< בְּרֵאשִׁית 44 >
וַיְצַ֞ו אֶת־אֲשֶׁ֣ר עַל־בֵּיתוֹ֮ לֵאמֹר֒ מַלֵּ֞א אֶת־אַמְתְּחֹ֤ת הָֽאֲנָשִׁים֙ אֹ֔כֶל כַּאֲשֶׁ֥ר יוּכְל֖וּן שְׂאֵ֑ת וְשִׂ֥ים כֶּֽסֶף־אִ֖ישׁ בְּפִ֥י אַמְתַּחְתּֽוֹ׃ | 1 |
ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ, “ಈ ಮನುಷ್ಯರ ಚೀಲಗಳಲ್ಲಿ ಹೊರುವುದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ, ಪ್ರತಿಯೊಬ್ಬನ ಹಣವನ್ನು ಅವನವನ ಚೀಲದ ಬಾಯಲ್ಲಿ ಇಡು.
וְאֶת־גְּבִיעִ֞י גְּבִ֣יעַ הַכֶּ֗סֶף תָּשִׂים֙ בְּפִי֙ אַמְתַּ֣חַת הַקָּטֹ֔ן וְאֵ֖ת כֶּ֣סֶף שִׁבְר֑וֹ וַיַּ֕עַשׂ כִּדְבַ֥ר יוֹסֵ֖ף אֲשֶׁ֥ר דִּבֵּֽר׃ | 2 |
ನನ್ನ ಬೆಳ್ಳಿಯ ಪಾತ್ರೆಯನ್ನು ಚಿಕ್ಕವನ ಚೀಲದ ಬಾಯಲ್ಲಿ ಅವನ ಧಾನ್ಯ ಹಾಗೂ ಹಣದ ಸಂಗಡ ಇಡು,” ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿದಂತೆಯೇ ಅವನು ಮಾಡಿದನು.
הַבֹּ֖קֶר א֑וֹר וְהָאֲנָשִׁ֣ים שֻׁלְּח֔וּ הֵ֖מָּה וַחֲמֹרֵיהֶֽם׃ | 3 |
ಸೂರ್ಯೋದಯವಾದಾಗ ಆ ಮನುಷ್ಯರನ್ನು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲಾಯಿತು.
הֵ֠ם יָֽצְא֣וּ אֶת־הָעִיר֮ לֹ֣א הִרְחִיקוּ֒ וְיוֹסֵ֤ף אָמַר֙ לַֽאֲשֶׁ֣ר עַל־בֵּית֔וֹ ק֥וּם רְדֹ֖ף אַחֲרֵ֣י הָֽאֲנָשִׁ֑ים וְהִשַּׂגְתָּם֙ וְאָמַרְתָּ֣ אֲלֵהֶ֔ם לָ֛מָּה שִׁלַּמְתֶּ֥ם רָעָ֖ה תַּ֥חַת טוֹבָֽה׃ | 4 |
ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮುಂಚೆ ಯೋಸೇಫನು ಮನೆಯ ಗೃಹನಿರ್ವಾಹಕನಿಗೆ, “ಆ ಮನುಷ್ಯರ ಹಿಂದೆ ಹೋಗು. ಅವರು ಸಿಕ್ಕಿದಾಗ, ‘ಏಕೆ ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಿದಿರಿ?
הֲל֣וֹא זֶ֗ה אֲשֶׁ֨ר יִשְׁתֶּ֤ה אֲדֹנִי֙ בּ֔וֹ וְה֕וּא נַחֵ֥שׁ יְנַחֵ֖שׁ בּ֑וֹ הֲרֵעֹתֶ֖ם אֲשֶׁ֥ר עֲשִׂיתֶֽם׃ | 5 |
ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.
וַֽיַּשִּׂגֵ֑ם וַיְדַבֵּ֣ר אֲלֵהֶ֔ם אֶת־הַדְּבָרִ֖ים הָאֵֽלֶּה׃ | 6 |
ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.
וַיֹּאמְר֣וּ אֵלָ֔יו לָ֚מָּה יְדַבֵּ֣ר אֲדֹנִ֔י כַּדְּבָרִ֖ים הָאֵ֑לֶּה חָלִ֙ילָה֙ לַעֲבָדֶ֔יךָ מֵעֲשׂ֖וֹת כַּדָּבָ֥ר הַזֶּֽה׃ | 7 |
ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ.
הֵ֣ן כֶּ֗סֶף אֲשֶׁ֤ר מָצָ֙אנוּ֙ בְּפִ֣י אַמְתְּחֹתֵ֔ינוּ הֱשִׁיבֹ֥נוּ אֵלֶ֖יךָ מֵאֶ֣רֶץ כְּנָ֑עַן וְאֵ֗יךְ נִגְנֹב֙ מִבֵּ֣ית אֲדֹנֶ֔יךָ כֶּ֖סֶף א֥וֹ זָהָֽב׃ | 8 |
ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?
אֲשֶׁ֨ר יִמָּצֵ֥א אִתּ֛וֹ מֵעֲבָדֶ֖יךָ וָמֵ֑ת וְגַם־אֲנַ֕חְנוּ נִֽהְיֶ֥ה לַֽאדֹנִ֖י לַעֲבָדִֽים׃ | 9 |
ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.
וַיֹּ֕אמֶר גַּם־עַתָּ֥ה כְדִבְרֵיכֶ֖ם כֶּן־ה֑וּא אֲשֶׁ֨ר יִמָּצֵ֤א אִתּוֹ֙ יִהְיֶה־לִּ֣י עָ֔בֶד וְאַתֶּ֖ם תִּהְי֥וּ נְקִיִּֽם׃ | 10 |
ಆಗ ಅವನು, “ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ, ಅವನು ನನಗೆ ದಾಸನಾಗಿರಲಿ, ಆದರೆ ನೀವು ನಿರಪರಾಧಿಗಳಾಗಿರುವಿರಿ,” ಎಂದನು.
וַֽיְמַהֲר֗וּ וַיּוֹרִ֛דוּ אִ֥ישׁ אֶת־אַמְתַּחְתּ֖וֹ אָ֑רְצָה וַֽיִּפְתְּח֖וּ אִ֥ישׁ אַמְתַּחְתּֽוֹ׃ | 11 |
ಅದಕ್ಕೆ ಅವರು ತ್ವರೆಪಟ್ಟು, ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
וַיְחַפֵּ֕שׂ בַּגָּד֣וֹל הֵחֵ֔ל וּבַקָּטֹ֖ן כִּלָּ֑ה וַיִּמָּצֵא֙ הַגָּבִ֔יעַ בְּאַמְתַּ֖חַת בִּנְיָמִֽן׃ | 12 |
ಅವರು ಹಿರಿಯನನ್ನು ಮೊದಲುಗೊಂಡು ಕಿರಿಯವನವರೆಗೆ ಶೋಧಿಸಲಾಗಿ, ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.
וַֽיִּקְרְע֖וּ שִׂמְלֹתָ֑ם וַֽיַּעֲמֹס֙ אִ֣ישׁ עַל־חֲמֹר֔וֹ וַיָּשֻׁ֖בוּ הָעִֽירָה׃ | 13 |
ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು, ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಕೊಂಡು ಪಟ್ಟಣಕ್ಕೆ ಮರಳಿ ಬಂದರು.
וַיָּבֹ֨א יְהוּדָ֤ה וְאֶחָיו֙ בֵּ֣יתָה יוֹסֵ֔ף וְה֖וּא עוֹדֶ֣נּוּ שָׁ֑ם וַיִּפְּל֥וּ לְפָנָ֖יו אָֽרְצָה׃ | 14 |
ಯೆಹೂದನೂ ಅವನ ಸಹೋದರರೂ ಯೋಸೇಫನು ಇನ್ನೂ ಮನೆಯಲ್ಲಿದ್ದಾಗಲೇ, ಅವನ ಮನೆಗೆ ಬಂದು ಮುಂದೆ ಅಡ್ಡಬಿದ್ದರು.
וַיֹּ֤אמֶר לָהֶם֙ יוֹסֵ֔ף מָֽה־הַמַּעֲשֶׂ֥ה הַזֶּ֖ה אֲשֶׁ֣ר עֲשִׂיתֶ֑ם הֲל֣וֹא יְדַעְתֶּ֔ם כִּֽי־נַחֵ֧שׁ יְנַחֵ֛שׁ אִ֖ישׁ אֲשֶׁ֥ר כָּמֹֽנִי׃ | 15 |
ಆಗ ಯೋಸೇಫನು ಅವರಿಗೆ, “ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದನು.
וַיֹּ֣אמֶר יְהוּדָ֗ה מַה־נֹּאמַר֙ לַֽאדֹנִ֔י מַה־נְּדַבֵּ֖ר וּמַה־נִּצְטַדָּ֑ק הָאֱלֹהִ֗ים מָצָא֙ אֶת־עֲוֹ֣ן עֲבָדֶ֔יךָ הִנֶּנּ֤וּ עֲבָדִים֙ לַֽאדֹנִ֔י גַּם־אֲנַ֕חְנוּ גַּ֛ם אֲשֶׁר־נִמְצָ֥א הַגָּבִ֖יעַ בְּיָדֽוֹ׃ | 16 |
ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.
וַיֹּ֕אמֶר חָלִ֣ילָה לִּ֔י מֵעֲשׂ֖וֹת זֹ֑את הָאִ֡ישׁ אֲשֶׁר֩ נִמְצָ֨א הַגָּבִ֜יעַ בְּיָד֗וֹ ה֚וּא יִהְיֶה־לִּ֣י עָ֔בֶד וְאַתֶּ֕ם עֲל֥וּ לְשָׁל֖וֹם אֶל־אֲבִיכֶֽם׃ פ | 17 |
ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.
וַיִּגַּ֨שׁ אֵלָ֜יו יְהוּדָ֗ה וַיֹּאמֶר֮ בִּ֣י אֲדֹנִי֒ יְדַבֶּר־נָ֨א עַבְדְּךָ֤ דָבָר֙ בְּאָזְנֵ֣י אֲדֹנִ֔י וְאַל־יִ֥חַר אַפְּךָ֖ בְּעַבְדֶּ֑ךָ כִּ֥י כָמ֖וֹךָ כְּפַרְעֹֽה׃ | 18 |
ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.
אֲדֹנִ֣י שָׁאַ֔ל אֶת־עֲבָדָ֖יו לֵאמֹ֑ר הֲיֵשׁ־לָכֶ֥ם אָ֖ב אוֹ־אָֽח׃ | 19 |
ನನ್ನ ಒಡೆಯನೇ, ‘ನಿಮಗೆ ತಂದೆಯೂ ಸಹೋದರರೂ ಇದ್ದಾರೋ,’ ಎಂದು ತನ್ನ ದಾಸರನ್ನು ಕೇಳಲು,
וַנֹּ֙אמֶר֙ אֶל־אֲדֹנִ֔י יֶשׁ־לָ֙נוּ֙ אָ֣ב זָקֵ֔ן וְיֶ֥לֶד זְקֻנִ֖ים קָטָ֑ן וְאָחִ֨יו מֵ֜ת וַיִּוָּתֵ֨ר ה֧וּא לְבַדּ֛וֹ לְאִמּ֖וֹ וְאָבִ֥יו אֲהֵבֽוֹ׃ | 20 |
ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.
וַתֹּ֙אמֶר֙ אֶל־עֲבָדֶ֔יךָ הוֹרִדֻ֖הוּ אֵלָ֑י וְאָשִׂ֥ימָה עֵינִ֖י עָלָֽיו׃ | 21 |
“ಅದಕ್ಕೆ ನೀನು ನಿನ್ನ ದಾಸರಿಗೆ, ‘ನಾನು ಅವನನ್ನು ನೋಡುವ ಹಾಗೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,’ ಎಂದು ಹೇಳಿದೆಯಲ್ಲಾ.
וַנֹּ֙אמֶר֙ אֶל־אֲדֹנִ֔י לֹא־יוּכַ֥ל הַנַּ֖עַר לַעֲזֹ֣ב אֶת־אָבִ֑יו וְעָזַ֥ב אֶת־אָבִ֖יו וָמֵֽת׃ | 22 |
ನಾವು ನಮ್ಮ ಒಡೆಯನಿಗೆ, ‘ಆ ಹುಡುಗನು ನಮ್ಮ ತಂದೆಯನ್ನು ಬಿಡಕೂಡದು. ಅವನು ತಂದೆಯನ್ನು ಬಿಟ್ಟರೆ, ಅವನು ಸಾಯುವನು,’ ಎಂದು ಹೇಳಿದೆವು.
וַתֹּ֙אמֶר֙ אֶל־עֲבָדֶ֔יךָ אִם־לֹ֥א יֵרֵ֛ד אֲחִיכֶ֥ם הַקָּטֹ֖ן אִתְּכֶ֑ם לֹ֥א תֹסִפ֖וּן לִרְא֥וֹת פָּנָֽי׃ | 23 |
ಆಗ ನೀವು ನಿನ್ನ ದಾಸರಿಗೆ, ‘ನಿಮ್ಮ ಚಿಕ್ಕ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ, ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು,’ ಎಂದು ಹೇಳಿದೆ.
וַיְהִי֙ כִּ֣י עָלִ֔ינוּ אֶֽל־עַבְדְּךָ֖ אָבִ֑י וַנַּ֨גֶּד־ל֔וֹ אֵ֖ת דִּבְרֵ֥י אֲדֹנִֽי׃ | 24 |
ಹೀಗಿರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ, ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
וַיֹּ֖אמֶר אָבִ֑ינוּ שֻׁ֖בוּ שִׁבְרוּ־לָ֥נוּ מְעַט־אֹֽכֶל׃ | 25 |
“ನಮ್ಮ ತಂದೆಯು, ‘ನೀವು ತಿರುಗಿ ಹೋಗಿ, ನಮಗೆ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ,’ ಎಂದನು.
וַנֹּ֕אמֶר לֹ֥א נוּכַ֖ל לָרֶ֑דֶת אִם־יֵשׁ֩ אָחִ֨ינוּ הַקָּטֹ֤ן אִתָּ֙נוּ֙ וְיָרַ֔דְנוּ כִּי־לֹ֣א נוּכַ֗ל לִרְאוֹת֙ פְּנֵ֣י הָאִ֔ישׁ וְאָחִ֥ינוּ הַקָּטֹ֖ן אֵינֶ֥נּוּ אִתָּֽנוּ׃ | 26 |
ಆಗ ನಾವು, ‘ಹೋಗುವುದಕ್ಕಾಗದು, ನಮ್ಮ ಚಿಕ್ಕ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಏಕೆಂದರೆ ನಮ್ಮ ಚಿಕ್ಕ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ, ಆ ಮನುಷ್ಯನ ಮುಖವನ್ನು ನಾವು ನೋಡುವುದಕ್ಕಾಗುವುದು,’ ಎಂದು ಹೇಳಿದೆವು.
וַיֹּ֛אמֶר עַבְדְּךָ֥ אָבִ֖י אֵלֵ֑ינוּ אַתֶּ֣ם יְדַעְתֶּ֔ם כִּ֥י שְׁנַ֖יִם יָֽלְדָה־לִּ֥י אִשְׁתִּֽי׃ | 27 |
“ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು, ‘ನನ್ನ ಹೆಂಡತಿಯು ನನಗೆ ಇಬ್ಬರು ಪುತ್ರರನ್ನು ಹೆತ್ತಳೆಂಬುದು ನಿಮಗೆ ತಿಳಿದಿದೆ.
וַיֵּצֵ֤א הָֽאֶחָד֙ מֵֽאִתִּ֔י וָאֹמַ֕ר אַ֖ךְ טָרֹ֣ף טֹרָ֑ף וְלֹ֥א רְאִיתִ֖יו עַד־הֵֽנָּה׃ | 28 |
ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.
וּלְקַחְתֶּ֧ם גַּם־אֶת־זֶ֛ה מֵעִ֥ם פָּנַ֖י וְקָרָ֣הוּ אָס֑וֹן וְהֽוֹרַדְתֶּ֧ם אֶת־שֵׂיבָתִ֛י בְּרָעָ֖ה שְׁאֹֽלָה׃ (Sheol ) | 29 |
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಅವನಿಗೂ ಕೇಡು ಬಂದರೆ, ನನ್ನ ಮುದಿ ತಲೆಯು ದುಃಖದಿಂದ ಸಮಾಧಿಗೆ ಇಳಿಯುವಂತೆ ಮಾಡುವಿರಿ,’ ಎಂದು ಹೇಳಿದನು. (Sheol )
וְעַתָּ֗ה כְּבֹאִי֙ אֶל־עַבְדְּךָ֣ אָבִ֔י וְהַנַּ֖עַר אֵינֶ֣נּוּ אִתָּ֑נוּ וְנַפְשׁ֖וֹ קְשׁוּרָ֥ה בְנַפְשֽׁוֹ׃ | 30 |
“ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದಲ್ಲಿ ನೆಟ್ಟಿದ್ದರಿಂದ,
וְהָיָ֗ה כִּרְאוֹת֛וֹ כִּי־אֵ֥ין הַנַּ֖עַר וָמֵ֑ת וְהוֹרִ֨ידוּ עֲבָדֶ֜יךָ אֶת־שֵׂיבַ֨ת עַבְדְּךָ֥ אָבִ֛ינוּ בְּיָג֖וֹן שְׁאֹֽלָה׃ (Sheol ) | 31 |
ಹುಡುಗನು ನಮ್ಮ ಸಂಗಡ ಇಲ್ಲದಿರುವುದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯುವಂತೆ ಮಾಡುವರು. (Sheol )
כִּ֤י עַבְדְּךָ֙ עָרַ֣ב אֶת־הַנַּ֔עַר מֵעִ֥ם אָבִ֖י לֵאמֹ֑ר אִם־לֹ֤א אֲבִיאֶ֙נּוּ֙ אֵלֶ֔יךָ וְחָטָ֥אתִי לְאָבִ֖י כָּל־הַיָּמִֽים׃ | 32 |
ಏಕೆಂದರೆ ನಿನ್ನ ದಾಸನಾದ ನಾನು, ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆಯಾಗಿ, ‘ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆನು,’ ಎಂದು ಹೇಳಿಕೊಂಡಿದ್ದೇನೆ.
וְעַתָּ֗ה יֵֽשֶׁב־נָ֤א עַבְדְּךָ֙ תַּ֣חַת הַנַּ֔עַר עֶ֖בֶד לַֽאדֹנִ֑י וְהַנַּ֖עַר יַ֥עַל עִם־אֶחָֽיו׃ | 33 |
“ಹಾಗಿದ್ದಲ್ಲಿ ಆ ಹುಡುಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು. ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.
כִּי־אֵיךְ֙ אֶֽעֱלֶ֣ה אֶל־אָבִ֔י וְהַנַּ֖עַר אֵינֶ֣נּוּ אִתִּ֑י פֶּ֚ן אֶרְאֶ֣ה בָרָ֔ע אֲשֶׁ֥ר יִמְצָ֖א אֶת־אָבִֽי׃ | 34 |
ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು.