< יְשַׁעְיָהוּ 44 >
וְעַתָּ֥ה שְׁמַ֖ע יַעֲקֹ֣ב עַבְדִּ֑י וְיִשְׂרָאֵ֖ל בָּחַ֥רְתִּי בֽוֹ׃ | 1 |
೧ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:
כֹּה־אָמַ֨ר יְהוָ֥ה עֹשֶׂ֛ךָ וְיֹצֶרְךָ֥ מִבֶּ֖טֶן יַעְזְרֶ֑ךָּ אַל־תִּירָא֙ עַבְדִּ֣י יַֽעֲקֹ֔ב וִישֻׁר֖וּן בָּחַ֥רְתִּי בֽוֹ׃ | 2 |
೨ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!
כִּ֤י אֶצָּק־מַ֙יִם֙ עַל־צָמֵ֔א וְנֹזְלִ֖ים עַל־יַבָּשָׁ֑ה אֶצֹּ֤ק רוּחִי֙ עַל־זַרְעֶ֔ךָ וּבִרְכָתִ֖י עַל־צֶאֱצָאֶֽיךָ׃ | 3 |
೩ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
וְצָמְח֖וּ בְּבֵ֣ין חָצִ֑יר כַּעֲרָבִ֖ים עַל־יִבְלֵי־מָֽיִם׃ | 4 |
೪ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.
זֶ֤ה יֹאמַר֙ לַֽיהוָ֣ה אָ֔נִי וְזֶ֖ה יִקְרָ֣א בְשֵֽׁם־יַעֲקֹ֑ב וְזֶ֗ה יִכְתֹּ֤ב יָדוֹ֙ לַֽיהוָ֔ה וּבְשֵׁ֥ם יִשְׂרָאֵ֖ל יְכַנֶּֽה׃ פ | 5 |
೫(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”
כֹּֽה־אָמַ֨ר יְהוָ֧ה מֶֽלֶךְ־יִשְׂרָאֵ֛ל וְגֹאֲל֖וֹ יְהוָ֣ה צְבָא֑וֹת אֲנִ֤י רִאשׁוֹן֙ וַאֲנִ֣י אַחֲר֔וֹן וּמִבַּלְעָדַ֖י אֵ֥ין אֱלֹהִֽים׃ | 6 |
೬ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
וּמִֽי־כָמ֣וֹנִי יִקְרָ֗א וְיַגִּידֶ֤הָ וְיַעְרְכֶ֙הָ֙ לִ֔י מִשּׂוּמִ֖י עַם־עוֹלָ֑ם וְאֹתִיּ֛וֹת וַאֲשֶׁ֥ר תָּבֹ֖אנָה יַגִּ֥ידוּ לָֽמוֹ׃ | 7 |
೭ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.
אַֽל־תִּפְחֲדוּ֙ וְאַל־תִּרְה֔וּ הֲלֹ֥א מֵאָ֛ז הִשְׁמַעְתִּ֥יךָ וְהִגַּ֖דְתִּי וְאַתֶּ֣ם עֵדָ֑י הֲיֵ֤שׁ אֱל֙וֹהַּ֙ מִבַּלְעָדַ֔י וְאֵ֥ין צ֖וּר בַּל־יָדָֽעְתִּי׃ | 8 |
೮ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”
יֹֽצְרֵי־פֶ֤סֶל כֻּלָּם֙ תֹּ֔הוּ וַחֲמוּדֵיהֶ֖ם בַּל־יוֹעִ֑ילוּ וְעֵדֵיהֶ֣ם הֵׄ֗מָּׄהׄ בַּל־יִרְא֛וּ וּבַל־יֵדְע֖וּ לְמַ֥עַן יֵבֹֽשׁוּ׃ | 9 |
೯ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
מִֽי־יָצַ֥ר אֵ֖ל וּפֶ֣סֶל נָסָ֑ךְ לְבִלְתִּ֖י הוֹעִֽיל׃ | 10 |
೧೦ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?
הֵ֤ן כָּל־חֲבֵרָיו֙ יֵבֹ֔שׁוּ וְחָרָשִׁ֥ים הֵ֖מָּה מֵֽאָדָ֑ם יִֽתְקַבְּצ֤וּ כֻלָּם֙ יַֽעֲמֹ֔דוּ יִפְחֲד֖וּ יֵבֹ֥שׁוּ יָֽחַד׃ | 11 |
೧೧ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.
חָרַ֤שׁ בַּרְזֶל֙ מַֽעֲצָ֔ד וּפָעַל֙ בַּפֶּחָ֔ם וּבַמַּקָּב֖וֹת יִצְּרֵ֑הוּ וַיִּפְעָלֵ֙הוּ֙ בִּזְר֣וֹעַ כֹּח֔וֹ גַּם־רָעֵב֙ וְאֵ֣ין כֹּ֔חַ לֹא־שָׁ֥תָה מַ֖יִם וַיִּיעָֽף׃ | 12 |
೧೨ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.
חָרַ֣שׁ עֵצִים֮ נָ֣טָה קָו֒ יְתָאֲרֵ֣הוּ בַשֶּׂ֔רֶד יַעֲשֵׂ֙הוּ֙ בַּמַּקְצֻע֔וֹת וּבַמְּחוּגָ֖ה יְתָאֳרֵ֑הוּ וַֽיַּעֲשֵׂ֙הוּ֙ כְּתַבְנִ֣ית אִ֔ישׁ כְּתִפְאֶ֥רֶת אָדָ֖ם לָשֶׁ֥בֶת בָּֽיִת׃ | 13 |
೧೩ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.
לִכְרָת־ל֣וֹ אֲרָזִ֔ים וַיִּקַּ֤ח תִּרְזָה֙ וְאַלּ֔וֹן וַיְאַמֶּץ־ל֖וֹ בַּעֲצֵי־יָ֑עַר נָטַ֥ע אֹ֖רֶן וְגֶ֥שֶׁם יְגַדֵּֽל׃ | 14 |
೧೪ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.
וְהָיָ֤ה לְאָדָם֙ לְבָעֵ֔ר וַיִּקַּ֤ח מֵהֶם֙ וַיָּ֔חָם אַף־יַשִּׂ֖יק וְאָ֣פָה לָ֑חֶם אַף־יִפְעַל־אֵל֙ וַיִּשְׁתָּ֔חוּ עָשָׂ֥הוּ פֶ֖סֶל וַיִּסְגָּד־לָֽמוֹ׃ | 15 |
೧೫ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.
חֶצְיוֹ֙ שָׂרַ֣ף בְּמוֹ־אֵ֔שׁ עַל־חֶצְיוֹ֙ בָּשָׂ֣ר יֹאכֵ֔ל יִצְלֶ֥ה צָלִ֖י וְיִשְׂבָּ֑ע אַף־יָחֹם֙ וְיֹאמַ֣ר הֶאָ֔ח חַמּוֹתִ֖י רָאִ֥יתִי אֽוּר׃ | 16 |
೧೬ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು. ತನ್ನನ್ನು ಕಾಯಿಸಿಕೊಳ್ಳುತ್ತಾ, “ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು” ಎಂದುಕೊಳ್ಳುವನು.
וּשְׁאֵ֣רִית֔וֹ לְאֵ֥ל עָשָׂ֖ה לְפִסְל֑וֹ יִסְגָּד ל֤וֹ וְיִשְׁתַּ֙חוּ֙ וְיִתְפַּלֵּ֣ל אֵלָ֔יו וְיֹאמַר֙ הַצִּילֵ֔נִי כִּ֥י אֵלִ֖י אָֽתָּה׃ | 17 |
೧೭ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.
לֹ֥א יָדְע֖וּ וְלֹ֣א יָבִ֑ינוּ כִּ֣י טַ֤ח מֵֽרְאוֹת֙ עֵֽינֵיהֶ֔ם מֵהַשְׂכִּ֖יל לִבֹּתָֽם׃ | 18 |
೧೮ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
וְלֹא־יָשִׁ֣יב אֶל־לִבּ֗וֹ וְלֹ֨א דַ֥עַת וְלֹֽא־תְבוּנָה֮ לֵאמֹר֒ חֶצְי֞וֹ שָׂרַ֣פְתִּי בְמוֹ־אֵ֗שׁ וְ֠אַף אָפִ֤יתִי עַל־גֶּחָלָיו֙ לֶ֔חֶם אֶצְלֶ֥ה בָשָׂ֖ר וְאֹכֵ֑ל וְיִתְרוֹ֙ לְתוֹעֵבָ֣ה אֶעֱשֶׂ֔ה לְב֥וּל עֵ֖ץ אֶסְגּֽוֹד׃ | 19 |
೧೯“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.
רֹעֶ֣ה אֵ֔פֶר לֵ֥ב הוּתַ֖ל הִטָּ֑הוּ וְלֹֽא־יַצִּ֤יל אֶת־נַפְשׁוֹ֙ וְלֹ֣א יֹאמַ֔ר הֲל֥וֹא שֶׁ֖קֶר בִּימִינִֽי׃ ס | 20 |
೨೦ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.
זְכָר־אֵ֣לֶּה יַעֲקֹ֔ב וְיִשְׂרָאֵ֖ל כִּ֣י עַבְדִּי־אָ֑תָּה יְצַרְתִּ֤יךָ עֶֽבֶד־לִי֙ אַ֔תָּה יִשְׂרָאֵ֖ל לֹ֥א תִנָּשֵֽׁנִי׃ | 21 |
೨೧ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.
מָחִ֤יתִי כָעָב֙ פְּשָׁעֶ֔יךָ וְכֶעָנָ֖ן חַטֹּאותֶ֑יךָ שׁוּבָ֥ה אֵלַ֖י כִּ֥י גְאַלְתִּֽיךָ׃ | 22 |
೨೨ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.
רָנּ֨וּ שָׁמַ֜יִם כִּֽי־עָשָׂ֣ה יְהוָ֗ה הָרִ֙יעוּ֙ תַּחְתִּיּ֣וֹת אָ֔רֶץ פִּצְח֤וּ הָרִים֙ רִנָּ֔ה יַ֖עַר וְכָל־עֵ֣ץ בּ֑וֹ כִּֽי־גָאַ֤ל יְהוָה֙ יַֽעֲקֹ֔ב וּבְיִשְׂרָאֵ֖ל יִתְפָּאָֽר׃ פ | 23 |
೨೩ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.
כֹּֽה־אָמַ֤ר יְהוָה֙ גֹּאֲלֶ֔ךָ וְיֹצֶרְךָ֖ מִבָּ֑טֶן אָנֹכִ֤י יְהוָה֙ עֹ֣שֶׂה כֹּ֔ל נֹטֶ֤ה שָׁמַ֙יִם֙ לְבַדִּ֔י רֹקַ֥ע הָאָ֖רֶץ מִי מֵאִתִּֽי׃ | 24 |
೨೪ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.
מֵפֵר֙ אֹת֣וֹת בַּדִּ֔ים וְקֹסְמִ֖ים יְהוֹלֵ֑ל מֵשִׁ֧יב חֲכָמִ֛ים אָח֖וֹר וְדַעְתָּ֥ם יְשַׂכֵּֽל׃ | 25 |
೨೫ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
מֵקִים֙ דְּבַ֣ר עַבְדּ֔וֹ וַעֲצַ֥ת מַלְאָכָ֖יו יַשְׁלִ֑ים הָאֹמֵ֨ר לִירוּשָׁלִַ֜ם תּוּשָׁ֗ב וּלְעָרֵ֤י יְהוּדָה֙ תִּבָּנֶ֔ינָה וְחָרְבוֹתֶ֖יהָ אֲקוֹמֵֽם׃ | 26 |
೨೬ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ
הָאֹמֵ֥ר לַצּוּלָ֖ה חֳרָ֑בִי וְנַהֲרֹתַ֖יִךְ אוֹבִֽישׁ׃ | 27 |
೨೭ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.
הָאֹמֵ֤ר לְכ֙וֹרֶשׁ֙ רֹעִ֔י וְכָל־חֶפְצִ֖י יַשְׁלִ֑ם וְלֵאמֹ֤ר לִירוּשָׁלִַ֙ם֙ תִּבָּנֶ֔ה וְהֵיכָ֖ל תִּוָּסֵֽד׃ ס | 28 |
೨೮ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.