< דָּנִיֵּאל 1 >
בִּשְׁנַ֣ת שָׁל֔וֹשׁ לְמַלְכ֖וּת יְהוֹיָקִ֣ים מֶֽלֶךְ־יְהוּדָ֑ה בָּ֣א נְבוּכַדְנֶאצַּ֧ר מֶֽלֶךְ־בָּבֶ֛ל יְרוּשָׁלִַ֖ם וַיָּ֥צַר עָלֶֽיהָ׃ | 1 |
ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆಹಾಕಿದನು.
וַיִּתֵּן֩ אֲדֹנָ֨י בְּיָד֜וֹ אֶת־יְהוֹיָקִ֣ים מֶֽלֶךְ־יְהוּדָ֗ה וּמִקְצָת֙ כְּלֵ֣י בֵית־הָֽאֱלֹהִ֔ים וַיְבִיאֵ֥ם אֶֽרֶץ־שִׁנְעָ֖ר בֵּ֣ית אֱלֹהָ֑יו וְאֶת־הַכֵּלִ֣ים הֵבִ֔יא בֵּ֖ית אוֹצַ֥ר אֱלֹהָֽיו׃ | 2 |
ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
וַיֹּ֣אמֶר הַמֶּ֔לֶךְ לְאַשְׁפְּנַ֖ז רַ֣ב סָרִיסָ֑יו לְהָבִ֞יא מִבְּנֵ֧י יִשְׂרָאֵ֛ל וּמִזֶּ֥רַע הַמְּלוּכָ֖ה וּמִן־הַֽפַּרְתְּמִֽים׃ | 3 |
ಅರಸನು ತನ್ನ ಕಂಚುಕಿಯರ ಮುಖ್ಯಸ್ಥನಾದ ಅಶ್ಪೆನಜನ ಸಂಗಡ ಮಾತನಾಡಿ ಅವನು ಇಸ್ರಾಯೇಲರೊಳಗೆ ಕೆಲವರನ್ನು ಅರಸನ ಸಂತಾನದೊಳಗಿಂದಲೂ, ಪ್ರಧಾನರೊಳಗಿಂದಲೂ
יְלָדִ֣ים אֲשֶׁ֣ר אֵֽין־בָּהֶ֣ם כָּל־מוּם֩ וְטוֹבֵ֨י מַרְאֶ֜ה וּמַשְׂכִּילִ֣ים בְּכָל־חָכְמָ֗ה וְיֹ֤דְעֵי דַ֙עַת֙ וּמְבִינֵ֣י מַדָּ֔ע וַאֲשֶׁר֙ כֹּ֣חַ בָּהֶ֔ם לַעֲמֹ֖ד בְּהֵיכַ֣ל הַמֶּ֑לֶךְ וּֽלֲלַמְּדָ֥ם סֵ֖פֶר וּלְשׁ֥וֹן כַּשְׂדִּֽים׃ | 4 |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
וַיְמַן֩ לָהֶ֨ם הַמֶּ֜לֶךְ דְּבַר־י֣וֹם בְּיוֹמ֗וֹ מִפַּת־בַּ֤ג הַמֶּ֙לֶךְ֙ וּמִיֵּ֣ין מִשְׁתָּ֔יו וּֽלְגַדְּלָ֖ם שָׁנִ֣ים שָׁל֑וֹשׁ וּמִ֨קְצָתָ֔ם יַֽעַמְד֖וּ לִפְנֵ֥י הַמֶּֽלֶךְ׃ | 5 |
ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು.
וַיְהִ֥י בָהֶ֖ם מִבְּנֵ֣י יְהוּדָ֑ה דָּנִיֵּ֣אל חֲנַנְיָ֔ה מִֽישָׁאֵ֖ל וַעֲזַרְיָֽה׃ | 6 |
ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.
וַיָּ֧שֶׂם לָהֶ֛ם שַׂ֥ר הַסָּרִיסִ֖ים שֵׁמ֑וֹת וַיָּ֨שֶׂם לְדָֽנִיֵּ֜אל בֵּ֣לְטְשַׁאצַּ֗ר וְלַֽחֲנַנְיָה֙ שַׁדְרַ֔ךְ וּלְמִֽישָׁאֵ֣ל מֵישַׁ֔ךְ וְלַעֲזַרְיָ֖ה עֲבֵ֥ד נְגֽוֹ׃ | 7 |
ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.
וַיָּ֤שֶׂם דָּנִיֵּאל֙ עַל־לִבּ֔וֹ אֲשֶׁ֧ר לֹֽא־יִתְגָּאַ֛ל בְּפַתְבַּ֥ג הַמֶּ֖לֶךְ וּבְיֵ֣ין מִשְׁתָּ֑יו וַיְבַקֵּשׁ֙ מִשַּׂ֣ר הַסָּרִיסִ֔ים אֲשֶׁ֖ר לֹ֥א יִתְגָּאָֽל׃ | 8 |
ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.
וַיִּתֵּ֤ן הָֽאֱלֹהִים֙ אֶת־דָּ֣נִיֵּ֔אל לְחֶ֖סֶד וּֽלְרַחֲמִ֑ים לִפְנֵ֖י שַׂ֥ר הַסָּרִיסִֽים׃ | 9 |
ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.
וַיֹּ֜אמֶר שַׂ֤ר הַסָּרִיסִים֙ לְדָ֣נִיֵּ֔אל יָרֵ֤א אֲנִי֙ אֶת־אֲדֹנִ֣י הַמֶּ֔לֶךְ אֲשֶׁ֣ר מִנָּ֔ה אֶת־מַאֲכַלְכֶ֖ם וְאֶת־מִשְׁתֵּיכֶ֑ם אֲשֶׁ֡ר לָמָּה֩ יִרְאֶ֨ה אֶת־פְּנֵיכֶ֜ם זֹֽעֲפִ֗ים מִן־הַיְלָדִים֙ אֲשֶׁ֣ר כְּגִֽילְכֶ֔ם וְחִיַּבְתֶּ֥ם אֶת־רֹאשִׁ֖י לַמֶּֽלֶךְ׃ | 10 |
ಕಂಚುಕಿಯ ಯಜಮಾನನು ದಾನಿಯೇಲನಿಗೆ, “ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯ ಅರಸನಿಗೆ ನಾನು ಭಯಪಡುತ್ತೇನೆ. ಏಕೆಂದರೆ ಅರಸನು ಏಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಇತರ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು. ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ?” ಎಂದನು.
וַיֹּ֥אמֶר דָּנִיֵּ֖אל אֶל־הַמֶּלְצַ֑ר אֲשֶׁ֤ר מִנָּה֙ שַׂ֣ר הַסָּֽרִיסִ֔ים עַל־דָּנִיֵּ֣אל חֲנַנְיָ֔ה מִֽישָׁאֵ֖ל וַעֲזַרְיָֽה׃ | 11 |
ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ,
נַס־נָ֥א אֶת־עֲבָדֶ֖יךָ יָמִ֣ים עֲשָׂרָ֑ה וְיִתְּנוּ־לָ֜נוּ מִן־הַזֵּרֹעִ֛ים וְנֹאכְלָ֖ה וּמַ֥יִם וְנִשְׁתֶּֽה׃ | 12 |
“ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.
וְיֵרָא֤וּ לְפָנֶ֙יךָ֙ מַרְאֵ֔ינוּ וּמַרְאֵה֙ הַיְלָדִ֔ים הָאֹ֣כְלִ֔ים אֵ֖ת פַּתְבַּ֣ג הַמֶּ֑לֶךְ וְכַאֲשֶׁ֣ר תִּרְאֵ֔ה עֲשֵׂ֖ה עִם־עֲבָדֶֽיךָ׃ | 13 |
ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ. ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು,” ಎಂದು ಬೇಡಿಕೊಂಡನು.
וַיִּשְׁמַ֥ע לָהֶ֖ם לַדָּבָ֣ר הַזֶּ֑ה וַיְנַסֵּ֖ם יָמִ֥ים עֲשָׂרָֽה׃ | 14 |
ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ, ಹತ್ತು ದಿವಸಗಳವರೆಗೂ ಅವರನ್ನು ಪರೀಕ್ಷಿಸಿದನು.
וּמִקְצָת֙ יָמִ֣ים עֲשָׂרָ֔ה נִרְאָ֤ה מַרְאֵיהֶם֙ ט֔וֹב וּבְרִיאֵ֖י בָּשָׂ֑ר מִן־כָּל־הַיְלָדִ֔ים הָאֹ֣כְלִ֔ים אֵ֖ת פַּתְבַּ֥ג הַמֶּֽלֶךְ׃ | 15 |
ಹತ್ತು ದಿವಸಗಳಾದ ಮೇಲೆ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆಲ್ಲರಿಗಿಂತ ಇವರು ಆರೋಗ್ಯಕರವಾಗಿಯೂ, ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದರು.
וַיְהִ֣י הַמֶּלְצַ֗ר נֹשֵׂא֙ אֶת־פַּתְבָּגָ֔ם וְיֵ֖ין מִשְׁתֵּיהֶ֑ם וְנֹתֵ֥ן לָהֶ֖ם זֵרְעֹנִֽים׃ | 16 |
ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
וְהַיְלָדִ֤ים הָאֵ֙לֶּה֙ אַרְבַּעְתָּ֔ם נָתַ֨ן לָהֶ֧ם הָֽאֱלֹהִ֛ים מַדָּ֥ע וְהַשְׂכֵּ֖ל בְּכָל־סֵ֣פֶר וְחָכְמָ֑ה וְדָנִיֵּ֣אל הֵבִ֔ין בְּכָל־חָז֖וֹן וַחֲלֹמֽוֹת׃ | 17 |
ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.
וּלְמִקְצָת֙ הַיָּמִ֔ים אֲשֶׁר־אָמַ֥ר הַמֶּ֖לֶךְ לַהֲבִיאָ֑ם וַיְבִיאֵם֙ שַׂ֣ר הַסָּרִיסִ֔ים לִפְנֵ֖י נְבֻכַדְנֶצַּֽר׃ | 18 |
ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.
וַיְדַבֵּ֣ר אִתָּם֮ הַמֶּלֶךְ֒ וְלֹ֤א נִמְצָא֙ מִכֻּלָּ֔ם כְּדָנִיֵּ֣אל חֲנַנְיָ֔ה מִֽישָׁאֵ֖ל וַעֲזַרְיָ֑ה וַיַּֽעַמְד֖וּ לִפְנֵ֥י הַמֶּֽלֶךְ׃ | 19 |
ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.
וְכֹ֗ל דְּבַר֙ חָכְמַ֣ת בִּינָ֔ה אֲשֶׁר־בִּקֵּ֥שׁ מֵהֶ֖ם הַמֶּ֑לֶךְ וַֽיִּמְצָאֵ֞ם עֶ֣שֶׂר יָד֗וֹת עַ֤ל כָּל־הַֽחַרְטֻמִּים֙ הָֽאַשָּׁפִ֔ים אֲשֶׁ֖ר בְּכָל־מַלְכוּתֽוֹ׃ | 20 |
ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.
וַֽיְהִי֙ דָּֽנִיֵּ֔אל עַד־שְׁנַ֥ת אַחַ֖ת לְכ֥וֹרֶשׁ הַמֶּֽלֶךְ׃ פ | 21 |
ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು.