< הוֹשֵׁעַ 8 >

אֶל־חִכְּךָ֣ שֹׁפָ֔ר כַּנֶּ֖שֶׁר עַל־בֵּ֣ית יְהוָ֑ה יַ֚עַן עָבְר֣וּ בְרִיתִ֔י וְעַל־תּוֹרָתִ֖י פָּשָֽׁעוּ׃ 1
“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
לִ֖י יִזְעָ֑קוּ אֱלֹהַ֥י יְֽדַעֲנ֖וּךָ יִשְׂרָאֵֽל׃ 2
ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.
זָנַ֥ח יִשְׂרָאֵ֖ל ט֑וֹב אוֹיֵ֖ב יִרְדְּֽפוֹ׃ 3
ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.
הֵ֤ם הִמְלִיכוּ֙ וְלֹ֣א מִמֶּ֔נִּי הֵשִׂ֖ירוּ וְלֹ֣א יָדָ֑עְתִּי כַּסְפָּ֣ם וּזְהָבָ֗ם עָשׂ֤וּ לָהֶם֙ עֲצַבִּ֔ים לְמַ֖עַן יִכָּרֵֽת׃ 4
ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.
זָנַח֙ עֶגְלֵ֣ךְ שֹֽׁמְר֔וֹן חָרָ֥ה אַפִּ֖י בָּ֑ם עַד־מָתַ֕י לֹ֥א יוּכְל֖וּ נִקָּיֹֽן׃ 5
ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?
כִּ֤י מִיִּשְׂרָאֵל֙ וְה֔וּא חָרָ֣שׁ עָשָׂ֔הוּ וְלֹ֥א אֱלֹהִ֖ים ה֑וּא כִּֽי־שְׁבָבִ֣ים יִֽהְיֶ֔ה עֵ֖גֶל שֹׁמְרֽוֹן׃ 6
ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
כִּ֛י ר֥וּחַ יִזְרָ֖עוּ וְסוּפָ֣תָה יִקְצֹ֑רוּ קָמָ֣ה אֵֽין־ל֗וֹ צֶ֚מַח בְּלִ֣י יַֽעֲשֶׂה־קֶּ֔מַח אוּלַ֣י יַֽעֲשֶׂ֔ה זָרִ֖ים יִבְלָעֻֽהוּ׃ 7
ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.
נִבְלַ֖ע יִשְׂרָאֵ֑ל עַתָּה֙ הָי֣וּ בַגּוֹיִ֔ם כִּכְלִ֖י אֵֽין־חֵ֥פֶץ בּֽוֹ׃ 8
ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.
כִּֽי־הֵ֙מָּה֙ עָל֣וּ אַשּׁ֔וּר פֶּ֖רֶא בּוֹדֵ֣ד ל֑וֹ אֶפְרַ֖יִם הִתְנ֥וּ אֲהָבִֽים 9
ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.
גַּ֛ם כִּֽי־יִתְנ֥וּ בַגּוֹיִ֖ם עַתָּ֣ה אֲקַבְּצֵ֑ם וַיָּחֵ֣לּוּ מְּעָ֔ט מִמַּשָּׂ֖א מֶ֥לֶךְ שָׂרִֽים׃ 10
೧೦ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.
כִּֽי־הִרְבָּ֥ה אֶפְרַ֛יִם מִזְבְּחֹ֖ת לַחֲטֹ֑א הָיוּ־ל֥וֹ מִזְבְּח֖וֹת לַחֲטֹֽא׃ 11
೧೧ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.
אֶ֨כְתָּב ל֔וֹ רֻבֵּ֖י תּֽוֹרָתִ֑י כְּמוֹ־זָ֖ר נֶחְשָֽׁבוּ׃ 12
೧೨ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.
זִבְחֵ֣י הַבְהָבַ֗י יִזְבְּח֤וּ בָשָׂר֙ וַיֹּאכֵ֔לוּ יְהוָ֖ה לֹ֣א רָצָ֑ם עַתָּ֞ה יִזְכֹּ֤ר עֲוֹנָם֙ וְיִפְקֹ֣ד חַטֹּאותָ֔ם הֵ֖מָּה מִצְרַ֥יִם יָשֽׁוּבוּ׃ 13
೧೩ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
וַיִּשְׁכַּ֨ח יִשְׂרָאֵ֜ל אֶת־עֹשֵׂ֗הוּ וַיִּ֙בֶן֙ הֵֽיכָל֔וֹת וִֽיהוּדָ֕ה הִרְבָּ֖ה עָרִ֣ים בְּצֻר֑וֹת וְשִׁלַּחְתִּי־אֵ֣שׁ בְּעָרָ֔יו וְאָכְלָ֖ה אַרְמְנֹתֶֽיהָ׃ ס 14
೧೪ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”

< הוֹשֵׁעַ 8 >