< יִרְמְיָהוּ 30 >

הַדָּבָר֙ אֲשֶׁ֣ר הָיָ֣ה אֶֽל־יִרְמְיָ֔הוּ מֵאֵ֥ת יְהוָ֖ה לֵאמֹֽר׃ 1
ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,
כֹּֽה־אָמַ֧ר יְהוָ֛ה אֱלֹהֵ֥י יִשְׂרָאֵ֖ל לֵאמֹ֑ר כְּתָב־לְךָ֗ אֵ֧ת כָּל־הַדְּבָרִ֛ים אֲשֶׁר־דִּבַּ֥רְתִּי אֵלֶ֖יךָ אֶל־סֵֽפֶר׃ 2
“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.
כִּ֠י הִנֵּ֨ה יָמִ֤ים בָּאִים֙ נְאֻם־יְהוָ֔ה וְ֠שַׁבְתִּי אֶת־שְׁב֨וּת עַמִּ֧י יִשְׂרָאֵ֛ל וִֽיהוּדָ֖ה אָמַ֣ר יְהוָ֑ה וַהֲשִׁבֹתִ֗ים אֶל־הָאָ֛רֶץ אֲשֶׁר־נָתַ֥תִּי לַאֲבוֹתָ֖ם וִֽירֵשֽׁוּהָ׃ פ 3
ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”
וְאֵ֣לֶּה הַדְּבָרִ֗ים אֲשֶׁ֨ר דִּבֶּ֧ר יְהוָ֛ה אֶל־יִשְׂרָאֵ֖ל וְאֶל־יְהוּדָֽה׃ 4
ಯೆಹೋವ ದೇವರು ಇಸ್ರಾಯೇಲನ್ನೂ, ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ,
כִּי־כֹה֙ אָמַ֣ר יְהוָ֔ה ק֥וֹל חֲרָדָ֖ה שָׁמָ֑עְנוּ פַּ֖חַד וְאֵ֥ין שָׁלֽוֹם׃ 5
“ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.
שַׁאֲלוּ־נָ֣א וּרְא֔וּ אִם־יֹלֵ֖ד זָכָ֑ר מַדּוּעַ֩ רָאִ֨יתִי כָל־גֶּ֜בֶר יָדָ֤יו עַל־חֲלָצָיו֙ כַּיּ֣וֹלֵדָ֔ה וְנֶהֶפְכ֥וּ כָל־פָּנִ֖ים לְיֵרָקֽוֹן׃ 6
ಈಗ ವಿಚಾರಿಸಿ ನೋಡಿರಿ. ಪುರುಷನು ಮಗುವನ್ನು ಹೆರಬಲ್ಲನೇ. ನಾನು ಏಕೆ ಪುರುಷರೆಲ್ಲರೂ ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲಕ್ಕೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಏಕೆ ಮುಖಗಳೆಲ್ಲಾ ಕಳೆಗುಂದಿದವು?
ה֗וֹי כִּ֥י גָד֛וֹל הַיּ֥וֹם הַה֖וּא מֵאַ֣יִן כָּמֹ֑הוּ וְעֵֽת־צָרָ֥ה הִיא֙ לְיַֽעֲקֹ֔ב וּמִמֶּ֖נָּה יִוָּשֵֽׁעַ׃ 7
ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’
וְהָיָה֩ בַיּ֨וֹם הַה֜וּא נְאֻ֣ם ׀ יְהוָ֣ה צְבָא֗וֹת אֶשְׁבֹּ֤ר עֻלּוֹ֙ מֵעַ֣ל צַוָּארֶ֔ךָ וּמוֹסְרוֹתֶ֖יךָ אֲנַתֵּ֑ק וְלֹא־יַעַבְדוּ־ב֥וֹ ע֖וֹד זָרִֽים׃ 8
“ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.
וְעָ֣בְד֔וּ אֵ֖ת יְהוָ֣ה אֱלֹֽהֵיהֶ֑ם וְאֵת֙ דָּוִ֣ד מַלְכָּ֔ם אֲשֶׁ֥ר אָקִ֖ים לָהֶֽם׃ ס 9
ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.
וְאַתָּ֡ה אַל־תִּירָא֩ עַבְדִּ֨י יַעֲקֹ֤ב נְאֻם־יְהֹוָה֙ וְאַל־תֵּחַ֣ת יִשְׂרָאֵ֔ל כִּ֠י הִנְנִ֤י מוֹשִֽׁיעֲךָ֙ מֵֽרָח֔וֹק וְאֶֽת־זַרְעֲךָ֖ מֵאֶ֣רֶץ שִׁבְיָ֑ם וְשָׁ֧ב יַעֲקֹ֛ב וְשָׁקַ֥ט וְשַׁאֲנַ֖ן וְאֵ֥ין מַחֲרִֽיד׃ 10
“‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.
כִּֽי־אִתְּךָ֥ אֲנִ֛י נְאֻם־יְהוָ֖ה לְהֽוֹשִׁיעֶ֑ךָ כִּי֩ אֶעֱשֶׂ֨ה כָלָ֜ה בְּכָֽל־הַגּוֹיִ֣ם ׀ אֲשֶׁ֧ר הֲפִצוֹתִ֣יךָ שָּׁ֗ם אַ֤ךְ אֹֽתְךָ֙ לֹֽא־אֶעֱשֶׂ֣ה כָלָ֔ה וְיִסַּרְתִּ֙יךָ֙ לַמִּשְׁפָּ֔ט וְנַקֵּ֖ה לֹ֥א אֲנַקֶּֽךָּ׃ פ 11
ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’
כִּ֣י כֹ֥ה אָמַ֛ר יְהוָ֖ה אָנ֣וּשׁ לְשִׁבְרֵ֑ךְ נַחְלָ֖ה מַכָּתֵֽךְ׃ 12
“ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನಿನ್ನ ಗಾಯವು ಗುಣವಾಗದಂಥಾದ್ದು. ನಿನ್ನ ಬಾಸುಂಡೆಯು ಅಘೋರವಾದದ್ದು.
אֵֽין־דָּ֥ן דִּינֵ֖ךְ לְמָז֑וֹר רְפֻא֥וֹת תְּעָלָ֖ה אֵ֥ין לָֽךְ׃ 13
ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ. ನಿನ್ನ ಗಾಯವನ್ನು ನಿನಗೆ ಕಟ್ಟುವ ಹಾಗೆ ವಾಸಿಮಾಡುವ ಔಷಧಗಳು ನಿನಗೆ ಇಲ್ಲ.
כָּל־מְאַהֲבַ֣יִךְ שְׁכֵח֔וּךְ אוֹתָ֖ךְ לֹ֣א יִדְרֹ֑שׁוּ כִּי֩ מַכַּ֨ת אוֹיֵ֤ב הִכִּיתִיךְ֙ מוּסַ֣ר אַכְזָרִ֔י עַ֚ל רֹ֣ב עֲוֹנֵ֔ךְ עָצְמ֖וּ חַטֹּאתָֽיִךְ׃ 14
ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;
מַה־תִּזְעַק֙ עַל־שִׁבְרֵ֔ךְ אָנ֖וּשׁ מַכְאֹבֵ֑ךְ עַ֣ל ׀ רֹ֣ב עֲוֹנֵ֗ךְ עָֽצְמוּ֙ חַטֹּאתַ֔יִךְ עָשִׂ֥יתִי אֵ֖לֶּה לָֽךְ׃ 15
ನಿನ್ನ ಗಾಯದ ನೋವಿನ ನಿಮಿತ್ತ ಏಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗದಂಥಾದ್ದೇ. ನಿನ್ನ ಅಕ್ರಮ ಬಹಳವಾಗಿರುವುದರಿಂದಲೂ, ನಿನ್ನ ಪಾಪಗಳು ಪ್ರಬಲವಾಗಿರುವುದರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
לָכֵ֞ן כָּל־אֹכְלַ֙יִךְ֙ יֵאָכֵ֔לוּ וְכָל־צָרַ֥יִךְ כֻּלָּ֖ם בַּשְּׁבִ֣י יֵלֵ֑כוּ וְהָי֤וּ שֹׁאסַ֙יִךְ֙ לִמְשִׁסָּ֔ה וְכָל־בֹּזְזַ֖יִךְ אֶתֵּ֥ן לָבַֽז׃ 16
“‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
כִּי֩ אַעֲלֶ֨ה אֲרֻכָ֥ה לָ֛ךְ וּמִמַּכּוֹתַ֥יִךְ אֶרְפָּאֵ֖ךְ נְאֻם־יְהוָ֑ה כִּ֤י נִדָּחָה֙ קָ֣רְאוּ לָ֔ךְ צִיּ֣וֹן הִ֔יא דֹּרֵ֖שׁ אֵ֥ין לָֽהּ׃ ס 17
ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.
כֹּ֣ה ׀ אָמַ֣ר יְהוָ֗ה הִנְנִי־שָׁב֙ שְׁבוּת֙ אָהֳלֵ֣י יַֽעֲק֔וֹב וּמִשְׁכְּנֹתָ֖יו אֲרַחֵ֑ם וְנִבְנְתָ֥ה עִיר֙ עַל־תִּלָּ֔הּ וְאַרְמ֖וֹן עַל־מִשְׁפָּט֥וֹ יֵשֵֽׁב׃ 18
“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.
וְיָצָ֥א מֵהֶ֛ם תּוֹדָ֖ה וְק֣וֹל מְשַׂחֲקִ֑ים וְהִרְבִּתִים֙ וְלֹ֣א יִמְעָ֔טוּ וְהִכְבַּדְתִּ֖ים וְלֹ֥א יִצְעָֽרוּ׃ 19
ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.
וְהָי֤וּ בָנָיו֙ כְּקֶ֔דֶם וַעֲדָת֖וֹ לְפָנַ֣י תִּכּ֑וֹן וּפָ֣קַדְתִּ֔י עַ֖ל כָּל־לֹחֲצָֽיו׃ 20
ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು.
וְהָיָ֨ה אַדִּיר֜וֹ מִמֶּ֗נּוּ וּמֹֽשְׁלוֹ֙ מִקִּרְבּ֣וֹ יֵצֵ֔א וְהִקְרַבְתִּ֖יו וְנִגַּ֣שׁ אֵלָ֑י כִּי֩ מִ֨י הוּא־זֶ֜ה עָרַ֧ב אֶת־לִבּ֛וֹ לָגֶ֥שֶׁת אֵלַ֖י נְאֻם־יְהוָֽה׃ 21
ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.
וִהְיִ֥יתֶם לִ֖י לְעָ֑ם וְאָ֣נֹכִ֔י אֶהְיֶ֥ה לָכֶ֖ם לֵאלֹהִֽים׃ ס 22
‘ನೀವು ನನಗೆ ಪ್ರಜೆಯಾಗಿರುವಿರಿ. ನಾನು ನಿಮಗೆ ದೇವರಾಗಿರುವೆನು.’”
הִנֵּ֣ה ׀ סַעֲרַ֣ת יְהוָ֗ה חֵמָה֙ יָֽצְאָ֔ה סַ֖עַר מִתְגּוֹרֵ֑ר עַ֛ל רֹ֥אשׁ רְשָׁעִ֖ים יָחֽוּל׃ 23
ಇಗೋ, ಯೆಹೋವ ದೇವರ ಬಿರುಗಾಳಿ ರೌದ್ರವಾಗಿ ಹೊರಡುತ್ತದೆ. ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು.
לֹ֣א יָשׁ֗וּב חֲרוֹן֙ אַף־יְהוָ֔ה עַד־עֲשֹׂת֥וֹ וְעַד־הֲקִימ֖וֹ מְזִמּ֣וֹת לִבּ֑וֹ בְּאַחֲרִ֥ית הַיָּמִ֖ים תִּתְבּ֥וֹנְנוּ בָֽהּ׃ 24
ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.

< יִרְמְיָהוּ 30 >