< שְׁמֹות 13 >
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃ | 1 |
೧ಯೆಹೋವನು ಮೋಶೆಯ ಸಂಗಡ ಮಾತನಾಡಿ,
קַדֶּשׁ־לִ֨י כָל־בְּכ֜וֹר פֶּ֤טֶר כָּל־רֶ֙חֶם֙ בִּבְנֵ֣י יִשְׂרָאֵ֔ל בָּאָדָ֖ם וּבַבְּהֵמָ֑ה לִ֖י הֽוּא׃ | 2 |
೨“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
וַיֹּ֨אמֶר מֹשֶׁ֜ה אֶל־הָעָ֗ם זָכ֞וֹר אֶת־הַיּ֤וֹם הַזֶּה֙ אֲשֶׁ֨ר יְצָאתֶ֤ם מִמִּצְרַ֙יִם֙ מִבֵּ֣ית עֲבָדִ֔ים כִּ֚י בְּחֹ֣זֶק יָ֔ד הוֹצִ֧יא יְהֹוָ֛ה אֶתְכֶ֖ם מִזֶּ֑ה וְלֹ֥א יֵאָכֵ֖ל חָמֵֽץ׃ | 3 |
೩ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
הַיּ֖וֹם אַתֶּ֣ם יֹצְאִ֑ים בְּחֹ֖דֶשׁ הָאָבִֽיב׃ | 4 |
೪ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.
וְהָיָ֣ה כִֽי־יְבִֽיאֲךָ֣ יְהוָ֡ה אֶל־אֶ֣רֶץ הַֽ֠כְּנַעֲנִי וְהַחִתִּ֨י וְהָאֱמֹרִ֜י וְהַחִוִּ֣י וְהַיְבוּסִ֗י אֲשֶׁ֨ר נִשְׁבַּ֤ע לַאֲבֹתֶ֙יךָ֙ לָ֣תֶת לָ֔ךְ אֶ֛רֶץ זָבַ֥ת חָלָ֖ב וּדְבָ֑שׁ וְעָבַדְתָּ֛ אֶת־הָעֲבֹדָ֥ה הַזֹּ֖את בַּחֹ֥דֶשׁ הַזֶּֽה׃ | 5 |
೫ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.
שִׁבְעַ֥ת יָמִ֖ים תֹּאכַ֣ל מַצֹּ֑ת וּבַיּוֹם֙ הַשְּׁבִיעִ֔י חַ֖ג לַיהוָֽה׃ | 6 |
೬ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
מַצּוֹת֙ יֵֽאָכֵ֔ל אֵ֖ת שִׁבְעַ֣ת הַיָּמִ֑ים וְלֹֽא־יֵרָאֶ֨ה לְךָ֜ חָמֵ֗ץ וְלֹֽא־יֵרָאֶ֥ה לְךָ֛ שְׂאֹ֖ר בְּכָל־גְּבֻלֶֽךָ׃ | 7 |
೭ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
וְהִגַּדְתָּ֣ לְבִנְךָ֔ בַּיּ֥וֹם הַה֖וּא לֵאמֹ֑ר בַּעֲב֣וּר זֶ֗ה עָשָׂ֤ה יְהוָה֙ לִ֔י בְּצֵאתִ֖י מִמִּצְרָֽיִם׃ | 8 |
೮ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
וְהָיָה֩ לְךָ֨ לְא֜וֹת עַל־יָדְךָ֗ וּלְזִכָּרוֹן֙ בֵּ֣ין עֵינֶ֔יךָ לְמַ֗עַן תִּהְיֶ֛ה תּוֹרַ֥ת יְהוָ֖ה בְּפִ֑יךָ כִּ֚י בְּיָ֣ד חֲזָקָ֔ה הוֹצִֽאֲךָ֥ יְהֹוָ֖ה מִמִּצְרָֽיִם׃ | 9 |
೯ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
וְשָׁמַרְתָּ֛ אֶת־הַחֻקָּ֥ה הַזֹּ֖את לְמוֹעֲדָ֑הּ מִיָּמִ֖ים יָמִֽימָה׃ ס | 10 |
೧೦ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
וְהָיָ֞ה כִּֽי־יְבִֽאֲךָ֤ יְהוָה֙ אֶל־אֶ֣רֶץ הַֽכְּנַעֲנִ֔י כַּאֲשֶׁ֛ר נִשְׁבַּ֥ע לְךָ֖ וְלַֽאֲבֹתֶ֑יךָ וּנְתָנָ֖הּ לָֽךְ׃ | 11 |
೧೧“ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,
וְהַעֲבַרְתָּ֥ כָל־פֶּֽטֶר־רֶ֖חֶם לַֽיהֹוָ֑ה וְכָל־פֶּ֣טֶר ׀ שֶׁ֣גֶר בְּהֵמָ֗ה אֲשֶׁ֨ר יִהְיֶ֥ה לְךָ֛ הַזְּכָרִ֖ים לַיהוָֽה׃ | 12 |
೧೨ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
וְכָל־פֶּ֤טֶר חֲמֹר֙ תִּפְדֶּ֣ה בְשֶׂ֔ה וְאִם־לֹ֥א תִפְדֶּ֖ה וַעֲרַפְתּ֑וֹ וְכֹ֨ל בְּכ֥וֹר אָדָ֛ם בְּבָנֶ֖יךָ תִּפְדֶּֽה׃ | 13 |
೧೩ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.
וְהָיָ֞ה כִּֽי־יִשְׁאָלְךָ֥ בִנְךָ֛ מָחָ֖ר לֵאמֹ֣ר מַה־זֹּ֑את וְאָמַרְתָּ֣ אֵלָ֔יו בְּחֹ֣זֶק יָ֗ד הוֹצִיאָ֧נוּ יְהוָ֛ה מִמִּצְרַ֖יִם מִבֵּ֥ית עֲבָדִֽים׃ | 14 |
೧೪ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
וַיְהִ֗י כִּֽי־הִקְשָׁ֣ה פַרְעֹה֮ לְשַׁלְּחֵנוּ֒ וַיַּהֲרֹ֨ג יְהֹוָ֤ה כָּל־בְּכוֹר֙ בְּאֶ֣רֶץ מִצְרַ֔יִם מִבְּכֹ֥ר אָדָ֖ם וְעַד־בְּכ֣וֹר בְּהֵמָ֑ה עַל־כֵּן֩ אֲנִ֨י זֹבֵ֜חַ לַֽיהוָ֗ה כָּל־פֶּ֤טֶר רֶ֙חֶם֙ הַזְּכָרִ֔ים וְכָל־בְּכ֥וֹר בָּנַ֖י אֶפְדֶּֽה׃ | 15 |
೧೫ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
וְהָיָ֤ה לְאוֹת֙ עַל־יָ֣דְכָ֔ה וּלְטוֹטָפֹ֖ת בֵּ֣ין עֵינֶ֑יךָ כִּ֚י בְּחֹ֣זֶק יָ֔ד הוֹצִיאָ֥נוּ יְהוָ֖ה מִמִּצְרָֽיִם׃ ס | 16 |
೧೬ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
וַיְהִ֗י בְּשַׁלַּ֣ח פַּרְעֹה֮ אֶת־הָעָם֒ וְלֹא־נָחָ֣ם אֱלֹהִ֗ים דֶּ֚רֶךְ אֶ֣רֶץ פְּלִשְׁתִּ֔ים כִּ֥י קָר֖וֹב ה֑וּא כִּ֣י ׀ אָמַ֣ר אֱלֹהִ֗ים פֶּֽן־יִנָּחֵ֥ם הָעָ֛ם בִּרְאֹתָ֥ם מִלְחָמָ֖ה וְשָׁ֥בוּ מִצְרָֽיְמָה׃ | 17 |
೧೭ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
וַיַּסֵּ֨ב אֱלֹהִ֧ים ׀ אֶת־הָעָ֛ם דֶּ֥רֶךְ הַמִּדְבָּ֖ר יַם־ס֑וּף וַחֲמֻשִׁ֛ים עָל֥וּ בְנֵי־יִשְׂרָאֵ֖ל מֵאֶ֥רֶץ מִצְרָֽיִם׃ | 18 |
೧೮ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.
וַיִּקַּ֥ח מֹשֶׁ֛ה אֶת־עַצְמ֥וֹת יוֹסֵ֖ף עִמּ֑וֹ כִּי֩ הַשְׁבֵּ֨עַ הִשְׁבִּ֜יעַ אֶת־בְּנֵ֤י יִשְׂרָאֵל֙ לֵאמֹ֔ר פָּקֹ֨ד יִפְקֹ֤ד אֱלֹהִים֙ אֶתְכֶ֔ם וְהַעֲלִיתֶ֧ם אֶת־עַצְמֹתַ֛י מִזֶּ֖ה אִתְּכֶֽם׃ | 19 |
೧೯ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
וַיִּסְע֖וּ מִסֻּכֹּ֑ת וַיַּחֲנ֣וּ בְאֵתָ֔ם בִּקְצֵ֖ה הַמִּדְבָּֽר׃ | 20 |
೨೦ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
וַֽיהוָ֡ה הֹלֵךְ֩ לִפְנֵיהֶ֨ם יוֹמָ֜ם בְּעַמּ֤וּד עָנָן֙ לַנְחֹתָ֣ם הַדֶּ֔רֶךְ וְלַ֛יְלָה בְּעַמּ֥וּד אֵ֖שׁ לְהָאִ֣יר לָהֶ֑ם לָלֶ֖כֶת יוֹמָ֥ם וָלָֽיְלָה׃ | 21 |
೨೧ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
לֹֽא־יָמִ֞ישׁ עַמּ֤וּד הֶֽעָנָן֙ יוֹמָ֔ם וְעַמּ֥וּד הָאֵ֖שׁ לָ֑יְלָה לִפְנֵ֖י הָעָֽם׃ פ | 22 |
೨೨ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.