< יְשַׁעְיָהוּ 42 >
הֵ֤ן עַבְדִּי֙ אֶתְמָךְ־בּ֔וֹ בְּחִירִ֖י רָצְתָ֣ה נַפְשִׁ֑י נָתַ֤תִּי רוּחִי֙ עָלָ֔יו מִשְׁפָּ֖ט לַגּוֹיִ֥ם יוֹצִֽיא׃ | 1 |
೧ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
לֹ֥א יִצְעַ֖ק וְלֹ֣א יִשָּׂ֑א וְלֹֽא־יַשְׁמִ֥יעַ בַּח֖וּץ קוֹלֽוֹ׃ | 2 |
೨ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.
קָנֶ֤ה רָצוּץ֙ לֹ֣א יִשְׁבּ֔וֹר וּפִשְׁתָּ֥ה כֵהָ֖ה לֹ֣א יְכַבֶּ֑נָּה לֶאֱמֶ֖ת יוֹצִ֥יא מִשְׁפָּֽט׃ | 3 |
೩ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.
לֹ֤א יִכְהֶה֙ וְלֹ֣א יָר֔וּץ עַד־יָשִׂ֥ים בָּאָ֖רֶץ מִשְׁפָּ֑ט וּלְתוֹרָת֖וֹ אִיִּ֥ים יְיַחֵֽילוּ׃ פ | 4 |
೪ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
כֹּֽה־אָמַ֞ר הָאֵ֣ל ׀ יְהוָ֗ה בּוֹרֵ֤א הַשָּׁמַ֙יִם֙ וְנ֣וֹטֵיהֶ֔ם רֹקַ֥ע הָאָ֖רֶץ וְצֶאֱצָאֶ֑יהָ נֹתֵ֤ן נְשָׁמָה֙ לָעָ֣ם עָלֶ֔יהָ וְר֖וּחַ לַהֹלְכִ֥ים בָּֽהּ׃ | 5 |
೫ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
אֲנִ֧י יְהוָ֛ה קְרָאתִ֥יךָֽ בְצֶ֖דֶק וְאַחְזֵ֣ק בְּיָדֶ֑ךָ וְאֶצָּרְךָ֗ וְאֶתֶּנְךָ֛ לִבְרִ֥ית עָ֖ם לְא֥וֹר גּוֹיִֽם׃ | 6 |
೬“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
לִפְקֹ֖חַ עֵינַ֣יִם עִוְר֑וֹת לְהוֹצִ֤יא מִמַּסְגֵּר֙ אַסִּ֔יר מִבֵּ֥ית כֶּ֖לֶא יֹ֥שְׁבֵי חֹֽשֶׁךְ׃ | 7 |
೭ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.
אֲנִ֥י יְהוָ֖ה ה֣וּא שְׁמִ֑י וּכְבוֹדִי֙ לְאַחֵ֣ר לֹֽא־אֶתֵּ֔ן וּתְהִלָּתִ֖י לַפְּסִילִֽים׃ | 8 |
೮ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
הָרִֽאשֹׁנ֖וֹת הִנֵּה־בָ֑אוּ וַֽחֲדָשׁוֹת֙ אֲנִ֣י מַגִּ֔יד בְּטֶ֥רֶם תִּצְמַ֖חְנָה אַשְׁמִ֥יע אֶתְכֶֽם׃ פ | 9 |
೯ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”
שִׁ֤ירוּ לַֽיהוָה֙ שִׁ֣יר חָדָ֔שׁ תְּהִלָּת֖וֹ מִקְצֵ֣ה הָאָ֑רֶץ יוֹרְדֵ֤י הַיָּם֙ וּמְלֹא֔וֹ אִיִּ֖ים וְיֹשְׁבֵיהֶֽם׃ | 10 |
೧೦ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.
יִשְׂא֤וּ מִדְבָּר֙ וְעָרָ֔יו חֲצֵרִ֖ים תֵּשֵׁ֣ב קֵדָ֑ר יָרֹ֙נּוּ֙ יֹ֣שְׁבֵי סֶ֔לַע מֵרֹ֥אשׁ הָרִ֖ים יִצְוָֽחוּ׃ | 11 |
೧೧ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.
יָשִׂ֥ימוּ לַֽיהוָ֖ה כָּב֑וֹד וּתְהִלָּת֖וֹ בָּאִיִּ֥ים יַגִּֽידוּ׃ | 12 |
೧೨ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.
יְהוָה֙ כַּגִּבּ֣וֹר יֵצֵ֔א כְּאִ֥ישׁ מִלְחָמ֖וֹת יָעִ֣יר קִנְאָ֑ה יָרִ֙יעַ֙ אַף־יַצְרִ֔יחַ עַל־אֹיְבָ֖יו יִתְגַּבָּֽר׃ ס | 13 |
೧೩ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
הֶחֱשֵׁ֙יתִי֙ מֵֽעוֹלָ֔ם אַחֲרִ֖ישׁ אֶתְאַפָּ֑ק כַּיּוֹלֵדָ֣ה אֶפְעֶ֔ה אֶשֹּׁ֥ם וְאֶשְׁאַ֖ף יָֽחַד׃ | 14 |
೧೪ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.
אַחֲרִ֤יב הָרִים֙ וּגְבָע֔וֹת וְכָל־עֶשְׂבָּ֖ם אוֹבִ֑ישׁ וְשַׂמְתִּ֤י נְהָרוֹת֙ לָֽאִיִּ֔ים וַאֲגַמִּ֖ים אוֹבִֽישׁ׃ | 15 |
೧೫ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.
וְהוֹלַכְתִּ֣י עִוְרִ֗ים בְּדֶ֙רֶךְ֙ לֹ֣א יָדָ֔עוּ בִּנְתִיב֥וֹת לֹֽא־יָדְע֖וּ אַדְרִיכֵ֑ם אָשִׂים֩ מַחְשָׁ֨ךְ לִפְנֵיהֶ֜ם לָא֗וֹר וּמַֽעֲקַשִּׁים֙ לְמִישׁ֔וֹר אֵ֚לֶּה הַדְּבָרִ֔ים עֲשִׂיתִ֖ם וְלֹ֥א עֲזַבְתִּֽים׃ | 16 |
೧೬ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
נָסֹ֤גוּ אָחוֹר֙ יֵבֹ֣שׁוּ בֹ֔שֶׁת הַבֹּטְחִ֖ים בַּפָּ֑סֶל הָאֹמְרִ֥ים לְמַסֵּכָ֖ה אַתֶּ֥ם אֱלֹהֵֽינוּ׃ ס | 17 |
೧೭ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
הַחֵרְשִׁ֖ים שְׁמָ֑עוּ וְהַעִוְרִ֖ים הַבִּ֥יטוּ לִרְאֽוֹת׃ | 18 |
೧೮ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!
מִ֤י עִוֵּר֙ כִּ֣י אִם־עַבְדִּ֔י וְחֵרֵ֖שׁ כְּמַלְאָכִ֣י אֶשְׁלָ֑ח מִ֤י עִוֵּר֙ כִּמְשֻׁלָּ֔ם וְעִוֵּ֖ר כְּעֶ֥בֶד יְהוָֽה׃ | 19 |
೧೯ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?
רָא֥וֹת רַבּ֖וֹת וְלֹ֣א תִשְׁמֹ֑ר פָּק֥וֹחַ אָזְנַ֖יִם וְלֹ֥א יִשְׁמָֽע׃ | 20 |
೨೦ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.
יְהוָ֥ה חָפֵ֖ץ לְמַ֣עַן צִדְק֑וֹ יַגְדִּ֥יל תּוֹרָ֖ה וְיַאְדִּֽיר׃ | 21 |
೨೧ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
וְהוּא֮ עַם־בָּז֣וּז וְשָׁסוּי֒ הָפֵ֤חַ בַּֽחוּרִים֙ כֻּלָּ֔ם וּבְבָתֵּ֥י כְלָאִ֖ים הָחְבָּ֑אוּ הָי֤וּ לָבַז֙ וְאֵ֣ין מַצִּ֔יל מְשִׁסָּ֖ה וְאֵין־אֹמֵ֥ר הָשַֽׁב׃ | 22 |
೨೨ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
מִ֥י בָכֶ֖ם יַאֲזִ֣ין זֹ֑את יַקְשִׁ֥ב וְיִשְׁמַ֖ע לְאָחֽוֹר׃ | 23 |
೨೩ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?
מִֽי־נָתַ֨ן לִמְשִׁסָּ֧ה יַעֲקֹ֛ב וְיִשְׂרָאֵ֥ל לְבֹזְזִ֖ים הֲל֣וֹא יְהוָ֑ה ז֚וּ חָטָ֣אנוּ ל֔וֹ וְלֹֽא־אָב֤וּ בִדְרָכָיו֙ הָל֔וֹךְ וְלֹ֥א שָׁמְע֖וּ בְּתוֹרָתֽוֹ׃ | 24 |
೨೪ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ
וַיִּשְׁפֹּ֤ךְ עָלָיו֙ חֵמָ֣ה אַפּ֔וֹ וֶעֱז֖וּז מִלְחָמָ֑ה וַתְּלַהֲטֵ֤הוּ מִסָּבִיב֙ וְלֹ֣א יָדָ֔ע וַתִּבְעַר־בּ֖וֹ וְלֹא־יָשִׂ֥ים עַל־לֵֽב׃ פ | 25 |
೨೫ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.