< יְשַׁעְיָהוּ 37 >

וַיְהִ֗י כִּשְׁמֹ֙עַ֙ הַמֶּ֣לֶךְ חִזְקִיָּ֔הוּ וַיִּקְרַ֖ע אֶת־בְּגָדָ֑יו וַיִּתְכַּ֣ס בַּשָּׂ֔ק וַיָּבֹ֖א בֵּ֥ית יְהוָֽה׃ 1
ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
וַ֠יִּשְׁלַח אֶת־אֶלְיָקִ֨ים אֲשֶׁר־עַל־הַבַּ֜יִת וְאֵ֣ת ׀ שֶׁבְנָ֣א הַסּוֹפֵ֗ר וְאֵת֙ זִקְנֵ֣י הַכֹּהֲנִ֔ים מִתְכַּסִּ֖ים בַּשַּׂקִּ֑ים אֶל־יְשַֽׁעְיָ֥הוּ בֶן־אָמ֖וֹץ הַנָּבִֽיא׃ 2
ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
וַיֹּאמְר֣וּ אֵלָ֗יו כֹּ֚ה אָמַ֣ר חִזְקִיָּ֔הוּ יוֹם־צָרָ֧ה וְתוֹכֵחָ֛ה וּנְאָצָ֖ה הַיּ֣וֹם הַזֶּ֑ה כִּ֣י בָ֤אוּ בָנִים֙ עַד־מַשְׁבֵּ֔ר וְכֹ֥חַ אַ֖יִן לְלֵדָֽה׃ 3
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
אוּלַ֡י יִשְׁמַע֩ יְהוָ֨ה אֱלֹהֶ֜יךָ אֵ֣ת ׀ דִּבְרֵ֣י רַב־שָׁקֵ֗ה אֲשֶׁר֩ שְׁלָח֨וֹ מֶֽלֶךְ־אַשּׁ֤וּר ׀ אֲדֹנָיו֙ לְחָרֵף֙ אֱלֹהִ֣ים חַ֔י וְהוֹכִ֙יחַ֙ בַּדְּבָרִ֔ים אֲשֶׁ֥ר שָׁמַ֖ע יְהוָ֣ה אֱלֹהֶ֑יךָ וְנָשָׂ֣אתָ תְפִלָּ֔ה בְּעַ֥ד הַשְּׁאֵרִ֖ית הַנִּמְצָאָֽה׃ 4
ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.
וַיָּבֹ֗אוּ עַבְדֵ֛י הַמֶּ֥לֶךְ חִזְקִיָּ֖הוּ אֶל־יְשַׁעְיָֽהוּ׃ 5
ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,
וַיֹּ֤אמֶר אֲלֵיהֶם֙ יְשַֽׁעְיָ֔הוּ כֹּ֥ה תֹאמְר֖וּן אֶל־אֲדֹנֵיכֶ֑ם כֹּ֣ה ׀ אָמַ֣ר יְהוָ֗ה אַל־תִּירָא֙ מִפְּנֵ֤י הַדְּבָרִים֙ אֲשֶׁ֣ר שָׁמַ֔עְתָּ אֲשֶׁ֧ר גִּדְּפ֛וּ נַעֲרֵ֥י מֶלֶךְ־אַשּׁ֖וּר אוֹתִֽי׃ 6
“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.
הִנְנִ֨י נוֹתֵ֥ן בּוֹ֙ ר֔וּחַ וְשָׁמַ֥ע שְׁמוּעָ֖ה וְשָׁ֣ב אֶל־אַרְצ֑וֹ וְהִפַּלְתִּ֥יו בַּחֶ֖רֶב בְּאַרְצֽוֹ׃ 7
ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.
וַיָּ֙שָׁב֙ רַב־שָׁקֵ֔ה וַיִּמְצָא֙ אֶת־מֶ֣לֶךְ אַשּׁ֔וּר נִלְחָ֖ם עַל־לִבְנָ֑ה כִּ֣י שָׁמַ֔ע כִּ֥י נָסַ֖ע מִלָּכִֽישׁ׃ 8
ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
וַיִּשְׁמַ֗ע עַל־תִּרְהָ֤קָה מֶֽלֶךְ־כּוּשׁ֙ לֵאמֹ֔ר יָצָ֖א לְהִלָּחֵ֣ם אִתָּ֑ךְ וַיִּשְׁמַע֙ וַיִּשְׁלַ֣ח מַלְאָכִ֔ים אֶל־חִזְקִיָּ֖הוּ לֵאמֹֽר׃ 9
ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,
כֹּ֣ה תֹאמְר֗וּן אֶל־חִזְקִיָּ֤הוּ מֶֽלֶךְ־יְהוּדָה֙ לֵאמֹ֔ר אַל־יַשִּֽׁאֲךָ֣ אֱלֹהֶ֔יךָ אֲשֶׁ֥ר אַתָּ֛ה בּוֹטֵ֥חַ בּ֖וֹ לֵאמֹ֑ר לֹ֤א תִנָּתֵן֙ יְר֣וּשָׁלִַ֔ם בְּיַ֖ד מֶ֥לֶךְ אַשּֽׁוּר׃ 10
೧೦“ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’
הִנֵּ֣ה ׀ אַתָּ֣ה שָׁמַ֗עְתָּ אֲשֶׁ֨ר עָשׂ֜וּ מַלְכֵ֥י אַשּׁ֛וּר לְכָל־הָאֲרָצ֖וֹת לְהַחֲרִימָ֑ם וְאַתָּ֖ה תִּנָּצֵֽל׃ 11
೧೧ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?
הַהִצִּ֨ילוּ אוֹתָ֜ם אֱלֹהֵ֤י הַגּוֹיִם֙ אֲשֶׁ֣ר הִשְׁחִ֣יתוּ אֲבוֹתַ֔י אֶת־גּוֹזָ֖ן וְאֶת־חָרָ֑ן וְרֶ֥צֶף וּבְנֵי־עֶ֖דֶן אֲשֶׁ֥ר בִּתְלַשָּֽׂר׃ 12
೧೨ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
אַיֵּ֤ה מֶֽלֶךְ־חֲמָת֙ וּמֶ֣לֶךְ אַרְפָּ֔ד וּמֶ֖לֶךְ לָעִ֣יר סְפַרְוָ֑יִם הֵנַ֖ע וְעִוָּֽה׃ 13
೧೩ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
וַיִּקַּ֨ח חִזְקִיָּ֧הוּ אֶת־הַסְּפָרִ֛ים מִיַּ֥ד הַמַּלְאָכִ֖ים וַיִּקְרָאֵ֑הוּ וַיַּ֙עַל֙ בֵּ֣ית יְהוָ֔ה וַיִּפְרְשֵׂ֥הוּ חִזְקִיָּ֖הוּ לִפְנֵ֥י יְהוָֽה׃ 14
೧೪ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
וַיִּתְפַּלֵּל֙ חִזְקִיָּ֔הוּ אֶל־יְהוָ֖ה לֵאמֹֽר׃ 15
೧೫ಹಿಜ್ಕೀಯನು ಯೆಹೋವನನ್ನು ಕುರಿತು
יְהוָ֨ה צְבָא֜וֹת אֱלֹהֵ֤י יִשְׂרָאֵל֙ יֹשֵׁ֣ב הַכְּרֻבִ֔ים אַתָּה־ה֤וּא הָֽאֱלֹהִים֙ לְבַדְּךָ֔ לְכֹ֖ל מַמְלְכ֣וֹת הָאָ֑רֶץ אַתָּ֣ה עָשִׂ֔יתָ אֶת־הַשָּׁמַ֖יִם וְאֶת־הָאָֽרֶץ׃ 16
೧೬“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.
הַטֵּ֨ה יְהוָ֤ה ׀ אָזְנְךָ֙ וּֽשְׁמָ֔ע פְּקַ֧ח יְהוָ֛ה עֵינֶ֖ךָ וּרְאֵ֑ה וּשְׁמַ֗ע אֵ֚ת כָּל־דִּבְרֵ֣י סַנְחֵרִ֔יב אֲשֶׁ֣ר שָׁלַ֔ח לְחָרֵ֖ף אֱלֹהִ֥ים חָֽי׃ 17
೧೭ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.
אָמְנָ֖ם יְהוָ֑ה הֶחֱרִ֜יבוּ מַלְכֵ֥י אַשּׁ֛וּר אֶת־כָּל־הָאֲרָצ֖וֹת וְאֶת־אַרְצָֽם׃ 18
೧೮ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.
וְנָתֹ֥ן אֶת־אֱלֹהֵיהֶ֖ם בָּאֵ֑שׁ כִּי֩ לֹ֨א אֱלֹהִ֜ים הֵ֗מָּה כִּ֣י אִם־מַעֲשֵׂ֧ה יְדֵֽי־אָדָ֛ם עֵ֥ץ וָאֶ֖בֶן וַֽיְאַבְּדֽוּם׃ 19
೧೯ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
וְעַתָּה֙ יְהוָ֣ה אֱלֹהֵ֔ינוּ הוֹשִׁיעֵ֖נוּ מִיָד֑וֹ וְיֵֽדְעוּ֙ כָּל־מַמְלְכ֣וֹת הָאָ֔רֶץ כִּֽי־אַתָּ֥ה יְהוָ֖ה לְבַדֶּֽךָ׃ 20
೨೦ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”
וַיִּשְׁלַח֙ יְשַֽׁעְיָ֣הוּ בֶן־אָמ֔וֹץ אֶל־חִזְקִיָּ֖הוּ לֵאמֹ֑ר כֹּֽה־אָמַ֤ר יְהוָה֙ אֱלֹהֵ֣י יִשְׂרָאֵ֔ל אֲשֶׁר֙ הִתְפַּלַּ֣לְתָּ אֵלַ֔י אֶל־סַנְחֵרִ֖יב מֶ֥לֶךְ אַשּֽׁוּר׃ 21
೨೧ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
זֶ֣ה הַדָּבָ֔ר אֲשֶׁר־דִּבֶּ֥ר יְהוָ֖ה עָלָ֑יו בָּזָ֨ה לְךָ֜ לָעֲגָ֣ה לְךָ֗ בְּתוּלַת֙ בַּת־צִיּ֔וֹן אַחֲרֶ֙יךָ֙ רֹ֣אשׁ הֵנִ֔יעָה בַּ֖ת יְרוּשָׁלִָֽם׃ 22
೨೨ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.
אֶת־מִ֤י חֵרַ֙פְתָּ֙ וְגִדַּ֔פְתָּ וְעַל־מִ֖י הֲרִימ֣וֹתָה קּ֑וֹל וַתִּשָּׂ֥א מָר֛וֹם עֵינֶ֖יךָ אֶל־קְד֥וֹשׁ יִשְׂרָאֵֽל׃ 23
೨೩ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
בְּיַ֣ד עֲבָדֶיךָ֮ חֵרַ֣פְתָּ ׀ אֲדֹנָי֒ וַתֹּ֗אמֶר בְּרֹ֥ב רִכְבִּ֛י אֲנִ֥י עָלִ֛יתִי מְר֥וֹם הָרִ֖ים יַרְכְּתֵ֣י לְבָנ֑וֹן וְאֶכְרֹ֞ת קוֹמַ֤ת אֲרָזָיו֙ מִבְחַ֣ר בְּרֹשָׁ֔יו וְאָבוֹא֙ מְר֣וֹם קִצּ֔וֹ יַ֖עַר כַּרְמִלּֽוֹ׃ 24
೨೪ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
אֲנִ֥י קַ֖רְתִּי וְשָׁתִ֣יתִי מָ֑יִם וְאַחְרִב֙ בְּכַף־פְּעָמַ֔י כֹּ֖ל יְאֹרֵ֥י מָצֽוֹר׃ 25
೨೫ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.
הֲלֽוֹא־שָׁמַ֤עְתָּ לְמֵֽרָחוֹק֙ אוֹתָ֣הּ עָשִׂ֔יתִי מִ֥ימֵי קֶ֖דֶם וִיצַרְתִּ֑יהָ עַתָּ֣ה הֲבֵאתִ֔יהָ וּתְהִ֗י לְהַשְׁא֛וֹת גַּלִּ֥ים נִצִּ֖ים עָרִ֥ים בְּצֻרֽוֹת׃ 26
೨೬ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.
וְיֹֽשְׁבֵיהֶן֙ קִצְרֵי־יָ֔ד חַ֖תּוּ וָבֹ֑שׁוּ הָי֞וּ עֵ֤שֶׂב שָׂדֶה֙ וִ֣ירַק דֶּ֔שֶׁא חֲצִ֣יר גַּגּ֔וֹת וּשְׁדֵמָ֖ה לִפְנֵ֥י קָמָֽה׃ 27
೨೭ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
וְשִׁבְתְּךָ֛ וְצֵאתְךָ֥ וּבוֹאֲךָ֖ יָדָ֑עְתִּי וְאֵ֖ת הִֽתְרַגֶּזְךָ֥ אֵלָֽי׃ 28
೨೮ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.
יַ֚עַן הִתְרַגֶּזְךָ֣ אֵלַ֔י וְשַׁאֲנַנְךָ֖ עָלָ֣ה בְאָזְנָ֑י וְשַׂמְתִּ֨י חַחִ֜י בְּאַפֶּ֗ךָ וּמִתְגִּי֙ בִּשְׂפָתֶ֔יךָ וַהֲשִׁ֣יבֹתִ֔יךָ בַּדֶּ֖רֶךְ אֲשֶׁר־בָּ֥אתָ בָּֽהּ׃ 29
೨೯ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
וְזֶה־לְּךָ֣ הָא֔וֹת אָכ֤וֹל הַשָּׁנָה֙ סָפִ֔יחַ וּבַשָּׁנָ֥ה הַשֵּׁנִ֖ית שָׁחִ֑יס וּבַשָּׁנָ֣ה הַשְּׁלִישִׁ֗ית זִרְע֧וּ וְקִצְר֛וּ וְנִטְע֥וּ כְרָמִ֖ים וְאִכְל֥וּ פִרְיָֽם׃ 30
೩೦ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
וְיָ֨סְפָ֜ה פְּלֵיטַ֧ת בֵּית־יְהוּדָ֛ה הַנִּשְׁאָרָ֖ה שֹׁ֣רֶשׁ לְמָ֑טָּה וְעָשָׂ֥ה פְרִ֖י לְמָֽעְלָה׃ 31
೩೧ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
כִּ֤י מִירֽוּשָׁלִַ֙ם֙ תֵּצֵ֣א שְׁאֵרִ֔ית וּפְלֵיטָ֖ה מֵהַ֣ר צִיּ֑וֹן קִנְאַ֛ת יְהוָ֥ה צְבָא֖וֹת תַּֽעֲשֶׂה־זֹּֽאת׃ ס 32
೩೨ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
לָכֵ֗ן כֹּֽה־אָמַ֤ר יְהוָה֙ אֶל־מֶ֣לֶךְ אַשּׁ֔וּר לֹ֤א יָבוֹא֙ אֶל־הָעִ֣יר הַזֹּ֔את וְלֹֽא־יוֹרֶ֥ה שָׁ֖ם חֵ֑ץ וְלֹֽא־יְקַדְּמֶ֣נָּה מָגֵ֔ן וְלֹֽא־יִשְׁפֹּ֥ךְ עֳלֶ֖יהָ סֹלְלָֽה׃ 33
೩೩ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.
בַּדֶּ֥רֶךְ אֲשֶׁר־בָּ֖א בָּ֣הּ יָשׁ֑וּב וְאֶל־הָעִ֥יר הַזֹּ֛את לֹ֥א יָב֖וֹא נְאֻם־יְהוָֽה׃ 34
೩೪ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.
וְגַנּוֹתִ֛י עַל־הָעִ֥יר הַזֹּ֖את לְהֽוֹשִׁיעָ֑הּ לְמַֽעֲנִ֔י וּלְמַ֖עַן דָּוִ֥ד עַבְדִּֽי׃ ס 35
೩೫ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.
וַיֵּצֵ֣א ׀ מַלְאַ֣ךְ יְהוָ֗ה וַיַּכֶּה֙ בְּמַחֲנֵ֣ה אַשּׁ֔וּר מֵאָ֛ה וּשְׁמֹנִ֥ים וַחֲמִשָּׁ֖ה אָ֑לֶף וַיַּשְׁכִּ֣ימוּ בַבֹּ֔קֶר וְהִנֵּ֥ה כֻלָּ֖ם פְּגָרִ֥ים מֵתִֽים׃ 36
೩೬ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
וַיִּסַּ֣ע וַיֵּ֔לֶךְ וַיָּ֖שָׁב סַנְחֵרִ֣יב מֶֽלֶךְ־אַשּׁ֑וּר וַיֵּ֖שֶׁב בְּנִֽינְוֵֽה׃ 37
೩೭ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
וַיְהִי֩ ה֨וּא מִֽשְׁתַּחֲוֶ֜ה בֵּ֣ית ׀ נִסְרֹ֣ךְ אֱלֹהָ֗יו וְֽאַדְרַמֶּ֨לֶךְ וְשַׂרְאֶ֤צֶר בָּנָיו֙ הִכֻּ֣הוּ בַחֶ֔רֶב וְהֵ֥מָּה נִמְלְט֖וּ אֶ֣רֶץ אֲרָרָ֑ט וַיִּמְלֹ֛ךְ אֵֽסַר־חַדֹּ֥ן בְּנ֖וֹ תַּחְתָּֽיו׃ ס 38
೩೮ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.

< יְשַׁעְיָהוּ 37 >