< יִרְמְיָהוּ 25 >
הַדָּבָ֞ר אֲשֶׁר־הָיָ֤ה עַֽל־יִרְמְיָ֙הוּ֙ עַל־כָּל־עַ֣ם יְהוּדָ֔ה בַּשָּׁנָה֙ הָֽרְבִעִ֔ית לִיהוֹיָקִ֥ים בֶּן־יֹאשִׁיָּ֖הוּ מֶ֣לֶךְ יְהוּדָ֑ה הִ֗יא הַשָּׁנָה֙ הָרִ֣אשֹׁנִ֔ית לִנְבֽוּכַדְרֶאצַּ֖ר מֶ֥לֶךְ בָּבֶֽל׃ | 1 |
೧ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
אֲשֶׁ֨ר דִּבֶּ֜ר יִרְמְיָ֤הוּ הַנָּבִיא֙ עַל־כָּל־עַ֣ם יְהוּדָ֔ה וְאֶ֛ל כָּל־יֹשְׁבֵ֥י יְרוּשָׁלִַ֖ם לֵאמֹֽר׃ | 2 |
೨ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು.
מִן־שְׁלֹ֣שׁ עֶשְׂרֵ֣ה שָׁנָ֡ה לְיֹאשִׁיָּ֣הוּ בֶן־אָמוֹן֩ מֶ֨לֶךְ יְהוּדָ֜ה וְעַ֣ד ׀ הַיּ֣וֹם הַזֶּ֗ה זֶ֚ה שָׁלֹ֤שׁ וְעֶשְׂרִים֙ שָׁנָ֔ה הָיָ֥ה דְבַר־יְהוָ֖ה אֵלָ֑י וָאֲדַבֵּ֧ר אֲלֵיכֶ֛ם אַשְׁכֵּ֥ים וְדַבֵּ֖ר וְלֹ֥א שְׁמַעְתֶּֽם׃ | 3 |
೩ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
וְשָׁלַח֩ יְהוָ֨ה אֲלֵיכֶ֜ם אֶֽת־כָּל־עֲבָדָ֧יו הַנְּבִאִ֛ים הַשְׁכֵּ֥ם וְשָׁלֹ֖חַ וְלֹ֣א שְׁמַעְתֶּ֑ם וְלֹֽא־הִטִּיתֶ֥ם אֶֽת־אָזְנְכֶ֖ם לִשְׁמֹֽעַ׃ | 4 |
೪ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
לֵאמֹ֗ר שֽׁוּבוּ־נָ֞א אִ֣ישׁ מִדַּרְכּ֤וֹ הָֽרָעָה֙ וּמֵרֹ֣עַ מַעַלְלֵיכֶ֔ם וּשְׁבוּ֙ עַל־הָ֣אֲדָמָ֔ה אֲשֶׁ֨ר נָתַ֧ן יְהוָ֛ה לָכֶ֖ם וְלַאֲבֽוֹתֵיכֶ֑ם לְמִן־עוֹלָ֖ם וְעַד־עוֹלָֽם׃ | 5 |
೫ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.
וְאַל־תֵּלְכ֗וּ אַֽחֲרֵי֙ אֱלֹהִ֣ים אֲחֵרִ֔ים לְעָבְדָ֖ם וּלְהִשְׁתַּחֲוֹ֣ת לָהֶ֑ם וְלֹֽא־תַכְעִ֤יסוּ אוֹתִי֙ בְּמַעֲשֵׂ֣ה יְדֵיכֶ֔ם וְלֹ֥א אָרַ֖ע לָכֶֽם׃ | 6 |
೬ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.
וְלֹֽא־שְׁמַעְתֶּ֥ם אֵלַ֖י נְאֻם־יְהוָ֑ה לְמַ֧עַן הַכְעִיסֵ֛נִי בְּמַעֲשֵׂ֥ה יְדֵיכֶ֖ם לְרַ֥ע לָכֶֽם׃ ס | 7 |
೭ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.
לָכֵ֕ן כֹּ֥ה אָמַ֖ר יְהוָ֣ה צְבָא֑וֹת יַ֕עַן אֲשֶׁ֥ר לֹֽא־שְׁמַעְתֶּ֖ם אֶת־דְּבָרָֽי׃ | 8 |
೮ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,
הִנְנִ֣י שֹׁלֵ֡חַ וְלָקַחְתִּי֩ אֶת־כָּל־מִשְׁפְּח֨וֹת צָפ֜וֹן נְאֻם־יְהוָ֗ה וְאֶל־נְבֽוּכַדְרֶאצַּ֣ר מֶֽלֶךְ־בָּבֶל֮ עַבְדִּי֒ וַהֲבִ֨אֹתִ֜ים עַל־הָאָ֤רֶץ הַזֹּאת֙ וְעַל־יֹ֣שְׁבֶ֔יהָ וְעַ֛ל כָּל־הַגּוֹיִ֥ם הָאֵ֖לֶּה סָבִ֑יב וְהַ֣חֲרַמְתִּ֔ים וְשַׂמְתִּים֙ לְשַׁמָּ֣ה וְלִשְׁרֵקָ֔ה וּלְחָרְב֖וֹת עוֹלָֽם׃ | 9 |
೯ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
וְהַאֲבַדְתִּ֣י מֵהֶ֗ם ק֤וֹל שָׂשׂוֹן֙ וְק֣וֹל שִׂמְחָ֔ה ק֥וֹל חָתָ֖ן וְק֣וֹל כַּלָּ֑ה ק֥וֹל רֵחַ֖יִם וְא֥וֹר נֵֽר׃ | 10 |
೧೦ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
וְהָֽיְתָה֙ כָּל־הָאָ֣רֶץ הַזֹּ֔את לְחָרְבָּ֖ה לְשַׁמָּ֑ה וְעָ֨בְד֜וּ הַגּוֹיִ֥ם הָאֵ֛לֶּה אֶת־מֶ֥לֶךְ בָּבֶ֖ל שִׁבְעִ֥ים שָׁנָֽה׃ | 11 |
೧೧ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
וְהָיָ֣ה כִמְלֹ֣אות שִׁבְעִ֣ים שָׁנָ֡ה אֶפְקֹ֣ד עַל־מֶֽלֶךְ־בָּבֶל֩ וְעַל־הַגּ֨וֹי הַה֧וּא נְאֻם־יְהוָ֛ה אֶת־עֲוֹנָ֖ם וְעַל־אֶ֣רֶץ כַּשְׂדִּ֑ים וְשַׂמְתִּ֥י אֹת֖וֹ לְשִֽׁמְמ֥וֹת עוֹלָֽם׃ | 12 |
೧೨ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
וְהֵֽבֵאתִי֙ עַל־הָאָ֣רֶץ הַהִ֔יא אֶת־כָּל־דְּבָרַ֖י אֲשֶׁר־דִּבַּ֣רְתִּי עָלֶ֑יהָ אֵ֤ת כָּל־הַכָּתוּב֙ בַּסֵּ֣פֶר הַזֶּ֔ה אֲשֶׁר־נִבָּ֥א יִרְמְיָ֖הוּ עַל־כָּל־הַגּוֹיִֽם׃ | 13 |
೧೩ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
כִּ֣י עָֽבְדוּ־בָ֤ם גַּם־הֵ֙מָּה֙ גּוֹיִ֣ם רַבִּ֔ים וּמְלָכִ֖ים גְּדוֹלִ֑ים וְשִׁלַּמְתִּ֥י לָהֶ֛ם כְּפָעֳלָ֖ם וּכְמַעֲשֵׂ֥ה יְדֵיהֶֽם׃ ס | 14 |
೧೪ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.
כִּ֣י כֹה֩ אָמַ֨ר יְהוָ֜ה אֱלֹהֵ֤י יִשְׂרָאֵל֙ אֵלַ֔י קַ֠ח אֶת־כּ֨וֹס הַיַּ֧יִן הַחֵמָ֛ה הַזֹּ֖את מִיָּדִ֑י וְהִשְׁקִיתָ֤ה אֹתוֹ֙ אֶת־כָּל־הַגּוֹיִ֔ם אֲשֶׁ֧ר אָנֹכִ֛י שֹׁלֵ֥חַ אוֹתְךָ֖ אֲלֵיהֶֽם׃ | 15 |
೧೫ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
וְשָׁת֕וּ וְהִֽתְגֹּֽעֲשׁ֖וּ וְהִתְהֹלָ֑לוּ מִפְּנֵ֣י הַחֶ֔רֶב אֲשֶׁ֛ר אָנֹכִ֥י שֹׁלֵ֖חַ בֵּינֹתָֽם׃ | 16 |
೧೬ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.
וָאֶקַּ֥ח אֶת־הַכּ֖וֹס מִיַּ֣ד יְהוָ֑ה וָֽאַשְׁקֶה֙ אֶת־כָּל־הַגּוֹיִ֔ם אֲשֶׁר־שְׁלָחַ֥נִי יְהוָ֖ה אֲלֵיהֶֽם׃ | 17 |
೧೭ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.
אֶת־יְרוּשָׁלִַ֙ם֙ וְאֶת־עָרֵ֣י יְהוּדָ֔ה וְאֶת־מְלָכֶ֖יהָ אֶת־שָׂרֶ֑יהָ לָתֵ֨ת אֹתָ֜ם לְחָרְבָּ֧ה לְשַׁמָּ֛ה לִשְׁרֵקָ֥ה וְלִקְלָלָ֖ה כַּיּ֥וֹם הַזֶּֽה׃ | 18 |
೧೮ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
אֶת־פַּרְעֹ֧ה מֶֽלֶךְ־מִצְרַ֛יִם וְאֶת־עֲבָדָ֥יו וְאֶת־שָׂרָ֖יו וְאֶת־כָּל־עַמּֽוֹ׃ | 19 |
೧೯ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
וְאֵת֙ כָּל־הָעֶ֔רֶב וְאֵ֕ת כָּל־מַלְכֵ֖י אֶ֣רֶץ הָע֑וּץ וְאֵ֗ת כָּל־מַלְכֵי֙ אֶ֣רֶץ פְּלִשְׁתִּ֔ים וְאֶת־אַשְׁקְל֤וֹן וְאֶת־עַזָּה֙ וְאֶת־עֶקְר֔וֹן וְאֵ֖ת שְׁאֵרִ֥ית אַשְׁדּֽוֹד׃ | 20 |
೨೦ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,
אֶת־אֱד֥וֹם וְאֶת־מוֹאָ֖ב וְאֶת־בְּנֵ֥י עַמּֽוֹן׃ | 21 |
೨೧ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,
וְאֵת֙ כָּל־מַלְכֵי־צֹ֔ר וְאֵ֖ת כָּל־מַלְכֵ֣י צִיד֑וֹן וְאֵת֙ מַלְכֵ֣י הָאִ֔י אֲשֶׁ֖ר בְּעֵ֥בֶר הַיָּֽם׃ | 22 |
೨೨ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,
וְאֶת־דְּדָ֤ן וְאֶת־תֵּימָא֙ וְאֶת־בּ֔וּז וְאֵ֖ת כָּל־קְצוּצֵ֥י פֵאָֽה׃ | 23 |
೨೩ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,
וְאֵ֖ת כָּל־מַלְכֵ֣י עֲרָ֑ב וְאֵת֙ כָּל־מַלְכֵ֣י הָעֶ֔רֶב הַשֹּׁכְנִ֖ים בַּמִּדְבָּֽר׃ | 24 |
೨೪ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,
וְאֵ֣ת ׀ כָּל־מַלְכֵ֣י זִמְרִ֗י וְאֵת֙ כָּל־מַלְכֵ֣י עֵילָ֔ם וְאֵ֖ת כָּל־מַלְכֵ֥י מָדָֽי׃ | 25 |
೨೫ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,
וְאֵ֣ת ׀ כָּל־מַלְכֵ֣י הַצָּפ֗וֹן הַקְּרֹבִ֤ים וְהָֽרְחֹקִים֙ אִ֣ישׁ אֶל־אָחִ֔יו וְאֵת֙ כָּל־הַמַּמְלְכ֣וֹת הָאָ֔רֶץ אֲשֶׁ֖ר עַל־פְּנֵ֣י הָאֲדָמָ֑ה וּמֶ֥לֶךְ שֵׁשַׁ֖ךְ יִשְׁתֶּ֥ה אַחֲרֵיהֶֽם׃ | 26 |
೨೬ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.
וְאָמַרְתָּ֣ אֲלֵיהֶ֡ם ס כֹּֽה־אָמַר֩ יְהוָ֨ה צְבָא֜וֹת אֱלֹהֵ֣י יִשְׂרָאֵ֗ל שְׁת֤וּ וְשִׁכְרוּ֙ וּקְי֔וּ וְנִפְל֖וּ וְלֹ֣א תָק֑וּמוּ מִפְּנֵ֣י הַחֶ֔רֶב אֲשֶׁ֛ר אָנֹכִ֥י שֹׁלֵ֖חַ בֵּינֵיכֶֽם׃ | 27 |
೨೭ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
וְהָיָ֗ה כִּ֧י יְמָאֲנ֛וּ לָקַֽחַת־הַכּ֥וֹס מִיָּדְךָ֖ לִשְׁתּ֑וֹת וְאָמַרְתָּ֣ אֲלֵיהֶ֗ם כֹּ֥ה אָמַ֛ר יְהוָ֥ה צְבָא֖וֹת שָׁת֥וֹ תִשְׁתּֽוּ׃ | 28 |
೨೮ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.
כִּי֩ הִנֵּ֨ה בָעִ֜יר אֲשֶׁ֧ר נִֽקְרָא־שְׁמִ֣י עָלֶ֗יהָ אָֽנֹכִי֙ מֵחֵ֣ל לְהָרַ֔ע וְאַתֶּ֖ם הִנָּקֵ֣ה תִנָּק֑וּ לֹ֣א תִנָּק֔וּ כִּ֣י חֶ֗רֶב אֲנִ֤י קֹרֵא֙ עַל־כָּל־יֹשְׁבֵ֣י הָאָ֔רֶץ נְאֻ֖ם יְהוָ֥ה צְבָאֽוֹת׃ | 29 |
೨೯ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
וְאַתָּה֙ תִּנָּבֵ֣א אֲלֵיהֶ֔ם אֵ֥ת כָּל־הַדְּבָרִ֖ים הָאֵ֑לֶּה וְאָמַרְתָּ֣ אֲלֵיהֶ֗ם יְהוָ֞ה מִמָּר֤וֹם יִשְׁאָג֙ וּמִמְּע֤וֹן קָדְשׁוֹ֙ יִתֵּ֣ן קוֹל֔וֹ שָׁאֹ֤ג יִשְׁאַג֙ עַל־נָוֵ֔הוּ הֵידָד֙ כְּדֹרְכִ֣ים יַֽעֲנֶ֔ה אֶ֥ל כָּל־יֹשְׁבֵ֖י הָאָֽרֶץ׃ | 30 |
೩೦ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.
בָּ֤א שָׁאוֹן֙ עַד־קְצֵ֣ה הָאָ֔רֶץ כִּ֣י רִ֤יב לַֽיהוָה֙ בַּגּוֹיִ֔ם נִשְׁפָּ֥ט ה֖וּא לְכָל־בָּשָׂ֑ר הָרְשָׁעִ֛ים נְתָנָ֥ם לַחֶ֖רֶב נְאֻם־יְהוָֽה׃ ס | 31 |
೩೧ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.
כֹּ֤ה אָמַר֙ יְהוָ֣ה צְבָא֔וֹת הִנֵּ֥ה רָעָ֛ה יֹצֵ֖את מִגּ֣וֹי אֶל־גּ֑וֹי וְסַ֣עַר גָּד֔וֹל יֵע֖וֹר מִיַּרְכְּתֵי־אָֽרֶץ׃ | 32 |
೩೨ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
וְהָי֞וּ חַֽלְלֵ֤י יְהוָה֙ בַּיּ֣וֹם הַה֔וּא מִקְצֵ֥ה הָאָ֖רֶץ וְעַד־קְצֵ֣ה הָאָ֑רֶץ לֹ֣א יִסָּפְד֗וּ וְלֹ֤א יֵאָֽסְפוּ֙ וְלֹ֣א יִקָּבֵ֔רוּ לְדֹ֛מֶן עַל־פְּנֵ֥י הָאֲדָמָ֖ה יִֽהְיֽוּ׃ | 33 |
೩೩ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
הֵילִ֨ילוּ הָרֹעִ֜ים וְזַעֲק֗וּ וְהִֽתְפַּלְּשׁוּ֙ אַדִּירֵ֣י הַצֹּ֔אן כִּֽי־מָלְא֥וּ יְמֵיכֶ֖ם לִטְב֑וֹחַ וּתְפוֹצ֣וֹתִיכֶ֔ם וּנְפַלְתֶּ֖ם כִּכְלִ֥י חֶמְדָּֽה׃ | 34 |
೩೪ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.
וְאָבַ֥ד מָנ֖וֹס מִן־הָֽרֹעִ֑ים וּפְלֵיטָ֖ה מֵאַדִּירֵ֥י הַצֹּֽאן׃ | 35 |
೩೫ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.
ק֚וֹל צַעֲקַ֣ת הָֽרֹעִ֔ים וִֽילְלַ֖ת אַדִּירֵ֣י הַצֹּ֑אן כִּֽי־שֹׁדֵ֥ד יְהוָ֖ה אֶת־מַרְעִיתָֽם׃ | 36 |
೩೬ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.
וְנָדַ֖מּוּ נְא֣וֹת הַשָּׁל֑וֹם מִפְּנֵ֖י חֲר֥וֹן אַף־יְהוָֽה׃ | 37 |
೩೭ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ.
עָזַ֥ב כַּכְּפִ֖יר סֻכּ֑וֹ כִּֽי־הָיְתָ֤ה אַרְצָם֙ לְשַׁמָּ֔ה מִפְּנֵי֙ חֲר֣וֹן הַיּוֹנָ֔ה וּמִפְּנֵ֖י חֲר֥וֹן אַפּֽוֹ׃ פ | 38 |
೩೮ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.