< יְחֶזְקֵאל 32 >
וַֽיְהִי֙ בִּשְׁתֵּ֣י עֶשְׂרֵ֣ה שָׁנָ֔ה בִּשְׁנֵי־עָשָׂ֥ר חֹ֖דֶשׁ בְּאֶחָ֣ד לַחֹ֑דֶשׁ הָיָ֥ה דְבַר־יְהוָ֖ה אֵלַ֥י לֵאמֹֽר׃ | 1 |
ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
בֶּן־אָדָ֗ם שָׂ֤א קִינָה֙ עַל־פַּרְעֹ֣ה מֶֽלֶךְ־מִצְרַ֔יִם וְאָמַרְתָּ֣ אֵלָ֔יו כְּפִ֥יר גּוֹיִ֖ם נִדְמֵ֑יתָ וְאַתָּה֙ כַּתַּנִּ֣ים בַּיַּמִּ֔ים וַתָּ֣גַח בְּנַהֲרוֹתֶ֗יךָ וַתִּדְלַח־מַ֙יִם֙ בְּרַגְלֶ֔יךָ וַתִּרְפֹּ֖ס נַהֲרוֹתָֽם׃ | 2 |
“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.
כֹּ֤ה אָמַר֙ אֲדֹנָ֣י יְהוִ֔ה וּפָרַשְׂתִּ֤י עָלֶ֙יךָ֙ אֶת־רִשְׁתִּ֔י בִּקְהַ֖ל עַמִּ֣ים רַבִּ֑ים וְהֶעֱל֖וּךָ בְּחֶרְמִֽי׃ | 3 |
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಆದ್ದರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು. ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
וּנְטַשְׁתִּ֣יךָ בָאָ֔רֶץ עַל־פְּנֵ֥י הַשָּׂדֶ֖ה אֲטִילֶ֑ךָ וְהִשְׁכַּנְתִּ֤י עָלֶ֙יךָ֙ כָּל־ע֣וֹף הַשָּׁמַ֔יִם וְהִשְׂבַּעְתִּ֥י מִמְּךָ֖ חַיַּ֥ת כָּל־הָאָֽרֶץ׃ | 4 |
ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು. ಬಯಲಿನ ಮೇಲೆ ಬಿಸಾಡುವೆನು. ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
וְנָתַתִּ֥י אֶת־בְּשָׂרְךָ֖ עַל־הֶֽהָרִ֑ים וּמִלֵּאתִ֥י הַגֵּאָי֖וֹת רָמוּתֶֽךָ׃ | 5 |
ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ಆ ನಿನ್ನ ರಾಶಿಯಿಂದ ಕಣಿವೆಗಳನ್ನು ತುಂಬಿಸುವೆನು.
וְהִשְׁקֵיתִ֨י אֶ֧רֶץ צָפָתְךָ֛ מִדָּמְךָ֖ אֶל־הֶֽהָרִ֑ים וַאֲפִקִ֖ים יִמָּלְא֥וּן מִמֶּֽךָּ׃ | 6 |
ನಾನು ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು. ಹಳ್ಳಗಳು ನಿನ್ನ ಮಾಂಸದಿಂದ ತುಂಬುವುವು.
וְכִסֵּיתִ֤י בְכַבּֽוֹתְךָ֙ שָׁמַ֔יִם וְהִקְדַּרְתִּ֖י אֶת־כֹּֽכְבֵיהֶ֑ם שֶׁ֚מֶשׁ בֶּעָנָ֣ן אֲכַסֶּ֔נּוּ וְיָרֵ֖חַ לֹא־יָאִ֥יר אוֹרֽוֹ׃ | 7 |
ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
כָּל־מְא֤וֹרֵי אוֹר֙ בַּשָּׁמַ֔יִם אַקְדִּירֵ֖ם עָלֶ֑יךָ וְנָתַ֤תִּי חֹ֙שֶׁךְ֙ עַֽל־אַרְצְךָ֔ נְאֻ֖ם אֲדֹנָ֥י יְהוִֽה׃ | 8 |
ಆಕಾಶದಲ್ಲಿ ಪ್ರಕಾಶಿಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು. ನಾನು ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
וְהִ֨כְעַסְתִּ֔י לֵ֖ב עַמִּ֣ים רַבִּ֑ים בַּהֲבִיאִ֤י שִׁבְרְךָ֙ בַּגּוֹיִ֔ם עַל־אֲרָצ֖וֹת אֲשֶׁ֥ר לֹֽא־יְדַעְתָּֽם׃ | 9 |
ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ವಿನಾಶದ ಸುದ್ದಿಯನ್ನು ಹರಡಿ ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
וַהֲשִׁמּוֹתִ֨י עָלֶ֜יךָ עַמִּ֣ים רַבִּ֗ים וּמַלְכֵיהֶם֙ יִשְׂעֲר֤וּ עָלֶ֙יךָ֙ שַׂ֔עַר בְּעוֹפְפִ֥י חַרְבִּ֖י עַל־פְּנֵיהֶ֑ם וְחָרְד֤וּ לִרְגָעִים֙ אִ֣ישׁ לְנַפְשׁ֔וֹ בְּי֖וֹם מַפַּלְתֶּֽךָ׃ ס | 10 |
ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
כִּ֛י כֹּ֥ה אָמַ֖ר אֲדֹנָ֣י יְהוִ֑ה חֶ֥רֶב מֶֽלֶךְ־בָּבֶ֖ל תְּבוֹאֶֽךָ׃ | 11 |
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಬಾಬಿಲೋನಿನ ಅರಸನ ಖಡ್ಗವು ನಿನ್ನ ವಿರುದ್ಧ ಬರುವುದು.
בְּחַרְב֤וֹת גִּבּוֹרִים֙ אַפִּ֣יל הֲמוֹנֶ֔ךָ עָרִיצֵ֥י גוֹיִ֖ם כֻּלָּ֑ם וְשָֽׁדְדוּ֙ אֶת־גְּא֣וֹן מִצְרַ֔יִם וְנִשְׁמַ֖ד כָּל־הֲמוֹנָֽהּ׃ | 12 |
ಪರಾಕ್ರಮಶಾಲಿಗಳ ಖಡ್ಗಗಳಿಂದ ಜನಾಂಗಗಳಲ್ಲಿ ಭಯಂಕರರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು. ಅವರು ಈಜಿಪ್ಟಿನ ಮಹತ್ತನ್ನು ಕೆಡಿಸುವರು. ಅದರ ಜನಸಮೂಹವೆಲ್ಲಾ ಹಾಳಾಗುವುದು.
וְהַֽאֲבַדְתִּי֙ אֶת־כָּל־בְּהֶמְתָּ֔הּ מֵעַ֖ל מַ֣יִם רַבִּ֑ים וְלֹ֨א תִדְלָחֵ֤ם רֶֽגֶל־אָדָם֙ ע֔וֹד וּפַרְס֥וֹת בְּהֵמָ֖ה לֹ֥א תִדְלָחֵֽם׃ | 13 |
ನಾನು ಆ ಬಹು ಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು. ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಪಾದವಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವುದಿಲ್ಲ.
אָ֚ז אַשְׁקִ֣יעַ מֵֽימֵיהֶ֔ם וְנַהֲרוֹתָ֖ם כַּשֶּׁ֣מֶן אוֹלִ֑יךְ נְאֻ֖ם אֲדֹנָ֥י יְהוִֽה׃ | 14 |
ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು. ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
בְּתִתִּי֩ אֶת־אֶ֨רֶץ מִצְרַ֜יִם שְׁמָמָ֣ה וּנְשַׁמָּ֗ה אֶ֚רֶץ מִמְּלֹאָ֔הּ בְּהַכּוֹתִ֖י אֶת־כָּל־י֣וֹשְׁבֵי בָ֑הּ וְיָדְע֖וּ כִּֽי־אֲנִ֥י יְהוָֽה׃ | 15 |
ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’
קִינָ֥ה הִיא֙ וְק֣וֹנְנ֔וּהָ בְּנ֥וֹת הַגּוֹיִ֖ם תְּקוֹנֵ֣נָּה אוֹתָ֑הּ עַל־מִצְרַ֤יִם וְעַל־כָּל־הֲמוֹנָהּ֙ תְּקוֹנֵ֣נָּה אוֹתָ֔הּ נְאֻ֖ם אֲדֹנָ֥י יְהוִֽה׃ פ | 16 |
“ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
וַֽיְהִי֙ בִּשְׁתֵּ֣י עֶשְׂרֵ֣ה שָׁנָ֔ה בַּחֲמִשָּׁ֥ה עָשָׂ֖ר לַחֹ֑דֶשׁ הָיָ֥ה דְבַר־יְהוָ֖ה אֵלַ֥י לֵאמֹֽר׃ | 17 |
ಇದಲ್ಲದೆ ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ:
בֶּן־אָדָ֕ם נְהֵ֛ה עַל־הֲמ֥וֹן מִצְרַ֖יִם וְהוֹרִדֵ֑הוּ א֠וֹתָהּ וּבְנ֨וֹת גּוֹיִ֧ם אַדִּרִ֛ם אֶל־אֶ֥רֶץ תַּחְתִּיּ֖וֹת אֶת־י֥וֹרְדֵי בֽוֹר׃ | 18 |
“ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.
מִמִּ֖י נָעָ֑מְתָּ רְדָ֥ה וְהָשְׁכְּבָ֖ה אֶת־עֲרֵלִֽים׃ | 19 |
‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’
בְּת֥וֹךְ חַלְלֵי־חֶ֖רֶב יִפֹּ֑לוּ חֶ֣רֶב נִתָּ֔נָה מָשְׁכ֥וּ אוֹתָ֖הּ וְכָל־הֲמוֹנֶֽיהָ׃ | 20 |
ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಖಡ್ಗವನ್ನು ಎಳೆಯಲಾಗುತ್ತದೆ. ಅವಳನ್ನು ತನ್ನ ಎಲ್ಲಾ ಗುಂಪುಗಳೊಂದಿಗೆ ಎಳೆದುಕೊಂಡು ಹೋಗಲಿ.
יְדַבְּרוּ־ל֞וֹ אֵלֵ֧י גִבּוֹרִ֛ים מִתּ֥וֹךְ שְׁא֖וֹל אֶת־עֹֽזְרָ֑יו יָֽרְד֛וּ שָׁכְב֥וּ הָעֲרֵלִ֖ים חַלְלֵי־חָֽרֶב׃ (Sheol ) | 21 |
ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’ (Sheol )
שָׁ֤ם אַשּׁוּר֙ וְכָל־קְהָלָ֔הּ סְבִֽיבוֹתָ֖יו קִבְרֹתָ֑יו כֻּלָּ֣ם חֲלָלִ֔ים הַנֹּפְלִ֖ים בֶּחָֽרֶב׃ | 22 |
“ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು;
אֲשֶׁ֨ר נִתְּנ֤וּ קִבְרֹתֶ֙יהָ֙ בְּיַרְכְּתֵי־ב֔וֹר וַיְהִ֣י קְהָלָ֔הּ סְבִיב֖וֹת קְבֻרָתָ֑הּ כֻּלָּ֤ם חֲלָלִים֙ נֹפְלִ֣ים בַּחֶ֔רֶב אֲשֶׁר־נָתְנ֥וּ חִתִּ֖ית בְּאֶ֥רֶץ חַיִּֽים׃ | 23 |
ಅವರ ಸಮಾಧಿಗಳು ಕುಳಿಯ ಕಡೆಗಳಲ್ಲಿ ಇಡಲಾಗಿವೆ. ಅವಳ ಸೇನೆಯು ಸಮಾಧಿಯ ಸುತ್ತಲೂ ಇವೆ. ಜೀವಿತರ ದೇಶದಲ್ಲಿ ಭಯವನ್ನು ಹರಡಿದವರೆಲ್ಲರೂ ಖಡ್ಗದಿಂದ ಹತರಾದರು.
שָׁ֤ם עֵילָם֙ וְכָל־הֲמוֹנָ֔הּ סְבִיב֖וֹת קְבֻרָתָ֑הּ כֻּלָּ֣ם חֲלָלִים֩ הַנֹּפְלִ֨ים בַּחֶ֜רֶב אֲֽשֶׁר־יָרְד֥וּ עֲרֵלִ֣ים ׀ אֶל־אֶ֣רֶץ תַּחְתִּיּ֗וֹת אֲשֶׁ֨ר נָתְנ֤וּ חִתִּיתָם֙ בְּאֶ֣רֶץ חַיִּ֔ים וַיִּשְׂא֥וּ כְלִמָּתָ֖ם אֶת־י֥וֹרְדֵי בֽוֹר׃ | 24 |
“ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
בְּת֣וֹךְ חֲ֠לָלִים נָתְנ֨וּ מִשְׁכָּ֥ב לָהּ֙ בְּכָל־הֲמוֹנָ֔הּ סְבִֽיבוֹתָ֖יו קִבְרֹתֶ֑הָ כֻּלָּ֣ם עֲרֵלִ֣ים חַלְלֵי־חֶ֡רֶב כִּֽי־נִתַּ֨ן חִתִּיתָ֜ם בְּאֶ֣רֶץ חַיִּ֗ים וַיִּשְׂא֤וּ כְלִמָּתָם֙ אֶת־י֣וֹרְדֵי ב֔וֹר בְּת֥וֹךְ חֲלָלִ֖ים נִתָּֽן׃ | 25 |
ಅವರು ಅವರ ಎಲ್ಲಾ ಸಮೂಹಕ್ಕೂ ಹತರಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ. ಅದರ ಸುತ್ತಲೂ ಅವರ ಸಮಾಧಿಗಳಿವೆ. ಅವರೆಲ್ಲರೂ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿದ್ದಾರೆ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಕುಳಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡು ಹತರಾದವರ ಮಧ್ಯದಲ್ಲಿ ಇಡಲಾಗಿದೆ.
שָׁ֣ם מֶ֤שֶׁךְ תֻּבַל֙ וְכָל־הֲמוֹנָ֔הּ סְבִֽיבוֹתָ֖יו קִבְרוֹתֶ֑יהָ כֻּלָּ֤ם עֲרֵלִים֙ מְחֻ֣לְלֵי חֶ֔רֶב כִּֽי־נָתְנ֥וּ חִתִּיתָ֖ם בְּאֶ֥רֶץ חַיִּֽים׃ | 26 |
“ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು.
וְלֹ֤א יִשְׁכְּבוּ֙ אֶת־גִּבּוֹרִ֔ים נֹפְלִ֖ים מֵעֲרֵלִ֑ים אֲשֶׁ֣ר יָרְדֽוּ־שְׁא֣וֹל בִּכְלֵֽי־מִלְחַמְתָּם֩ וַיִּתְּנ֨וּ אֶת־חַרְבוֹתָ֜ם תַּ֣חַת רָאשֵׁיהֶ֗ם וַתְּהִ֤י עֲוֹֽנֹתָם֙ עַל־עַצְמוֹתָ֔ם כִּֽי־חִתִּ֥ית גִּבּוֹרִ֖ים בְּאֶ֥רֶץ חַיִּֽים׃ (Sheol ) | 27 |
ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು. (Sheol )
וְאַתָּ֗ה בְּת֧וֹךְ עֲרֵלִ֛ים תִּשָּׁבַ֥ר וְתִשְׁכַּ֖ב אֶת־חַלְלֵי־חָֽרֶב׃ | 28 |
“ಫರೋಹನೇ, ನೀನೂ ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲಾಗುವೆ. ಖಡ್ಗದಿಂದ ಹತರಾದವರ ಸಂಗಡ ಮಲಗುವೆ.
שָׁ֣מָּה אֱד֗וֹם מְלָכֶ֙יהָ֙ וְכָל־נְשִׂיאֶ֔יהָ אֲשֶׁר־נִתְּנ֥וּ בִגְבוּרָתָ֖ם אֶת־חַלְלֵי־חָ֑רֶב הֵ֛מָּה אֶת־עֲרֵלִ֥ים יִשְׁכָּ֖בוּ וְאֶת־יֹ֥רְדֵי בֽוֹר׃ | 29 |
“ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಅದರ ಪ್ರಧಾನರೂ ಶೂರರಾಗಿದ್ದರೂ ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಅವರು ಸುನ್ನತಿಯಿಲ್ಲದವರ ಸಂಗಡ ಮತ್ತು ಕುಣಿಗೆ ಇಳಿಯುವವರ ಸಂಗಡ ಹತರಾದವರು.
שָׁ֣מָּה נְסִיכֵ֥י צָפ֛וֹן כֻּלָּ֖ם וְכָל־צִֽדֹנִ֑י אֲשֶׁר־יָרְד֣וּ אֶת־חֲלָלִ֗ים בְּחִתִּיתָ֤ם מִגְבֽוּרָתָם֙ בּוֹשִׁ֔ים וַיִּשְׁכְּב֤וּ עֲרֵלִים֙ אֶת־חַלְלֵי־חֶ֔רֶב וַיִּשְׂא֥וּ כְלִמָּתָ֖ם אֶת־י֥וֹרְדֵי בֽוֹר׃ | 30 |
“ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
אוֹתָם֙ יִרְאֶ֣ה פַרְעֹ֔ה וְנִחַ֖ם עַל־כָּל־הֲמוֹנ֑וֹ חַלְלֵי־חֶ֙רֶב֙ פַּרְעֹ֣ה וְכָל־חֵיל֔וֹ נְאֻ֖ם אֲדֹנָ֥י יְהוִֽה׃ | 31 |
“ಫರೋಹನು ಹಾಗೂ ಆತನ ಸೈನ್ಯವು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಜನಸಮೂಹದ ವಿಷಯವಾಗಿ ಸಮಾಧಾನ ಹೊಂದುವನು, ಫರೋಹನು ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
כִּֽי־נָתַ֥תִּי אֶת־חִתִּיתִ֖י בְּאֶ֣רֶץ חַיִּ֑ים וְהֻשְׁכַּב֩ בְּת֨וֹךְ עֲרֵלִ֜ים אֶת־חַלְלֵי־חֶ֗רֶב פַּרְעֹה֙ וְכָל־הֲמונ֔וֹ נְאֻ֖ם אֲדֹנָ֥י יְהוִֽה׃ פ | 32 |
ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”