< הוֹשֵׁעַ 8 >
אֶל־חִכְּךָ֣ שֹׁפָ֔ר כַּנֶּ֖שֶׁר עַל־בֵּ֣ית יְהוָ֑ה יַ֚עַן עָבְר֣וּ בְרִיתִ֔י וְעַל־תּוֹרָתִ֖י פָּשָֽׁעוּ׃ | 1 |
“ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.
לִ֖י יִזְעָ֑קוּ אֱלֹהַ֥י יְֽדַעֲנ֖וּךָ יִשְׂרָאֵֽל׃ | 2 |
ಇಸ್ರಾಯೇಲಿನವರು, ‘ನನ್ನ ದೇವರೇ, ನಾವು ನಿಮ್ಮನ್ನು ತಿಳಿದಿದ್ದೇವೆ,’ ಎಂದು ನನಗೆ ಕೂಗುತ್ತಿದ್ದಾರೆ.
זָנַ֥ח יִשְׂרָאֵ֖ל ט֑וֹב אוֹיֵ֖ב יִרְדְּֽפוֹ׃ | 3 |
ಆದರೆ ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಒಬ್ಬ ಶತ್ರುವು ಅವನನ್ನು ಹಿಂದಟ್ಟುವನು.
הֵ֤ם הִמְלִיכוּ֙ וְלֹ֣א מִמֶּ֔נִּי הֵשִׂ֖ירוּ וְלֹ֣א יָדָ֑עְתִּי כַּסְפָּ֣ם וּזְהָבָ֗ם עָשׂ֤וּ לָהֶם֙ עֲצַבִּ֔ים לְמַ֖עַן יִכָּרֵֽת׃ | 4 |
ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
זָנַח֙ עֶגְלֵ֣ךְ שֹֽׁמְר֔וֹן חָרָ֥ה אַפִּ֖י בָּ֑ם עַד־מָתַ֕י לֹ֥א יוּכְל֖וּ נִקָּיֹֽן׃ | 5 |
ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ?
כִּ֤י מִיִּשְׂרָאֵל֙ וְה֔וּא חָרָ֣שׁ עָשָׂ֔הוּ וְלֹ֥א אֱלֹהִ֖ים ה֑וּא כִּֽי־שְׁבָבִ֣ים יִֽהְיֶ֔ה עֵ֖גֶל שֹׁמְרֽוֹן׃ | 6 |
ಅವರು ಇಸ್ರಾಯೇಲಿನಿಂದ ಬಂದವರು. ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. ಅದು ದೇವರಲ್ಲ, ಆದರೆ ಸಮಾರ್ಯದ ಬಸವನನ್ನು ಚೂರುಚೂರಾಗುವುದು.
כִּ֛י ר֥וּחַ יִזְרָ֖עוּ וְסוּפָ֣תָה יִקְצֹ֑רוּ קָמָ֣ה אֵֽין־ל֗וֹ צֶ֚מַח בְּלִ֣י יַֽעֲשֶׂה־קֶּ֔מַח אוּלַ֣י יַֽעֲשֶׂ֔ה זָרִ֖ים יִבְלָעֻֽהוּ׃ | 7 |
“ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.
נִבְלַ֖ע יִשְׂרָאֵ֑ל עַתָּה֙ הָי֣וּ בַגּוֹיִ֔ם כִּכְלִ֖י אֵֽין־חֵ֥פֶץ בּֽוֹ׃ | 8 |
ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.
כִּֽי־הֵ֙מָּה֙ עָל֣וּ אַשּׁ֔וּר פֶּ֖רֶא בּוֹדֵ֣ד ל֑וֹ אֶפְרַ֖יִם הִתְנ֥וּ אֲהָבִֽים | 9 |
ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.
גַּ֛ם כִּֽי־יִתְנ֥וּ בַגּוֹיִ֖ם עַתָּ֣ה אֲקַבְּצֵ֑ם וַיָּחֵ֣לּוּ מְּעָ֔ט מִמַּשָּׂ֖א מֶ֥לֶךְ שָׂרִֽים׃ | 10 |
ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.
כִּֽי־הִרְבָּ֥ה אֶפְרַ֛יִם מִזְבְּחֹ֖ת לַחֲטֹ֑א הָיוּ־ל֥וֹ מִזְבְּח֖וֹת לַחֲטֹֽא׃ | 11 |
“ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ.
אֶ֨כְתָּב ל֔וֹ רֻבֵּ֖י תּֽוֹרָתִ֑י כְּמוֹ־זָ֖ר נֶחְשָֽׁבוּ׃ | 12 |
ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.
זִבְחֵ֣י הַבְהָבַ֗י יִזְבְּח֤וּ בָשָׂר֙ וַיֹּאכֵ֔לוּ יְהוָ֖ה לֹ֣א רָצָ֑ם עַתָּ֞ה יִזְכֹּ֤ר עֲוֹנָם֙ וְיִפְקֹ֣ד חַטֹּאותָ֔ם הֵ֖מָּה מִצְרַ֥יִם יָשֽׁוּבוּ׃ | 13 |
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.
וַיִּשְׁכַּ֨ח יִשְׂרָאֵ֜ל אֶת־עֹשֵׂ֗הוּ וַיִּ֙בֶן֙ הֵֽיכָל֔וֹת וִֽיהוּדָ֕ה הִרְבָּ֖ה עָרִ֣ים בְּצֻר֑וֹת וְשִׁלַּחְתִּי־אֵ֣שׁ בְּעָרָ֔יו וְאָכְלָ֖ה אַרְמְנֹתֶֽיהָ׃ ס | 14 |
ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”