< יְשַׁעְיָהוּ 15 >
מַשָּׂ֖א מוֹאָ֑ב כִּ֠י בְּלֵ֞יל שֻׁדַּ֨ד עָ֤ר מוֹאָב֙ נִדְמָ֔ה כִּ֗י בְּלֵ֛יל שֻׁדַּ֥ד קִיר־מוֹאָ֖ב נִדְמָֽה׃ | 1 |
೧ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.
עָלָ֨ה הַבַּ֧יִת וְדִיבֹ֛ן הַבָּמ֖וֹת לְבֶ֑כִי עַל־נְב֞וֹ וְעַ֤ל מֵֽידְבָא֙ מוֹאָ֣ב יְיֵלִ֔יל בְּכָל־רֹאשָׁ֣יו קָרְחָ֔ה כָּל־זָקָ֖ן גְּרוּעָֽה׃ | 2 |
೨ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.
בְּחוּצֹתָ֖יו חָ֣גְרוּ שָׂ֑ק עַ֣ל גַּגּוֹתֶ֧יהָ וּבִרְחֹבֹתֶ֛יהָ כֻּלֹּ֥ה יְיֵלִ֖יל יֹרֵ֥ד בַּבֶּֽכִי׃ | 3 |
೩ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ.
וַתִּזְעַ֤ק חֶשְׁבּוֹן֙ וְאֶלְעָלֵ֔ה עַד־יַ֖הַץ נִשְׁמַ֣ע קוֹלָ֑ם עַל־כֵּ֗ן חֲלֻצֵ֤י מוֹאָב֙ יָרִ֔יעוּ נַפְשׁ֖וֹ יָ֥רְעָה לּֽוֹ׃ | 4 |
೪ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.
לִבִּי֙ לְמוֹאָ֣ב יִזְעָ֔ק בְּרִיחֶ֕הָ עַד־צֹ֖עַר עֶגְלַ֣ת שְׁלִשִׁיָּ֑ה כִּ֣י ׀ מַעֲלֵ֣ה הַלּוּחִ֗ית בִּבְכִי֙ יַֽעֲלֶה־בּ֔וֹ כִּ֚י דֶּ֣רֶךְ חוֹרֹנַ֔יִם זַעֲקַת־שֶׁ֖בֶר יְעֹעֵֽרוּ׃ | 5 |
೫ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.
כִּֽי־מֵ֥י נִמְרִ֖ים מְשַׁמּ֣וֹת יִֽהְי֑וּ כִּֽי־יָבֵ֤שׁ חָצִיר֙ כָּ֣לָה דֶ֔שֶׁא יֶ֖רֶק לֹ֥א הָיָֽה׃ | 6 |
೬ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.
עַל־כֵּ֖ן יִתְרָ֣ה עָשָׂ֑ה וּפְקֻדָּתָ֔ם עַ֛ל נַ֥חַל הָעֲרָבִ֖ים יִשָּׂאֽוּם׃ | 7 |
೭ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
כִּֽי־הִקִּ֥יפָה הַזְּעָקָ֖ה אֶת־גְּב֣וּל מוֹאָ֑ב עַד־אֶגְלַ֙יִם֙ יִלְלָתָ֔הּ וּבְאֵ֥ר אֵילִ֖ים יִלְלָתָֽהּ׃ | 8 |
೮ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.
כִּ֣י מֵ֤י דִימוֹן֙ מָ֣לְאוּ דָ֔ם כִּֽי־אָשִׁ֥ית עַל־דִּימ֖וֹן נוֹסָפ֑וֹת לִפְלֵיטַ֤ת מוֹאָב֙ אַרְיֵ֔ה וְלִשְׁאֵרִ֖ית אֲדָמָֽה׃ | 9 |
೯ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.