< שְׁמֹות 22 >

כִּ֤י יִגְנֹֽב־אִישׁ֙ שׁ֣וֹר אוֹ־שֶׂ֔ה וּטְבָח֖וֹ א֣וֹ מְכָר֑וֹ חֲמִשָּׁ֣ה בָקָ֗ר יְשַׁלֵּם֙ תַּ֣חַת הַשּׁ֔וֹר וְאַרְבַּע־צֹ֖אן תַּ֥חַת הַשֶּֽׂה׃ 1
ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.
אִם־בַּמַּחְתֶּ֛רֶת יִמָּצֵ֥א הַגַּנָּ֖ב וְהֻכָּ֣ה וָמֵ֑ת אֵ֥ין ל֖וֹ דָּמִֽים׃ 2
ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಕೂಡದು.
אִם־זָרְחָ֥ה הַשֶּׁ֛מֶשׁ עָלָ֖יו דָּמִ֣ים ל֑וֹ שַׁלֵּ֣ם יְשַׁלֵּ֔ם אִם־אֵ֣ין ל֔וֹ וְנִמְכַּ֖ר בִּגְנֵבָתֽוֹ׃ 3
ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
אִֽם־הִמָּצֵא֩ תִמָּצֵ֨א בְיָד֜וֹ הַגְּנֵבָ֗ה מִשּׁ֧וֹר עַד־חֲמ֛וֹר עַד־שֶׂ֖ה חַיִּ֑ים שְׁנַ֖יִם יְשַׁלֵּֽם׃ ס 4
ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಆಡು, ಕುರಿಯಾದರೂ ಜೀವದಿಂದಲೇ ಕದ್ದವನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.
כִּ֤י יַבְעֶר־אִישׁ֙ שָׂדֶ֣ה אוֹ־כֶ֔רֶם וְשִׁלַּח֙ אֶת־בְּעִיר֔וֹ וּבִעֵ֖ר בִּשְׂדֵ֣ה אַחֵ֑ר מֵיטַ֥ב שָׂדֵ֛הוּ וּמֵיטַ֥ב כַּרְמ֖וֹ יְשַׁלֵּֽם׃ ס 5
ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.
כִּֽי־תֵצֵ֨א אֵ֜שׁ וּמָצְאָ֤ה קֹצִים֙ וְנֶאֱכַ֣ל גָּדִ֔ישׁ א֥וֹ הַקָּמָ֖ה א֣וֹ הַשָּׂדֶ֑ה שַׁלֵּ֣ם יְשַׁלֵּ֔ם הַמַּבְעִ֖ר אֶת־הַבְּעֵרָֽה׃ ס 6
ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.
כִּֽי־יִתֵּן֩ אִ֨ישׁ אֶל־רֵעֵ֜הוּ כֶּ֤סֶף אֽוֹ־כֵלִים֙ לִשְׁמֹ֔ר וְגֻנַּ֖ב מִבֵּ֣ית הָאִ֑ישׁ אִם־יִמָּצֵ֥א הַגַּנָּ֖ב יְשַׁלֵּ֥ם שְׁנָֽיִם׃ 7
ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು.
אִם־לֹ֤א יִמָּצֵא֙ הַגַּנָּ֔ב וְנִקְרַ֥ב בַּֽעַל־הַבַּ֖יִת אֶל־הָֽאֱלֹהִ֑ים אִם־לֹ֥א שָׁלַ֛ח יָד֖וֹ בִּמְלֶ֥אכֶת רֵעֵֽהוּ׃ 8
ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
עַֽל־כָּל־דְּבַר־פֶּ֡שַׁע עַל־שׁ֡וֹר עַל־חֲ֠מוֹר עַל־שֶׂ֨ה עַל־שַׂלְמָ֜ה עַל־כָּל־אֲבֵדָ֗ה אֲשֶׁ֤ר יֹאמַר֙ כִּי־ה֣וּא זֶ֔ה עַ֚ד הָֽאֱלֹהִ֔ים יָבֹ֖א דְּבַר־שְׁנֵיהֶ֑ם אֲשֶׁ֤ר יַרְשִׁיעֻן֙ אֱלֹהִ֔ים יְשַׁלֵּ֥ם שְׁנַ֖יִם לְרֵעֵֽהוּ׃ ס 9
ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
כִּֽי־יִתֵּן֩ אִ֨ישׁ אֶל־רֵעֵ֜הוּ חֲמ֨וֹר אוֹ־שׁ֥וֹר אוֹ־שֶׂ֛ה וְכָל־בְּהֵמָ֖ה לִשְׁמֹ֑ר וּמֵ֛ת אוֹ־נִשְׁבַּ֥ר אוֹ־נִשְׁבָּ֖ה אֵ֥ין רֹאֶֽה׃ 10
೧೦ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,
שְׁבֻעַ֣ת יְהוָ֗ה תִּהְיֶה֙ בֵּ֣ין שְׁנֵיהֶ֔ם אִם־לֹ֥א שָׁלַ֛ח יָד֖וֹ בִּמְלֶ֣אכֶת רֵעֵ֑הוּ וְלָקַ֥ח בְּעָלָ֖יו וְלֹ֥א יְשַׁלֵּֽם׃ 11
೧೧ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.
וְאִם־גָּנֹ֥ב יִגָּנֵ֖ב מֵעִמּ֑וֹ יְשַׁלֵּ֖ם לִבְעָלָֽיו׃ 12
೧೨ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು.
אִם־טָרֹ֥ף יִטָּרֵ֖ף יְבִאֵ֣הוּ עֵ֑ד הַטְּרֵפָ֖ה לֹ֥א יְשַׁלֵּֽם׃ פ 13
೧೩ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.
וְכִֽי־יִשְׁאַ֥ל אִ֛ישׁ מֵעִ֥ם רֵעֵ֖הוּ וְנִשְׁבַּ֣ר אוֹ־מֵ֑ת בְּעָלָ֥יו אֵין־עִמּ֖וֹ שַׁלֵּ֥ם יְשַׁלֵּֽם׃ 14
೧೪ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.
אִם־בְּעָלָ֥יו עִמּ֖וֹ לֹ֣א יְשַׁלֵּ֑ם אִם־שָׂכִ֣יר ה֔וּא בָּ֖א בִּשְׂכָרֽוֹ׃ ס 15
೧೫ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.
וְכִֽי־יְפַתֶּ֣ה אִ֗ישׁ בְּתוּלָ֛ה אֲשֶׁ֥ר לֹא־אֹרָ֖שָׂה וְשָׁכַ֣ב עִמָּ֑הּ מָהֹ֛ר יִמְהָרֶ֥נָּה לּ֖וֹ לְאִשָּֽׁה׃ 16
೧೬ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.
אִם־מָאֵ֧ן יְמָאֵ֛ן אָבִ֖יהָ לְתִתָּ֣הּ ל֑וֹ כֶּ֣סֶף יִשְׁקֹ֔ל כְּמֹ֖הַר הַבְּתוּלֹֽת׃ ס 17
೧೭ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.
מְכַשֵּׁפָ֖ה לֹ֥א תְחַיֶּֽה׃ ס 18
೧೮ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.
כָּל־שֹׁכֵ֥ב עִם־בְּהֵמָ֖ה מ֥וֹת יוּמָֽת׃ ס 19
೧೯ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.
זֹבֵ֥חַ לָאֱלֹהִ֖ים יָֽחֳרָ֑ם בִּלְתִּ֥י לַיהוָ֖ה לְבַדּֽוֹ׃ 20
೨೦ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.
וְגֵ֥ר לֹא־תוֹנֶ֖ה וְלֹ֣א תִלְחָצֶ֑נּוּ כִּֽי־גֵרִ֥ים הֱיִיתֶ֖ם בְּאֶ֥רֶץ מִצְרָֽיִם׃ 21
೨೧ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?
כָּל־אַלְמָנָ֥ה וְיָת֖וֹם לֹ֥א תְעַנּֽוּן׃ 22
೨೨ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.
אִם־עַנֵּ֥ה תְעַנֶּ֖ה אֹת֑וֹ כִּ֣י אִם־צָעֹ֤ק יִצְעַק֙ אֵלַ֔י שָׁמֹ֥עַ אֶשְׁמַ֖ע צַעֲקָתֽוֹ׃ 23
೨೩ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.
וְחָרָ֣ה אַפִּ֔י וְהָרַגְתִּ֥י אֶתְכֶ֖ם בֶּחָ֑רֶב וְהָי֤וּ נְשֵׁיכֶם֙ אַלְמָנ֔וֹת וּבְנֵיכֶ֖ם יְתֹמִֽים׃ פ 24
೨೪ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
אִם־כֶּ֣סֶף ׀ תַּלְוֶ֣ה אֶת־עַמִּ֗י אֶת־הֶֽעָנִי֙ עִמָּ֔ךְ לֹא־תִהְיֶ֥ה ל֖וֹ כְּנֹשֶׁ֑ה לֹֽא־תְשִׂימ֥וּן עָלָ֖יו נֶֽשֶׁךְ׃ 25
೨೫ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.
אִם־חָבֹ֥ל תַּחְבֹּ֖ל שַׂלְמַ֣ת רֵעֶ֑ךָ עַד־בֹּ֥א הַשֶּׁ֖מֶשׁ תְּשִׁיבֶ֥נּוּ לֽוֹ׃ 26
೨೬ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.
כִּ֣י הִ֤וא כְסוּתוֹ֙ לְבַדָּ֔הּ הִ֥וא שִׂמְלָת֖וֹ לְעֹר֑וֹ בַּמֶּ֣ה יִשְׁכָּ֔ב וְהָיָה֙ כִּֽי־יִצְעַ֣ק אֵלַ֔י וְשָׁמַעְתִּ֖י כִּֽי־חַנּ֥וּן אָֽנִי׃ ס 27
೨೭ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.
אֱלֹהִ֖ים לֹ֣א תְקַלֵּ֑ל וְנָשִׂ֥יא בְעַמְּךָ֖ לֹ֥א תָאֹֽר׃ 28
೨೮ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.
מְלֵאָתְךָ֥ וְדִמְעֲךָ֖ לֹ֣א תְאַחֵ֑ר בְּכ֥וֹר בָּנֶ֖יךָ תִּתֶּן־לִּֽי׃ 29
೨೯ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.
כֵּֽן־תַּעֲשֶׂ֥ה לְשֹׁרְךָ֖ לְצֹאנֶ֑ךָ שִׁבְעַ֤ת יָמִים֙ יִהְיֶ֣ה עִם־אִמּ֔וֹ בַּיּ֥וֹם הַשְּׁמִינִ֖י תִּתְּנוֹ־לִֽי׃ 30
೩೦ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
וְאַנְשֵׁי־קֹ֖דֶשׁ תִּהְי֣וּן לִ֑י וּבָשָׂ֨ר בַּשָּׂדֶ֤ה טְרֵפָה֙ לֹ֣א תֹאכֵ֔לוּ לַכֶּ֖לֶב תַּשְׁלִכ֥וּן אֹתֽוֹ׃ ס 31
೩೧ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.

< שְׁמֹות 22 >