< יִרְמְיָהוּ 14 >
אֲשֶׁ֨ר הָיָ֤ה דְבַר־יְהוָה֙ אֶֽל־יִרְמְיָ֔הוּ עַל־דִּבְרֵ֖י הַבַּצָּרֽוֹת׃ | 1 |
೧ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
אָבְלָ֣ה יְהוּדָ֔ה וּשְׁעָרֶ֥יהָ אֻמְלְל֖וּ קָדְר֣וּ לָאָ֑רֶץ וְצִוְחַ֥ת יְרוּשָׁלִַ֖ם עָלָֽתָה׃ | 2 |
೨ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
וְאַדִּ֣רֵיהֶ֔ם שָׁלְח֥וּ צְעִירֵיהֶ֖ם לַמָּ֑יִם בָּ֣אוּ עַל־גֵּבִ֞ים לֹא־מָ֣צְאוּ מַ֗יִם שָׁ֤בוּ כְלֵיהֶם֙ רֵיקָ֔ם בֹּ֥שׁוּ וְהָכְלְמ֖וּ וְחָפ֥וּ רֹאשָֽׁם׃ | 3 |
೩ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
בַּעֲב֤וּר הָאֲדָמָה֙ חַ֔תָּה כִּ֛י לֹא־הָיָ֥ה גֶ֖שֶׁם בָּאָ֑רֶץ בֹּ֥שׁוּ אִכָּרִ֖ים חָפ֥וּ רֹאשָֽׁם׃ | 4 |
೪ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
כִּ֤י גַם־אַיֶּ֙לֶת֙ בַּשָּׂדֶ֔ה יָלְדָ֖ה וְעָז֑וֹב כִּ֥י לֹֽא־הָיָ֖ה דֶּֽשֶׁא׃ | 5 |
೫ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
וּפְרָאִים֙ עָמְד֣וּ עַל־שְׁפָיִ֔ם שָׁאֲפ֥וּ ר֖וּחַ כַּתַּנִּ֑ים כָּל֥וּ עֵינֵיהֶ֖ם כִּי־אֵ֥ין עֵֽשֶׂב׃ | 6 |
೬ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
אִם־עֲוֹנֵ֙ינוּ֙ עָ֣נוּ בָ֔נוּ יְהוָ֕ה עֲשֵׂ֖ה לְמַ֣עַן שְׁמֶ֑ךָ כִּֽי־רַבּ֥וּ מְשׁוּבֹתֵ֖ינוּ לְךָ֥ חָטָֽאנוּ׃ | 7 |
೭ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
מִקְוֵה֙ יִשְׂרָאֵ֔ל מֽוֹשִׁיע֖וֹ בְּעֵ֣ת צָרָ֑ה לָ֤מָּה תִֽהְיֶה֙ כְּגֵ֣ר בָּאָ֔רֶץ וּכְאֹרֵ֖חַ נָטָ֥ה לָלֽוּן׃ | 8 |
೮ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
לָ֤מָּה תִֽהְיֶה֙ כְּאִ֣ישׁ נִדְהָ֔ם כְּגִבּ֖וֹר לֹא־יוּכַ֣ל לְהוֹשִׁ֑יעַ וְאַתָּ֧ה בְקִרְבֵּ֣נוּ יְהוָ֗ה וְשִׁמְךָ֛ עָלֵ֥ינוּ נִקְרָ֖א אַל־תַּנִּחֵֽנוּ׃ ס | 9 |
೯ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
כֹּֽה־אָמַ֨ר יְהוָ֜ה לָעָ֣ם הַזֶּ֗ה כֵּ֤ן אָֽהֲבוּ֙ לָנ֔וּעַ רַגְלֵיהֶ֖ם לֹ֣א חָשָׂ֑כוּ וַיהוָה֙ לֹ֣א רָצָ֔ם עַתָּה֙ יִזְכֹּ֣ר עֲוֹנָ֔ם וְיִפְקֹ֖ד חַטֹּאתָֽם׃ ס | 10 |
೧೦ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
וַיֹּ֥אמֶר יְהוָ֖ה אֵלָ֑י אַל־תִּתְפַּלֵּ֛ל בְּעַד־הָעָ֥ם הַזֶּ֖ה לְטוֹבָֽה׃ | 11 |
೧೧ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
כִּ֣י יָצֻ֗מוּ אֵינֶ֤נִּי שֹׁמֵ֙עַ֙ אֶל־רִנָּתָ֔ם וְכִ֧י יַעֲל֛וּ עֹלָ֥ה וּמִנְחָ֖ה אֵינֶ֣נִּי רֹצָ֑ם כִּ֗י בַּחֶ֙רֶב֙ וּבָרָעָ֣ב וּבַדֶּ֔בֶר אָנֹכִ֖י מְכַלֶּ֥ה אוֹתָֽם׃ ס | 12 |
೧೨ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.
וָאֹמַ֞ר אֲהָ֣הּ ׀ אֲדֹנָ֣י יְהוִ֗ה הִנֵּ֨ה הַנְּבִאִ֜ים אֹמְרִ֤ים לָהֶם֙ לֹֽא־תִרְא֣וּ חֶ֔רֶב וְרָעָ֖ב לֹֽא־יִהְיֶ֣ה לָכֶ֑ם כִּֽי־שְׁל֤וֹם אֱמֶת֙ אֶתֵּ֣ן לָכֶ֔ם בַּמָּק֖וֹם הַזֶּֽה׃ ס | 13 |
೧೩ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
וַיֹּ֨אמֶר יְהוָ֜ה אֵלַ֗י שֶׁ֚קֶר הַנְּבִאִים֙ נִבְּאִ֣ים בִּשְׁמִ֔י לֹ֤א שְׁלַחְתִּים֙ וְלֹ֣א צִוִּיתִ֔ים וְלֹ֥א דִבַּ֖רְתִּי אֲלֵיהֶ֑ם חֲז֨וֹן שֶׁ֜קֶר וְקֶ֤סֶם וֶֽאֱלִיל֙ וְתַרְמִ֣ית לִבָּ֔ם הֵ֖מָּה מִֽתְנַבְּאִ֥ים לָכֶֽם׃ ס | 14 |
೧೪ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
לָכֵ֞ן כֹּֽה־אָמַ֣ר יְהוָ֗ה עַֽל־הַנְּבִאִ֞ים הַנִּבְּאִ֣ים בִּשְׁמִי֮ וַאֲנִ֣י לֹֽא־שְׁלַחְתִּים֒ וְהֵ֙מָּה֙ אֹֽמְרִ֔ים חֶ֣רֶב וְרָעָ֔ב לֹ֥א יִהְיֶ֖ה בָּאָ֣רֶץ הַזֹּ֑את בַּחֶ֤רֶב וּבָֽרָעָב֙ יִתַּ֔מּוּ הַנְּבִאִ֖ים הָהֵֽמָּה׃ | 15 |
೧೫ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
וְהָעָ֣ם אֲשֶׁר־הֵ֣מָּה נִבְּאִ֣ים לָהֶ֡ם יִֽהְי֣וּ מֻשְׁלָכִים֩ בְּחֻצ֨וֹת יְרוּשָׁלִַ֜ם מִפְּנֵ֣י ׀ הָרָעָ֣ב וְהַחֶ֗רֶב וְאֵ֤ין מְקַבֵּר֙ לָהֵ֔מָּה הֵ֣מָּה נְשֵׁיהֶ֔ם וּבְנֵיהֶ֖ם וּבְנֹֽתֵיהֶ֑ם וְשָׁפַכְתִּ֥י עֲלֵיהֶ֖ם אֶת־רָעָתָֽם׃ | 16 |
೧೬ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
וְאָמַרְתָּ֤ אֲלֵיהֶם֙ אֶת־הַדָּבָ֣ר הַזֶּ֔ה תֵּרַ֨דְנָה עֵינַ֥י דִּמְעָ֛ה לַ֥יְלָה וְיוֹמָ֖ם וְאַל־תִּדְמֶ֑ינָה כִּי֩ שֶׁ֨בֶר גָּד֜וֹל נִשְׁבְּרָ֗ה בְּתוּלַת֙ בַּת־עַמִּ֔י מַכָּ֖ה נַחְלָ֥ה מְאֹֽד׃ | 17 |
೧೭ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
אִם־יָצָ֣אתִי הַשָּׂדֶ֗ה וְהִנֵּה֙ חַלְלֵי־חֶ֔רֶב וְאִם֙ בָּ֣אתִי הָעִ֔יר וְהִנֵּ֖ה תַּחֲלוּאֵ֣י רָעָ֑ב כִּֽי־גַם־נָבִ֧יא גַם־כֹּהֵ֛ן סָחֲר֥וּ אֶל־אֶ֖רֶץ וְלֹ֥א יָדָֽעוּ׃ ס | 18 |
೧೮ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
הֲמָאֹ֨ס מָאַ֜סְתָּ אֶת־יְהוּדָ֗ה אִם־בְּצִיּוֹן֙ גָּעֲלָ֣ה נַפְשֶׁ֔ךָ מַדּ֙וּעַ֙ הִכִּיתָ֔נוּ וְאֵ֥ין לָ֖נוּ מַרְפֵּ֑א קַוֵּ֤ה לְשָׁלוֹם֙ וְאֵ֣ין ט֔וֹב וּלְעֵ֥ת מַרְפֵּ֖א וְהִנֵּ֥ה בְעָתָֽה׃ | 19 |
೧೯ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
יָדַ֧עְנוּ יְהוָ֛ה רִשְׁעֵ֖נוּ עֲוֹ֣ן אֲבוֹתֵ֑ינוּ כִּ֥י חָטָ֖אנוּ לָֽךְ׃ | 20 |
೨೦ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
אַל־תִּנְאַץ֙ לְמַ֣עַן שִׁמְךָ֔ אַל־תְּנַבֵּ֖ל כִּסֵּ֣א כְבוֹדֶ֑ךָ זְכֹ֕ר אַל־תָּפֵ֥ר בְּרִֽיתְךָ֖ אִתָּֽנוּ׃ | 21 |
೨೧ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
הֲיֵ֨שׁ בְּהַבְלֵ֤י הַגּוֹיִם֙ מַגְשִׁמִ֔ים וְאִם־הַשָּׁמַ֖יִם יִתְּנ֣וּ רְבִבִ֑ים הֲלֹ֨א אַתָּה־ה֜וּא יְהוָ֤ה אֱלֹהֵ֙ינוּ֙ וּ֨נְקַוֶּה־לָּ֔ךְ כִּֽי־אַתָּ֥ה עָשִׂ֖יתָ אֶת־כָּל־אֵֽלֶּה׃ פ | 22 |
೨೨ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.