< יְשַׁעְיָהוּ 35 >
יְשֻׂשׂ֥וּם מִדְבָּ֖ר וְצִיָּ֑ה וְתָגֵ֧ל עֲרָבָ֛ה וְתִפְרַ֖ח כַּחֲבַצָּֽלֶת׃ | 1 |
೧ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.
פָּרֹ֨חַ תִּפְרַ֜ח וְתָגֵ֗ל אַ֚ף גִּילַ֣ת וְרַנֵּ֔ן כְּב֤וֹד הַלְּבָנוֹן֙ נִתַּן־לָ֔הּ הֲדַ֥ר הַכַּרְמֶ֖ל וְהַשָּׁר֑וֹן הֵ֛מָּה יִרְא֥וּ כְבוֹד־יְהוָ֖ה הֲדַ֥ר אֱלֹהֵֽינוּ׃ ס | 2 |
೨ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.
חַזְּק֖וּ יָדַ֣יִם רָפ֑וֹת וּבִרְכַּ֥יִם כֹּשְׁל֖וֹת אַמֵּֽצוּ׃ | 3 |
೩ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
אִמְרוּ֙ לְנִמְהֲרֵי־לֵ֔ב חִזְק֖וּ אַל־תִּירָ֑אוּ הִנֵּ֤ה אֱלֹֽהֵיכֶם֙ נָקָ֣ם יָב֔וֹא גְּמ֣וּל אֱלֹהִ֔ים ה֥וּא יָב֖וֹא וְיֹשַׁעֲכֶֽם׃ | 4 |
೪ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
אָ֥ז תִּפָּקַ֖חְנָה עֵינֵ֣י עִוְרִ֑ים וְאָזְנֵ֥י חֵרְשִׁ֖ים תִּפָּתַֽחְנָה׃ | 5 |
೫ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
אָ֣ז יְדַלֵּ֤ג כָּֽאַיָּל֙ פִּסֵּ֔חַ וְתָרֹ֖ן לְשׁ֣וֹן אִלֵּ֑ם כִּֽי־נִבְקְע֤וּ בַמִּדְבָּר֙ מַ֔יִם וּנְחָלִ֖ים בָּעֲרָבָֽה׃ | 6 |
೬ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
וְהָיָ֤ה הַשָּׁרָב֙ לַאֲגַ֔ם וְצִמָּא֖וֹן לְמַבּ֣וּעֵי מָ֑יִם בִּנְוֵ֤ה תַנִּים֙ רִבְצָ֔הּ חָצִ֖יר לְקָנֶ֥ה וָגֹֽמֶא׃ | 7 |
೭ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
וְהָיָה־שָׁ֞ם מַסְל֣וּל וָדֶ֗רֶךְ וְדֶ֤רֶךְ הַקֹּ֙דֶשׁ֙ יִקָּ֣רֵא לָ֔הּ לֹֽא־יַעַבְרֶ֥נּוּ טָמֵ֖א וְהוּא־לָ֑מוֹ הֹלֵ֥ךְ דֶּ֛רֶךְ וֶאֱוִילִ֖ים לֹ֥א יִתְעֽוּ׃ | 8 |
೮ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
לֹא־יִהְיֶ֨ה שָׁ֜ם אַרְיֵ֗ה וּפְרִ֤יץ חַיּוֹת֙ בַּֽל־יַעֲלֶ֔נָּה לֹ֥א תִמָּצֵ֖א שָׁ֑ם וְהָלְכ֖וּ גְּאוּלִֽים׃ | 9 |
೯ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.
וּפְדוּיֵ֨י יְהוָ֜ה יְשֻׁב֗וּן וּבָ֤אוּ צִיּוֹן֙ בְּרִנָּ֔ה וְשִׂמְחַ֥ת עוֹלָ֖ם עַל־רֹאשָׁ֑ם שָׂשׂ֤וֹן וְשִׂמְחָה֙ יַשִּׂ֔יגוּ וְנָ֖סוּ יָג֥וֹן וַאֲנָחָֽה׃ פ | 10 |
೧೦ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.