< יְשַׁעְיָהוּ 50 >

כֹּ֣ה ׀ אָמַ֣ר יְהוָ֗ה אֵ֣י זֶ֠ה סֵ֣פֶר כְּרִית֤וּת אִמְּכֶם֙ אֲשֶׁ֣ר שִׁלַּחְתִּ֔יהָ א֚וֹ מִ֣י מִנּוֹשַׁ֔י אֲשֶׁר־מָכַ֥רְתִּי אֶתְכֶ֖ם ל֑וֹ הֵ֤ן בַּעֲוֹנֹֽתֵיכֶם֙ נִמְכַּרְתֶּ֔ם וּבְפִשְׁעֵיכֶ֖ם שֻׁלְּחָ֥ה אִמְּכֶֽם׃ 1
ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
מַדּ֨וּעַ בָּ֜אתִי וְאֵ֣ין אִ֗ישׁ קָרָֽאתִי֮ וְאֵ֣ין עוֹנֶה֒ הֲקָצ֨וֹר קָצְרָ֤ה יָדִי֙ מִפְּד֔וּת וְאִם־אֵֽין־בִּ֥י כֹ֖חַ לְהַצִּ֑יל הֵ֣ן בְּגַעֲרָתִ֞י אַחֲרִ֣יב יָ֗ם אָשִׂ֤ים נְהָרוֹת֙ מִדְבָּ֔ר תִּבְאַ֤שׁ דְּגָתָם֙ מֵאֵ֣ין מַ֔יִם וְתָמֹ֖ת בַּצָּמָֽא׃ 2
ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.
אַלְבִּ֥ישׁ שָׁמַ֖יִם קַדְר֑וּת וְשַׂ֖ק אָשִׂ֥ים כְּסוּתָֽם׃ ס 3
ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.”
אֲדֹנָ֣י יְהֹוִ֗ה נָ֤תַן לִי֙ לְשׁ֣וֹן לִמּוּדִ֔ים לָדַ֛עַת לָע֥וּת אֶת־יָעֵ֖ף דָּבָ֑ר יָעִ֣יר ׀ בַּבֹּ֣קֶר בַּבֹּ֗קֶר יָעִ֥יר לִי֙ אֹ֔זֶן לִשְׁמֹ֖עַ כַּלִּמּוּדִֽים׃ 4
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.
אֲדֹנָ֤י יְהוִה֙ פָּתַֽח־לִ֣י אֹ֔זֶן וְאָנֹכִ֖י לֹ֣א מָרִ֑יתִי אָח֖וֹר לֹ֥א נְסוּגֹֽתִי׃ 5
ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.
גֵּוִי֙ נָתַ֣תִּי לְמַכִּ֔ים וּלְחָיַ֖י לְמֹֽרְטִ֑ים פָּנַי֙ לֹ֣א הִסְתַּ֔רְתִּי מִכְּלִמּ֖וֹת וָרֹֽק׃ 6
ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.
וַאדֹנָ֤י יְהוִה֙ יַֽעֲזָר־לִ֔י עַל־כֵּ֖ן לֹ֣א נִכְלָ֑מְתִּי עַל־כֵּ֞ן שַׂ֤מְתִּי פָנַי֙ כַּֽחַלָּמִ֔ישׁ וָאֵדַ֖ע כִּי־לֹ֥א אֵבֽוֹשׁ׃ 7
ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
קָרוֹב֙ מַצְדִּיקִ֔י מִֽי־יָרִ֥יב אִתִּ֖י נַ֣עַמְדָה יָּ֑חַד מִֽי־בַ֥עַל מִשְׁפָּטִ֖י יִגַּ֥שׁ אֵלָֽי׃ 8
ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ.
הֵ֣ן אֲדֹנָ֤י יְהוִה֙ יַֽעֲזָר־לִ֔י מִי־ה֖וּא יַרְשִׁיעֵ֑נִי הֵ֤ן כֻּלָּם֙ כַּבֶּ֣גֶד יִבְל֔וּ עָ֖שׁ יֹאכְלֵֽם׃ 9
ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.
מִ֤י בָכֶם֙ יְרֵ֣א יְהוָ֔ה שֹׁמֵ֖עַ בְּק֣וֹל עַבְדּ֑וֹ אֲשֶׁ֣ר ׀ הָלַ֣ךְ חֲשֵׁכִ֗ים וְאֵ֥ין נֹ֙גַהּ֙ ל֔וֹ יִבְטַח֙ בְּשֵׁ֣ם יְהוָ֔ה וְיִשָּׁעֵ֖ן בֵּאלֹהָֽיו׃ 10
ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.
הֵ֧ן כֻּלְּכֶ֛ם קֹ֥דְחֵי אֵ֖שׁ מְאַזְּרֵ֣י זִיק֑וֹת לְכ֣וּ ׀ בְּא֣וּר אֶשְׁכֶ֗ם וּבְזִיקוֹת֙ בִּֽעַרְתֶּ֔ם מִיָּדִי֙ הָיְתָה־זֹּ֣את לָכֶ֔ם לְמַעֲצֵבָ֖ה תִּשְׁכָּבֽוּן׃ פ 11
ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.

< יְשַׁעְיָהוּ 50 >