< בְּרֵאשִׁית 45 >

וְלֹֽא־יָכֹ֨ל יוֹסֵ֜ף לְהִתְאַפֵּ֗ק לְכֹ֤ל הַנִּצָּבִים֙ עָלָ֔יו וַיִּקְרָ֕א הוֹצִ֥יאוּ כָל־אִ֖ישׁ מֵעָלָ֑י וְלֹא־עָ֤מַד אִישׁ֙ אִתּ֔וֹ בְּהִתְוַדַּ֥ע יוֹסֵ֖ף אֶל־אֶחָֽיו׃ 1
ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿಹಿಡಿದುಕೊಳ್ಳಲು ಆಗಲಿಲ್ಲ. “ಎಲ್ಲರನ್ನೂ ತನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ,” ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪರಿಚಯಿಸಿಕೊಳ್ಳಲು ಹೋದಾಗ, ಅಲ್ಲಿ ಬೇರೆ ಯಾರೂ ಇರಲಿಲ್ಲ.
וַיִּתֵּ֥ן אֶת־קֹל֖וֹ בִּבְכִ֑י וַיִּשְׁמְע֣וּ מִצְרַ֔יִם וַיִּשְׁמַ֖ע בֵּ֥ית פַּרְעֹֽה׃ 2
ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ, ಹೊರಗಿದ್ದ ಈಜಿಪ್ಟಿನವರೂ, ಫರೋಹನ ಮನೆಯವರೂ ಕೇಳಿಸಿಕೊಂಡರು.
וַיֹּ֨אמֶר יוֹסֵ֤ף אֶל־אֶחָיו֙ אֲנִ֣י יוֹסֵ֔ף הַע֥וֹד אָבִ֖י חָ֑י וְלֹֽא־יָכְל֤וּ אֶחָיו֙ לַעֲנ֣וֹת אֹת֔וֹ כִּ֥י נִבְהֲל֖וּ מִפָּנָֽיו׃ 3
ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.
וַיֹּ֨אמֶר יוֹסֵ֧ף אֶל־אֶחָ֛יו גְּשׁוּ־נָ֥א אֵלַ֖י וַיִּגָּ֑שׁוּ וַיֹּ֗אמֶר אֲנִי֙ יוֹסֵ֣ף אֲחִיכֶ֔ם אֲשֶׁר־מְכַרְתֶּ֥ם אֹתִ֖י מִצְרָֽיְמָה׃ 4
ಆಗ ಯೋಸೇಫನು ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿರಿ,” ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು, “ನೀವು ಈಜಿಪ್ಟಿಗೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ!
וְעַתָּ֣ה ׀ אַל־תֵּעָ֣צְב֗וּ וְאַל־יִ֙חַר֙ בְּעֵ֣ינֵיכֶ֔ם כִּֽי־מְכַרְתֶּ֥ם אֹתִ֖י הֵ֑נָּה כִּ֣י לְמִֽחְיָ֔ה שְׁלָחַ֥נִי אֱלֹהִ֖ים לִפְנֵיכֶֽם׃ 5
ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.
כִּי־זֶ֛ה שְׁנָתַ֥יִם הָרָעָ֖ב בְּקֶ֣רֶב הָאָ֑רֶץ וְעוֹד֙ חָמֵ֣שׁ שָׁנִ֔ים אֲשֶׁ֥ר אֵין־חָרִ֖ישׁ וְקָצִּֽיר׃ 6
ಏಕೆಂದರೆ ಈ ಎರಡು ವರ್ಷಗಳವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರ್ಷಗಳವರೆಗೆ ಬಿತ್ತುವುದೂ, ಕೊಯ್ಯುವುದೂ ಇರುವುದಿಲ್ಲ.
וַיִּשְׁלָחֵ֤נִי אֱלֹהִים֙ לִפְנֵיכֶ֔ם לָשׂ֥וּם לָכֶ֛ם שְׁאֵרִ֖ית בָּאָ֑רֶץ וּלְהַחֲי֣וֹת לָכֶ֔ם לִפְלֵיטָ֖ה גְּדֹלָֽה׃ 7
ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.
וְעַתָּ֗ה לֹֽא־אַתֶּ֞ם שְׁלַחְתֶּ֤ם אֹתִי֙ הֵ֔נָּה כִּ֖י הָאֱלֹהִ֑ים וַיְשִׂימֵ֨נִֽי לְאָ֜ב לְפַרְעֹ֗ה וּלְאָדוֹן֙ לְכָל־בֵּית֔וֹ וּמֹשֵׁ֖ל בְּכָל־אֶ֥רֶץ מִצְרָֽיִם׃ 8
“ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.
מַהֲרוּ֮ וַעֲל֣וּ אֶל־אָבִי֒ וַאֲמַרְתֶּ֣ם אֵלָ֗יו כֹּ֤ה אָמַר֙ בִּנְךָ֣ יוֹסֵ֔ף שָׂמַ֧נִי אֱלֹהִ֛ים לְאָד֖וֹן לְכָל־מִצְרָ֑יִם רְדָ֥ה אֵלַ֖י אַֽל־תַּעֲמֹֽד׃ 9
ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ, ‘ನಿನ್ನ ಮಗ ಯೋಸೇಫನನ್ನು ದೇವರು ಈಜಿಪ್ಟಿಗೆಲ್ಲಾ ಪ್ರಭುವನ್ನಾಗಿ ಮಾಡಿದ್ದಾರೆ, ತಡಮಾಡದೆ ನನ್ನ ಬಳಿಗೆ ಬೇಗ ಬಾ.
וְיָשַׁבְתָּ֣ בְאֶֽרֶץ־גֹּ֗שֶׁן וְהָיִ֤יתָ קָרוֹב֙ אֵלַ֔י אַתָּ֕ה וּבָנֶ֖יךָ וּבְנֵ֣י בָנֶ֑יךָ וְצֹאנְךָ֥ וּבְקָרְךָ֖ וְכָל־אֲשֶׁר־לָֽךְ׃ 10
ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.
וְכִלְכַּלְתִּ֤י אֹֽתְךָ֙ שָׁ֔ם כִּי־ע֛וֹד חָמֵ֥שׁ שָׁנִ֖ים רָעָ֑ב פֶּן־תִּוָּרֵ֛שׁ אַתָּ֥ה וּבֵֽיתְךָ֖ וְכָל־אֲשֶׁר־לָֽךְ׃ 11
ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.
וְהִנֵּ֤ה עֵֽינֵיכֶם֙ רֹא֔וֹת וְעֵינֵ֖י אָחִ֣י בִנְיָמִ֑ין כִּי־פִ֖י הַֽמְדַבֵּ֥ר אֲלֵיכֶֽם׃ 12
“ನಿಮ್ಮ ಸಂಗಡ ಮಾತನಾಡುವುದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ, ನನ್ನ ಸಹೋದರ ಬೆನ್ಯಾಮೀನನ ಕಣ್ಣುಗಳೂ ನೋಡಿವೆ.
וְהִגַּדְתֶּ֣ם לְאָבִ֗י אֶת־כָּל־כְּבוֹדִי֙ בְּמִצְרַ֔יִם וְאֵ֖ת כָּל־אֲשֶׁ֣ר רְאִיתֶ֑ם וּמִֽהַרְתֶּ֛ם וְהוֹרַדְתֶּ֥ם אֶת־אָבִ֖י הֵֽנָּה׃ 13
ಹೀಗಿರಲಾಗಿ ನೀವು ಈಜಿಪ್ಟ್ ದೇಶದಲ್ಲಿ ನನಗಿರುವ ಎಲ್ಲಾ ಘನತೆಯನ್ನೂ, ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ,” ಎಂದನು.
וַיִּפֹּ֛ל עַל־צַוְּארֵ֥י בִנְיָמִֽן־אָחִ֖יו וַיֵּ֑בְךְּ וּבִנְיָמִ֔ן בָּכָ֖ה עַל־צַוָּארָֽיו׃ 14
ಅವನು ತನ್ನ ತಮ್ಮ ಬೆನ್ಯಾಮೀನನ ಕುತ್ತಿಗೆಯನ್ನು ಅಪ್ಪಿಕೊಂಡು ಅತ್ತನು, ಬೆನ್ಯಾಮೀನನೂ ಅತ್ತನು.
וַיְנַשֵּׁ֥ק לְכָל־אֶחָ֖יו וַיֵּ֣בְךְּ עֲלֵיהֶ֑ם וְאַ֣חֲרֵי כֵ֔ן דִּבְּר֥וּ אֶחָ֖יו אִתּֽוֹ׃ 15
ಇದಲ್ಲದೆ ತನ್ನ ಸಹೋದರರಿಗೆಲ್ಲಾ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
וְהַקֹּ֣ל נִשְׁמַ֗ע בֵּ֤ית פַּרְעֹה֙ לֵאמֹ֔ר בָּ֖אוּ אֲחֵ֣י יוֹסֵ֑ף וַיִּיטַב֙ בְּעֵינֵ֣י פַרְעֹ֔ה וּבְעֵינֵ֖י עֲבָדָֽיו׃ 16
ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.
וַיֹּ֤אמֶר פַּרְעֹה֙ אֶל־יוֹסֵ֔ף אֱמֹ֥ר אֶל־אַחֶ֖יךָ זֹ֣את עֲשׂ֑וּ טַֽעֲנוּ֙ אֶת־בְּעִ֣ירְכֶ֔ם וּלְכוּ־בֹ֖אוּ אַ֥רְצָה כְּנָֽעַן׃ 17
ಆಗ ಫರೋಹನು ಯೋಸೇಫನಿಗೆ, “ನಿನ್ನ ಸಹೋದರರಿಗೆ ಹೀಗೆ ಮಾಡಲು ಹೇಳು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ವಸ್ತುಗಳನ್ನು ಹೇರಿ, ಕಾನಾನ್ ದೇಶಕ್ಕೆ ಹೋಗಿ,
וּקְח֧וּ אֶת־אֲבִיכֶ֛ם וְאֶת־בָּתֵּיכֶ֖ם וּבֹ֣אוּ אֵלָ֑י וְאֶתְּנָ֣ה לָכֶ֗ם אֶת־טוּב֙ אֶ֣רֶץ מִצְרַ֔יִם וְאִכְל֖וּ אֶת־חֵ֥לֶב הָאָֽרֶץ׃ 18
ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’
וְאַתָּ֥ה צֻוֵּ֖יתָה זֹ֣את עֲשׂ֑וּ קְחוּ־לָכֶם֩ מֵאֶ֨רֶץ מִצְרַ֜יִם עֲגָל֗וֹת לְטַפְּכֶם֙ וְלִנְשֵׁיכֶ֔ם וּנְשָׂאתֶ֥ם אֶת־אֲבִיכֶ֖ם וּבָאתֶֽם׃ 19
“ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
וְעֵ֣ינְכֶ֔ם אַל־תָּחֹ֖ס עַל־כְּלֵיכֶ֑ם כִּי־ט֛וּב כָּל־אֶ֥רֶץ מִצְרַ֖יִם לָכֶ֥ם הֽוּא׃ 20
ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಈಜಿಪ್ಟ್ ದೇಶದಲ್ಲಿರುವ ಉತ್ತಮವಾದದ್ದೆಲ್ಲಾ ನಿಮ್ಮದೇ,’” ಎಂದನು.
וַיַּֽעֲשׂוּ־כֵן֙ בְּנֵ֣י יִשְׂרָאֵ֔ל וַיִּתֵּ֨ן לָהֶ֥ם יוֹסֵ֛ף עֲגָל֖וֹת עַל־פִּ֣י פַרְעֹ֑ה וַיִּתֵּ֥ן לָהֶ֛ם צֵדָ֖ה לַדָּֽרֶךְ׃ 21
ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.
לְכֻלָּ֥ם נָתַ֛ן לָאִ֖ישׁ חֲלִפ֣וֹת שְׂמָלֹ֑ת וּלְבִנְיָמִ֤ן נָתַן֙ שְׁלֹ֣שׁ מֵא֣וֹת כֶּ֔סֶף וְחָמֵ֖שׁ חֲלִפֹ֥ת שְׂמָלֹֽת׃ 22
ಅವರೆಲ್ಲರಿಗೆ ಬದಲು ವಸ್ತ್ರಗಳನ್ನೂ, ಬೆನ್ಯಾಮೀನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ, ಐದು ಬದಲು ವಸ್ತ್ರಗಳನ್ನೂ ಕೊಟ್ಟನು.
וּלְאָבִ֞יו שָׁלַ֤ח כְּזֹאת֙ עֲשָׂרָ֣ה חֲמֹרִ֔ים נֹשְׂאִ֖ים מִטּ֣וּב מִצְרָ֑יִם וְעֶ֣שֶׂר אֲתֹנֹ֡ת נֹֽ֠שְׂאֹת בָּ֣ר וָלֶ֧חֶם וּמָז֛וֹן לְאָבִ֖יו לַדָּֽרֶךְ׃ 23
ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಈಜಿಪ್ಟಿನ ಶ್ರೇಷ್ಠವಾದವುಗಳನ್ನೂ, ಪ್ರಯಾಣಕ್ಕೋಸ್ಕರ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿ, ರೊಟ್ಟಿ, ಆಹಾರಗಳನ್ನೂ ಕಳುಹಿಸಿದನು.
וַיְשַׁלַּ֥ח אֶת־אֶחָ֖יו וַיֵּלֵ֑כוּ וַיֹּ֣אמֶר אֲלֵהֶ֔ם אַֽל־תִּרְגְּז֖וּ בַּדָּֽרֶךְ׃ 24
ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು.
וַֽיַּעֲל֖וּ מִמִּצְרָ֑יִם וַיָּבֹ֙אוּ֙ אֶ֣רֶץ כְּנַ֔עַן אֶֽל־יַעֲקֹ֖ב אֲבִיהֶֽם׃ 25
ಅವರು ಈಜಿಪ್ಟಿನಿಂದ ಹೊರಟುಹೋಗಿ ಕಾನಾನಿನಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದು,
וַיַּגִּ֨דוּ ל֜וֹ לֵאמֹ֗ר ע֚וֹד יוֹסֵ֣ף חַ֔י וְכִֽי־ה֥וּא מֹשֵׁ֖ל בְּכָל־אֶ֣רֶץ מִצְרָ֑יִם וַיָּ֣פָג לִבּ֔וֹ כִּ֥י לֹא־הֶאֱמִ֖ין לָהֶֽם׃ 26
“ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.
וַיְדַבְּר֣וּ אֵלָ֗יו אֵ֣ת כָּל־דִּבְרֵ֤י יוֹסֵף֙ אֲשֶׁ֣ר דִּבֶּ֣ר אֲלֵהֶ֔ם וַיַּרְא֙ אֶת־הָ֣עֲגָל֔וֹת אֲשֶׁר־שָׁלַ֥ח יוֹסֵ֖ף לָשֵׂ֣את אֹת֑וֹ וַתְּחִ֕י ר֖וּחַ יַעֲקֹ֥ב אֲבִיהֶֽם׃ 27
ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು.
וַיֹּ֙אמֶר֙ יִשְׂרָאֵ֔ל רַ֛ב עוֹד־יוֹסֵ֥ף בְּנִ֖י חָ֑י אֵֽלְכָ֥ה וְאֶרְאֶ֖נּוּ בְּטֶ֥רֶם אָמֽוּת׃ 28
ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.

< בְּרֵאשִׁית 45 >