< יְחֶזְקֵאל 28 >
וַיְהִ֥י דְבַר־יְהוָ֖ה אֵלַ֥י לֵאמֹֽר׃ | 1 |
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
בֶּן־אָדָ֡ם אֱמֹר֩ לִנְגִ֨יד צֹ֜ר כֹּֽה־אָמַ֣ר ׀ אֲדֹנָ֣י יְהֹוִ֗ה יַ֣עַן גָּבַ֤הּ לִבְּךָ֙ וַתֹּ֙אמֶר֙ אֵ֣ל אָ֔נִי מוֹשַׁ֧ב אֱלֹהִ֛ים יָשַׁ֖בְתִּי בְּלֵ֣ב יַמִּ֑ים וְאַתָּ֤ה אָדָם֙ וְֽלֹא־אֵ֔ל וַתִּתֵּ֥ן לִבְּךָ֖ כְּלֵ֥ב אֱלֹהִֽים׃ | 2 |
“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.
הִנֵּ֥ה חָכָ֛ם אַתָּ֖ה מִדָּֽנִיֵּ֑אל כָּל־סָת֖וּם לֹ֥א עֲמָמֽוּךָ׃ | 3 |
ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.
בְּחָכְמָֽתְךָ֙ וּבִתְבוּנָ֣תְךָ֔ עָשִׂ֥יתָ לְּךָ֖ חָ֑יִל וַתַּ֛עַשׂ זָהָ֥ב וָכֶ֖סֶף בְּאוֹצְרוֹתֶֽיךָ׃ | 4 |
ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.
בְּרֹ֧ב חָכְמָתְךָ֛ בִּרְכֻלָּתְךָ֖ הִרְבִּ֣יתָ חֵילֶ֑ךָ וַיִּגְבַּ֥הּ לְבָבְךָ֖ בְּחֵילֶֽךָ׃ ס | 5 |
ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.
לָכֵ֕ן כֹּ֥ה אָמַ֖ר אֲדֹנָ֣י יְהוִ֑ה יַ֛עַן תִּתְּךָ֥ אֶת־לְבָבְךָ֖ כְּלֵ֥ב אֱלֹהִֽים׃ | 6 |
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನೀನು ದೇವರಂತೆ ಬುದ್ಧಿವಂತನು ಎಂದು ಭಾವಿಸಿಕೊಂಡಿರುವೆ;
לָכֵ֗ן הִנְנִ֨י מֵבִ֤יא עָלֶ֙יךָ֙ זָרִ֔ים עָרִיצֵ֖י גּוֹיִ֑ם וְהֵרִ֤יקוּ חַרְבוֹתָם֙ עַל־יְפִ֣י חָכְמָתֶ֔ךָ וְחִלְּל֖וּ יִפְעָתֶֽךָ׃ | 7 |
ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.
לַשַּׁ֖חַת יֽוֹרִד֑וּךָ וָמַ֛תָּה מְמוֹתֵ֥י חָלָ֖ל בְּלֵ֥ב יַמִּֽים׃ | 8 |
ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. ಸಮುದ್ರಗಳ ಮಧ್ಯದಲ್ಲಿ ಭಯಂಕರವಾದ ಮರಣದ ಹಾಗೆ ನೀನು ಸಾಯುವೆ.
הֶאָמֹ֤ר תֹּאמַר֙ אֱלֹהִ֣ים אָ֔נִי לִפְנֵ֖י הֹֽרְגֶ֑ךָ וְאַתָּ֥ה אָדָ֛ם וְלֹא־אֵ֖ל בְּיַ֥ד מְחַלְלֶֽיךָ׃ | 9 |
ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;
מוֹתֵ֧י עֲרֵלִ֛ים תָּמ֖וּת בְּיַד־זָרִ֑ים כִּ֚י אֲנִ֣י דִבַּ֔רְתִּי נְאֻ֖ם אֲדֹנָ֥י יְהוִֽה׃ ס | 10 |
ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’”
וַיְהִ֥י דְבַר־יְהוָ֖ה אֵלַ֥י לֵאמֹֽר׃ | 11 |
ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು,
בֶּן־אָדָ֕ם שָׂ֥א קִינָ֖ה עַל־מֶ֣לֶךְ צ֑וֹר וְאָמַ֣רְתָּ לּ֗וֹ כֹּ֤ה אָמַר֙ אֲדֹנָ֣י יְהוִ֔ה אַתָּה֙ חוֹתֵ֣ם תָּכְנִ֔ית מָלֵ֥א חָכְמָ֖ה וּכְלִ֥יל יֹֽפִי׃ | 12 |
“ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
בְּעֵ֨דֶן גַּן־אֱלֹהִ֜ים הָיִ֗יתָ כָּל־אֶ֨בֶן יְקָרָ֤ה מְסֻכָתֶ֙ךָ֙ אֹ֣דֶם פִּטְדָ֞ה וְיָהֲלֹ֗ם תַּרְשִׁ֥ישׁ שֹׁ֙הַם֙ וְיָ֣שְׁפֵ֔ה סַפִּ֣יר נֹ֔פֶךְ וּבָרְקַ֖ת וְזָהָ֑ב מְלֶ֨אכֶת תֻּפֶּ֤יךָ וּנְקָבֶ֙יךָ֙ בָּ֔ךְ בְּי֥וֹם הִבָּרַאֲךָ֖ כּוֹנָֽנוּ׃ | 13 |
ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
אַ֨תְּ־כְּר֔וּב מִמְשַׁ֖ח הַסּוֹכֵ֑ךְ וּנְתַתִּ֗יךָ בְּהַ֨ר קֹ֤דֶשׁ אֱלֹהִים֙ הָיִ֔יתָ בְּת֥וֹךְ אַבְנֵי־אֵ֖שׁ הִתְהַלָּֽכְתָּ׃ | 14 |
ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.
תָּמִ֤ים אַתָּה֙ בִּדְרָכֶ֔יךָ מִיּ֖וֹם הִבָּֽרְאָ֑ךְ עַד־נִמְצָ֥א עַוְלָ֖תָה בָּֽךְ׃ | 15 |
ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
בְּרֹ֣ב רְכֻלָּתְךָ֗ מָל֧וּ תוֹכְךָ֛ חָמָ֖ס וַֽתֶּחֱטָ֑א וָאֶחַלֶּלְךָ֩ מֵהַ֨ר אֱלֹהִ֤ים וָֽאַבֶּדְךָ֙ כְּר֣וּב הַסֹּכֵ֔ךְ מִתּ֖וֹךְ אַבְנֵי־אֵֽשׁ׃ | 16 |
ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
גָּבַ֤הּ לִבְּךָ֙ בְּיָפְיֶ֔ךָ שִׁחַ֥תָּ חָכְמָתְךָ֖ עַל־יִפְעָתֶ֑ךָ עַל־אֶ֣רֶץ הִשְׁלַכְתִּ֗יךָ לִפְנֵ֧י מְלָכִ֛ים נְתַתִּ֖יךָ לְרַ֥אֲוָה בָֽךְ׃ | 17 |
ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.
מֵרֹ֣ב עֲוֹנֶ֗יךָ בְּעֶ֙וֶל֙ רְכֻלָּ֣תְךָ֔ חִלַּ֖לְתָּ מִקְדָּשֶׁ֑יךָ וָֽאוֹצִא־אֵ֤שׁ מִתּֽוֹכְךָ֙ הִ֣יא אֲכָלַ֔תְךָ וָאֶתֶּנְךָ֤ לְאֵ֙פֶר֙ עַל־הָאָ֔רֶץ לְעֵינֵ֖י כָּל־רֹאֶֽיךָ׃ | 18 |
ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿಬಿಟ್ಟಿತು. ನೋಡುವವರೆಲ್ಲರ ಮುಂದೆ ನಿನ್ನನ್ನು ಬೂದಿಮಾಡುವೆನು.
כָּל־יוֹדְעֶ֙יךָ֙ בָּֽעַמִּ֔ים שָׁמְמ֖וּ עָלֶ֑יךָ בַּלָּה֣וֹת הָיִ֔יתָ וְאֵינְךָ֖ עַד־עוֹלָֽם׃ פ | 19 |
ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ಭಯಗೊಳ್ಳುವರು. ನೀನು ಸಂಪೂರ್ಣ ಭೀತಿಗೊಳಗಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’”
וַיְהִ֥י דְבַר־יְהוָ֖ה אֵלַ֥י לֵאמֹֽר׃ | 20 |
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
בֶּן־אָדָ֕ם שִׂ֥ים פָּנֶ֖יךָ אֶל־צִיד֑וֹן וְהִנָּבֵ֖א עָלֶֽיהָ׃ | 21 |
“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
וְאָמַרְתָּ֗ כֹּ֤ה אָמַר֙ אֲדֹנָ֣י יְהוִ֔ה הִנְנִ֤י עָלַ֙יִךְ֙ צִיד֔וֹן וְנִכְבַּדְתִּ֖י בְּתוֹכֵ֑ךְ וְֽיָדְע֞וּ כִּֽי־אֲנִ֣י יְהוָ֗ה בַּעֲשׂ֥וֹתִי בָ֛הּ שְׁפָטִ֖ים וְנִקְדַּ֥שְׁתִּי בָֽהּ׃ | 22 |
ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.
וְשִׁלַּחְתִּי־בָ֞הּ דֶּ֤בֶר וָדָם֙ בְּח֣וּצוֹתֶ֔יהָ וְנִפְלַ֤ל חָלָל֙ בְּתוֹכָ֔הּ בְּחֶ֥רֶב עָלֶ֖יהָ מִסָּבִ֑יב וְיָדְע֖וּ כִּֽי־אֲנִ֥י יְהוָֽה׃ | 23 |
ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.
וְלֹֽא־יִהְיֶ֨ה ע֜וֹד לְבֵ֣ית יִשְׂרָאֵ֗ל סִלּ֤וֹן מַמְאִיר֙ וְק֣וֹץ מַכְאִ֔ב מִכֹּל֙ סְבִ֣יבֹתָ֔ם הַשָּׁאטִ֖ים אוֹתָ֑ם וְיָ֣דְע֔וּ כִּ֥י אֲנִ֖י אֲדֹנָ֥י יְהוִֽה׃ ס | 24 |
“‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.
כֹּֽה־אָמַר֮ אֲדֹנָ֣י יְהוִה֒ בְּקַבְּצִ֣י ׀ אֶת־בֵּ֣ית יִשְׂרָאֵ֗ל מִן־הָֽעַמִּים֙ אֲשֶׁ֣ר נָפֹ֣צוּ בָ֔ם וְנִקְדַּ֥שְׁתִּי בָ֖ם לְעֵינֵ֣י הַגּוֹיִ֑ם וְיָֽשְׁבוּ֙ עַל־אַדְמָתָ֔ם אֲשֶׁ֥ר נָתַ֖תִּי לְעַבְדִּ֥י לְיַעֲקֹֽב׃ | 25 |
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.
וְיָשְׁב֣וּ עָלֶיהָ֮ לָבֶטַח֒ וּבָנ֤וּ בָתִּים֙ וְנָטְע֣וּ כְרָמִ֔ים וְיָשְׁב֖וּ לָבֶ֑טַח בַּעֲשׂוֹתִ֣י שְׁפָטִ֗ים בְּכֹ֨ל הַשָּׁאטִ֤ים אֹתָם֙ מִסְּבִ֣יבוֹתָ֔ם וְיָ֣דְע֔וּ כִּ֛י אֲנִ֥י יְהוָ֖ה אֱלֹהֵיהֶֽם׃ ס | 26 |
ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’”