< דְּבָרִים 16 >
שָׁמוֹר֙ אֶת־חֹ֣דֶשׁ הָאָבִ֔יב וְעָשִׂ֣יתָ פֶּ֔סַח לַיהוָ֖ה אֱלֹהֶ֑יךָ כִּ֞י בְּחֹ֣דֶשׁ הָֽאָבִ֗יב הוֹצִ֨יאֲךָ֜ יְהוָ֧ה אֱלֹהֶ֛יךָ מִמִּצְרַ֖יִם לָֽיְלָה׃ | 1 |
೧ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
וְזָבַ֥חְתָּ פֶּ֛סַח לַיהוָ֥ה אֱלֹהֶ֖יךָ צֹ֣אן וּבָקָ֑ר בַּמָּקוֹם֙ אֲשֶׁר־יִבְחַ֣ר יְהוָ֔ה לְשַׁכֵּ֥ן שְׁמ֖וֹ שָֽׁם׃ | 2 |
೨ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.
לֹא־תֹאכַ֤ל עָלָיו֙ חָמֵ֔ץ שִׁבְעַ֥ת יָמִ֛ים תֹּֽאכַל־עָלָ֥יו מַצּ֖וֹת לֶ֣חֶם עֹ֑נִי כִּ֣י בְחִפָּז֗וֹן יָצָ֙אתָ֙ מֵאֶ֣רֶץ מִצְרַ֔יִם לְמַ֣עַן תִּזְכֹּר֔ אֶת־י֤וֹם צֵֽאתְךָ֙ מֵאֶ֣רֶץ מִצְרַ֔יִם כֹּ֖ל יְמֵ֥י חַיֶּֽיךָ׃ | 3 |
೩ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.
וְלֹֽא־יֵרָאֶ֨ה לְךָ֥ שְׂאֹ֛ר בְּכָל־גְּבֻלְךָ֖ שִׁבְעַ֣ת יָמִ֑ים וְלֹא־יָלִ֣ין מִן־הַבָּשָׂ֗ר אֲשֶׁ֨ר תִּזְבַּ֥ח בָּעֶ֛רֶב בַּיּ֥וֹם הָרִאשׁ֖וֹן לַבֹּֽקֶר׃ | 4 |
೪ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು.
לֹ֥א תוּכַ֖ל לִזְבֹּ֣חַ אֶת־הַפָּ֑סַח בְּאַחַ֣ד שְׁעָרֶ֔יךָ אֲשֶׁר־יְהוָ֥ה אֱלֹהֶ֖יךָ נֹתֵ֥ן לָֽךְ׃ | 5 |
೫ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,
כִּ֠י אִֽם־אֶל־הַמָּק֞וֹם אֲשֶׁר־יִבְחַ֨ר יְהוָ֤ה אֱלֹהֶ֙יךָ֙ לְשַׁכֵּ֣ן שְׁמ֔וֹ שָׁ֛ם תִּזְבַּ֥ח אֶת־הַפֶּ֖סַח בָּעָ֑רֶב כְּב֣וֹא הַשֶּׁ֔מֶשׁ מוֹעֵ֖ד צֵֽאתְךָ֥ מִמִּצְרָֽיִם׃ | 6 |
೬ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
וּבִשַּׁלְתָּ֙ וְאָ֣כַלְתָּ֔ בַּמָּק֕וֹם אֲשֶׁ֥ר יִבְחַ֛ר יְהוָ֥ה אֱלֹהֶ֖יךָ בּ֑וֹ וּפָנִ֣יתָ בַבֹּ֔קֶר וְהָלַכְתָּ֖ לְאֹהָלֶֽיךָ׃ | 7 |
೭ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.
שֵׁ֥שֶׁת יָמִ֖ים תֹּאכַ֣ל מַצּ֑וֹת וּבַיּ֣וֹם הַשְּׁבִיעִ֗י עֲצֶ֙רֶת֙ לַיהוָ֣ה אֱלֹהֶ֔יךָ לֹ֥א תַעֲשֶׂ֖ה מְלָאכָֽה׃ ס | 8 |
೮ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.
שִׁבְעָ֥ה שָׁבֻעֹ֖ת תִּסְפָּר־לָ֑ךְ מֵהָחֵ֤ל חֶרְמֵשׁ֙ בַּקָּמָ֔ה תָּחֵ֣ל לִסְפֹּ֔ר שִׁבְעָ֖ה שָׁבֻעֽוֹת׃ | 9 |
೯ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,
וְעָשִׂ֜יתָ חַ֤ג שָׁבֻעוֹת֙ לַיהוָ֣ה אֱלֹהֶ֔יךָ מִסַּ֛ת נִדְבַ֥ת יָדְךָ֖ אֲשֶׁ֣ר תִּתֵּ֑ן כַּאֲשֶׁ֥ר יְבָרֶכְךָ֖ יְהוָ֥ה אֱלֹהֶֽיךָ׃ | 10 |
೧೦ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
וְשָׂמַחְתָּ֞ לִפְנֵ֣י ׀ יְהוָ֣ה אֱלֹהֶ֗יךָ אַתָּ֨ה וּבִנְךָ֣ וּבִתֶּךָ֮ וְעַבְדְּךָ֣ וַאֲמָתֶךָ֒ וְהַלֵּוִי֙ אֲשֶׁ֣ר בִּשְׁעָרֶ֔יךָ וְהַגֵּ֛ר וְהַיָּת֥וֹם וְהָאַלְמָנָ֖ה אֲשֶׁ֣ר בְּקִרְבֶּ֑ךָ בַּמָּק֗וֹם אֲשֶׁ֤ר יִבְחַר֙ יְהוָ֣ה אֱלֹהֶ֔יךָ לְשַׁכֵּ֥ן שְׁמ֖וֹ שָֽׁם׃ | 11 |
೧೧ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
וְזָ֣כַרְתָּ֔ כִּי־עֶ֥בֶד הָיִ֖יתָ בְּמִצְרָ֑יִם וְשָׁמַרְתָּ֣ וְעָשִׂ֔יתָ אֶת־הַֽחֻקִּ֖ים הָאֵֽלֶּה׃ פ | 12 |
೧೨ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.
חַ֧ג הַסֻּכֹּ֛ת תַּעֲשֶׂ֥ה לְךָ֖ שִׁבְעַ֣ת יָמִ֑ים בְּאָ֨סְפְּךָ֔ מִֽגָּרְנְךָ֖ וּמִיִּקְבֶֽךָ׃ | 13 |
೧೩ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
וְשָׂמַחְתָּ֖ בְּחַגֶּ֑ךָ אַתָּ֨ה וּבִנְךָ֤ וּבִתֶּ֙ךָ֙ וְעַבְדְּךָ֣ וַאֲמָתֶ֔ךָ וְהַלֵּוִ֗י וְהַגֵּ֛ר וְהַיָּת֥וֹם וְהָאַלְמָנָ֖ה אֲשֶׁ֥ר בִּשְׁעָרֶֽיךָ׃ | 14 |
೧೪ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
שִׁבְעַ֣ת יָמִ֗ים תָּחֹג֙ לַיהוָ֣ה אֱלֹהֶ֔יךָ בַּמָּק֖וֹם אֲשֶׁר־יִבְחַ֣ר יְהוָ֑ה כִּ֣י יְבָרֶכְךָ֞ יְהוָ֣ה אֱלֹהֶ֗יךָ בְּכֹ֤ל תְּבוּאָֽתְךָ֙ וּבְכֹל֙ מַעֲשֵׂ֣ה יָדֶ֔יךָ וְהָיִ֖יתָ אַ֥ךְ שָׂמֵֽחַ׃ | 15 |
೧೫ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
שָׁל֣וֹשׁ פְּעָמִ֣ים ׀ בַּשָּׁנָ֡ה יֵרָאֶ֨ה כָל־זְכוּרְךָ֜ אֶת־פְּנֵ֣י ׀ יְהוָ֣ה אֱלֹהֶ֗יךָ בַּמָּקוֹם֙ אֲשֶׁ֣ר יִבְחָ֔ר בְּחַ֧ג הַמַּצּ֛וֹת וּבְחַ֥ג הַשָּׁבֻע֖וֹת וּבְחַ֣ג הַסֻּכּ֑וֹת וְלֹ֧א יֵרָאֶ֛ה אֶת־פְּנֵ֥י יְהוָ֖ה רֵיקָֽם׃ | 16 |
೧೬ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
אִ֖ישׁ כְּמַתְּנַ֣ת יָד֑וֹ כְּבִרְכַּ֛ת יְהוָ֥ה אֱלֹהֶ֖יךָ אֲשֶׁ֥ר נָֽתַן־לָֽךְ׃ ס | 17 |
೧೭ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.
שֹׁפְטִ֣ים וְשֹֽׁטְרִ֗ים תִּֽתֶּן־לְךָ֙ בְּכָל־שְׁעָרֶ֔יךָ אֲשֶׁ֨ר יְהוָ֧ה אֱלֹהֶ֛יךָ נֹתֵ֥ן לְךָ֖ לִשְׁבָטֶ֑יךָ וְשָׁפְט֥וּ אֶת־הָעָ֖ם מִשְׁפַּט־צֶֽדֶק׃ | 18 |
೧೮ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
לֹא־תַטֶּ֣ה מִשְׁפָּ֔ט לֹ֥א תַכִּ֖יר פָּנִ֑ים וְלֹא־תִקַּ֣ח שֹׁ֔חַד כִּ֣י הַשֹּׁ֗חַד יְעַוֵּר֙ עֵינֵ֣י חֲכָמִ֔ים וִֽיסַלֵּ֖ף דִּבְרֵ֥י צַדִּיקִֽם׃ | 19 |
೧೯ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
צֶ֥דֶק צֶ֖דֶק תִּרְדֹּ֑ף לְמַ֤עַן תִּֽחְיֶה֙ וְיָרַשְׁתָּ֣ אֶת־הָאָ֔רֶץ אֲשֶׁר־יְהוָ֥ה אֱלֹהֶ֖יךָ נֹתֵ֥ן לָֽךְ׃ ס | 20 |
೨೦ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
לֹֽא־תִטַּ֥ע לְךָ֛ אֲשֵׁרָ֖ה כָּל־עֵ֑ץ אֵ֗צֶל מִזְבַּ֛ח יְהוָ֥ה אֱלֹהֶ֖יךָ אֲשֶׁ֥ר תַּעֲשֶׂה־לָּֽךְ׃ ס | 21 |
೨೧ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
וְלֹֽא־תָקִ֥ים לְךָ֖ מַצֵּבָ֑ה אֲשֶׁ֥ר שָׂנֵ֖א יְהוָ֥ה אֱלֹהֶֽיךָ׃ ס | 22 |
೨೨ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.