< 2 דִּבְרֵי הַיָּמִים 34 >

בֶּן־שְׁמוֹנֶ֥ה שָׁנִ֖ים יֹאשִׁיָּ֣הוּ בְמָלְכ֑וֹ וּשְׁלֹשִׁ֤ים וְאַחַת֙ שָׁנָ֔ה מָלַ֖ךְ בִּירוּשָׁלִָֽם׃ 1
ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.
וַיַּ֥עַשׂ הַיָּשָׁ֖ר בְּעֵינֵ֣י יְהוָ֑ה וַיֵּ֗לֶךְ בְּדַרְכֵי֙ דָּוִ֣יד אָבִ֔יו וְלֹא־סָ֖ר יָמִ֥ין וּשְׂמֹֽאול׃ 2
ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
וּבִשְׁמוֹנֶ֨ה שָׁנִ֜ים לְמָלְכ֗וֹ וְהוּא֙ עוֹדֶ֣נּוּ נַ֔עַר הֵחֵ֕ל לִדְר֕וֹשׁ לֵאלֹהֵ֖י דָּוִ֣יד אָבִ֑יו וּבִשְׁתֵּ֧ים עֶשְׂרֵ֣ה שָׁנָ֗ה הֵחֵל֙ לְטַהֵ֔ר אֶת־יְהוּדָה֙ וִיר֣וּשָׁלִַ֔ם מִן־הַבָּמוֹת֙ וְהָ֣אֲשֵׁרִ֔ים וְהַפְּסִלִ֖ים וְהַמַּסֵּכֽוֹת׃ 3
ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
וַיְנַתְּצ֣וּ לְפָנָ֗יו אֵ֚ת מִזְבְּח֣וֹת הַבְּעָלִ֔ים וְהַֽחַמָּנִ֛ים אֲשֶׁר־לְמַ֥עְלָה מֵעֲלֵיהֶ֖ם גִּדֵּ֑עַ וְ֠הָאֲשֵׁרִים וְהַפְּסִלִ֤ים וְהַמַּסֵּכוֹת֙ שִׁבַּ֣ר וְהֵדַ֔ק וַיִּזְרֹק֙ עַל־פְּנֵ֣י הַקְּבָרִ֔ים הַזֹּבְחִ֖ים לָהֶֽם׃ 4
ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,
וְעַצְמוֹת֙ כֹּֽהֲנִ֔ים שָׂרַ֖ף עַל־מִזְבְּחוֹתָ֑ם וַיְטַהֵ֥ר אֶת־יְהוּדָ֖ה וְאֶת־יְרוּשָׁלִָֽם׃ 5
ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು.
וּבְעָרֵ֨י מְנַשֶּׁ֧ה וְאֶפְרַ֛יִם וְשִׁמְע֖וֹן וְעַד־נַפְתָּלִ֑י בְּהַר בְּחַרְבֹתֵיהֶ֖ם סָבִֽיב׃ 6
ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು.
וַיְנַתֵּ֣ץ אֶת־הַֽמִּזְבְּח֗וֹת וְאֶת־הָאֲשֵׁרִ֤ים וְהַפְּסִלִים֙ כִּתַּ֣ת לְהֵדַ֔ק וְכָל־הַֽחַמָּנִ֥ים גִּדַּ֖ע בְּכָל־אֶ֣רֶץ יִשְׂרָאֵ֑ל וַיָּ֖שָׁב לִירוּשָׁלִָֽם׃ ס 7
ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.
וּבִשְׁנַ֨ת שְׁמוֹנֶ֤ה עֶשְׂרֵה֙ לְמָלְכ֔וֹ לְטַהֵ֥ר הָאָ֖רֶץ וְהַבָּ֑יִת שָׁ֠לַח אֶת־שָׁפָ֨ן בֶּן־אֲצַלְיָ֜הוּ וְאֶת־מַעֲשֵׂיָ֣הוּ שַׂר־הָעִ֗יר וְ֠אֵת יוֹאָ֤ח בֶּן־יֽוֹאָחָז֙ הַמַּזְכִּ֔יר לְחַזֵּ֕ק אֶת־בֵּ֖ית יְהוָ֥ה אֱלֹהָֽיו׃ 8
ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
וַיָּבֹ֜אוּ אֶל־חִלְקִיָּ֣הוּ ׀ הַכֹּהֵ֣ן הַגָּד֗וֹל וַֽיִּתְּנוּ֮ אֶת־הַכֶּסֶף֮ הַמּוּבָ֣א בֵית־אֱלֹהִים֒ אֲשֶׁ֣ר אָסְפֽוּ־הַלְוִיִּם֩ שֹׁמְרֵ֨י הַסַּ֜ף מִיַּ֧ד מְנַשֶּׁ֣ה וְאֶפְרַ֗יִם וּמִכֹּל֙ שְׁאֵרִ֣ית יִשְׂרָאֵ֔ל וּמִכָּל־יְהוּדָ֖ה וּבִנְיָמִ֑ן וַיָּשֻׁ֖בוּ יְרֽוּשָׁלִָֽם׃ 9
ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.
וַֽיִּתְּנ֗וּ עַל־יַד֙ עֹשֵׂ֣ה הַמְּלָאכָ֔ה הַמֻּפְקָדִ֖ים בְּבֵ֣ית יְהוָ֑ה וַיִּתְּנ֨וּ אֹת֜וֹ עוֹשֵׂ֣י הַמְּלָאכָ֗ה אֲשֶׁ֤ר עֹשִׂים֙ בְּבֵ֣ית יְהוָ֔ה לִבְדּ֥וֹק וּלְחַזֵּ֖ק הַבָּֽיִת׃ 10
ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.
וַֽיִּתְּנ֗וּ לֶחָֽרָשִׁים֙ וְלַבֹּנִ֔ים לִקְנוֹת֙ אַבְנֵ֣י מַחְצֵ֔ב וְעֵצִ֖ים לַֽמְחַבְּר֑וֹת וּלְקָרוֹת֙ אֶת־הַבָּ֣תִּ֔ים אֲשֶׁ֥ר הִשְׁחִ֖יתוּ מַלְכֵ֥י יְהוּדָֽה׃ 11
ಕೆತ್ತಿದ ಕಲ್ಲುಗಳನ್ನೂ, ತೊಲೆಗಳಿಗೋಸ್ಕರ ಮರಗಳನ್ನೂ, ಯೆಹೂದದ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಹಲಿಗೆಗಳನ್ನು ಕೊಂಡುಕೊಳ್ಳಲೂ, ಬಡಗಿಯರಿಗೂ, ಕಲ್ಲುಕೆಲಸದವರಿಗೂ ಆ ಹಣವನ್ನು ಕೊಟ್ಟರು.
וְהָאֲנָשִׁים֩ עֹשִׂ֨ים בֶּאֱמוּנָ֜ה בַּמְּלָאכָ֗ה וַעֲלֵיהֶ֣ם ׀ מֻ֠פְקָדִים יַ֣חַת וְעֹבַדְיָ֤הוּ הַלְוִיִּם֙ מִן־בְּנֵ֣י מְרָרִ֔י וּזְכַרְיָ֧ה וּמְשֻׁלָּ֛ם מִן־בְּנֵ֥י הַקְּהָתִ֖ים לְנַצֵּ֑חַ וְהַ֨לְוִיִּ֔ם כָּל־מֵבִ֖ין בִּכְלֵי־שִֽׁיר׃ 12
ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.
וְעַ֣ל הַסַּבָּלִ֗ים וּֽמְנַצְּחִים֙ לְכֹל֙ עֹשֵׂ֣ה מְלָאכָ֔ה לַעֲבוֹדָ֖ה וַעֲבוֹדָ֑ה וּמֵֽהַלְוִיִּ֔ם סוֹפְרִ֥ים וְשֹׁטְרִ֖ים וְשׁוֹעֲרִֽים׃ 13
ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.
וּבְהוֹצִיאָ֣ם אֶת־הַכֶּ֔סֶף הַמּוּבָ֖א בֵּ֣ית יְהוָ֑ה מָצָא֙ חִלְקִיָּ֣הוּ הַכֹּהֵ֔ן אֶת־סֵ֥פֶר תּֽוֹרַת־יְהוָ֖ה בְּיַד־מֹשֶֽׁה׃ 14
ಯೆಹೋವ ದೇವರ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತೆಗೆದುಕೊಂಡು ಬರುವಾಗ, ಯಾಜಕನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಯೆಹೋವ ದೇವರ ನಿಯಮದ ಗ್ರಂಥವನ್ನು ಕಂಡುಕೊಂಡನು.
וַיַּ֣עַן חִלְקִיָּ֗הוּ וַיֹּ֙אמֶר֙ אֶל־שָׁפָ֣ן הַסּוֹפֵ֔ר סֵ֧פֶר הַתּוֹרָ֛ה מָצָ֖אתִי בְּבֵ֣ית יְהוָ֑ה וַיִּתֵּ֧ן חִלְקִיָּ֛הוּ אֶת־הַסֵּ֖פֶר אֶל־שָׁפָֽן׃ 15
ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.
וַיָּבֵ֨א שָׁפָ֤ן אֶת־הַסֵּ֙פֶר֙ אֶל־הַמֶּ֔לֶךְ וַיָּ֨שֶׁב ע֧וֹד אֶת־הַמֶּ֛לֶךְ דָּבָ֖ר לֵאמֹ֑ר כֹּ֛ל אֲשֶׁר־נִתַּ֥ן בְּיַד־עֲבָדֶ֖יךָ הֵ֥ם עֹשִֽׂים׃ 16
ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ.
וַיַּתִּ֕יכוּ אֶת־הַכֶּ֖סֶף הַנִּמְצָ֣א בְּבֵית־יְהוָ֑ה וַֽיִּתְּנ֗וּהוּ עַל־יַד֙ הַמֻּפְקָדִ֔ים וְעַל־יַ֖ד עוֹשֵׂ֥י הַמְּלָאכָֽה׃ 17
ಇದಲ್ಲದೆ ಅವರು ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ತೆಗೆದು ಮೇಲ್ವಿಚಾರಕರ ಕೈಯಲ್ಲಿ ಮತ್ತು ಕೆಲಸದವರ ಕೈಯಲ್ಲಿ ಒಪ್ಪಿಸಿದ್ದಾರೆ.
וַיַּגֵּ֞ד שָׁפָ֤ן הַסּוֹפֵר֙ לַמֶּ֣לֶךְ לֵאמֹ֔ר סֵ֚פֶר נָ֣תַן לִ֔י חִלְקִיָּ֖הוּ הַכֹּהֵ֑ן וַיִּקְרָא־ב֥וֹ שָׁפָ֖ן לִפְנֵ֥י הַמֶּֽלֶךְ׃ 18
ಕಾರ್ಯದರ್ಶಿಯಾದ ಶಾಫಾನನು ಅರಸನಿಗೆ ಯಾಜಕನಾದ ಹಿಲ್ಕೀಯನು ನನಗೆ ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ತಿಳಿಸಿದನು. ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
וַיְהִי֙ כִּשְׁמֹ֣עַ הַמֶּ֔לֶךְ אֵ֖ת דִּבְרֵ֣י הַתּוֹרָ֑ה וַיִּקְרַ֖ע אֶת־בְּגָדָֽיו׃ 19
ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
וַיְצַ֣ו הַמֶּ֡לֶךְ אֶת־חִלְקִיָּ֡הוּ וְאֶת־אֲחִיקָ֣ם בֶּן־שָׁ֠פָן וְאֶת־עַבְדּ֨וֹן בֶּן־מִיכָ֜ה וְאֵ֣ת ׀ שָׁפָ֣ן הַסּוֹפֵ֗ר וְאֵ֛ת עֲשָׂיָ֥ה עֶֽבֶד־הַמֶּ֖לֶךְ לֵאמֹֽר׃ 20
ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
לְכוּ֩ דִרְשׁ֨וּ אֶת־יְהוָ֜ה בַּעֲדִ֗י וּבְעַד֙ הַנִּשְׁאָר֙ בְּיִשְׂרָאֵ֣ל וּבִֽיהוּדָ֔ה עַל־דִּבְרֵ֥י הַסֵּ֖פֶר אֲשֶׁ֣ר נִמְצָ֑א כִּֽי־גְדוֹלָ֤ה חֲמַת־יְהוָה֙ אֲשֶׁ֣ר נִתְּכָ֣ה בָ֔נוּ עַל֩ אֲשֶׁ֨ר לֹא־שָׁמְר֤וּ אֲבוֹתֵ֙ינוּ֙ אֶת־דְּבַ֣ר יְהוָ֔ה לַעֲשׂ֕וֹת כְּכָל־הַכָּת֖וּב עַל־הַסֵּ֥פֶר הַזֶּֽה׃ פ 21
“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.
וַיֵּ֨לֶךְ חִלְקִיָּ֜הוּ וַאֲשֶׁ֣ר הַמֶּ֗לֶךְ אֶל־חֻלְדָּ֨ה הַנְּבִיאָ֜ה אֵ֣שֶׁת ׀ שַׁלֻּ֣ם בֶּן־תָּקְהַ֗ת בֶּן־חַסְרָה֙ שׁוֹמֵ֣ר הַבְּגָדִ֔ים וְהִ֛יא יוֹשֶׁ֥בֶת בִּירוּשָׁלִַ֖ם בַּמִּשְׁנֶ֑ה וַיְדַבְּר֥וּ אֵלֶ֖יהָ כָּזֹֽאת׃ ס 22
ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
וַתֹּ֣אמֶר לָהֶ֔ם כֹּה־אָמַ֥ר יְהוָ֖ה אֱלֹהֵ֣י יִשְׂרָאֵ֑ל אִמְר֣וּ לָאִ֔ישׁ אֲשֶׁר־שָׁלַ֥ח אֶתְכֶ֖ם אֵלָֽי׃ ס 23
ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
כֹּ֚ה אָמַ֣ר יְהוָ֔ה הִנְנִ֨י מֵבִ֥יא רָעָ֛ה עַל־הַמָּק֥וֹם הַזֶּ֖ה וְעַל־יוֹשְׁבָ֑יו אֵ֤ת כָּל־הָאָלוֹת֙ הַכְּתוּב֣וֹת עַל־הַסֵּ֔פֶר אֲשֶׁ֣ר קָֽרְא֔וּ לִפְנֵ֖י מֶ֥לֶךְ יְהוּדָֽה׃ 24
‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.
תַּ֣חַת ׀ אֲשֶׁ֣ר עֲזָב֗וּנִי וַֽיְקַטְּרוּ֙ לֵֽאלֹהִ֣ים אֲחֵרִ֔ים לְמַ֙עַן֙ הַכְעִיסֵ֔נִי בְּכֹ֖ל מַעֲשֵׂ֣י יְדֵיהֶ֑ם וְתִתַּ֧ךְ חֲמָתִ֛י בַּמָּק֥וֹם הַזֶּ֖ה וְלֹ֥א תִכְבֶּֽה׃ 25
ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’
וְאֶל־מֶ֣לֶךְ יְהוּדָ֗ה הַשֹּׁלֵ֤חַ אֶתְכֶם֙ לִדְר֣וֹשׁ בַּֽיהוָ֔ה כֹּ֥ה תֹאמְר֖וּ אֵלָ֑יו ס כֹּֽה־אָמַ֤ר יְהוָה֙ אֱלֹהֵ֣י יִשְׂרָאֵ֔ל הַדְּבָרִ֖ים אֲשֶׁ֥ר שָׁמָֽעְתָּ׃ 26
ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
יַ֠עַן רַךְ־לְבָ֨בְךָ֜ וַתִּכָּנַ֣ע ׀ מִלִּפְנֵ֣י אֱלֹהִ֗ים בְּשָׁמְעֲךָ֤ אֶת־דְּבָרָיו֙ עַל־הַמָּק֤וֹם הַזֶּה֙ וְעַל־יֹ֣שְׁבָ֔יו וַתִּכָּנַ֣ע לְפָנַ֔י וַתִּקְרַ֥ע אֶת־בְּגָדֶ֖יךָ וַתֵּ֣בְךְּ לְפָנָ֑י וְגַם־אֲנִ֥י שָׁמַ֖עְתִּי נְאֻם־יְהוָֽה׃ 27
ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,
הִנְנִ֨י אֹֽסִפְךָ֜ אֶל־אֲבֹתֶ֗יךָ וְנֶאֱסַפְתָּ֣ אֶל־קִבְרֹתֶיךָ֮ בְּשָׁלוֹם֒ וְלֹא־תִרְאֶ֣ינָה עֵינֶ֔יךָ בְּכֹל֙ הָֽרָעָ֔ה אֲשֶׁ֨ר אֲנִ֥י מֵבִ֛יא עַל־הַמָּק֥וֹם הַזֶּ֖ה וְעַל־יֹשְׁבָ֑יו וַיָּשִׁ֥יבוּ אֶת־הַמֶּ֖לֶךְ דָּבָֽר׃ פ 28
ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
וַיִּשְׁלַ֖ח הַמֶּ֑לֶךְ וַיֶּאֱסֹ֕ף אֶת־כָּל־זִקְנֵ֥י יְהוּדָ֖ה וִירוּשָׁלִָֽם׃ 29
ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.
וַיַּ֣עַל הַמֶּ֣לֶךְ בֵּית־יְ֠הוָה וְכָל־אִ֨ישׁ יְהוּדָ֜ה וְיֹשְׁבֵ֣י יְרוּשָׁלִַ֗ם וְהַכֹּֽהֲנִים֙ וְהַלְוִיִּ֔ם וְכָל־הָעָ֖ם מִגָּד֣וֹל וְעַד־קָטָ֑ן וַיִּקְרָ֣א בְאָזְנֵיהֶ֗ם אֶת־כָּל־דִּבְרֵי֙ סֵ֣פֶר הַבְּרִ֔ית הַנִּמְצָ֖א בֵּ֥ית יְהוָֽה׃ 30
ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.
וַיַּעֲמֹ֨ד הַמֶּ֜לֶךְ עַל־עָמְד֗וֹ וַיִּכְרֹ֣ת אֶֽת־הַבְּרִית֮ לִפְנֵ֣י יְהוָה֒ לָלֶ֜כֶת אַחֲרֵ֣י יְהוָ֗ה וְלִשְׁמ֤וֹר אֶת־מִצְוֹתָיו֙ וְעֵֽדְוֹתָ֣יו וְחֻקָּ֔יו בְּכָל־לְבָב֖וֹ וּבְכָל־נַפְשׁ֑וֹ לַעֲשׂוֹת֙ אֶת־דִּבְרֵ֣י הַבְּרִ֔ית הַכְּתוּבִ֖ים עַל־הַסֵּ֥פֶר הַזֶּֽה׃ 31
ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.
וַיַּעֲמֵ֕ד אֵ֛ת כָּל־הַנִּמְצָ֥א בִירוּשָׁלִַ֖ם וּבִנְיָמִ֑ן וַֽיַּעֲשׂוּ֙ יֹשְׁבֵ֣י יְרוּשָׁלִַ֔ם כִּבְרִ֥ית אֱלֹהִ֖ים אֱלֹהֵ֥י אֲבוֹתֵיהֶֽם׃ 32
ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.
וַיָּ֨סַר יֹֽאשִׁיָּ֜הוּ אֶת־כָּל־הַתּוֹעֵב֗וֹת מִֽכָּל־הָאֲרָצוֹת֮ אֲשֶׁ֣ר לִבְנֵ֣י יִשְׂרָאֵל֒ וַֽיַּעֲבֵ֗ד אֵ֤ת כָּל־הַנִּמְצָא֙ בְּיִשְׂרָאֵ֔ל לַעֲב֖וֹד אֶת־יְהוָ֣ה אֱלֹהֵיהֶ֑ם כָּל־יָמָ֕יו לֹ֣א סָ֔רוּ מֵֽאַחֲרֵ֕י יְהוָ֖ה אֱלֹהֵ֥י אֲבוֹתֵיהֶֽם׃ פ 33
ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.

< 2 דִּבְרֵי הַיָּמִים 34 >