< יְשַׁעְיָהוּ 9 >
כִּ֣י לֹ֣א מוּעָף֮ לַאֲשֶׁ֣ר מוּצָ֣ק לָהּ֒ כָּעֵ֣ת הָרִאשׁ֗וֹן הֵקַ֞ל אַ֤רְצָה זְבֻלוּן֙ וְאַ֣רְצָה נַפְתָּלִ֔י וְהָאַחֲר֖וֹן הִכְבִּ֑יד דֶּ֤רֶךְ הַיָּם֙ עֵ֣בֶר הַיַּרְדֵּ֔ן גְּלִ֖יל הַגּוֹיִֽם׃ | 1 |
೧ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
הָעָם֙ הַהֹלְכִ֣ים בַּחֹ֔שֶׁךְ רָא֖וּ א֣וֹר גָּד֑וֹל יֹשְׁבֵי֙ בְּאֶ֣רֶץ צַלְמָ֔וֶת א֖וֹר נָגַ֥הּ עֲלֵיהֶֽם׃ | 2 |
೨ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
הִרְבִּ֣יתָ הַגּ֔וֹי ל֖וֹ הִגְדַּ֣לְתָּ הַשִּׂמְחָ֑ה שָׂמְח֤וּ לְפָנֶ֙יךָ֙ כְּשִׂמְחַ֣ת בַּקָּצִ֔יר כַּאֲשֶׁ֥ר יָגִ֖ילוּ בְּחַלְּקָ֥ם שָׁלָֽל׃ | 3 |
೩ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
כִּ֣י ׀ אֶת־עֹ֣ל סֻבֳּל֗וֹ וְאֵת֙ מַטֵּ֣ה שִׁכְמ֔וֹ שֵׁ֖בֶט הַנֹּגֵ֣שׂ בּ֑וֹ הַחִתֹּ֖תָ כְּי֥וֹם מִדְיָֽן׃ | 4 |
೪ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
כִּ֤י כָל־סְאוֹן֙ סֹאֵ֣ן בְּרַ֔עַשׁ וְשִׂמְלָ֖ה מְגוֹלָלָ֣ה בְדָמִ֑ים וְהָיְתָ֥ה לִשְׂרֵפָ֖ה מַאֲכֹ֥לֶת אֵֽשׁ׃ | 5 |
೫ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
כִּי־יֶ֣לֶד יֻלַּד־לָ֗נוּ בֵּ֚ן נִתַּן־לָ֔נוּ וַתְּהִ֥י הַמִּשְׂרָ֖ה עַל־שִׁכְמ֑וֹ וַיִּקְרָ֨א שְׁמ֜וֹ פֶּ֠לֶא יוֹעֵץ֙ אֵ֣ל גִּבּ֔וֹר אֲבִיעַ֖ד שַׂר־שָׁלֽוֹם׃ | 6 |
೬ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
לְמַרְבֵּ֨ה הַמִּשְׂרָ֜ה וּלְשָׁל֣וֹם אֵֽין־קֵ֗ץ עַל־כִּסֵּ֤א דָוִד֙ וְעַל־מַמְלַכְתּ֔וֹ לְהָכִ֤ין אֹתָהּ֙ וּֽלְסַעֲדָ֔הּ בְּמִשְׁפָּ֖ט וּבִצְדָקָ֑ה מֵעַתָּה֙ וְעַד־עוֹלָ֔ם קִנְאַ֛ת יְהוָ֥ה צְבָא֖וֹת תַּעֲשֶׂה־זֹּֽאת׃ ס | 7 |
೭ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
דָּבָ֛ר שָׁלַ֥ח אֲדֹנָ֖י בְּיַעֲקֹ֑ב וְנָפַ֖ל בְּיִשְׂרָאֵֽל׃ | 8 |
೮ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
וְיָדְעוּ֙ הָעָ֣ם כֻּלּ֔וֹ אֶפְרַ֖יִם וְיוֹשֵׁ֣ב שֹׁמְר֑וֹן בְּגַאֲוָ֛ה וּבְגֹ֥דֶל לֵבָ֖ב לֵאמֹֽר׃ | 9 |
೯ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
לְבֵנִ֥ים נָפָ֖לוּ וְגָזִ֣ית נִבְנֶ֑ה שִׁקְמִ֣ים גֻּדָּ֔עוּ וַאֲרָזִ֖ים נַחֲלִֽיף׃ | 10 |
೧೦“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
וַיְשַׂגֵּ֧ב יְהוָ֛ה אֶת־צָרֵ֥י רְצִ֖ין עָלָ֑יו וְאֶת־אֹיְבָ֖יו יְסַכְסֵֽךְ׃ | 11 |
೧೧ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
אֲרָ֣ם מִקֶּ֗דֶם וּפְלִשְׁתִּים֙ מֵֽאָח֔וֹר וַיֹּאכְל֥וּ אֶת־יִשְׂרָאֵ֖ל בְּכָל־פֶּ֑ה בְּכָל־זֹאת֙ לֹא־שָׁ֣ב אַפּ֔וֹ וְע֖וֹד יָד֥וֹ נְטוּיָֽה׃ | 12 |
೧೨ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
וְהָעָ֥ם לֹא־שָׁ֖ב עַד־הַמַּכֵּ֑הוּ וְאֶת־יְהוָ֥ה צְבָא֖וֹת לֹ֥א דָרָֽשׁוּ׃ ס | 13 |
೧೩ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
וַיַּכְרֵ֨ת יְהוָ֜ה מִיִּשְׂרָאֵ֗ל רֹ֧אשׁ וְזָנָ֛ב כִּפָּ֥ה וְאַגְמ֖וֹן י֥וֹם אֶחָֽד׃ | 14 |
೧೪ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
זָקֵ֥ן וּנְשׂוּא־פָנִ֖ים ה֣וּא הָרֹ֑אשׁ וְנָבִ֥יא מֽוֹרֶה־שֶּׁ֖קֶר ה֥וּא הַזָּנָֽב׃ | 15 |
೧೫ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
וַיִּֽהְי֛וּ מְאַשְּׁרֵ֥י הָֽעָם־הַזֶּ֖ה מַתְעִ֑ים וּמְאֻשָּׁרָ֖יו מְבֻלָּעִֽים׃ | 16 |
೧೬ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
עַל־כֵּ֨ן עַל־בַּחוּרָ֜יו לֹֽא־יִשְׂמַ֣ח ׀ אֲדֹנָ֗י וְאֶת־יְתֹמָ֤יו וְאֶת־אַלְמְנֹתָיו֙ לֹ֣א יְרַחֵ֔ם כִּ֤י כֻלּוֹ֙ חָנֵ֣ף וּמֵרַ֔ע וְכָל־פֶּ֖ה דֹּבֵ֣ר נְבָלָ֑ה בְּכָל־זֹאת֙ לֹא־שָׁ֣ב אַפּ֔וֹ וְע֖וֹד יָד֥וֹ נְטוּיָֽה׃ | 17 |
೧೭ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
כִּֽי־בָעֲרָ֤ה כָאֵשׁ֙ רִשְׁעָ֔ה שָׁמִ֥יר וָשַׁ֖יִת תֹּאכֵ֑ל וַתִּצַּת֙ בְּסִֽבְכֵ֣י הַיַּ֔עַר וַיִּֽתְאַבְּכ֖וּ גֵּא֥וּת עָשָֽׁן׃ | 18 |
೧೮ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
בְּעֶבְרַ֛ת יְהוָ֥ה צְבָא֖וֹת נֶעְתַּ֣ם אָ֑רֶץ וַיְהִ֤י הָעָם֙ כְּמַאֲכֹ֣לֶת אֵ֔שׁ אִ֥ישׁ אֶל־אָחִ֖יו לֹ֥א יַחְמֹֽלוּ׃ | 19 |
೧೯ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
וַיִּגְזֹ֤ר עַל־יָמִין֙ וְרָעֵ֔ב וַיֹּ֥אכַל עַל־שְׂמֹ֖אול וְלֹ֣א שָׂבֵ֑עוּ אִ֥ישׁ בְּשַׂר־זְרֹע֖וֹ יֹאכֵֽלוּ׃ | 20 |
೨೦ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
מְנַשֶּׁ֣ה אֶת־אֶפְרַ֗יִם וְאֶפְרַ֙יִם֙ אֶת־מְנַשֶּׁ֔ה יַחְדָּ֥ו הֵ֖מָּה עַל־יְהוּדָ֑ה בְּכָל־זֹאת֙ לֹא־שָׁ֣ב אַפּ֔וֹ וְע֖וֹד יָד֥וֹ נְטוּיָֽה׃ ס | 21 |
೨೧ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.