ֣יל אֲרָם֒ וַיָּבֹ֗אוּ אֶל־יְהוּדָה֙ וִיר֣וּשָׁלִַ֔ם וַיַּשְׁחִ֛יתוּ אֶת־כָּל־שָׂרֵ֥י הָעָ֖ם מֵעָ֑ם וְכָל־שְׁלָלָ֥ם שִׁלְּח֖וּ לְמֶ֥לֶךְ דַּרְמָֽשֶׂק׃ | 23 |
ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
כִּי֩ בְמִצְעַ֨ר אֲנָשִׁ֜ים בָּ֣אוּ ׀ חֵ֣יל אֲרָ֗ם וַֽיהוָה֙ נָתַ֨ן בְּיָדָ֥ם חַ֙יִל֙ לָרֹ֣ב מְאֹ֔ד כִּ֣י עָֽזְב֔וּ אֶת־יְהוָ֖ה אֱלֹהֵ֣י אֲבוֹתֵיהֶ֑ם וְאֶת־יוֹאָ֖שׁ עָשׂ֥וּ שְׁפָטִֽים׃ | 24 |
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.
וּבְלֶכְתָּ֣ם מִמֶּ֗נּוּ כִּֽי־עָזְב֣וּ אֹתוֹ֮ בְּמַחֲלוּיִ֣ם רַבִּים֒ הִתְקַשְּׁר֨וּ עָלָ֜יו עֲבָדָ֗יו בִּדְמֵי֙ בְּנֵי֙ יְהוֹיָדָ֣ע הַכֹּהֵ֔ן וַיַּֽהַרְגֻ֥הוּ עַל־מִטָּת֖וֹ וַיָּמֹ֑ת וַֽיִּקְבְּרֻ֙הוּ֙ בְּעִ֣יר דָּוִ֔יד וְלֹ֥א קְבָרֻ֖הוּ בְּקִבְר֥וֹת הַמְּלָכִֽים׃ ס | 25 |
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
וְאֵ֖לֶּה הַמִּתְקַשְּׁרִ֣ים עָלָ֑יו זָבָ֗ד בֶּן־שִׁמְעָת֙ הָֽעַמּוֹנִ֔ית וִיה֣וֹזָבָ֔ד בֶּן־שִׁמְרִ֖ית הַמּוֹאָבִֽית׃ | 26 |
ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು.
וּבָנָ֞יו יִ֧רֶ֞ב הַמַּשָּׂ֣א עָלָ֗יו וִיסוֹד֙ בֵּ֣ית הָאֱלֹהִ֔ים הִנָּ֣ם כְּתוּבִ֔ים עַל־מִדְרַ֖שׁ סֵ֣פֶר הַמְּלָכִ֑ים וַיִּמְלֹ֛ךְ אֲמַצְיָ֥הוּ בְנ֖וֹ תַּחְתָּֽיו׃ פ | 27 |
ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.