< יִרְמְיָהוּ 46 >
אֲשֶׁ֨ר הָיָ֧ה דְבַר־יְהוָ֛ה אֶל־יִרְמְיָ֥הוּ הַנָּבִ֖יא עַל־הַגּוֹיִֽם׃ | 1 |
೧ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
לְמִצְרַ֗יִם עַל־חֵ֨יל פַּרְעֹ֤ה נְכוֹ֙ מֶ֣לֶךְ מִצְרַ֔יִם אֲשֶׁר־הָיָ֥ה עַל־נְהַר־פְּרָ֖ת בְּכַרְכְּמִ֑שׁ אֲשֶׁ֣ר הִכָּ֗ה נְבֽוּכַדְרֶאצַּר֙ מֶ֣לֶךְ בָּבֶ֔ל בִּשְׁנַת֙ הָֽרְבִיעִ֔ית לִיהוֹיָקִ֥ים בֶּן־יֹאשִׁיָּ֖הוּ מֶ֥לֶךְ יְהוּדָֽה׃ | 2 |
೨ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:
עִרְכ֤וּ מָגֵן֙ וְצִנָּ֔ה וּגְשׁ֖וּ לַמִּלְחָמָֽה׃ | 3 |
೩“ಗುರಾಣಿ ಮತ್ತು ಖೇಡ್ಯಗಳನ್ನು ಸಿದ್ಧಮಾಡಿಕೊಂಡು ಯುದ್ಧಕ್ಕೆ ಹೊರಡಿರಿ!
אִסְר֣וּ הַסּוּסִ֗ים וַֽעֲלוּ֙ הַפָּ֣רָשִׁ֔ים וְהִֽתְיַצְּב֖וּ בְּכ֥וֹבָעִ֑ים מִרְקוּ֙ הָֽרְמָחִ֔ים לִבְשׁ֖וּ הַסִּרְיֹנֹֽת׃ | 4 |
೪ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.
מַדּ֣וּעַ רָאִ֗יתִי הֵ֣מָּה חַתִּים֮ נְסֹגִ֣ים אָחוֹר֒ וְגִבּוֹרֵיהֶ֣ם יֻכַּ֔תּוּ וּמָנ֥וֹס נָ֖סוּ וְלֹ֣א הִפְנ֑וּ מָג֥וֹר מִסָּבִ֖יב נְאֻם־יְהוָֽה׃ | 5 |
೫ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.
אַל־יָנ֣וּס הַקַּ֔ל וְאַל־יִמָּלֵ֖ט הַגִּבּ֑וֹר צָפ֙וֹנָה֙ עַל־יַ֣ד נְהַר־פְּרָ֔ת כָּשְׁל֖וּ וְנָפָֽלוּ׃ | 6 |
೬ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.
מִי־זֶ֖ה כַּיְאֹ֣ר יַֽעֲלֶ֑ה כַּנְּהָר֕וֹת יִֽתְגָּעֲשׁ֖וּ מֵימָֽיו׃ | 7 |
೭ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು? ನೈಲ್ ನದಿಯ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾರದು?
מִצְרַ֙יִם֙ כַּיְאֹ֣ר יַֽעֲלֶ֔ה וְכַנְּהָר֖וֹת יִתְגֹּ֣עֲשׁוּ מָ֑יִם וַיֹּ֗אמֶר אַֽעֲלֶה֙ אֲכַסֶּה־אֶ֔רֶץ אֹבִ֥ידָה עִ֖יר וְיֹ֥שְׁבֵי בָֽהּ׃ | 8 |
೮ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ.
עֲל֤וּ הַסּוּסִים֙ וְהִתְהֹלְל֣וּ הָרֶ֔כֶב וְיֵצְא֖וּ הַגִּבּוֹרִ֑ים כּ֤וּשׁ וּפוּט֙ תֹּפְשֵׂ֣י מָגֵ֔ן וְלוּדִ֕ים תֹּפְשֵׂ֖י דֹּ֥רְכֵי קָֽשֶׁת׃ | 9 |
೯ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!
וְֽהַיּ֨וֹם הַה֜וּא לַאדֹנָ֧י יְהוִ֣ה צְבָא֗וֹת י֤וֹם נְקָמָה֙ לְהִנָּקֵ֣ם מִצָּרָ֔יו וְאָכְלָ֥ה חֶ֙רֶב֙ וְשָׂ֣בְעָ֔ה וְרָוְתָ֖ה מִדָּמָ֑ם כִּ֣י זֶ֠בַח לַאדֹנָ֨י יְהוִ֧ה צְבָא֛וֹת בְּאֶ֥רֶץ צָפ֖וֹן אֶל־נְהַר־פְּרָֽת׃ | 10 |
೧೦ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.
עֲלִ֤י גִלְעָד֙ וּקְחִ֣י צֳרִ֔י בְּתוּלַ֖ת בַּת־מִצְרָ֑יִם לַשָּׁוְא֙ הִרְבֵּ֣ית רְפֻא֔וֹת תְּעָלָ֖ה אֵ֥ין לָֽךְ׃ | 11 |
೧೧ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.
שָׁמְע֤וּ גוֹיִם֙ קְלוֹנֵ֔ךְ וְצִוְחָתֵ֖ךְ מָלְאָ֣ה הָאָ֑רֶץ כִּֽי־גִבּ֤וֹר בְּגִבּוֹר֙ כָּשָׁ֔לוּ יַחְדָּ֖יו נָפְל֥וּ שְׁנֵיהֶֽם׃ פ | 12 |
೧೨ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.
הַדָּבָר֙ אֲשֶׁ֣ר דִּבֶּ֣ר יְהוָ֔ה אֶֽל־יִרְמְיָ֖הוּ הַנָּבִ֑יא לָב֗וֹא נְבֽוּכַדְרֶאצַּר֙ מֶ֣לֶךְ בָּבֶ֔ל לְהַכּ֖וֹת אֶת־אֶ֥רֶץ מִצְרָֽיִם׃ | 13 |
೧೩ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.
הַגִּ֤ידוּ בְמִצְרַ֙יִם֙ וְהַשְׁמִ֣יעוּ בְמִגְדּ֔וֹל וְהַשְׁמִ֥יעוּ בְנֹ֖ף וּבְתַחְפַּנְחֵ֑ס אִמְר֗וּ הִתְיַצֵּב֙ וְהָכֵ֣ן לָ֔ךְ כִּֽי־אָכְלָ֥ה חֶ֖רֶב סְבִיבֶֽיךָ׃ | 14 |
೧೪“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.
מַדּ֖וּעַ נִסְחַ֣ף אַבִּירֶ֑יךָ לֹ֣א עָמַ֔ד כִּ֥י יְהוָ֖ה הֲדָפֽוֹ׃ | 15 |
೧೫ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು.
הִרְבָּ֖ה כּוֹשֵׁ֑ל גַּם־נָפַ֞ל אִ֣ישׁ אֶל־רֵעֵ֗הוּ וַיֹּֽאמְרוּ֙ ק֣וּמָה ׀ וְנָשֻׁ֣בָה אֶל־עַמֵּ֗נוּ וְאֶל־אֶ֙רֶץ֙ מֽוֹלַדְתֵּ֔נוּ מִפְּנֵ֖י חֶ֥רֶב הַיּוֹנָֽה׃ | 16 |
೧೬ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.
קָרְא֖וּ שָׁ֑ם פַּרְעֹ֤ה מֶֽלֶךְ־מִצְרַ֙יִם֙ שָׁא֔וֹן הֶעֱבִ֖יר הַמּוֹעֵֽד׃ | 17 |
೧೭ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು” ಎಂದು ಅಲ್ಲಿ ಕೂಗಿದರು.
חַי־אָ֙נִי֙ נְאֻם־הַמֶּ֔לֶךְ יְהוָ֥ה צְבָא֖וֹת שְׁמ֑וֹ כִּ֚י כְּתָב֣וֹר בֶּֽהָרִ֔ים וּכְכַרְמֶ֖ל בַּיָּ֥ם יָבֽוֹא׃ | 18 |
೧೮ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.
כְּלֵ֤י גוֹלָה֙ עֲשִׂ֣י לָ֔ךְ יוֹשֶׁ֖בֶת בַּת־מִצְרָ֑יִם כִּֽי־נֹף֙ לְשַׁמָּ֣ה תִֽהְיֶ֔ה וְנִצְּתָ֖ה מֵאֵ֥ין יוֹשֵֽׁב׃ ס | 19 |
೧೯ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.
עֶגְלָ֥ה יְפֵֽה־פִיָּ֖ה מִצְרָ֑יִם קֶ֥רֶץ מִצָּפ֖וֹן בָּ֥א בָֽא׃ | 20 |
೨೦ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ.
גַּם־שְׂכִרֶ֤יהָ בְקִרְבָּהּ֙ כְּעֶגְלֵ֣י מַרְבֵּ֔ק כִּֽי־גַם־הֵ֧מָּה הִפְנ֛וּ נָ֥סוּ יַחְדָּ֖יו לֹ֣א עָמָ֑דוּ כִּ֣י י֥וֹם אֵידָ֛ם בָּ֥א עֲלֵיהֶ֖ם עֵ֥ת פְּקֻדָּתָֽם׃ | 21 |
೨೧ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
קוֹלָ֖הּ כַּנָּחָ֣שׁ יֵלֵ֑ךְ כִּֽי־בְחַ֣יִל יֵלֵ֔כוּ וּבְקַרְדֻּמּוֹת֙ בָּ֣אוּ לָ֔הּ כְּחֹטְבֵ֖י עֵצִֽים׃ | 22 |
೨೨ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.
כָּרְת֤וּ יַעְרָהּ֙ נְאֻם־יְהוָ֔ה כִּ֖י לֹ֣א יֵֽחָקֵ֑ר כִּ֤י רַבּוּ֙ מֵֽאַרְבֶּ֔ה וְאֵ֥ין לָהֶ֖ם מִסְפָּֽר׃ | 23 |
೨೩ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.
הֹבִ֖ישָׁה בַּת־מִצְרָ֑יִם נִתְּנָ֖ה בְּיַ֥ד עַם־צָפֽוֹן׃ | 24 |
೨೪ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು” ಎಂಬುದೇ.
אָמַר֩ יְהוָ֨ה צְבָא֜וֹת אֱלֹהֵ֣י יִשְׂרָאֵ֗ל הִנְנִ֤י פוֹקֵד֙ אֶל־אָמ֣וֹן מִנֹּ֔א וְעַל־פַּרְעֹה֙ וְעַל־מִצְרַ֔יִם וְעַל־אֱלֹהֶ֖יהָ וְעַל־מְלָכֶ֑יהָ וְעַ֨ל־פַּרְעֹ֔ה וְעַ֥ל הַבֹּטְחִ֖ים בּֽוֹ׃ | 25 |
೨೫ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.
וּנְתַתִּ֗ים בְּיַד֙ מְבַקְשֵׁ֣י נַפְשָׁ֔ם וּבְיַ֛ד נְבֽוּכַדְרֶאצַּ֥ר מֶֽלֶךְ־בָּבֶ֖ל וּבְיַד־עֲבָדָ֑יו וְאַחֲרֵי־כֵ֛ן תִּשְׁכֹּ֥ן כִּֽימֵי־קֶ֖דֶם נְאֻם־יְהוָֽה׃ ס | 26 |
೨೬ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.
וְ֠אַתָּה אַל־תִּירָ֞א עַבְדִּ֤י יַֽעֲקֹב֙ וְאַל־תֵּחַ֣ת יִשְׂרָאֵ֔ל כִּ֠י הִנְנִ֤י מוֹשִֽׁעֲךָ֙ מֵֽרָח֔וֹק וְאֶֽת־זַרְעֲךָ֖ מֵאֶ֣רֶץ שִׁבְיָ֑ם וְשָׁ֧ב יַעֲק֛וֹב וְשָׁקַ֥ט וְשַׁאֲנַ֖ן וְאֵ֥ין מַחֲרִֽיד׃ ס | 27 |
೨೭ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.
אַ֠תָּה אַל־תִּירָ֞א עַבְדִּ֤י יַֽעֲקֹב֙ נְאֻם־יְהוָ֔ה כִּ֥י אִתְּךָ֖ אָ֑נִי כִּי֩ אֶעֱשֶׂ֨ה כָלָ֜ה בְּכָֽל־הַגּוֹיִ֣ם ׀ אֲשֶׁ֧ר הִדַּחְתִּ֣יךָ שָׁ֗מָּה וְאֹֽתְךָ֙ לֹא־אֶעֱשֶׂ֣ה כָלָ֔ה וְיִסַּרְתִּ֙יךָ֙ לַמִּשְׁפָּ֔ט וְנַקֵּ֖ה לֹ֥א אֲנַקֶּֽךָּ׃ ס | 28 |
೨೮ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”