< 2 מְלָכִים 12 >
בִּשְׁנַת־שֶׁ֤בַע לְיֵהוּא֙ מָלַ֣ךְ יְהוֹאָ֔שׁ וְאַרְבָּעִ֣ים שָׁנָ֔ה מָלַ֖ךְ בִּירֽוּשָׁלִָ֑ם וְשֵׁ֣ם אִמּ֔וֹ צִבְיָ֖ה מִבְּאֵ֥ר שָֽׁבַע׃ | 1 |
೧ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.
וַיַּ֨עַשׂ יְהוֹאָ֧שׁ הַיָּשָׁ֛ר בְּעֵינֵ֥י יְהוָ֖ה כָּל־יָמָ֑יו אֲשֶׁ֣ר הוֹרָ֔הוּ יְהוֹיָדָ֖ע הַכֹּהֵֽן׃ | 2 |
೨ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
רַ֥ק הַבָּמ֖וֹת לֹא־סָ֑רוּ ע֥וֹד הָעָ֛ם מְזַבְּחִ֥ים וּֽמְקַטְּרִ֖ים בַּבָּמֽוֹת׃ | 3 |
೩ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
וַיֹּ֨אמֶר יְהוֹאָ֜שׁ אֶל־הַכֹּהֲנִ֗ים כֹּל֩ כֶּ֨סֶף הַקֳּדָשִׁ֜ים אֲשֶׁר־יוּבָ֤א בֵית־יְהוָה֙ כֶּ֣סֶף עוֹבֵ֔ר אִ֕ישׁ כֶּ֥סֶף נַפְשׁ֖וֹת עֶרְכּ֑וֹ כָּל־כֶּ֗סֶף אֲשֶׁ֤ר יַֽעֲלֶה֙ עַ֣ל לֶב־אִ֔ישׁ לְהָבִ֖יא בֵּ֥ית יְהוָֽה׃ | 4 |
೪ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
יִקְח֤וּ לָהֶם֙ הַכֹּ֣הֲנִ֔ים אִ֖ישׁ מֵאֵ֣ת מַכָּר֑וֹ וְהֵ֗ם יְחַזְּקוּ֙ אֶת־בֶּ֣דֶק הַבַּ֔יִת לְכֹ֛ל אֲשֶׁר־יִמָּצֵ֥א שָׁ֖ם בָּֽדֶק׃ פ | 5 |
೫ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.
וַיְהִ֗י בִּשְׁנַ֨ת עֶשְׂרִ֧ים וְשָׁלֹ֛שׁ שָׁנָ֖ה לַמֶּ֣לֶךְ יְהוֹאָ֑שׁ לֹֽא־חִזְּק֥וּ הַכֹּהֲנִ֖ים אֶת־בֶּ֥דֶק הַבָּֽיִת׃ | 6 |
೬ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.
וַיִּקְרָא֩ הַמֶּ֨לֶךְ יְהוֹאָ֜שׁ לִיהוֹיָדָ֤ע הַכֹּהֵן֙ וְלַכֹּ֣הֲנִ֔ים וַיֹּ֣אמֶר אֲלֵהֶ֔ם מַדּ֛וּעַ אֵינְכֶ֥ם מְחַזְּקִ֖ים אֶת־בֶּ֣דֶק הַבָּ֑יִת וְעַתָּ֗ה אַל־תִּקְחוּ־כֶ֙סֶף֙ מֵאֵ֣ת מַכָּֽרֵיכֶ֔ם כִּֽי־לְבֶ֥דֶק הַבַּ֖יִת תִּתְּנֻֽהוּ׃ | 7 |
೭ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.
וַיֵּאֹ֖תוּ הַכֹּֽהֲנִ֑ים לְבִלְתִּ֤י קְחַת־כֶּ֙סֶף֙ מֵאֵ֣ת הָעָ֔ם וּלְבִלְתִּ֥י חַזֵּ֖ק אֶת־בֶּ֥דֶק הַבָּֽיִת׃ | 8 |
೮ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.
וַיִּקַּ֞ח יְהוֹיָדָ֤ע הַכֹּהֵן֙ אֲר֣וֹן אֶחָ֔ד וַיִּקֹּ֥ב חֹ֖ר בְּדַלְתּ֑וֹ וַיִּתֵּ֣ן אֹתוֹ֩ אֵ֨צֶל הַמִּזְבֵּ֜חַ מִיָּמִ֗ין בְּבֽוֹא־אִישׁ֙ בֵּ֣ית יְהוָ֔ה וְנָֽתְנוּ־שָׁ֤מָּה הַכֹּֽהֲנִים֙ שֹׁמְרֵ֣י הַסַּ֔ף אֶת־כָּל־הַכֶּ֖סֶף הַמּוּבָ֥א בֵית־יְהוָֽה׃ | 9 |
೯ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.
וַֽיְהִי֙ כִּרְאוֹתָ֔ם כִּֽי־רַ֥ב הַכֶּ֖סֶף בָּֽאָר֑וֹן וַיַּ֨עַל סֹפֵ֤ר הַמֶּ֙לֶךְ֙ וְהַכֹּהֵ֣ן הַגָּד֔וֹל וַיָּצֻ֙רוּ֙ וַיִּמְנ֔וּ אֶת־הַכֶּ֖סֶף הַנִּמְצָ֥א בֵית־יְהוָֽה׃ | 10 |
೧೦ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.
וְנָתְנוּ֙ אֶת־הַכֶּ֣סֶף הַֽמְתֻכָּ֔ן עַל־יְדֵי֙ עֹשֵׂ֣י הַמְּלָאכָ֔ה הַמֻּפְקָדִ֖ים בֵּ֣ית יְהוָ֑ה וַיּוֹצִיאֻ֜הוּ לְחָרָשֵׁ֤י הָעֵץ֙ וְלַבֹּנִ֔ים הָעֹשִׂ֖ים בֵּ֥ית יְהוָֽה׃ | 11 |
೧೧ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.
וְלַגֹּֽדְרִים֙ וּלְחֹצְבֵ֣י הָאֶ֔בֶן וְלִקְנ֤וֹת עֵצִים֙ וְאַבְנֵ֣י מַחְצֵ֔ב לְחַזֵּ֖ק אֶת־בֶּ֣דֶק בֵּית־יְהוָ֑ה וּלְכֹ֛ל אֲשֶׁר־יֵצֵ֥א עַל־הַבַּ֖יִת לְחָזְקָֽה׃ | 12 |
೧೨ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.
אַךְ֩ לֹ֨א יֵעָשֶׂ֜ה בֵּ֣ית יְהוָ֗ה סִפּ֥וֹת כֶּ֙סֶף֙ מְזַמְּר֤וֹת מִזְרָקוֹת֙ חֲצֹ֣צְר֔וֹת כָּל־כְּלִ֥י זָהָ֖ב וּכְלִי־כָ֑סֶף מִן־הַכֶּ֖סֶף הַמּוּבָ֥א בֵית־יְהוָֽה׃ | 13 |
೧೩ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.
כִּֽי־לְעֹשֵׂ֥י הַמְּלָאכָ֖ה יִתְּנֻ֑הוּ וְחִזְּקוּ־ב֖וֹ אֶת־בֵּ֥ית יְהוָֽה׃ | 14 |
೧೪ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
וְלֹ֧א יְחַשְּׁב֣וּ אֶת־הָאֲנָשִׁ֗ים אֲשֶׁ֨ר יִתְּנ֤וּ אֶת־הַכֶּ֙סֶף֙ עַל־יָדָ֔ם לָתֵ֖ת לְעֹשֵׂ֣י הַמְּלָאכָ֑ה כִּ֥י בֶאֱמֻנָ֖ה הֵ֥ם עֹשִֽׂים׃ | 15 |
೧೫ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.
כֶּ֤סֶף אָשָׁם֙ וְכֶ֣סֶף חַטָּא֔וֹת לֹ֥א יוּבָ֖א בֵּ֣ית יְהוָ֑ה לַכֹּהֲנִ֖ים יִהְיֽוּ׃ פ | 16 |
೧೬ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.
אָ֣ז יַעֲלֶ֗ה חֲזָאֵל֙ מֶ֣לֶךְ אֲרָ֔ם וַיִּלָּ֥חֶם עַל־גַּ֖ת וַֽיִּלְכְּדָ֑הּ וַיָּ֤שֶׂם חֲזָאֵל֙ פָּנָ֔יו לַעֲל֖וֹת עַל־יְרוּשָׁלִָֽם׃ | 17 |
೧೭ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
וַיִּקַּ֞ח יְהוֹאָ֣שׁ מֶֽלֶךְ־יְהוּדָ֗ה אֵ֣ת כָּל־הַקֳּדָשִׁ֡ים אֲשֶׁר־הִקְדִּ֣ישׁוּ יְהוֹשָׁפָ֣ט וִיהוֹרָם֩ וַאֲחַזְיָ֨הוּ אֲבֹתָ֜יו מַלְכֵ֤י יְהוּדָה֙ וְאֶת־קֳדָשָׁ֔יו וְאֵ֣ת כָּל־הַזָּהָ֗ב הַנִּמְצָ֛א בְּאֹצְר֥וֹת בֵּית־יְהוָ֖ה וּבֵ֣ית הַמֶּ֑לֶךְ וַיִּשְׁלַ֗ח לַֽחֲזָאֵל֙ מֶ֣לֶךְ אֲרָ֔ם וַיַּ֖עַל מֵעַ֥ל יְרוּשָׁלִָֽם׃ | 18 |
೧೮ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.
וְיֶ֛תֶר דִּבְרֵ֥י יוֹאָ֖שׁ וְכָל־אֲשֶׁ֣ר עָשָׂ֑ה הֲלוֹא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יְהוּדָֽה׃ | 19 |
೧೯ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
וַיָּקֻ֥מוּ עֲבָדָ֖יו וַיִּקְשְׁרֽוּ־קָ֑שֶׁר וַיַּכּוּ֙ אֶת־יוֹאָ֔שׁ בֵּ֥ית מִלֹּ֖א הַיּוֹרֵ֥ד סִלָּֽא׃ | 20 |
೨೦ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.
וְיוֹזָבָ֣ד בֶּן־שִׁ֠מְעָת וִיהוֹזָבָ֨ד בֶּן־שֹׁמֵ֤ר ׀ עֲבָדָיו֙ הִכֻּ֣הוּ וַיָּמֹ֔ת וַיִּקְבְּר֥וּ אֹת֛וֹ עִם־אֲבֹתָ֖יו בְּעִ֣יר דָּוִ֑ד וַיִּמְלֹ֛ךְ אֲמַצְיָ֥ה בְנ֖וֹ תַּחְתָּֽיו׃ פ | 21 |
೨೧ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.