< אִיּוֹב 19 >
וַיַּ֥עַן אִיּ֗וֹב וַיֹּאמַֽר׃ | 1 |
೧ಆಗ ಯೋಬನು ಪುನಃ ಇಂತೆಂದನು,
עַד־אָ֭נָה תּוֹגְי֣וּן נַפְשִׁ֑י וּֽתְדַכְּאוּנַ֥נִי בְמִלִּֽים׃ | 2 |
೨“ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?
זֶ֤ה עֶ֣שֶׂר פְּ֭עָמִים תַּכְלִימ֑וּנִי לֹֽא־תֵ֝בֹ֗שׁוּ תַּהְכְּרוּ־לִֽי׃ | 3 |
೩ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.
וְאַף־אָמְנָ֥ם שָׁגִ֑יתִי אִ֝תִּ֗י תָּלִ֥ין מְשׁוּגָתִֽי׃ | 4 |
೪ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.
אִם־אָ֭מְנָם עָלַ֣י תַּגְדִּ֑ילוּ וְתוֹכִ֥יחוּ עָ֝לַ֗י חֶרְפָּתִּֽי׃ | 5 |
೫ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ?
דְּֽעוּ־אֵ֭פוֹ כִּי־אֱל֣וֹהַּ עִוְּתָ֑נִי וּ֝מְצוּד֗וֹ עָלַ֥י הִקִּֽיף׃ | 6 |
೬ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.
הֵ֤ן אֶצְעַ֣ק חָ֭מָס וְלֹ֣א אֵעָנֶ֑ה אֲ֝שַׁוַּ֗ע וְאֵ֣ין מִשְׁפָּֽט׃ | 7 |
೭ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.
אָרְחִ֣י גָ֭דַר וְלֹ֣א אֶעֱב֑וֹר וְעַ֥ל נְ֝תִיבוֹתַ֗י חֹ֣שֶׁךְ יָשִֽׂים׃ | 8 |
೮ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.
כְּ֭בוֹדִי מֵעָלַ֣י הִפְשִׁ֑יט וַ֝יָּ֗סַר עֲטֶ֣רֶת רֹאשִֽׁי׃ | 9 |
೯ನನ್ನ ಘನತೆಯನ್ನು ಸುಲಿದುಬಿಟ್ಟು, ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.
יִתְּצֵ֣נִי סָ֭בִיב וָאֵלַ֑ךְ וַיַּסַּ֥ע כָּ֝עֵ֗ץ תִּקְוָתִֽי׃ | 10 |
೧೦ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.
וַיַּ֣חַר עָלַ֣י אַפּ֑וֹ וַיַּחְשְׁבֵ֖נִי ל֣וֹ כְצָרָֽיו׃ | 11 |
೧೧ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ; ಉರಿಯುವಂತೆ ಮಾಡಿ ನನ್ನನ್ನು ವೈರಿಯೆಂದೆಣಿಸಿದ್ದಾನೆ.
יַ֤חַד ׀ יָ֘בֹ֤אוּ גְדוּדָ֗יו וַיָּסֹ֣לּוּ עָלַ֣י דַּרְכָּ֑ם וַיַּחֲנ֖וּ סָבִ֣יב לְאָהֳלִֽי׃ | 12 |
೧೨ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.
אַ֭חַי מֵעָלַ֣י הִרְחִ֑יק וְ֝יֹדְעַ֗י אַךְ־זָ֥רוּ מִמֶּֽנִּי׃ | 13 |
೧೩ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.
חָדְל֥וּ קְרוֹבָ֑י וּֽמְיֻדָּעַ֥י שְׁכֵחֽוּנִי׃ | 14 |
೧೪ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ.
גָּ֘רֵ֤י בֵיתִ֣י וְ֭אַמְהֹתַי לְזָ֣ר תַּחְשְׁבֻ֑נִי נָ֝כְרִ֗י הָיִ֥יתִי בְעֵינֵיהֶֽם׃ | 15 |
೧೫ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ.
לְעַבְדִּ֣י קָ֭רָאתִי וְלֹ֣א יַעֲנֶ֑ה בְּמוֹ־פִ֝֗י אֶתְחַנֶּן־לֽוֹ׃ | 16 |
೧೬ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.
ר֭וּחִֽי זָ֣רָה לְאִשְׁתִּ֑י וְ֝חַנֹּתִ֗י לִבְנֵ֥י בִטְנִֽי׃ | 17 |
೧೭ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ.
גַּם־עֲ֭וִילִים מָ֣אֲסוּ בִ֑י אָ֝ק֗וּמָה וַיְדַבְּרוּ־בִֽי׃ | 18 |
೧೮ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.
תִּֽ֭עֲבוּנִי כָּל־מְתֵ֣י סוֹדִ֑י וְזֶֽה־אָ֝הַ֗בְתִּי נֶהְפְּכוּ־בִֽי׃ | 19 |
೧೯ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.
בְּעוֹרִ֣י וּ֭בִבְשָׂרִי דָּבְקָ֣ה עַצְמִ֑י וָ֝אֶתְמַלְּטָ֗ה בְּע֣וֹר שִׁנָּֽי׃ | 20 |
೨೦ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.
חָנֻּ֬נִי חָנֻּ֣נִי אַתֶּ֣ם רֵעָ֑י כִּ֥י יַד־אֱ֝ל֗וֹהַּ נָ֣גְעָה בִּֽי׃ | 21 |
೨೧ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.
לָ֭מָּה תִּרְדְּפֻ֣נִי כְמוֹ־אֵ֑ל וּ֝מִבְּשָׂרִ֗י לֹ֣א תִשְׂבָּֽעוּ׃ | 22 |
೨೨ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?
מִֽי־יִתֵּ֣ן אֵ֭פוֹ וְיִכָּתְב֣וּן מִלָּ֑י מִֽי־יִתֵּ֖ן בַּסֵּ֣פֶר וְיֻחָֽקוּ׃ | 23 |
೨೩ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು!
בְּעֵט־בַּרְזֶ֥ל וְעֹפָ֑רֶת לָ֝עַ֗ד בַּצּ֥וּר יֵחָצְבֽוּן׃ | 24 |
೨೪ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!
וַאֲנִ֣י יָ֭דַעְתִּי גֹּ֣אֲלִי חָ֑י וְ֝אַחֲר֗וֹן עַל־עָפָ֥ר יָקֽוּם׃ | 25 |
೨೫ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
וְאַחַ֣ר ע֭וֹרִֽי נִקְּפוּ־זֹ֑את וּ֝מִבְּשָׂרִ֗י אֶֽחֱזֶ֥ה אֱלֽוֹהַּ׃ | 26 |
೨೬ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.
אֲשֶׁ֤ר אֲנִ֨י ׀ אֶֽחֱזֶה־לִּ֗י וְעֵינַ֣י רָא֣וּ וְלֹא־זָ֑ר כָּל֖וּ כִלְיֹתַ֣י בְּחֵקִֽי׃ | 27 |
೨೭ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.
כִּ֣י תֹ֭אמְרוּ מַה־נִּרְדָּף־ל֑וֹ וְשֹׁ֥רֶשׁ דָּ֝בָ֗ר נִמְצָא־בִֽי׃ | 28 |
೨೮ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,
גּ֤וּרוּ לָכֶ֨ם ׀ מִפְּנֵי־חֶ֗רֶב כִּֽי־חֵ֭מָה עֲוֹנ֣וֹת חָ֑רֶב לְמַ֖עַן תֵּדְע֣וּן שַׁדּֽוּן׃ ס | 29 |
೨೯ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”