< יְחֶזְקֵאל 43 >
וַיּוֹלִכֵ֖נִי אֶל־הַשָּׁ֑עַר שַׁ֕עַר אֲשֶׁ֥ר פֹּנֶ֖ה דֶּ֥רֶךְ הַקָּדִֽים׃ | 1 |
೧ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು.
וְהִנֵּ֗ה כְּבוֹד֙ אֱלֹהֵ֣י יִשְׂרָאֵ֔ל בָּ֖א מִדֶּ֣רֶךְ הַקָּדִ֑ים וְקוֹל֗וֹ כְּקוֹל֙ מַ֣יִם רַבִּ֔ים וְהָאָ֖רֶץ הֵאִ֥ירָה מִכְּבֹדֽוֹ׃ | 2 |
೨ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.
וּכְמַרְאֵ֨ה הַמַּרְאֶ֜ה אֲשֶׁ֣ר רָאִ֗יתִי כַּמַּרְאֶ֤ה אֲשֶׁר־רָאִ֙יתִי֙ בְּבֹאִי֙ לְשַׁחֵ֣ת אֶת־הָעִ֔יר וּמַרְא֕וֹת כַּמַּרְאֶ֕ה אֲשֶׁ֥ר רָאִ֖יתִי אֶל־נְהַר־כְּבָ֑ר וָאֶפֹּ֖ל אֶל־פָּנָֽי׃ | 3 |
೩ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.
וּכְב֥וֹד יְהוָ֖ה בָּ֣א אֶל־הַבָּ֑יִת דֶּ֣רֶךְ שַׁ֔עַר אֲשֶׁ֥ר פָּנָ֖יו דֶּ֥רֶךְ הַקָּדִֽים׃ | 4 |
೪ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.
וַתִּשָּׂאֵ֣נִי ר֔וּחַ וַתְּבִיאֵ֕נִי אֶל־הֶֽחָצֵ֖ר הַפְּנִימִ֑י וְהִנֵּ֛ה מָלֵ֥א כְבוֹד־יְהוָ֖ה הַבָּֽיִת׃ | 5 |
೫ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.
וָאֶשְׁמַ֛ע מִדַּבֵּ֥ר אֵלַ֖י מֵהַבָּ֑יִת וְאִ֕ישׁ הָיָ֥ה עֹמֵ֖ד אֶצְלִֽי׃ | 6 |
೬ಆಗ ಆಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.
וַיֹּ֣אמֶר אֵלַ֗י בֶּן־אָדָם֙ אֶת־מְק֣וֹם כִּסְאִ֗י וְאֶת־מְקוֹם֙ כַּפּ֣וֹת רַגְלַ֔י אֲשֶׁ֧ר אֶשְׁכָּן־שָׁ֛ם בְּת֥וֹךְ בְּנֵֽי־יִשְׂרָאֵ֖ל לְעוֹלָ֑ם וְלֹ֣א יְטַמְּא֣וּ ע֣וֹד בֵּֽית־יִ֠שְׂרָאֵל שֵׁ֣ם קָדְשִׁ֞י הֵ֤מָּה וּמַלְכֵיהֶם֙ בִּזְנוּתָ֔ם וּבְפִגְרֵ֥י מַלְכֵיהֶ֖ם בָּמוֹתָֽם׃ | 7 |
೭ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.
בְּתִתָּ֨ם סִפָּ֜ם אֶת־סִפִּ֗י וּמְזֽוּזָתָם֙ אֵ֣צֶל מְזוּזָתִ֔י וְהַקִּ֖יר בֵּינִ֣י וּבֵֽינֵיהֶ֑ם וְטִמְּא֣וּ ׀ אֶת־שֵׁ֣ם קָדְשִׁ֗י בְּתֽוֹעֲבוֹתָם֙ אֲשֶׁ֣ר עָשׂ֔וּ וָאֲכַ֥ל אֹתָ֖ם בְּאַפִּֽי׃ | 8 |
೮ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.
עַתָּ֞ה יְרַחֲק֧וּ אֶת־זְנוּתָ֛ם וּפִגְרֵ֥י מַלְכֵיהֶ֖ם מִמֶּ֑נִּי וְשָׁכַנְתִּ֥י בְתוֹכָ֖ם לְעוֹלָֽם׃ ס | 9 |
೯ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.”
אַתָּ֣ה בֶן־אָדָ֗ם הַגֵּ֤ד אֶת־בֵּֽית־יִשְׂרָאֵל֙ אֶת־הַבַּ֔יִת וְיִכָּלְמ֖וּ מֵעֲוֹנֽוֹתֵיהֶ֑ם וּמָדְד֖וּ אֶת־תָּכְנִֽית׃ | 10 |
೧೦“ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.
וְאִֽם־נִכְלְמ֞וּ מִכֹּ֣ל אֲשֶׁר־עָשׂ֗וּ צוּרַ֣ת הַבַּ֡יִת וּתְכוּנָת֡וֹ וּמוֹצָאָ֡יו וּמוֹבָאָ֣יו וְֽכָל־צֽוּרֹתָ֡יו וְאֵ֣ת כָּל־חֻקֹּתָיו֩ וְכָל־צ֨וּרֹתָ֤יו וְכָל־תּוֹרֹתָיו֙ הוֹדַ֣ע אוֹתָ֔ם וּכְתֹ֖ב לְעֵֽינֵיהֶ֑ם וְיִשְׁמְר֞וּ אֶת־כָּל־צוּרָת֛וֹ וְאֶת־כָּל־חֻקֹּתָ֖יו וְעָשׂ֥וּ אוֹתָֽם׃ | 11 |
೧೧ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.
זֹ֖את תּוֹרַ֣ת הַבָּ֑יִת עַל־רֹ֣אשׁ הָ֠הָר כָּל־גְּבֻל֞וֹ סָבִ֤יב ׀ סָבִיב֙ קֹ֣דֶשׁ קָדָשִׁ֔ים הִנֵּה־זֹ֖את תּוֹרַ֥ת הַבָּֽיִת׃ | 12 |
೧೨“ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.
וְאֵ֨לֶּה מִדּ֤וֹת הַמִּזְבֵּ֙חַ֙ בָּֽאַמּ֔וֹת אַמָּ֥ה אַמָּ֖ה וָטֹ֑פַח וְחֵ֨יק הָאַמָּ֜ה וְאַמָּה־רֹ֗חַב וּגְבוּלָ֨הּ אֶל־שְׂפָתָ֤הּ סָבִיב֙ זֶ֣רֶת הָאֶחָ֔ד וְזֶ֖ה גַּ֥ב הַמִּזְבֵּֽחַ׃ | 13 |
೧೩“ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ.
וּמֵחֵ֨יק הָאָ֜רֶץ עַד־הָעֲזָרָ֤ה הַתַּחְתּוֹנָה֙ שְׁתַּ֣יִם אַמּ֔וֹת וְרֹ֖חַב אַמָּ֣ה אֶחָ֑ת וּמֵהֳעֲזָרָ֨ה הַקְּטַנָּ֜ה עַד־הָעֲזָרָ֤ה הַגְּדוֹלָה֙ אַרְבַּ֣ע אַמּ֔וֹת וְרֹ֖חַב הָאַמָּֽה׃ | 14 |
೧೪ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.
וְהַֽהַרְאֵ֖ל אַרְבַּ֣ע אַמּ֑וֹת וּמֵהָאֲרִיאֵ֣ל וּלְמַ֔עְלָה הַקְּרָנ֖וֹת אַרְבַּֽע׃ | 15 |
೧೫ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
וְהָאֲרִיאֵ֗ל שְׁתֵּ֤ים עֶשְׂרֵה֙ אֹ֔רֶךְ בִּשְׁתֵּ֥ים עֶשְׂרֵ֖ה רֹ֑חַב רָב֕וּעַ אֶ֖ל אַרְבַּ֥עַת רְבָעָֽיו׃ | 16 |
೧೬ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.
וְהָעֲזָרָ֞ה אַרְבַּ֧ע עֶשְׂרֵ֣ה אֹ֗רֶךְ בְּאַרְבַּ֤ע עֶשְׂרֵה֙ רֹ֔חַב אֶ֖ל אַרְבַּ֣עַת רְבָעֶ֑יהָ וְהַגְּבוּל סָבִ֨יב אוֹתָ֜הּ חֲצִ֣י הָאַמָּ֗ה וְהַֽחֵיק־לָ֤הּ אַמָּה֙ סָבִ֔יב וּמַעֲלֹתֵ֖הוּ פְּנ֥וֹת קָדִֽים׃ | 17 |
೧೭ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.”
וַיֹּ֣אמֶר אֵלַ֗י בֶּן־אָדָם֙ כֹּ֤ה אָמַר֙ אֲדֹנָ֣י יְהוִ֔ה אֵ֚לֶּה חֻקּ֣וֹת הַמִּזְבֵּ֔חַ בְּי֖וֹם הֵעָֽשׂוֹת֑וֹ לְהַעֲל֤וֹת עָלָיו֙ עוֹלָ֔ה וְלִזְרֹ֥ק עָלָ֖יו דָּֽם׃ | 18 |
೧೮ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.
וְנָתַתָּ֣ה אֶל־הַכֹּהֲנִ֣ים הַלְוִיִּ֡ם אֲשֶׁ֣ר הֵם֩ מִזֶּ֨רַע צָד֜וֹק הַקְּרֹבִ֣ים אֵלַ֗י נְאֻ֛ם אֲדֹנָ֥י יְהוִ֖ה לְשָֽׁרְתֵ֑נִי פַּ֥ר בֶּן־בָּקָ֖ר לְחַטָּֽאת׃ | 19 |
೧೯ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.
וְלָקַחְתָּ֣ מִדָּמ֗וֹ וְנָ֨תַתָּ֜ה עַל־אַרְבַּ֤ע קַרְנֹתָיו֙ וְאֶל־אַרְבַּע֙ פִּנּ֣וֹת הָעֲזָרָ֔ה וְאֶֽל־הַגְּב֖וּל סָבִ֑יב וְחִטֵּאתָ֥ אוֹת֖וֹ וְכִפַּרְתָּֽהוּ׃ | 20 |
೨೦ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.
וְלָ֣קַחְתָּ֔ אֵ֖ת הַפָּ֣ר הַֽחַטָּ֑את וּשְׂרָפוֹ֙ בְּמִפְקַ֣ד הַבַּ֔יִת מִח֖וּץ לַמִּקְדָּֽשׁ׃ | 21 |
೨೧ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.
וּבַיּוֹם֙ הַשֵּׁנִ֔י תַּקְרִ֛יב שְׂעִיר־עִזִּ֥ים תָּמִ֖ים לְחַטָּ֑את וְחִטְּאוּ֙ אֶת־הַמִּזְבֵּ֔חַ כַּאֲשֶׁ֥ר חִטְּא֖וּ בַּפָּֽר׃ | 22 |
೨೨“ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು
בְּכַלּוֹתְךָ֖ מֵֽחַטֵּ֑א תַּקְרִיב֙ פַּ֣ר בֶּן־בָּקָ֣ר תָּמִ֔ים וְאַ֥יִל מִן־הַצֹּ֖אן תָּמִֽים׃ | 23 |
೨೩ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು.
וְהִקְרַבְתָּ֖ם לִפְנֵ֣י יְהוָ֑ה וְהִשְׁלִ֨יכוּ הַכֹּהֲנִ֤ים עֲלֵיהֶם֙ מֶ֔לַח וְהֶעֱל֥וּ אוֹתָ֛ם עֹלָ֖ה לַֽיהוָֽה׃ | 24 |
೨೪ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು.
שִׁבְעַ֣ת יָמִ֔ים תַּעֲשֶׂ֥ה שְׂעִיר־חַטָּ֖את לַיּ֑וֹם וּפַ֧ר בֶּן־בָּקָ֛ר וְאַ֥יִל מִן־הַצֹּ֖אן תְּמִימִ֥ים יַעֲשֽׂוּ׃ | 25 |
೨೫“ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.
שִׁבְעַ֣ת יָמִ֗ים יְכַפְּרוּ֙ אֶת־הַמִּזְבֵּ֔חַ וְטִֽהֲר֖וּ אֹת֑וֹ וּמִלְא֖וּ יָדָֽיו׃ | 26 |
೨೬ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.
וִֽיכַלּ֖וּ אֶת־הַיָּמִ֑ים ס וְהָיָה֩ בַיּ֨וֹם הַשְּׁמִינִ֜י וָהָ֗לְאָה יַעֲשׂ֨וּ הַכֹּהֲנִ֤ים עַל־הַמִּזְבֵּ֙חַ֙ אֶת־עוֹלֽוֹתֵיכֶם֙ וְאֶת־שַׁלְמֵיכֶ֔ם וְרָצִ֣אתִי אֶתְכֶ֔ם נְאֻ֖ם אֲדֹנָ֥י יְהֹוִֽה׃ ס | 27 |
೨೭ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.