< יְשַׁעְיָהוּ 46 >

כָּרַ֥ע בֵּל֙ קֹרֵ֣ס נְב֔וֹ הָיוּ֙ עֲצַבֵּיהֶ֔ם לַחַיָּ֖ה וְלַבְּהֵמָ֑ה נְשֻׂאֹתֵיכֶ֣ם עֲמוּס֔וֹת מַשָּׂ֖א לַעֲיֵפָֽה׃ 1
ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.
קָרְס֤וּ כָֽרְעוּ֙ יַחְדָּ֔ו לֹ֥א יָכְל֖וּ מַלֵּ֣ט מַשָּׂ֑א וְנַפְשָׁ֖ם בַּשְּׁבִ֥י הָלָֽכָה׃ ס 2
ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.
שִׁמְע֤וּ אֵלַי֙ בֵּ֣ית יַעֲקֹ֔ב וְכָל־שְׁאֵרִ֖ית בֵּ֣ית יִשְׂרָאֵ֑ל הַֽעֲמֻסִים֙ מִנִּי־בֶ֔טֶן הַנְּשֻׂאִ֖ים מִנִּי־רָֽחַם׃ 3
ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
וְעַד־זִקְנָה֙ אֲנִ֣י ה֔וּא וְעַד־שֵיבָ֖ה אֲנִ֣י אֶסְבֹּ֑ל אֲנִ֤י עָשִׂ֙יתִי֙ וַאֲנִ֣י אֶשָּׂ֔א וַאֲנִ֥י אֶסְבֹּ֖ל וַאֲמַלֵּֽט׃ ס 4
ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.
לְמִ֥י תְדַמְי֖וּנִי וְתַשְׁו֑וּ וְתַמְשִׁל֖וּנִי וְנִדְמֶֽה׃ 5
ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?
הַזָּלִ֤ים זָהָב֙ מִכִּ֔יס וְכֶ֖סֶף בַּקָּנֶ֣ה יִשְׁקֹ֑לוּ יִשְׂכְּר֤וּ צוֹרֵף֙ וְיַעֲשֵׂ֣הוּ אֵ֔ל יִסְגְּד֖וּ אַף־יִֽשְׁתַּחֲוּֽוּ׃ 6
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
יִ֠שָּׂאֻהוּ עַל־כָּתֵ֨ף יִסְבְּלֻ֜הוּ וְיַנִּיחֻ֤הוּ תַחְתָּיו֙ וְיַֽעֲמֹ֔ד מִמְּקוֹמ֖וֹ לֹ֣א יָמִ֑ישׁ אַף־יִצְעַ֤ק אֵלָיו֙ וְלֹ֣א יַעֲנֶ֔ה מִצָּרָת֖וֹ לֹ֥א יוֹשִׁיעֶֽנּוּ׃ ס 7
ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.
זִכְרוּ־זֹ֖את וְהִתְאֹשָׁ֑שׁוּ הָשִׁ֥יבוּ פוֹשְׁעִ֖ים עַל־לֵֽב׃ 8
“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!
זִכְר֥וּ רִאשֹׁנ֖וֹת מֵעוֹלָ֑ם כִּ֣י אָנֹכִ֥י אֵל֙ וְאֵ֣ין ע֔וֹד אֱלֹהִ֖ים וְאֶ֥פֶס כָּמֽוֹנִי׃ 9
ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.
מַגִּ֤יד מֵֽרֵאשִׁית֙ אַחֲרִ֔ית וּמִקֶּ֖דֶם אֲשֶׁ֣ר לֹא־נַעֲשׂ֑וּ אֹמֵר֙ עֲצָתִ֣י תָק֔וּם וְכָל־חֶפְצִ֖י אֶעֱשֶֽׂה׃ 10
೧೦ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
קֹרֵ֤א מִמִּזְרָח֙ עַ֔יִט מֵאֶ֥רֶץ מֶרְחָ֖ק אִ֣ישׁ עֲצָתִ֑י אַף־דִּבַּ֙רְתִּי֙ אַף־אֲבִיאֶ֔נָּה יָצַ֖רְתִּי אַף־אֶעֱשֶֽׂנָּה׃ ס 11
೧೧ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.
שִׁמְע֥וּ אֵלַ֖י אַבִּ֣ירֵי לֵ֑ב הָרְחוֹקִ֖ים מִצְּדָקָֽה׃ 12
೧೨ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.
קֵרַ֤בְתִּי צִדְקָתִי֙ לֹ֣א תִרְחָ֔ק וּתְשׁוּעָתִ֖י לֹ֣א תְאַחֵ֑ר וְנָתַתִּ֤י בְצִיּוֹן֙ תְּשׁוּעָ֔ה לְיִשְׂרָאֵ֖ל תִּפְאַרְתִּֽי׃ ס 13
೧೩ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

< יְשַׁעְיָהוּ 46 >