< יְשַׁעְיָהוּ 2 >
הַדָּבָר֙ אֲשֶׁ֣ר חָזָ֔ה יְשַֽׁעְיָ֖הוּ בֶּן־אָמ֑וֹץ עַל־יְהוּדָ֖ה וִירוּשָׁלִָֽם׃ | 1 |
೧ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.
וְהָיָ֣ה ׀ בְּאַחֲרִ֣ית הַיָּמִ֗ים נָכ֨וֹן יִֽהְיֶ֜ה הַ֤ר בֵּית־יְהוָה֙ בְּרֹ֣אשׁ הֶהָרִ֔ים וְנִשָּׂ֖א מִגְּבָע֑וֹת וְנָהֲר֥וּ אֵלָ֖יו כָּל־הַגּוֹיִֽם׃ | 2 |
೨ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
וְֽהָלְכ֞וּ עַמִּ֣ים רַבִּ֗ים וְאָמְרוּ֙ לְכ֣וּ ׀ וְנַעֲלֶ֣ה אֶל־הַר־יְהוָ֗ה אֶל־בֵּית֙ אֱלֹהֵ֣י יַעֲקֹ֔ב וְיֹרֵ֙נוּ֙ מִדְּרָכָ֔יו וְנֵלְכָ֖ה בְּאֹרְחֹתָ֑יו כִּ֤י מִצִּיּוֹן֙ תֵּצֵ֣א תוֹרָ֔ה וּדְבַר־יְהוָ֖ה מִירוּשָׁלִָֽם׃ | 3 |
೩ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
וְשָׁפַט֙ בֵּ֣ין הַגּוֹיִ֔ם וְהוֹכִ֖יחַ לְעַמִּ֣ים רַבִּ֑ים וְכִתְּת֨וּ חַרְבוֹתָ֜ם לְאִתִּ֗ים וַחֲנִיתֽוֹתֵיהֶם֙ לְמַזְמֵר֔וֹת לֹא־יִשָּׂ֨א ג֤וֹי אֶל־גּוֹי֙ חֶ֔רֶב וְלֹא־יִלְמְד֥וּ ע֖וֹד מִלְחָמָֽה׃ פ | 4 |
೪ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
בֵּ֖ית יַעֲקֹ֑ב לְכ֥וּ וְנֵלְכָ֖ה בְּא֥וֹר יְהוָֽה׃ | 5 |
೫ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.
כִּ֣י נָטַ֗שְׁתָּה עַמְּךָ֙ בֵּ֣ית יַעֲקֹ֔ב כִּ֤י מָלְאוּ֙ מִקֶּ֔דֶם וְעֹֽנְנִ֖ים כַּפְּלִשְׁתִּ֑ים וּבְיַלְדֵ֥י נָכְרִ֖ים יַשְׂפִּֽיקוּ׃ | 6 |
೬ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.
וַתִּמָּלֵ֤א אַרְצוֹ֙ כֶּ֣סֶף וְזָהָ֔ב וְאֵ֥ין קֵ֖צֶה לְאֹצְרֹתָ֑יו וַתִּמָּלֵ֤א אַרְצוֹ֙ סוּסִ֔ים וְאֵ֥ין קֵ֖צֶה לְמַרְכְּבֹתָֽיו׃ | 7 |
೭ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.
וַתִּמָּלֵ֥א אַרְצ֖וֹ אֱלִילִ֑ים לְמַעֲשֵׂ֤ה יָדָיו֙ יִֽשְׁתַּחֲו֔וּ לַאֲשֶׁ֥ר עָשׂ֖וּ אֶצְבְּעֹתָֽיו׃ | 8 |
೮ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
וַיִּשַּׁ֥ח אָדָ֖ם וַיִּשְׁפַּל־אִ֑ישׁ וְאַל־תִּשָּׂ֖א לָהֶֽם׃ | 9 |
೯ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.
בּ֣וֹא בַצּ֔וּר וְהִטָּמֵ֖ן בֶּֽעָפָ֑ר מִפְּנֵי֙ פַּ֣חַד יְהוָ֔ה וּמֵהֲדַ֖ר גְּאֹנֽוֹ׃ | 10 |
೧೦ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.
עֵינֵ֞י גַּבְה֤וּת אָדָם֙ שָׁפֵ֔ל וְשַׁ֖ח ר֣וּם אֲנָשִׁ֑ים וְנִשְׂגַּ֧ב יְהוָ֛ה לְבַדּ֖וֹ בַּיּ֥וֹם הַהֽוּא׃ ס | 11 |
೧೧ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
כִּ֣י י֞וֹם לַיהוָ֧ה צְבָא֛וֹת עַ֥ל כָּל־גֵּאֶ֖ה וָרָ֑ם וְעַ֖ל כָּל־נִשָּׂ֥א וְשָׁפֵֽל׃ | 12 |
೧೨ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
וְעַל֙ כָּל־אַרְזֵ֣י הַלְּבָנ֔וֹן הָרָמִ֖ים וְהַנִּשָּׂאִ֑ים וְעַ֖ל כָּל־אַלּוֹנֵ֥י הַבָּשָֽׁן׃ | 13 |
೧೩ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,
וְעַ֖ל כָּל־הֶהָרִ֣ים הָרָמִ֑ים וְעַ֖ל כָּל־הַגְּבָע֥וֹת הַנִּשָּׂאֽוֹת׃ | 14 |
೧೪ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,
וְעַ֖ל כָּל־מִגְדָּ֣ל גָּבֹ֑הַ וְעַ֖ל כָּל־חוֹמָ֥ה בְצוּרָֽה׃ | 15 |
೧೫ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,
וְעַ֖ל כָּל־אֳנִיּ֣וֹת תַּרְשִׁ֑ישׁ וְעַ֖ל כָּל־שְׂכִיּ֥וֹת הַחֶמְדָּֽה׃ | 16 |
೧೬ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.
וְשַׁח֙ גַּבְה֣וּת הָאָדָ֔ם וְשָׁפֵ֖ל ר֣וּם אֲנָשִׁ֑ים וְנִשְׂגַּ֧ב יְהוָ֛ה לְבַדּ֖וֹ בַּיּ֥וֹם הַהֽוּא׃ | 17 |
೧೭ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
וְהָאֱלִילִ֖ים כָּלִ֥יל יַחֲלֹֽף׃ | 18 |
೧೮ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.
וּבָ֙אוּ֙ בִּמְעָר֣וֹת צֻרִ֔ים וּבִמְחִלּ֖וֹת עָפָ֑ר מִפְּנֵ֞י פַּ֤חַד יְהוָה֙ וּמֵהֲדַ֣ר גְּאוֹנ֔וֹ בְּקוּמ֖וֹ לַעֲרֹ֥ץ הָאָֽרֶץ׃ | 19 |
೧೯ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.
בַּיּ֤וֹם הַהוּא֙ יַשְׁלִ֣יךְ הָאָדָ֔ם אֵ֚ת אֱלִילֵ֣י כַסְפּ֔וֹ וְאֵ֖ת אֱלִילֵ֣י זְהָב֑וֹ אֲשֶׁ֤ר עָֽשׂוּ־לוֹ֙ לְהִֽשְׁתַּחֲוֹ֔ת לַחְפֹּ֥ר פֵּר֖וֹת וְלָעֲטַלֵּפִֽים׃ | 20 |
೨೦ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
לָבוֹא֙ בְּנִקְר֣וֹת הַצֻּרִ֔ים וּבִסְעִפֵ֖י הַסְּלָעִ֑ים מִפְּנֵ֞י פַּ֤חַד יְהוָה֙ וּמֵהֲדַ֣ר גְּאוֹנ֔וֹ בְּקוּמ֖וֹ לַעֲרֹ֥ץ הָאָֽרֶץ׃ | 21 |
೨೧ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.
חִדְל֤וּ לָכֶם֙ מִן־הָ֣אָדָ֔ם אֲשֶׁ֥ר נְשָׁמָ֖ה בְּאַפּ֑וֹ כִּֽי־בַמֶּ֥ה נֶחְשָׁ֖ב הֽוּא׃ פ | 22 |
೨೨ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.