< יְחֶזְקֵאל 27 >
וַיְהִ֥י דְבַר־יְהוָ֖ה אֵלַ֥י לֵאמֹֽר׃ | 1 |
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
וְאַתָּ֣ה בֶן־אָדָ֔ם שָׂ֥א עַל־צֹ֖ר קִינָֽה׃ | 2 |
“ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;
וְאָמַרְתָּ֣ לְצ֗וֹר הַיֹּשֶׁ֙בֶת֙ עַל־מְבוֹאֹ֣ת יָ֔ם רֹכֶ֙לֶת֙ הָֽעַמִּ֔ים אֶל־אִיִּ֖ים רַבִּ֑ים כֹּ֤ה אָמַר֙ אֲדֹנָ֣י יְהוִ֔ה צ֕וֹר אַ֣תְּ אָמַ֔רְתְּ אֲנִ֖י כְּלִ֥ילַת יֹֽפִי׃ | 3 |
ಟೈರಿಗೆ ಹೇಳು, ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳ ಜನರ ನಡುವೆ ವ್ಯಾಪಾರವನ್ನು ನಡೆಸುವವಳೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, “‘ಟೈರ್ ನಗರಿಯೇ, “ನಾನು ಪೂರ್ಣ ಸೌಂದರ್ಯವತಿ,” ಎಂದು ನೀನು ಅಂದುಕೊಂಡಿದ್ದೀಯಲ್ಲಾ!
בְּלֵ֥ב יַמִּ֖ים גְּבוּלָ֑יִךְ בֹּנַ֕יִךְ כָּלְל֖וּ יָפְיֵֽךְ׃ | 4 |
ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ. ನಿನ್ನನ್ನು ಕಟ್ಟಿದವರು ನಿನ್ನನ್ನು ಸರ್ವಾಂಗ ಸುಂದರಿಯನ್ನಾಗಿಸಿದ್ದಾರೆ.
בְּרוֹשִׁ֤ים מִשְּׂנִיר֙ בָּ֣נוּ לָ֔ךְ אֵ֖ת כָּל־לֻֽחֹתָ֑יִם אֶ֤רֶז מִלְּבָנוֹן֙ לָקָ֔חוּ לַעֲשׂ֥וֹת תֹּ֖רֶן עָלָֽיִךְ׃ | 5 |
ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿದ್ದಾರೆ. ನಿನಗೆ ಸ್ತಂಭಗಳನ್ನು ಮಾಡುವುದಕ್ಕೆ ಲೆಬನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
אַלּוֹנִים֙ מִבָּ֔שָׁן עָשׂ֖וּ מִשּׁוֹטָ֑יִךְ קַרְשֵׁ֤ךְ עָֽשׂוּ־שֵׁן֙ בַּת־אֲשֻׁרִ֔ים מֵאִיֵּ֖י כִּתִּיִּֽים׃ | 6 |
ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.
שֵׁשׁ־בְּרִקְמָ֤ה מִמִּצְרַ֙יִם֙ הָיָ֣ה מִפְרָשֵׂ֔ךְ לִהְי֥וֹת לָ֖ךְ לְנֵ֑ס תְּכֵ֧לֶת וְאַרְגָּמָ֛ן מֵאִיֵּ֥י אֱלִישָׁ֖ה הָיָ֥ה מְכַסֵּֽךְ׃ | 7 |
ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.
יֹשְׁבֵ֤י צִידוֹן֙ וְאַרְוַ֔ד הָי֥וּ שָׁטִ֖ים לָ֑ךְ חֲכָמַ֤יִךְ צוֹר֙ הָ֣יוּ בָ֔ךְ הֵ֖מָּה חֹבְלָֽיִךְ׃ | 8 |
ಸೀದೋನಿನ ಮತ್ತು ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವವರಾಗಿದ್ದಾರೆ. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
זִקְנֵ֨י גְבַ֤ל וַחֲכָמֶ֙יהָ֙ הָ֣יוּ בָ֔ךְ מַחֲזִיקֵ֖י בִּדְקֵ֑ךְ כָּל־אֳנִיּ֨וֹת הַיָּ֤ם וּמַלָּֽחֵיהֶם֙ הָ֣יוּ בָ֔ךְ לַעֲרֹ֖ב מַעֲרָבֵֽךְ׃ | 9 |
ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು.
פָּרַ֨ס וְל֤וּד וּפוּט֙ הָי֣וּ בְחֵילֵ֔ךְ אַנְשֵׁ֖י מִלְחַמְתֵּ֑ךְ מָגֵ֤ן וְכוֹבַע֙ תִּלּוּ־בָ֔ךְ הֵ֖מָּה נָתְנ֥וּ הֲדָרֵֽךְ׃ | 10 |
“‘ಪಾರಸಿಯರೂ ಲೂದ್ಯರೂ ಹಾಗೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನೂ ಶಿರಸ್ತ್ರಾಣವನ್ನೂ ನಿನ್ನ ಗೋಡೆಯಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
בְּנֵ֧י אַרְוַ֣ד וְחֵילֵ֗ךְ עַל־חוֹמוֹתַ֙יִךְ֙ סָבִ֔יב וְגַ֨מָּדִ֔ים בְּמִגְדְּלוֹתַ֖יִךְ הָי֑וּ שִׁלְטֵיהֶ֞ם תִּלּ֤וּ עַל־חוֹמוֹתַ֙יִךְ֙ סָבִ֔יב הֵ֖מָּה כָּלְל֥וּ יָפְיֵֽךְ׃ | 11 |
ಅರ್ವಾದಿನವರು ಮತ್ತು ಹೆಲೆಕರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಇದ್ದರು. ಗಮ್ಮಾದ್ಯರು ನಿನ್ನ ಗೋಪುರಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.
תַּרְשִׁ֥ישׁ סֹחַרְתֵּ֖ךְ מֵרֹ֣ב כָּל־ה֑וֹן בְּכֶ֤סֶף בַּרְזֶל֙ בְּדִ֣יל וְעוֹפֶ֔רֶת נָתְנ֖וּ עִזְבוֹנָֽיִךְ׃ | 12 |
“‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.
יָוָ֤ן תֻּבַל֙ וָמֶ֔שֶׁךְ הֵ֖מָּה רֹֽכְלָ֑יִךְ בְּנֶ֤פֶשׁ אָדָם֙ וּכְלֵ֣י נְחֹ֔שֶׁת נָתְנ֖וּ מַעֲרָבֵֽךְ׃ | 13 |
“‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.
מִבֵּ֖ית תּוֹגַרְמָ֑ה סוּסִ֤ים וּפָֽרָשִׁים֙ וּפְרָדִ֔ים נָתְנ֖וּ עִזְבוֹנָֽיִךְ׃ | 14 |
“‘ತೋಗರ್ಮದ ಮನೆತನದವರು ಕುದುರೆಗಳಿಂದಲೂ ಕುದುರೆ ಸವಾರಿಗಳಿಂದಲೂ ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
בְּנֵ֤י דְדָן֙ רֹֽכְלַ֔יִךְ אִיִּ֥ים רַבִּ֖ים סְחֹרַ֣ת יָדֵ֑ךְ קַרְנ֥וֹת שֵׁן֙ וְהָבְנִ֔ים הֵשִׁ֖יבוּ אֶשְׁכָּרֵֽךְ׃ | 15 |
“‘ದೆದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
אֲרָ֥ם סֹחַרְתֵּ֖ךְ מֵרֹ֣ב מַעֲשָׂ֑יִךְ בְּ֠נֹפֶךְ אַרְגָּמָ֨ן וְרִקְמָ֤ה וּבוּץ֙ וְרָאמֹ֣ת וְכַדְכֹּ֔ד נָתְנ֖וּ בְּעִזְבוֹנָֽיִךְ׃ | 16 |
“‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
יְהוּדָה֙ וְאֶ֣רֶץ יִשְׂרָאֵ֔ל הֵ֖מָּה רֹכְלָ֑יִךְ בְּחִטֵּ֣י מִ֠נִּית וּפַנַּ֨ג וּדְבַ֤שׁ וָשֶׁ֙מֶן֙ וָצֹ֔רִי נָתְנ֖וּ מַעֲרָבֵֽךְ׃ | 17 |
“‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
דַּמֶּ֧שֶׂק סֹחַרְתֵּ֛ךְ בְּרֹ֥ב מַעֲשַׂ֖יִךְ מֵרֹ֣ב כָּל־ה֑וֹן בְּיֵ֥ין חֶלְבּ֖וֹן וְצֶ֥מֶר צָֽחַר׃ | 18 |
“‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.
וְדָ֤ן וְיָוָן֙ מְאוּזָּ֔ל בְּעִזְבוֹנַ֖יִךְ נָתָ֑נּוּ בַּרְזֶ֤ל עָשׁוֹת֙ קִדָּ֣ה וְקָנֶ֔ה בְּמַעֲרָבֵ֖ךְ הָיָֽה׃ | 19 |
ವೆದಾನ್ ಮತ್ತು ಯಾವಾನ್ ಊರುಗಳು ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ, ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಬಜಾರಿನಲ್ಲಿ ಇದ್ದವು.
דְּדָן֙ רֹֽכַלְתֵּ֔ךְ בְבִגְדֵי־חֹ֖פֶשׁ לְרִכְבָּֽה׃ | 20 |
“‘ದೆದಾನ್ ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
עֲרַב֙ וְכָל־נְשִׂיאֵ֣י קֵדָ֔ר הֵ֖מָּה סֹחֲרֵ֣י יָדֵ֑ךְ בְּכָרִ֤ים וְאֵילִים֙ וְעַתּוּדִ֔ים בָּ֖ם סֹחֲרָֽיִךְ׃ | 21 |
“‘ಅರೇಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ಗ್ರಾಹಕರಾಗಿದ್ದರು. ಕುರಿಮರಿಗಳಿಂದಲೂ ಹೋತಗಳಿಂದಲೂ ನಿನ್ನೊಡನೆ ವ್ಯಾಪಾರಮಾಡಿದರು.
רֹכְלֵ֤י שְׁבָא֙ וְרַעְמָ֔ה הֵ֖מָּה רֹכְלָ֑יִךְ בְּרֹ֨אשׁ כָּל־בֹּ֜שֶׂם וּבְכָל־אֶ֤בֶן יְקָרָה֙ וְזָהָ֔ב נָתְנ֖וּ עִזְבוֹנָֽיִךְ׃ | 22 |
“‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
חָרָ֤ן וְכַנֵּה֙ וָעֶ֔דֶן רֹכְלֵ֖י שְׁבָ֑א אַשּׁ֖וּר כִּלְמַ֥ד רֹכַלְתֵּֽךְ׃ | 23 |
“‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.
הֵ֤מָּה רֹכְלַ֙יִךְ֙ בְּמַכְלֻלִ֔ים בִּגְלוֹמֵי֙ תְּכֵ֣לֶת וְרִקְמָ֔ה וּבְגִנְזֵ֖י בְּרֹמִ֑ים בַּחֲבָלִ֧ים חֲבֻשִׁ֛ים וַאֲרֻזִ֖ים בְּמַרְכֻלְתֵּֽךְ׃ | 24 |
ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಎಂದರೆ ಸುಂದರವಾದ ಬಟ್ಟೆಗಳು, ನೀಲಿಬಟ್ಟೆಗಳು, ಕಸೂತಿಯ ಕೆಲಸ ಮತ್ತು ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.
אֳנִיּ֣וֹת תַּרְשִׁ֔ישׁ שָׁרוֹתַ֖יִךְ מַעֲרָבֵ֑ךְ וַתִּמָּלְאִ֧י וַֽתִּכְבְּדִ֛י מְאֹ֖ד בְּלֵ֥ב־יַמִּֽים׃ | 25 |
“‘ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಗೆ ಸರಕುಗಳನ್ನು ತರುತ್ತಿದ್ದವು. ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.
בְּמַ֤יִם רַבִּים֙ הֱבִיא֔וּךְ הַשָּׁטִ֖ים אֹתָ֑ךְ ר֚וּחַ הַקָּדִ֔ים שְׁבָרֵ֖ךְ בְּלֵ֥ב יַמִּֽים׃ | 26 |
ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
הוֹנֵךְ֙ וְעִזְבוֹנַ֔יִךְ מַעֲרָבֵ֕ךְ מַלָּחַ֖יִךְ וְחֹבְלָ֑יִךְ מַחֲזִיקֵ֣י בִדְקֵ֣ך וְֽעֹרְבֵ֣י מַ֠עֲרָבֵךְ וְכָל־אַנְשֵׁ֨י מִלְחַמְתֵּ֜ךְ אֲשֶׁר־בָּ֗ךְ וּבְכָל־קְהָלֵךְ֙ אֲשֶׁ֣ר בְּתוֹכֵ֔ךְ יִפְּלוּ֙ בְּלֵ֣ב יַמִּ֔ים בְּי֖וֹם מַפַּלְתֵּֽךְ׃ | 27 |
ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಿನ್ನ ನಾವಿಕರೂ ನಿನ್ನ ಅಂಬಿಗರೂ ನಿನ್ನ ಒಡಕುಗಳನ್ನು ಮುಚ್ಚುವವರೂ ನಿನ್ನ ವ್ಯಾಪಾರಿಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
לְק֖וֹל זַעֲקַ֣ת חֹבְלָ֑יִךְ יִרְעֲשׁ֖וּ מִגְרֹשֽׁוֹת׃ | 28 |
ನಿನ್ನ ನಾವಿಕರ ಕೂಗಾಟಕ್ಕೆ, ಸಮುದ್ರತೀರದ ಪ್ರದೇಶಗಳು ನಡುಗುವುವು.
וְֽיָרְד֞וּ מֵאָנִיּֽוֹתֵיהֶ֗ם כֹּ֚ל תֹּפְשֵׂ֣י מָשׁ֔וֹט מַלָּחִ֕ים כֹּ֖ל חֹבְלֵ֣י הַיָּ֑ם אֶל־הָאָ֖רֶץ יַעֲמֹֽדוּ׃ | 29 |
ಹುಟ್ಟುಹಾಕುವ ಅಂಬಿಗರೆಲ್ಲರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
וְהִשְׁמִ֤יעוּ עָלַ֙יִךְ֙ בְּקוֹלָ֔ם וְיִזְעֲק֖וּ מָרָ֑ה וְיַעֲל֤וּ עָֽפָר֙ עַל־רָ֣אשֵׁיהֶ֔ם בָּאֵ֖פֶר יִתְפַּלָּֽשׁוּ׃ | 30 |
ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ,
וְהִקְרִ֤יחוּ אֵלַ֙יִךְ֙ קָרְחָ֔ה וְחָגְר֖וּ שַׂקִּ֑ים וּבָכ֥וּ אֵלַ֛יִךְ בְּמַר־נֶ֖פֶשׁ מִסְפֵּ֥ד מָֽר׃ | 31 |
ನಿನಗಾಗಿ ತಲೆ ಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
וְנָשְׂא֨וּ אֵלַ֤יִךְ בְּנִיהֶם֙ קִינָ֔ה וְקוֹנְנ֖וּ עָלָ֑יִךְ מִ֣י כְצ֔וֹר כְּדֻמָ֖ה בְּת֥וֹךְ הַיָּֽם׃ | 32 |
ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕಗೀತೆಯನ್ನೆತ್ತಿ ಹೀಗೆ ಪ್ರಲಾಪಿಸುವರು; “ಸಮುದ್ರದ ನಡುವೆ ಹಾಳಾಗಿರುವ ಟೈರ್‌ನಂಥ ಪಟ್ಟಣ ಯಾವುದು?”
בְּצֵ֤את עִזְבוֹנַ֙יִךְ֙ מִיַּמִּ֔ים הִשְׂבַּ֖עַתְּ עַמִּ֣ים רַבִּ֑ים בְּרֹ֤ב הוֹנַ֙יִךְ֙ וּמַ֣עֲרָבַ֔יִךְ הֶעֱשַׁ֖רְתְּ מַלְכֵי־אָֽרֶץ׃ | 33 |
ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ. ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ.
עֵ֛ת נִשְׁבֶּ֥רֶת מִיַּמִּ֖ים בְּמַֽעֲמַקֵּי־מָ֑יִם מַעֲרָבֵ֥ךְ וְכָל־קְהָלֵ֖ךְ בְּתוֹכֵ֥ךְ נָפָֽלוּ׃ | 34 |
ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಆಗಾಧಜಲದಲ್ಲಿ ಮುಳುಗಿ ಹೋದರು.
כֹּ֚ל יֹשְׁבֵ֣י הָאִיִּ֔ים שָׁמְמ֖וּ עָלָ֑יִךְ וּמַלְכֵיהֶם֙ שָׂ֣עֲרוּ שַׂ֔עַר רָעֲמ֖וּ פָּנִֽים׃ | 35 |
ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಭಯಭೀತರಾಗಿದ್ದಾರೆ. ಅವರ ಅರಸರು ಬಹಳವಾಗಿ ಭಯಪಟ್ಟಿದ್ದಾರೆ. ರಾಜರು ನಡುಗಿ ಭೀತಿಗೊಂಡರು.
סֹֽחֲרִים֙ בָּ֣עַמִּ֔ים שָׁרְק֖וּ עָלָ֑יִךְ בַּלָּה֣וֹת הָיִ֔ית וְאֵינֵ֖ךְ עַד־עוֹלָֽם׃ ס | 36 |
ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.’”