< 2 מְלָכִים 4 >

וְאִשָּׁ֣ה אַחַ֣ת מִנְּשֵׁ֣י בְנֵֽי־הַ֠נְּבִיאִים צָעֲקָ֨ה אֶל־אֱלִישָׁ֜ע לֵאמֹ֗ר עַבְדְּךָ֤ אִישִׁי֙ מֵ֔ת וְאַתָּ֣ה יָדַ֔עְתָּ כִּ֣י עַבְדְּךָ֔ הָיָ֥ה יָרֵ֖א אֶת־יְהוָ֑ה וְהַ֨נֹּשֶׁ֔ה בָּ֗א לָקַ֜חַת אֶת־שְׁנֵ֧י יְלָדַ֛י ל֖וֹ לַעֲבָדִֽים׃ 1
ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.
וַיֹּ֨אמֶר אֵלֶ֤יהָ אֱלִישָׁע֙ מָ֣ה אֶֽעֱשֶׂה־לָּ֔ךְ הַגִּ֣ידִי לִ֔י מַה־יֶּשׁ־לָ֖ךְ בַּבָּ֑יִת וַתֹּ֗אמֶר אֵ֣ין לְשִׁפְחָתְךָ֥ כֹל֙ בַּבַּ֔יִת כִּ֖י אִם־אָס֥וּךְ שָֽׁמֶן׃ 2
ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.
וַיֹּ֗אמֶר לְכִ֨י שַׁאֲלִי־לָ֤ךְ כֵּלִים֙ מִן־הַח֔וּץ מֵאֵ֖ת כָּל־שְׁכֵנָ֑יִךְ כֵּלִ֥ים רֵקִ֖ים אַל־תַּמְעִֽיטִי׃ 3
ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
וּבָ֗את וְסָגַ֤רְתְּ הַדֶּ֙לֶת֙ בַּעֲדֵ֣ךְ וּבְעַד־בָּנַ֔יִךְ וְיָצַ֕קְתְּ עַ֥ל כָּל־הַכֵּלִ֖ים הָאֵ֑לֶּה וְהַמָּלֵ֖א תַּסִּֽיעִי׃ 4
ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು.
וַתֵּ֙לֶךְ֙ מֵֽאִתּ֔וֹ וַתִּסְגֹּ֣ר הַדֶּ֔לֶת בַּעֲדָ֖הּ וּבְעַ֣ד בָּנֶ֑יהָ הֵ֛ם מַגִּשִׁ֥ים אֵלֶ֖יהָ וְהִ֥יא מוֹצָֽקֶת׃ 5
ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.
וַיְהִ֣י ׀ כִּמְלֹ֣את הַכֵּלִ֗ים וַתֹּ֤אמֶר אֶל־בְּנָהּ֙ הַגִּ֨ישָׁה אֵלַ֥י עוֹד֙ כֶּ֔לִי וַיֹּ֣אמֶר אֵלֶ֔יהָ אֵ֥ין ע֖וֹד כֶּ֑לִי וַֽיַּעֲמֹ֖ד הַשָּֽׁמֶן׃ 6
ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
וַתָּבֹ֗א וַתַּגֵּד֙ לְאִ֣ישׁ הָאֱלֹהִ֔ים וַיֹּ֗אמֶר לְכִי֙ מִכְרִ֣י אֶת־הַשֶּׁ֔מֶן וְשַׁלְּמִ֖י אֶת־נִשְׁיֵ֑ךְ וְאַ֣תְּ וּבָנַ֔יִךְ תִֽחְיִ֖י בַּנּוֹתָֽר׃ פ 7
ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
וַיְהִ֨י הַיּ֜וֹם וַיַּעֲבֹ֧ר אֱלִישָׁ֣ע אֶל־שׁוּנֵ֗ם וְשָׁם֙ אִשָּׁ֣ה גְדוֹלָ֔ה וַתַּחֲזֶק־בּ֖וֹ לֶאֱכָל־לָ֑חֶם וַֽיְהִי֙ מִדֵּ֣י עָבְר֔וֹ יָסֻ֥ר שָׁ֖מָּה לֶאֱכָל־לָֽחֶם׃ 8
ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
וַתֹּ֙אמֶר֙ אֶל־אִישָׁ֔הּ הִנֵּה־נָ֣א יָדַ֔עְתִּי כִּ֛י אִ֥ישׁ אֱלֹהִ֖ים קָד֣וֹשׁ ה֑וּא עֹבֵ֥ר עָלֵ֖ינוּ תָּמִֽיד׃ 9
ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.
נַֽעֲשֶׂה־נָּ֤א עֲלִיַּת־קִיר֙ קְטַנָּ֔ה וְנָשִׂ֨ים ל֥וֹ שָׁ֛ם מִטָּ֥ה וְשֻׁלְחָ֖ן וְכִסֵּ֣א וּמְנוֹרָ֑ה וְהָיָ֛ה בְּבֹא֥וֹ אֵלֵ֖ינוּ יָס֥וּר שָֽׁמָּה׃ 10
೧೦ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.
וַיְהִ֥י הַיּ֖וֹם וַיָּ֣בֹא שָׁ֑מָּה וַיָּ֥סַר אֶל־הָעֲלִיָּ֖ה וַיִּשְׁכַּב־שָֽׁמָּה׃ 11
೧೧ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.
וַיֹּ֙אמֶר֙ אֶל־גֵּחֲזִ֣י נַעֲר֔וֹ קְרָ֖א לַשּׁוּנַמִּ֣ית הַזֹּ֑את וַיִּקְרָא־לָ֔הּ וַֽתַּעֲמֹ֖ד לְפָנָֽיו׃ 12
೧೨ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.
וַיֹּ֣אמֶר ל֗וֹ אֱמָר־נָ֣א אֵלֶיהָ֮ הִנֵּ֣ה חָרַ֣דְתְּ ׀ אֵלֵינוּ֮ אֶת־כָּל־הַחֲרָדָ֣ה הַזֹּאת֒ מֶ֚ה לַעֲשׂ֣וֹת לָ֔ךְ הֲיֵ֤שׁ לְדַבֶּר־לָךְ֙ אֶל־הַמֶּ֔לֶךְ א֖וֹ אֶל־שַׂ֣ר הַצָּבָ֑א וַתֹּ֕אמֶר בְּת֥וֹךְ עַמִּ֖י אָנֹכִ֥י יֹשָֽׁבֶת׃ 13
೧೩ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.
וַיֹּ֕אמֶר וּמֶ֖ה לַעֲשׂ֣וֹת לָ֑הּ וַיֹּ֣אמֶר גֵּיחֲזִ֗י אֲבָ֛ל בֵּ֥ן אֵֽין־לָ֖הּ וְאִישָׁ֥הּ זָקֵֽן׃ 14
೧೪ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.
וַיֹּ֖אמֶר קְרָא־לָ֑הּ וַיִּקְרָא־לָ֔הּ וַֽתַּעֲמֹ֖ד בַּפָּֽתַח׃ 15
೧೫ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.
וַיֹּ֗אמֶר לַמּוֹעֵ֤ד הַזֶּה֙ כָּעֵ֣ת חַיָּ֔ה אַ֖תְּ חֹבֶ֣קֶת בֵּ֑ן וַתֹּ֗אמֶר אַל־אֲדֹנִי֙ אִ֣ישׁ הָאֱלֹהִ֔ים אַל־תְּכַזֵּ֖ב בְּשִׁפְחָתֶֽךָ׃ 16
೧೬ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.
וַתַּ֥הַר הָאִשָּׁ֖ה וַתֵּ֣לֶד בֵּ֑ן לַמּוֹעֵ֤ד הַזֶּה֙ כָּעֵ֣ת חַיָּ֔ה אֲשֶׁר־דִּבֶּ֥ר אֵלֶ֖יהָ אֱלִישָֽׁע׃ 17
೧೭ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.
וַיִּגְדַּ֖ל הַיָּ֑לֶד וַיְהִ֣י הַיּ֔וֹם וַיֵּצֵ֥א אֶל־אָבִ֖יו אֶל־הַקֹּצְרִֽים׃ 18
೧೮ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
וַיֹּ֥אמֶר אֶל־אָבִ֖יו רֹאשִׁ֣י ׀ רֹאשִׁ֑י וַיֹּ֙אמֶר֙ אֶל־הַנַּ֔עַר שָׂאֵ֖הוּ אֶל־אִמּֽוֹ׃ 19
೧೯ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು.
וַיִּשָּׂאֵ֔הוּ וַיְבִיאֵ֖הוּ אֶל־אִמּ֑וֹ וַיֵּ֧שֶׁב עַל־בִּרְכֶּ֛יהָ עַד־הַֽצָּהֳרַ֖יִם וַיָּמֹֽת׃ 20
೨೦ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
וַתַּ֙עַל֙ וַתַּשְׁכִּבֵ֔הוּ עַל־מִטַּ֖ת אִ֣ישׁ הָאֱלֹהִ֑ים וַתִּסְגֹּ֥ר בַּעֲד֖וֹ וַתֵּצֵֽא׃ 21
೨೧ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.
וַתִּקְרָא֮ אֶל־אִישָׁהּ֒ וַתֹּ֗אמֶר שִׁלְחָ֨ה נָ֥א לִי֙ אֶחָ֣ד מִן־הַנְּעָרִ֔ים וְאַחַ֖ת הָאֲתֹנ֑וֹת וְאָר֛וּצָה עַד־אִ֥ישׁ הָאֱלֹהִ֖ים וְאָשֽׁוּבָה׃ 22
೨೨ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು.
וַיֹּ֗אמֶר מַ֠דּוּעַ אַ֣תְּ הֹלֶ֤כֶת אֵלָיו֙ הַיּ֔וֹם לֹֽא־חֹ֖דֶשׁ וְלֹ֣א שַׁבָּ֑ת וַתֹּ֖אמֶר שָׁלֽוֹם׃ 23
೨೩ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.
וַֽתַּחֲבֹשׁ֙ הָֽאָת֔וֹן וַתֹּ֥אמֶר אֶֽל־נַעֲרָ֖הּ נְהַ֣ג וָלֵ֑ךְ אַל־תַּעֲצָר־לִ֣י לִרְכֹּ֔ב כִּ֖י אִם־אָמַ֥רְתִּי לָֽךְ׃ 24
೨೪ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು.
וַתֵּ֗לֶךְ וַתָּב֛וֹא אֶל־אִ֥ישׁ הָאֱלֹהִ֖ים אֶל־הַ֣ר הַכַּרְמֶ֑ל וַ֠יְהִי כִּרְא֨וֹת אִישׁ־הָאֱלֹהִ֤ים אֹתָהּ֙ מִנֶּ֔גֶד וַיֹּ֙אמֶר֙ אֶל־גֵּיחֲזִ֣י נַעֲר֔וֹ הִנֵּ֖ה הַשּׁוּנַמִּ֥ית הַלָּֽז׃ 25
೨೫ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”
עַתָּה֮ רֽוּץ־נָ֣א לִקְרָאתָהּ֒ וֶאֱמָר־לָ֗הּ הֲשָׁל֥וֹם לָ֛ךְ הֲשָׁל֥וֹם לְאִישֵׁ֖ךְ הֲשָׁל֣וֹם לַיָּ֑לֶד וַתֹּ֖אמֶר שָׁלֽוֹם׃ 26
೨೬ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,
וַתָּבֹ֞א אֶל־אִ֤ישׁ הָֽאֱלֹהִים֙ אֶל־הָהָ֔ר וַֽתַּחֲזֵ֖ק בְּרַגְלָ֑יו וַיִּגַּ֨שׁ גֵּֽיחֲזִ֜י לְהָדְפָ֗הּ וַיֹּאמֶר֩ אִ֨ישׁ הָאֱלֹהִ֤ים הַרְפֵּֽה־לָהּ֙ כִּֽי־נַפְשָׁ֣הּ מָֽרָה־לָ֔הּ וַֽיהוָה֙ הֶעְלִ֣ים מִמֶּ֔נִּי וְלֹ֥א הִגִּ֖יד לִֽי׃ 27
೨೭ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.
וַתֹּ֕אמֶר הֲשָׁאַ֥לְתִּי בֵ֖ן מֵאֵ֣ת אֲדֹנִ֑י הֲלֹ֣א אָמַ֔רְתִּי לֹ֥א תַשְׁלֶ֖ה אֹתִֽי׃ 28
೨೮ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
וַיֹּ֨אמֶר לְגֵיחֲזִ֜י חֲגֹ֣ר מָתְנֶ֗יךָ וְקַ֨ח מִשְׁעַנְתִּ֣י בְיָדְךָ֮ וָלֵךְ֒ כִּֽי־תִמְצָ֥א אִישׁ֙ לֹ֣א תְבָרְכֶ֔נּוּ וְכִֽי־יְבָרֶכְךָ֥ אִ֖ישׁ לֹ֣א תַעֲנֶנּ֑וּ וְשַׂמְתָּ֥ מִשְׁעַנְתִּ֖י עַל־פְּנֵ֥י הַנָּֽעַר׃ 29
೨೯ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.
וַתֹּ֙אמֶר֙ אֵ֣ם הַנַּ֔עַר חַי־יְהוָ֥ה וְחֵֽי־נַפְשְׁךָ֖ אִם־אֶעֶזְבֶ֑ךָּ וַיָּ֖קָם וַיֵּ֥לֶךְ אַחֲרֶֽיהָ׃ 30
೩೦ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.
וְגֵחֲזִ֞י עָבַ֣ר לִפְנֵיהֶ֗ם וַיָּ֤שֶׂם אֶת־הַמִּשְׁעֶ֙נֶת֙ עַל־פְּנֵ֣י הַנַּ֔עַר וְאֵ֥ין ק֖וֹל וְאֵ֣ין קָ֑שֶׁב וַיָּ֤שָׁב לִקְרָאתוֹ֙ וַיַּגֶּד־ל֣וֹ לֵאמֹ֔ר לֹ֥א הֵקִ֖יץ הַנָּֽעַר׃ 31
೩೧ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.
וַיָּבֹ֥א אֱלִישָׁ֖ע הַבָּ֑יְתָה וְהִנֵּ֤ה הַנַּ֙עַר֙ מֵ֔ת מֻשְׁכָּ֖ב עַל־מִטָּתֽוֹ׃ 32
೩೨ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.
וַיָּבֹ֕א וַיִּסְגֹּ֥ר הַדֶּ֖לֶת בְּעַ֣ד שְׁנֵיהֶ֑ם וַיִּתְפַּלֵּ֖ל אֶל־יְהוָֽה׃ 33
೩೩ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.
וַיַּ֜עַל וַיִּשְׁכַּ֣ב עַל־הַיֶּ֗לֶד וַיָּשֶׂם֩ פִּ֨יו עַל־פִּ֜יו וְעֵינָ֤יו עַל־עֵינָיו֙ וְכַפָּ֣יו עַל־כַּפָּ֔יו וַיִּגְהַ֖ר עָלָ֑יו וַיָּ֖חָם בְּשַׂ֥ר הַיָּֽלֶד׃ 34
೩೪ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
וַיָּ֜שָׁב וַיֵּ֣לֶךְ בַּבַּ֗יִת אַחַ֥ת הֵ֙נָּה֙ וְאַחַ֣ת הֵ֔נָּה וַיַּ֖עַל וַיִּגְהַ֣ר עָלָ֑יו וַיְזוֹרֵ֤ר הַנַּ֙עַר֙ עַד־שֶׁ֣בַע פְּעָמִ֔ים וַיִּפְקַ֥ח הַנַּ֖עַר אֶת־עֵינָֽיו׃ 35
೩೫ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.
וַיִּקְרָ֣א אֶל־גֵּיחֲזִ֗י וַיֹּ֙אמֶר֙ קְרָא֙ אֶל־הַשֻּׁנַמִּ֣ית הַזֹּ֔את וַיִּקְרָאֶ֖הָ וַתָּב֣וֹא אֵלָ֑יו וַיֹּ֖אמֶר שְׂאִ֥י בְנֵֽךְ׃ 36
೩೬ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.
וַתָּבֹא֙ וַתִּפֹּ֣ל עַל־רַגְלָ֔יו וַתִּשְׁתַּ֖חוּ אָ֑רְצָה וַתִּשָּׂ֥א אֶת־בְּנָ֖הּ וַתֵּצֵֽא׃ פ 37
೩೭ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.
וֶאֱלִישָׁ֞ע שָׁ֤ב הַגִּלְגָּ֙לָה֙ וְהָרָעָ֣ב בָּאָ֔רֶץ וּבְנֵי֙ הַנְּבִיאִ֔ים יֹשְׁבִ֖ים לְפָנָ֑יו וַיֹּ֣אמֶר לְנַעֲר֗וֹ שְׁפֹת֙ הַסִּ֣יר הַגְּדוֹלָ֔ה וּבַשֵּׁ֥ל נָזִ֖יד לִבְנֵ֥י הַנְּבִיאִֽים׃ 38
೩೮ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.
וַיֵּצֵ֨א אֶחָ֣ד אֶל־הַשָּׂדֶה֮ לְלַקֵּ֣ט אֹרֹת֒ וַיִּמְצָא֙ גֶּ֣פֶן שָׂדֶ֔ה וַיְלַקֵּ֥ט מִמֶּ֛נּוּ פַּקֻּעֹ֥ת שָׂדֶ֖ה מְלֹ֣א בִגְד֑וֹ וַיָּבֹ֗א וַיְפַלַּ֛ח אֶל־סִ֥יר הַנָּזִ֖יד כִּֽי־לֹ֥א יָדָֽעוּ׃ 39
೩೯ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.
וַיִּֽצְק֥וּ לַאֲנָשִׁ֖ים לֶאֱכ֑וֹל וַ֠יְהִי כְּאָכְלָ֨ם מֵהַנָּזִ֜יד וְהֵ֣מָּה צָעָ֗קוּ וַיֹּֽאמְרוּ֙ מָ֤וֶת בַּסִּיר֙ אִ֣ישׁ הָאֱלֹהִ֔ים וְלֹ֥א יָכְל֖וּ לֶאֱכֹֽל׃ 40
೪೦ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.
וַיֹּ֙אמֶר֙ וּקְחוּ־קֶ֔מַח וַיַּשְׁלֵ֖ךְ אֶל־הַסִּ֑יר וַיֹּ֗אמֶר צַ֤ק לָעָם֙ וְיֹאכֵ֔לוּ וְלֹ֥א הָיָ֛ה דָּבָ֥ר רָ֖ע בַּסִּֽיר׃ ס 41
೪೧ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.
וְאִ֨ישׁ בָּ֜א מִבַּ֣עַל שָׁלִ֗שָׁה וַיָּבֵא֩ לְאִ֨ישׁ הָאֱלֹהִ֜ים לֶ֤חֶם בִּכּוּרִים֙ עֶשְׂרִֽים־לֶ֣חֶם שְׂעֹרִ֔ים וְכַרְמֶ֖ל בְּצִקְלֹנ֑וֹ וַיֹּ֕אמֶר תֵּ֥ן לָעָ֖ם וְיֹאכֵֽלוּ׃ 42
೪೨ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.
וַיֹּ֙אמֶר֙ מְשָׁ֣רְת֔וֹ מָ֚ה אֶתֵּ֣ן זֶ֔ה לִפְנֵ֖י מֵ֣אָה אִ֑ישׁ וַיֹּ֗אמֶר תֵּ֤ן לָעָם֙ וְיֹאכֵ֔לוּ כִּ֣י כֹ֥ה אָמַ֛ר יְהוָ֖ה אָכֹ֥ל וְהוֹתֵֽר׃ 43
೪೩ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.
וַיִּתֵּ֧ן לִפְנֵיהֶ֛ם וַיֹּאכְל֥וּ וַיּוֹתִ֖רוּ כִּדְבַ֥ר יְהוָֽה׃ פ 44
೪೪ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.

< 2 מְלָכִים 4 >