< קֹהֶלֶת 3 >
לַכֹּ֖ל זְמָ֑ן וְעֵ֥ת לְכָל־חֵ֖פֶץ תַּ֥חַת הַשָּׁמָֽיִם׃ ס | 1 |
ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.
עֵ֥ת לָלֶ֖דֶת וְעֵ֣ת לָמ֑וּת עֵ֣ת לָטַ֔עַת וְעֵ֖ת לַעֲק֥וֹר נָטֽוּעַ׃ | 2 |
ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.
עֵ֤ת לַהֲרוֹג֙ וְעֵ֣ת לִרְפּ֔וֹא עֵ֥ת לִפְר֖וֹץ וְעֵ֥ת לִבְנֽוֹת׃ | 3 |
ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.
עֵ֤ת לִבְכּוֹת֙ וְעֵ֣ת לִשְׂח֔וֹק עֵ֥ת סְפ֖וֹד וְעֵ֥ת רְקֽוֹד׃ | 4 |
ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.
עֵ֚ת לְהַשְׁלִ֣יךְ אֲבָנִ֔ים וְעֵ֖ת כְּנ֣וֹס אֲבָנִ֑ים עֵ֣ת לַחֲב֔וֹק וְעֵ֖ת לִרְחֹ֥ק מֵחַבֵּֽק׃ | 5 |
ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ.
עֵ֤ת לְבַקֵּשׁ֙ וְעֵ֣ת לְאַבֵּ֔ד עֵ֥ת לִשְׁמ֖וֹר וְעֵ֥ת לְהַשְׁלִֽיךְ׃ | 6 |
ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.
עֵ֤ת לִקְר֙וֹעַ֙ וְעֵ֣ת לִתְפּ֔וֹר עֵ֥ת לַחֲשׁ֖וֹת וְעֵ֥ת לְדַבֵּֽר׃ | 7 |
ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.
עֵ֤ת לֶֽאֱהֹב֙ וְעֵ֣ת לִשְׂנֹ֔א עֵ֥ת מִלְחָמָ֖ה וְעֵ֥ת שָׁלֽוֹם׃ ס | 8 |
ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ. ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ.
מַה־יִּתְרוֹן֙ הָֽעוֹשֶׂ֔ה בַּאֲשֶׁ֖ר ה֥וּא עָמֵֽל׃ | 9 |
ಹಾಗಾದರೆ, ಪ್ರಯಾಸ ಪಡುವುದರಲ್ಲಿ ದುಡಿಯುವವನಿಗೆ ಲಾಭವೇನಿದೆ?
רָאִ֣יתִי אֶת־הָֽעִנְיָ֗ן אֲשֶׁ֨ר נָתַ֧ן אֱלֹהִ֛ים לִבְנֵ֥י הָאָדָ֖ם לַעֲנ֥וֹת בּֽוֹ׃ | 10 |
ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ.
אֶת־הַכֹּ֥ל עָשָׂ֖ה יָפֶ֣ה בְעִתּ֑וֹ גַּ֤ם אֶת־הָעֹלָם֙ נָתַ֣ן בְּלִבָּ֔ם מִבְּלִ֞י אֲשֶׁ֧ר לֹא־יִמְצָ֣א הָאָדָ֗ם אֶת־הַֽמַּעֲשֶׂ֛ה אֲשֶׁר־עָשָׂ֥ה הָאֱלֹהִ֖ים מֵרֹ֥אשׁ וְעַד־סֽוֹף׃ | 11 |
ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.
יָדַ֕עְתִּי כִּ֛י אֵ֥ין ט֖וֹב בָּ֑ם כִּ֣י אִם־לִשְׂמ֔וֹחַ וְלַעֲשׂ֥וֹת ט֖וֹב בְּחַיָּֽיו׃ | 12 |
ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.
וְגַ֤ם כָּל־הָאָדָם֙ שֶׁיֹּאכַ֣ל וְשָׁתָ֔ה וְרָאָ֥ה ט֖וֹב בְּכָל־עֲמָל֑וֹ מַתַּ֥ת אֱלֹהִ֖ים הִֽיא׃ | 13 |
ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.
יָדַ֗עְתִּי כִּ֠י כָּל־אֲשֶׁ֨ר יַעֲשֶׂ֤ה הָאֱלֹהִים֙ ה֚וּא יִהְיֶ֣ה לְעוֹלָ֔ם עָלָיו֙ אֵ֣ין לְהוֹסִ֔יף וּמִמֶּ֖נּוּ אֵ֣ין לִגְרֹ֑עַ וְהָאֱלֹהִ֣ים עָשָׂ֔ה שֶׁיִּֽרְא֖וּ מִלְּפָנָֽיו׃ | 14 |
ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.
מַה־שֶּֽׁהָיָה֙ כְּבָ֣ר ה֔וּא וַאֲשֶׁ֥ר לִהְי֖וֹת כְּבָ֣ר הָיָ֑ה וְהָאֱלֹהִ֖ים יְבַקֵּ֥שׁ אֶת־נִרְדָּֽף׃ | 15 |
ಇರುವಂಥದ್ದು ಈಗಾಗಲೇ ಇತ್ತು, ಬರುವಂಥದ್ದು ಆಗಲೇ ಇದೆ. ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು.
וְע֥וֹד רָאִ֖יתִי תַּ֣חַת הַשָּׁ֑מֶשׁ מְק֤וֹם הַמִּשְׁפָּט֙ שָׁ֣מָּה הָרֶ֔שַׁע וּמְק֥וֹם הַצֶּ֖דֶק שָׁ֥מָּה הָרָֽשַׁע׃ | 16 |
ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು.
אָמַ֤רְתִּֽי אֲנִי֙ בְּלִבִּ֔י אֶת־הַצַּדִּיק֙ וְאֶת־הָ֣רָשָׁ֔ע יִשְׁפֹּ֖ט הָאֱלֹהִ֑ים כִּי־עֵ֣ת לְכָל־חֵ֔פֶץ וְעַ֥ל כָּל־הַֽמַּעֲשֶׂ֖ה שָֽׁם׃ | 17 |
ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”
אָמַ֤רְתִּֽי אֲנִי֙ בְּלִבִּ֔י עַל־דִּבְרַת֙ בְּנֵ֣י הָאָדָ֔ם לְבָרָ֖ם הָאֱלֹהִ֑ים וְלִרְא֕וֹת שְׁהֶם־בְּהֵמָ֥ה הֵ֖מָּה לָהֶֽם׃ | 18 |
ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.
כִּי֩ מִקְרֶ֨ה בְֽנֵי־הָאָדָ֜ם וּמִקְרֶ֣ה הַבְּהֵמָ֗ה וּמִקְרֶ֤ה אֶחָד֙ לָהֶ֔ם כְּמ֥וֹת זֶה֙ כֵּ֣ן מ֣וֹת זֶ֔ה וְר֥וּחַ אֶחָ֖ד לַכֹּ֑ל וּמוֹתַ֨ר הָאָדָ֤ם מִן־הַבְּהֵמָה֙ אָ֔יִן כִּ֥י הַכֹּ֖ל הָֽבֶל׃ | 19 |
ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.
הַכֹּ֥ל הוֹלֵ֖ךְ אֶל־מָק֣וֹם אֶחָ֑ד הַכֹּל֙ הָיָ֣ה מִן־הֶֽעָפָ֔ר וְהַכֹּ֖ל שָׁ֥ב אֶל־הֶעָפָֽר׃ | 20 |
ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.
מִ֣י יוֹדֵ֗עַ ר֚וּחַ בְּנֵ֣י הָאָדָ֔ם הָעֹלָ֥ה הִ֖יא לְמָ֑עְלָה וְר֙וּחַ֙ הַבְּהֵמָ֔ה הַיֹּרֶ֥דֶת הִ֖יא לְמַ֥טָּה לָאָֽרֶץ׃ | 21 |
ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”
וְרָאִ֗יתִי כִּ֣י אֵ֥ין טוֹב֙ מֵאֲשֶׁ֨ר יִשְׂמַ֤ח הָאָדָם֙ בְּֽמַעֲשָׂ֔יו כִּי־ה֖וּא חֶלְק֑וֹ כִּ֣י מִ֤י יְבִיאֶ֙נּוּ֙ לִרְא֔וֹת בְּמֶ֖ה שֶׁיִּהְיֶ֥ה אַחֲרָֽיו׃ | 22 |
ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?