< יְשַׁעְיָהוּ 24 >

הִנֵּ֧ה יְהוָ֛ה בּוֹקֵ֥ק הָאָ֖רֶץ וּבֽוֹלְקָ֑הּ וְעִוָּ֣ה פָנֶ֔יהָ וְהֵפִ֖יץ יֹשְׁבֶֽיהָ׃ 1
ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ, ನಿರ್ಜನ ಪ್ರದೇಶವನ್ನಾಗಿ ಮಾಡಿ, ತಲೆಕೆಳಗಾಗಿ ತಿರುಗಿಸಿ, ಅದರ ನಿವಾಸಿಗಳನ್ನು ಚದರಿಸಿಬಿಡುವವರಾಗಿದ್ದಾರೆ.
וְהָיָ֤ה כָעָם֙ כַּכֹּהֵ֔ן כַּעֶ֙בֶד֙ כַּֽאדֹנָ֔יו כַּשִּׁפְחָ֖ה כַּגְּבִרְתָּ֑הּ כַּקּוֹנֶה֙ כַּמּוֹכֵ֔ר כַּמַּלְוֶה֙ כַּלֹּוֶ֔ה כַּנֹּשֶׁ֕ה כַּאֲשֶׁ֖ר נֹשֶׁ֥א בֽוֹ׃ 2
ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು.
הִבּ֧וֹק ׀ תִּבּ֛וֹק הָאָ֖רֶץ וְהִבּ֣וֹז ׀ תִּבּ֑וֹז כִּ֣י יְהוָ֔ה דִּבֶּ֖ר אֶת־הַדָּבָ֥ר הַזֶּֽה׃ 3
ಭೂಮಿಯು ಬಟ್ಟಬರಿದಾಗುವುದು, ಸಂಪೂರ್ಣ ಸುಲಿಗೆಯಾಗುವುದು. ಯೆಹೋವ ದೇವರು ತಾವೇ ಈ ಮಾತನ್ನು ಹೇಳಿದ್ದಾರೆ.
אָבְלָ֤ה נָֽבְלָה֙ הָאָ֔רֶץ אֻמְלְלָ֥ה נָבְלָ֖ה תֵּבֵ֑ל אֻמְלָ֖לוּ מְר֥וֹם עַם־הָאָֽרֶץ׃ 4
ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು. ಲೋಕವು ಸೊರಗಿ ಬಾಡಿಹೋಗುವುದು. ಆಕಾಶವು ಭೂಮಿಯೊಂದಿಗೆ ಕುಗ್ಗಿಹೋಗುವುದು.
וְהָאָ֥רֶץ חָנְפָ֖ה תַּ֣חַת יֹשְׁבֶ֑יהָ כִּֽי־עָבְר֤וּ תוֹרֹת֙ חָ֣לְפוּ חֹ֔ק הֵפֵ֖רוּ בְּרִ֥ית עוֹלָֽם׃ 5
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.
עַל־כֵּ֗ן אָלָה֙ אָ֣כְלָה אֶ֔רֶץ וַֽיֶּאְשְׁמ֖וּ יֹ֣שְׁבֵי בָ֑הּ עַל־כֵּ֗ן חָרוּ֙ יֹ֣שְׁבֵי אֶ֔רֶץ וְנִשְׁאַ֥ר אֱנ֖וֹשׁ מִזְעָֽר׃ 6
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.
אָבַ֥ל תִּיר֖וֹשׁ אֻמְלְלָה־גָ֑פֶן נֶאֶנְח֖וּ כָּל־שִׂמְחֵי־לֵֽב׃ 7
ದ್ರಾಕ್ಷಾರಸವು ಬತ್ತಿಹೋಗುವುದು, ದ್ರಾಕ್ಷಿಯು ಬಾಡುವುದು. ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
שָׁבַת֙ מְשׂ֣וֹשׂ תֻּפִּ֔ים חָדַ֖ל שְׁא֣וֹן עַלִּיזִ֑ים שָׁבַ֖ת מְשׂ֥וֹשׂ כִּנּֽוֹר׃ 8
ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
בַּשִּׁ֖יר לֹ֣א יִשְׁתּוּ־יָ֑יִן יֵמַ֥ר שֵׁכָ֖ר לְשֹׁתָֽיו׃ 9
ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವುದು.
נִשְׁבְּרָ֖ה קִרְיַת־תֹּ֑הוּ סֻגַּ֥ר כָּל־בַּ֖יִת מִבּֽוֹא׃ 10
ಹಾಳುಪಟ್ಟಣವು ಬಿದ್ದುಹೋಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
צְוָחָ֥ה עַל־הַיַּ֖יִן בַּֽחוּצ֑וֹת עָֽרְבָה֙ כָּל־שִׂמְחָ֔ה גָּלָ֖ה מְשׂ֥וֹשׂ הָאָֽרֶץ׃ 11
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ.
נִשְׁאַ֥ר בָּעִ֖יר שַׁמָּ֑ה וּשְׁאִיָּ֖ה יֻכַּת־שָֽׁעַר׃ 12
ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.
כִּ֣י כֹ֥ה יִהְיֶ֛ה בְּקֶ֥רֶב הָאָ֖רֶץ בְּת֣וֹךְ הָֽעַמִּ֑ים כְּנֹ֣קֶף זַ֔יִת כְּעוֹלֵלֹ֖ת אִם־כָּלָ֥ה בָצִֽיר׃ 13
ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.
הֵ֛מָּה יִשְׂא֥וּ קוֹלָ֖ם יָרֹ֑נּוּ בִּגְא֣וֹן יְהוָ֔ה צָהֲל֖וּ מִיָּֽם׃ 14
ಅವರು ತಮ್ಮ ಸ್ವರವನ್ನೆತ್ತಿ ಯೆಹೋವ ದೇವರ ಮಹಿಮೆಯನ್ನು ಕುರಿತು ಹಾಡುವರು. ಪಶ್ಚಿಮ ದಿಕ್ಕಿನ ಕಡೆಯಿಂದ ಆರ್ಭಟಿಸುವರು.
עַל־כֵּ֥ן בָּאֻרִ֖ים כַּבְּד֣וּ יְהוָ֑ה בְּאִיֵּ֣י הַיָּ֔ם שֵׁ֥ם יְהוָ֖ה אֱלֹהֵ֥י יִשְׂרָאֵֽל׃ ס 15
ಆದ್ದರಿಂದ ಪೂರ್ವದಿಕ್ಕಿನವರೇ, ಯೆಹೋವ ದೇವರನ್ನು ಮಹಿಮೆಪಡಿಸಿರಿ; ಸಮುದ್ರದ ದ್ವೀಪಗಳಲ್ಲಿ ಇಸ್ರಾಯೇಲರ ದೇವರಾದ ಯೆಹೋವ ದೇವರ ಹೆಸರನ್ನು ನೀವು ಘನಪಡಿಸಿರಿ, ಎಂದು ಕೂಗುವರು.
מִכְּנַ֨ף הָאָ֜רֶץ זְמִרֹ֤ת שָׁמַ֙עְנוּ֙ צְבִ֣י לַצַּדִּ֔יק וָאֹמַ֛ר רָזִי־לִ֥י רָֽזִי־לִ֖י א֣וֹי לִ֑י בֹּגְדִ֣ים בָּגָ֔דוּ וּבֶ֥גֶד בּוֹגְדִ֖ים בָּגָֽדוּ׃ 16
ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”
פַּ֥חַד וָפַ֖חַת וָפָ֑ח עָלֶ֖יךָ יוֹשֵׁ֥ב הָאָֽרֶץ׃ 17
ಭೂಮಿಯ ನಿವಾಸಿಗಳೇ, ಭಯವೂ, ಕುಳಿಯೂ, ಬಲೆಯೂ ನಿಮಗೆ ಕಾದಿವೆ.
וְֽ֠הָיָה הַנָּ֞ס מִקּ֤וֹל הַפַּ֙חַד֙ יִפֹּ֣ל אֶל־הַפַּ֔חַת וְהָֽעוֹלֶה֙ מִתּ֣וֹךְ הַפַּ֔חַת יִלָּכֵ֖ד בַּפָּ֑ח כִּֽי־אֲרֻבּ֤וֹת מִמָּרוֹם֙ נִפְתָּ֔חוּ וַֽיִּרְעֲשׁ֖וּ מ֥וֹסְדֵי אָֽרֶץ׃ 18
ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.
רֹ֥עָה הִֽתְרֹעֲעָ֖ה הָאָ֑רֶץ פּ֤וֹר הִֽתְפּוֹרְרָה֙ אֶ֔רֶץ מ֥וֹט הִֽתְמוֹטְטָ֖ה אָֽרֶץ׃ 19
ಭೂಮಿಯು ಬಿರುಕುಬಿಟ್ಟಿದೆ, ಬಿರಿದು ಬಿರಿದಿದೆ, ಭೂಮಿಯು ಕದಲಿಹೋಗಿದೆ.
נ֣וֹעַ תָּנ֤וּעַ אֶ֙רֶץ֙ כַּשִּׁכּ֔וֹר וְהִֽתְנוֹדְדָ֖ה כַּמְּלוּנָ֑ה וְכָבַ֤ד עָלֶ֙יהָ֙ פִּשְׁעָ֔הּ וְנָפְלָ֖ה וְלֹא־תֹסִ֥יף קֽוּם׃ ס 20
ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.
וְהָיָה֙ בַּיּ֣וֹם הַה֔וּא יִפְקֹ֧ד יְהוָ֛ה עַל־צְבָ֥א הַמָּר֖וֹם בַּמָּר֑וֹם וְעַל־מַלְכֵ֥י הָאֲדָמָ֖ה עַל־הָאֲדָמָֽה׃ 21
ಆ ದಿವಸದಲ್ಲಿ ಯೆಹೋವ ದೇವರು ಆಕಾಶದಲ್ಲಿರುವ ಆಕಾಶದವರ ಸೈನ್ಯವನ್ನೂ, ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸುವರು.
וְאֻסְּפ֨וּ אֲסֵפָ֤ה אַסִּיר֙ עַל־בּ֔וֹר וְסֻגְּר֖וּ עַל־מַסְגֵּ֑ר וּמֵרֹ֥ב יָמִ֖ים יִפָּקֵֽדוּ׃ 22
ನೆಲಮಾಳಿಗೆಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಬಹಳ ದಿನಗಳಿದ್ದ ತರುವಾಯ ದಂಡನೆಗೆ ಗುರಿಯಾಗುವರು.
וְחָֽפְרָה֙ הַלְּבָנָ֔ה וּבוֹשָׁ֖ה הַֽחַמָּ֑ה כִּֽי־מָלַ֞ךְ יְהוָ֣ה צְבָא֗וֹת בְּהַ֤ר צִיּוֹן֙ וּבִיר֣וּשָׁלִַ֔ם וְנֶ֥גֶד זְקֵנָ֖יו כָּבֽוֹד׃ פ 23
ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.

< יְשַׁעְיָהוּ 24 >